Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 33:5 - ಕನ್ನಡ ಸತ್ಯವೇದವು J.V. (BSI)

5 ಇಸ್ರಾಯೇಲ್ಯರ ಅಧಿಪತಿಗಳು ಕುಲಗಳವರೊಡನೆ ಒಟ್ಟಾಗಿ ಕೂಡಿದಾಗ [ಯೆಹೋವನು] ತಾನೇ ಯೆಶುರೂನಿನಲ್ಲಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇಸ್ರಾಯೇಲರ ಕುಲಗಳು ಅವರ ಅಧಿಪತಿಗಳೊಡನೆ ಒಟ್ಟಾಗಿ ಸೇರಿಬಂದಾಗ ಯೆಹೋವನು ತಾನೇ ಯೆಶುರೂನಿನಲ್ಲಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇಸ್ರಯೇಲರ ಕುಲಗಳು ಒಂದಾದಾಗ ಜನನಾಯಕರು ಒಟ್ಟಾಗಿ ಕೂಡಿದಾಗ ಯೆಶುರೂನಿನಲಿ ಸರ್ವೇಶ್ವರನೇ ಅರಸನಾದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಇಸ್ರೇಲಿನ ಜನರು ತಮ್ಮ ನಾಯಕರೊಂದಿಗೆ ಒಟ್ಟಾಗಿ ಸೇರಿದರು. ಯೆಹೋವನು ತಾನೇ ಯೆಶುರೂನಿನಲ್ಲಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇಸ್ರಾಯೇಲರ ಮುಖ್ಯಸ್ಥರೂ ಅವರ ಗೋತ್ರಗಳು ಒಟ್ಟಾಗಿ ಸೇರಿಬಂದಾಗ, ದೇವರೇ ಯೆಶುರೂನಿನ ಮೇಲೆ ಅರಸನಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 33:5
12 ತಿಳಿವುಗಳ ಹೋಲಿಕೆ  

ಆದರೆ ಯೆಶುರೂನು ಚೆನ್ನಾಗಿ ತಿಂದು ಕೊಬ್ಬಿ ಅಗಡಾಗಿ ತನ್ನನ್ನು ಸೃಷ್ಟಿಸಿದ ದೇವರನ್ನು ಬಿಟ್ಟು ತನ್ನ ಆಶ್ರಯದುರ್ಗವನ್ನು ತಿರಸ್ಕರಿಸಿತು.


ಆ ಕಾಲದಲ್ಲಿ ಇಸ್ರಾಯೇಲ್ಯರೊಳಗೆ ಅರಸನಿರಲಿಲ್ಲ. ಪ್ರತಿಯೊಬ್ಬನೂ ಮನಸ್ಸಿಗೆ ಬಂದ ಹಾಗೆಯೇ ನಡೆಯುತ್ತಿದ್ದನು.


ನೀವು ದಯವಿಟ್ಟು ಶೆಕೆವಿುನ ಹಿರಿಯರನ್ನು ಮಾತಾಡಿಸಿ - ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳು ನಿಮ್ಮನ್ನು ಆಳುವದು ಒಳ್ಳೇದೋ ಅಥವಾ ಒಬ್ಬನೇ ಆಳುವದು ಮೇಲೋ ಎಂದು ಅವರನ್ನು ಕೇಳಿ ನಾನು ಅವರ ರಕ್ತ ಸಂಬಂಧಿಯಾಗಿದ್ದೇನೆಂಬದನ್ನು ಜ್ಞಾಪಕಪಡಿಸಿರಿ ಅಂದನು.


ತರುವಾಯ ಇಸ್ರಾಯೇಲ್ಯರು ಗಿದ್ಯೋನನಿಗೆ - ನೀನು ನಮ್ಮನ್ನು ವಿುದ್ಯಾನ್ಯರ ಕೈಯಿಂದ ಬಿಡಿಸಿದ್ದೀಯಲ್ಲಾ; ನೀನೂ ನಿನ್ನ ಮಗನೂ ಮೊಮ್ಮಗನೂ ವಂಶಪಾರಂಪರ್ಯವಾಗಿ ನಮ್ಮ ಮೇಲೆ ಅರಸರಾಗಿರಬೇಕು ಅನ್ನಲು


ಯಾಕೋಬ್ಯರಲ್ಲಿ ಯಾವ ಆಪತ್ತಿನ ಸೂಚನೆಯೂ ಇಲ್ಲ; ಇಸ್ರಾಯೇಲ್ಯರಿಗೆ ವಿಪತ್ತು ಸಂಭವಿಸುವ ಹಾಗೆ ತೋರುವದಿಲ್ಲ. ಅವರಿಗೆ ದೇವರಾಗಿರುವ ಯೆಹೋವನು ಅವರ ಸಂಗಡಲೇ ಇದ್ದಾನೆ; ಅವರು ತಮ್ಮ ಅರಸನಿಗೋಸ್ಕರ ಮಾಡುವ ಜಯಘೋಷವು ಕೇಳಿಸುತ್ತಲೇ ಇದೆ.


ನನ್ನ ಮಾತನ್ನು ಕೇಳು, ನಾನು ನಿನಗೆ ಒಂದು ಆಲೋಚನೆಯನ್ನು ಹೇಳುತ್ತೇನೆ; ಮತ್ತು ದೇವರು ನಿನ್ನ ಸಂಗಡ ಇರಲಿ. ನೀನು ಜನರಿಗೂ ದೇವರಿಗೂ ಮಧ್ಯಸ್ಥನಾಗಿದ್ದು ಜನರ ವ್ಯಾಜ್ಯಗಳನ್ನು ದೇವರ ಹತ್ತಿರಕ್ಕೆ ತರಬೇಕು;


ಅವರೊಳಗೆ ವ್ಯಾಜ್ಯವೇನಾದರೂ ಉಂಟಾಗಿದ್ದರೆ ನನ್ನ ಬಳಿಗೆ ಬರುತ್ತಾರೆ; ನಾನು ವಿಚಾರಣೆಮಾಡಿ ಅವರಿಗೆ ನ್ಯಾಯತೀರಿಸಿ ದೇವರ ಆಜ್ಞಾವಿಧಿಗಳನ್ನು ಬೋಧಿಸುತ್ತೇನೆ ಎಂದು ಹೇಳಿದನು.


ಇಸ್ರಾಯೇಲ್ಯರ ಅರಸರು ಆಳುವದಕ್ಕಿಂತ ಮುಂಚೆ ಎದೋಮ್ಯರ ದೇಶದಲ್ಲಿ ಆಳುತ್ತಿದ್ದ ಅರಸರ ಚರಿತ್ರೆ ಹೇಗಂದರೆ -


ನಿನ್ನನ್ನು ನಿರ್ಮಾಣಮಾಡಿ ಗರ್ಭದಿಂದಲೂ ರೂಪಿಸುತ್ತಾ ಬಂದು ನಿನಗೆ ಸಹಾಯಮಾಡುವವನಾದ ಯೆಹೋವನು ಹೀಗೆನ್ನುತ್ತಾನೆ - ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಯೆಶುರೂನೇ, ಭಯಪಡಬೇಡ!


ಯೆಹೋವನೇ ಯುಗಯುಗಾಂತರಗಳಲ್ಲಿಯೂ ಆಳುವನು.


ಯೆಶುರೂನೇ, ನಿಮ್ಮ ದೇವರಿಗೆ ಸಮಾನನು ಯಾವನೂ ಇಲ್ಲ; ಆತನು ಆಕಾಶವನ್ನೇರಿ ಮೇಘಾರೂಢನಾಗಿ ಮಹಾಗಾಂಭೀರ್ಯದಿಂದ ನಿಮ್ಮ ಸಹಾಯಕ್ಕೆ ಬರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು