Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 33:8 - ಕನ್ನಡ ಸತ್ಯವೇದವು J.V. (BSI)

8 ಲೇವಿಕುಲದ ವಿಷಯದಲ್ಲಿ ಹೀಗಂದನು - [ಯೆಹೋವನೇ,] ನಿನ್ನ ನಿರ್ಣಯವನ್ನು ತಿಳಿಸುವ ಊರೀಮ್ ತುಮ್ಮೀಮ್ ಎಂಬ ವಸ್ತುಗಳು ನಿನ್ನ ಭಕ್ತರಾದ ಇವರ ವಶದಲ್ಲಿ ಉಂಟಷ್ಟೆ. ನೀನು ಮಸ್ಸದಲ್ಲಿ ಅವರನ್ನು ಪರೀಕ್ಷಿಸಿದಿಯಲ್ಲಾ; ಮೆರೀಬದಲ್ಲಿ ನೀರು ಹೊರಟ ಸ್ಥಳದ ಹತ್ತಿರ ಅವರೊಡನೆ ವಿವಾದ ಮಾಡಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಲೇವಿ ಕುಲದ ವಿಷಯದಲ್ಲಿ, “ಯೆಹೋವನೇ ನಿನ್ನ ನಿರ್ಣಯವನ್ನು ತಿಳಿಸುವ ಊರೀಮ್ ಮತ್ತು ತುಮ್ಮೀಮ್ ಎಂಬ ವಸ್ತುಗಳು ನಿನ್ನ ಭಕ್ತರಾದ ಇವರ ವಶದಲ್ಲಿ ಉಂಟಷ್ಟೆ. ನೀನು ಮಸ್ಸದಲ್ಲಿ ಅವರನ್ನು ಪರೀಕ್ಷಿಸಿದಿಯಲ್ಲಾ; ಮೆರೀಬದಲ್ಲಿ ನೀರು ಹೊರಟ ಸ್ಥಳದ ಹತ್ತಿರ ಅವರೊಡನೆ ವಿವಾದಮಾಡಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಲೇವಿಯ ಕುಲ ಕುರಿತು ಮೋಶೆ ನುಡಿದದ್ದು: “ಸರ್ವೇಶ್ವರಾ, ನೀಡಿವನಿಗೆ ನಿನ್ನ ವಿಧಿ ತಿಳಿಸುವ ಊರಿಮ್, ನಿನ್ನ ಭಕ್ತನಾದ ಇವನ ವಶದಲ್ಲಿರಲಿ ಆ ತುಮ್ಮೀಮ್. ನೀನಿವನನ್ನು ಪರೀಕ್ಷಿಸಿದೆ ಮಸ್ಸದಲ್ಲಿ ವಿವಾದಿಸಿದೆ ಜಲ ಹೊರಹೊಮ್ಮಿದ ಮೆರೀಬದಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಲೇವಿಯ ವಿಷಯವಾಗಿ ಮೋಶೆ ಹೇಳಿದ ಮಾತುಗಳು: “ಲೇವಿಯು ನಿನ್ನ ನಿಜವಾದ ಹಿಂಬಾಲಕ. ಅವನು ಊರೀಮ್‌ತುಮ್ಮೀಮ್ ಇಟ್ಟುಕೊಂಡಿರುವನು. ಮಸ್ಸಾದಲ್ಲಿ ಲೇವಿಯರನ್ನು ನೀನು ಪರೀಕ್ಷಿಸಿದೆ. ಮೆರೀಬ ಬುಗ್ಗೆಯ ಬಳಿ ಅವರು ನಿನ್ನವರೆಂದು ನಿನಗೆ ಖಚಿತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಲೇವಿ ಕುಲದ ವಿಷಯದಲ್ಲಿ ಹೇಳಿದ್ದೇನೆಂದರೆ: “ನಿಮ್ಮ ನಿರ್ಣಯವನ್ನು ತಿಳಿಸುವ ಊರೀಮ್, ತುಮ್ಮೀಮ್ ಎಂಬ ವಸ್ತುಗಳು ನಿಮ್ಮ ಭಕ್ತರಾದ ಇವರ ವಶದಲ್ಲಿ ಉಂಟಷ್ಟೆ. ನೀವು ಮಸ್ಸದಲ್ಲಿ ಅವರನ್ನು ಪರೀಕ್ಷಿಸಿದಿರಿ. ಮೆರೀಬಾದಲ್ಲಿ ನೀರು ಹೊರಟ ಸ್ಥಳದ ಹತ್ತಿರ ಅವರೊಡನೆ ವಿವಾದ ಮಾಡಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 33:8
25 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರು - ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ ಎಂದು ಯೆಹೋವನನ್ನು ಅಲ್ಲಿ ಪರೀಕ್ಷಿಸಿದ್ದರಿಂದ ಮೋಶೆ ಆ ಸ್ಥಳಕ್ಕೆ ಮಸ್ಸಾ ಎಂತಲೂ ಅವರು ವಿವಾದ ಮಾಡಿದ್ದರಿಂದ ಮೆರೀಬಾ ಎಂತಲೂ ಹೆಸರಿಟ್ಟನು.


ದೈವನಿರ್ಣಯವನ್ನು ತಿಳಿಸುವ ಊರೀಮ್ ತುಮ್ಮೀಮ್ ಎಂಬ ವಸ್ತುಗಳನ್ನು ಆ ಚೀಲದ ಪದಕದಲ್ಲಿ ಇಡಬೇಕು. ಆರೋನನು ಯೆಹೋವನ ಸನ್ನಿಧಿಗೆ ಹೋಗುವಾಗ ಅವು ಅವನ ಎದೆಯ ಮೇಲೆ ಇರುವವು. ಇಸ್ರಾಯೇಲ್ಯರು ಕೈಕೊಳ್ಳಬೇಕಾದ ದೈವನಿರ್ಣಯವನ್ನು ಆರೋನನು ಹೀಗೆ ತನ್ನ ಹೃದಯದ ಮೇಲೆ ಯೆಹೋವನ ಸನ್ನಿಧಿಯಲ್ಲಿ ಯಾವಾಗಲೂ ಧರಿಸಿಕೊಂಡಿರುವನು.


ಇಸ್ರಾಯೇಲ್ಯರು ಅಲ್ಲಿ ಯೆಹೋವನ ಸಂಗಡ ವಿವಾದಮಾಡಿದ್ದರಿಂದ ಆ ನೀರಿನ ಪ್ರವಾಹಕ್ಕೆ ಮೆರೀಬಾ ಎಂದು ಹೆಸರಾಯಿತು. ಅದಲ್ಲದೆ ಅಲ್ಲಿ ಯೆಹೋವನು ತನ್ನ ಮಹಾಮಹಿಮೆಯನ್ನು ತೋರ್ಪಡಿಸಿದನು.


ಅವರು ಪಾಳೆಯದಲ್ಲಿ ಮೋಶೆಯ ಮೇಲೆಯೂ ಯೆಹೋವನು ಪ್ರತಿಷ್ಠಿಸಿದ ಆರೋನನ ಮೇಲೆಯೂ ಹೊಟ್ಟೆಕಿಚ್ಚುಪಡಲು


ಚೀಲದ ಪದಕವನ್ನು ಅವನಿಗೆ ಬಿಗಿಸಿ ಅದರೊಳಗೆ ಊರೀಮ್ ತುಮ್ಮೀಮ್ ಎಂಬ ವಸ್ತುಗಳನ್ನು ಹಾಕಿ


ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ - ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯುವವನೂ ಯಾರೂ ತೆರೆಯದಂತೆ ಮುಚ್ಚುವವನೂ ಆಗಿರುವಾತನು ಹೇಳುವದೇನಂದರೆ -


ಇಂಥವನೇ ನಮಗೆ ಬೇಕಾದ ಮಹಾಯಾಜಕನು. ಈತನು ಪರಿಶುದ್ಧನೂ ನಿರ್ದೋಷಿಯೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನೂ ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.


ಕಷ್ಟದಲ್ಲಿ ಮೊರೆಯಿಟ್ಟ ನಿನ್ನನ್ನು ವಿಮೋಚಿಸಿದೆನು; ಗುಡುಗುವ ಮೋಡದಲ್ಲಿದ್ದು ನಿನಗೆ ಉತ್ತರವನ್ನು ಕೊಟ್ಟೆನು; ಮೆರೀಬಾ ಪ್ರವಾಹಗಳ ಬಳಿಯಲ್ಲಿ ನಿನ್ನನ್ನು ಪರೀಕ್ಷಿಸಿದೆನು. ಸೆಲಾ.


ಯಾಕಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವದಿಲ್ಲ; ನಿನ್ನ ಪ್ರಿಯನಿಗೆ ಅಧೋಲೋಕವನ್ನು ನೋಡಗೊಡಿಸುವದಿಲ್ಲ.


ಊರೀಮ್ ತುಮ್ಮೀಮುಗಳ ಮೂಲಕ ದೈವನಿರ್ಣಯವನ್ನು ತಿಳಿಸಬಲ್ಲವನಾದ ಯಾಜಕನು ಬರುವ ತನಕ ಇವರು ಮಹಾಪರಿಶುದ್ಧ ಪದಾರ್ಥಗಳಲ್ಲಿ ಭೋಜನಮಾಡಬಾರದೆಂಬದಾಗಿ ದೇಶಾಧಿಪತಿಯು ತೀರ್ಪು ಮಾಡಿದನು.


ಅವು ಬಂಗಾರದಷ್ಟು ಬೆಲೆಯುಳ್ಳವುಗಳು. ನಾನು ಅವರಿಗೆ - ನೀವು ಯೆಹೋವನ ಸ್ವಕೀಯರು; ಆ ಪಾತ್ರೆಗಳೂ ದೇವರ ವಸ್ತುಗಳು; ಆ ಬೆಳ್ಳಿಬಂಗಾರವೂ ನಿಮ್ಮ ಪಿತೃಗಳ ದೇವರಾದ ಯೆಹೋವನಿಗೋಸ್ಕರ ಸಮರ್ಪಿತವಾದ ಕಾಣಿಕೆಯು.


ಅಶುದ್ಧರೆಂದು ಯಾಜಕೋದ್ಯೋಗದಿಂದ ತಳ್ಳಲ್ಪಟ್ಟರು. ಊರೀಮ್ ತುಮ್ಮೀಮುಗಳ ಮೂಲಕ ದೈವನಿರ್ಣಯವನ್ನು ತಿಳಿಸಬಲ್ಲವನಾದ ಯಾಜಕನು ಬರುವ ತನಕ ಇವರು ಮಹಾಪರಿಶುದ್ಧ ಪದಾರ್ಥಗಳಲ್ಲಿ ಭೋಜನ ಮಾಡಬಾರದೆಂಬದಾಗಿ ದೇಶಾಧಿಪತಿಯು ತೀರ್ಪುಮಾಡಿದನು.


ಯಾಜಕರೂ ಸೇವೆಯಲ್ಲಿರುವ ಲೇವಿಯರೂ ಹೊರತಾಗಿ ಯಾರೂ ಯೆಹೋವನ ಆಲಯದೊಳಗೆ ಬರಬಾರದು. ಇವರು ಪರಿಶುದ್ಧರಾಗಿರುವದರಿಂದ ಬರಬಹುದು. ಉಳಿದ ಜನರೆಲ್ಲರೂ ಯೆಹೋವನ ಆಜ್ಞಾನುಸಾರವಾಗಿ ಹೊರಗಿರಬೇಕು.


ಅವನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದರೂ ಆತನು ಅವನಿಗೆ ಕನಸುಗಳಿಂದಾಗಲಿ ಊರೀವಿುನಿಂದಾಗಲಿ ಪ್ರವಾದಿಗಳಿಂದಾಗಲಿ ಉತ್ತರಕೊಡಲೇ ಇಲ್ಲ.


[ಯೆಹೋವನ ಚಿತ್ತವನ್ನು ತಿಳುಕೊಳ್ಳುವದಕ್ಕೆ] ಅವನು ಮಹಾಯಾಜಕನಾದ ಎಲ್ಲಾಜಾರನ ಹತ್ತಿರ ಬರಬೇಕು. ಎಲ್ಲಾಜಾರನು ಯೆಹೋವನ ಸನ್ನಿಧಿಯಲ್ಲಿ ಊರೀಮ್ ಎಂಬ ವಸ್ತುವಿನ ಮೂಲಕ ಅವನಿಗೋಸ್ಕರ ವಿಚಾರಣೆಮಾಡುವನು. ಯೆಹೋಶುವನೂ ಇಸ್ರಾಯೇಲ್ಯರ ಸರ್ವಸಮೂಹದವರೂ ಅವನ ಮಾತಿನಂತೆ ಹೊರಡಲೂಬೇಕು ಬರಲೂಬೇಕು ಎಂದು ಆಜ್ಞಾಪಿಸಿದನು.


ತನ್ನವರು ಯಾರಾರೆಂಬದನ್ನು ಯೆಹೋವನು ನಾಳೆ ತಿಳಿಸುವನು. ಯಾರನ್ನು ಯೆಹೋವನು ಪ್ರತಿಷ್ಠಿಸಿದ್ದಾನೋ ಯಾರನ್ನು ತಾನೇ ಆದು ಕೊಂಡಿದ್ದಾನೋ ಅವರನ್ನು ಮಾತ್ರ ಆತನು ತನ್ನ ಹತ್ತಿರಕ್ಕೆ ಬರಗೊಡಿಸುವನು.


ಯಾಜಕರು ತಮ್ಮ ದೇವರಿಗೆ ಮೀಸಲಾದವರಾಗಿರುವದರಿಂದ ವೇಶ್ಯಾ ಸ್ತ್ರೀಯನ್ನಾಗಲಿ ಮಾನವನ್ನು ಭಂಗಪಡಿಸಿಕೊಂಡ ಸ್ತ್ರೀಯನ್ನಾಗಲಿ ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ ಹೆಂಡತಿಯನ್ನಾಗಿ ತೆಗೆದುಕೊಳ್ಳಬಾರದು.


ಚೊಕ್ಕಬಂಗಾರದ ಪಟ್ಟವನ್ನು ಮಾಡಿಸಿ ಮುದ್ರೆಯನ್ನು ಕೆತ್ತುವ ರೀತಿಯಾಗಿ ಅದರಲ್ಲಿ ಯೆಹೋವನಿಗೆ ಮೀಸಲು ಎಂಬ ಲಿಪಿಯನ್ನು ಕೆತ್ತಿಸಬೇಕು.


ಆರೋನನು ದೇಹವನ್ನು ಬಿಟ್ಟು ತನ್ನ ಪಿತೃಗಳ ಬಳಿಗೆ ಸೇರಬೇಕು. ನೀವಿಬ್ಬರೂ ಮೆರೀಬಾ ಪ್ರವಾಹದ ಹತ್ತಿರ ನನ್ನ ಮಾತಿಗೆ ವಿರೋಧವಾಗಿ ತಿರುಗಿಬಿದ್ದದರಿಂದ ನಾನು ಇಸ್ರಾಯೇಲ್ಯರಿಗೆ ವಾಗ್ದಾನಮಾಡಿದ ದೇಶದೊಳಗೆ ಆರೋನನು ಸೇರಕೂಡದು.


ನೀವು ಮಸ್ಸದಲ್ಲಿ ನಿಮ್ಮ ದೇವರಾದ ಯೆಹೋವನನ್ನು ಪರೀಕ್ಷಿಸಿದಂತೆ ಇನ್ನು ಮುಂದೆ ಮಾಡಬೇಡಿರಿ.


ಅವರ ಬಾಯಲ್ಲಿ ಸತ್ಯಬೋಧನೆಯು ನೆಲೆಸಿತ್ತು, ಅವರ ತುಟಿಗಳಲ್ಲಿ ಅನ್ಯಾಯವೇನೂ ಕಾಣಲಿಲ್ಲ; ಅವರು ಶಾಂತಿಯಿಂದಲೂ ಸದ್ಧರ್ಮದಿಂದಲೂ ನನ್ನೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಬಹುಜನರನ್ನು ಪಾಪದ ಕಡೆಯಿಂದ ತಿರುಗಿಸಿದರು.


ಇಸ್ರಾಯೇಲ್ಯರ ಸ್ವಾಸ್ತ್ಯದಲ್ಲಿ ಆಯಾ ಕುಲದ ಸ್ವಾಸ್ತ್ಯದ ಪ್ರಮಾಣಕ್ಕೆ ತಕ್ಕ ಹಾಗೆ ಅಂದರೆ ಹೆಚ್ಚಾದ ಮಂದಿಯುಳ್ಳವರಿಂದ ಹೆಚ್ಚಾಗಿಯೂ ಕಡಿಮೆಯಾದ ಮಂದಿಯುಳ್ಳವರಿಂದ ಕಡಿಮೆಯಾಗಿಯೂ ಲೇವಿಯರಿಗೋಸ್ಕರ ಊರುಗಳನ್ನು ಕೊಡಿಸಬೇಕು.


ತಬೇರಾ, ಮಸ್ಸಾ, ಕಿಬ್ರೋತ್‍ಹತಾವಾ ಎಂಬ ಸ್ಥಳಗಳಲ್ಲಿಯೂ ನೀವು ಯೆಹೋವನಿಗೆ ಕೋಪವನ್ನು ಹುಟ್ಟಿಸಿದಿರಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು