Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 34:1 - ಕನ್ನಡ ಸತ್ಯವೇದವು J.V. (BSI)

1 ಮೋಶೆಯು ಮೋವಾಬ್ಯರ ಮೈದಾನದಿಂದ ಯೆರಿಕೋ ಪಟ್ಟಣಕ್ಕೆ ಎದುರಾಗಿರುವ ನೆಬೋ ಪರ್ವತಕ್ಕೆ ಹೋಗಿ ಪಿಸ್ಗಾ ಎಂಬ ಬೆಟ್ಟದ ಶಿಖರವನ್ನು ಹತ್ತಿದನು. ಆಗ ಯೆಹೋವನು [ಕಾನಾನ್] ದೇಶವನ್ನೆಲ್ಲಾ ಅಂದರೆ ದಾನ್ ಪಟ್ಟಣದವರೆಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಮೋಶೆಯು ಮೋವಾಬ್ಯರ ಮೈದಾನದಿಂದ ಯೆರಿಕೋ ಪಟ್ಟಣಕ್ಕೆ ಎದುರಾಗಿರುವ ನೆಬೋ ಪರ್ವತಕ್ಕೆ ಹೋಗಿ ಪಿಸ್ಗಾ ಎಂಬ ಬೆಟ್ಟದ ಶಿಖರವನ್ನು ಹತ್ತಿದನು. ಆಗ ಯೆಹೋವನು ಕಾನಾನ್ ದೇಶವನ್ನೆಲ್ಲಾ ಅಂದರೆ ದಾನ್ ಪಟ್ಟಣದ ವರೆಗೂ ಗಿಲ್ಯಾದ್ ಸೀಮೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಮೋಶೆ ಮೋವಾಬ್ಯರ ಬಯಲು ನಾಡಿನಿಂದ ಜೆರಿಕೋ ಪಟ್ಟಣಕ್ಕೆ ಎದುರಾಗಿ ಇರುವ ನೆಬೋ ಪರ್ವತಕ್ಕೆ ಹೋಗಿ, ಪಿಸ್ಗಾ ಎಂಬ ಬೆಟ್ಟದ ಶಿಖರವನ್ನು ಹತ್ತಿದನು. ಆಗ ಸರ್ವೆಶ್ವರ ಕಾನಾನ್ ನಾಡೆಲ್ಲವನ್ನು ಅಂದರೆ, ದಾನ್ ಪಟ್ಟಣದವರೆಗಿದ್ದ ಗಿಲ್ಯಾದ್ ಪ್ರಾಂತ್ಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಮೋಶೆಯು ನೆಬೋ ಬೆಟ್ಟವನ್ನು ಹತ್ತಿದನು. ಅವನು ಮೋವಾಬಿನ ಜೋರ್ಡನ್ ಕಣಿವೆಯಿಂದ ಪಿಸ್ಗಾ ಬೆಟ್ಟದ ಮೇಲಕ್ಕೆ ಬಂದನು. ಇದು ಜೋರ್ಡನ್ ನದಿಯ ಆಚೆಕಡೆಯಲ್ಲಿರುವ ಜೆರಿಕೊ ಊರಿನ ಎದುರಿನಲ್ಲಿದೆ. ಯೆಹೋವನು ಮೋಶೆಗೆ ಗಿಲ್ಯಾದಿನಿಂದ ದಾನ್‌ವರೆಗಿದ್ದ ಎಲ್ಲಾ ಪ್ರದೇಶವನ್ನು ತೋರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಗ ಮೋಶೆ ಮೋವಾಬಿನ ಬಯಲಿನಿಂದ ನೆಬೋ ಪರ್ವತಕ್ಕೆ ಯೆರಿಕೋವಿಗೆ ಎದುರಾಗಿರುವ ಪಿಸ್ಗಾದ ಶಿಖರಕ್ಕೆ ಏರಿಹೋದನು. ಅಲ್ಲಿ ಯೆಹೋವ ದೇವರು ಅವನಿಗೆ ದೇಶವನ್ನೆಲ್ಲಾ ದಾನಿನವರೆಗಿರುವ ಗಿಲ್ಯಾದನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 34:1
16 ತಿಳಿವುಗಳ ಹೋಲಿಕೆ  

ದೇವರಾತ್ಮವಶನಾದ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ ಯೆರೂಸಲೇಮೆಂಬ ಪರಿಶುದ್ಧ ಪಟ್ಟಣವು ದೇವರ ತೇಜಸ್ಸುಳ್ಳದ್ದಾಗಿ ಪರಲೋಕದೊಳಗಿಂದ ದೇವರ ಕಡೆಯಿಂದ ಇಳಿದುಬರುವದನ್ನು ನನಗೆ ತೋರಿಸಿದನು. ಪಟ್ಟಣದ ಪ್ರಕಾಶವು ಅಮೂಲ್ಯರತ್ನದ ಪ್ರಕಾಶಕ್ಕೆ ಸಮಾನವಾಗಿತ್ತು, ಥಳಥಳಿಸುವ ವಜ್ರವೋ ಎಂಬಂತೆ ಕಾಣಿಸಿತು.


ಆತನು ನನ್ನನ್ನು ಇಸ್ರಾಯೇಲ್ ದೇಶಕ್ಕೆ ತಂದು ಅತ್ಯುನ್ನತ ಪರ್ವತದ ಮೇಲೆ ಇಳಿಸಿದನೆಂದು ದೇವರ ದರ್ಶನದಲ್ಲಿ ನನಗೆ ಕಂಡುಬಂತು. ತೆಂಕಲಕಡೆಯಲ್ಲಿ ಆ ಪರ್ವತದ ಮೇಲೆ ಪಟ್ಟಣದಂತಿರುವ ಒಂದು ಕಟ್ಟಡವು ಕಾಣಿಸಿತು.


ದಾನ್‍ಕುಲದವರು ತಮ್ಮ ಪ್ರಾಂತವನ್ನು ವಿಸ್ತರಿಸುವದಕ್ಕಾಗಿ ಹೊರಟು ಲೆಷೆವಿುನವರೊಡನೆ ಯುದ್ಧಮಾಡಿ ಜಯಿಸಿ ಜನರನ್ನು ಕತ್ತಿಯಿಂದ ಸಂಹರಿಸಿ ಪಟ್ಟಣವನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸಿದರು. ಮತ್ತು ಅದಕ್ಕೆ ತಮ್ಮ ಮೂಲಪುರುಷನ ಹೆಸರಾದ ದಾನ್ ಎಂಬ ಹೆಸರನ್ನಿಟ್ಟರು.


ಯೆಹೋವನು ಮೋಶೆಗೆ - ನೀನು ಈ ಅಬಾರೀಮ್ ಬೆಟ್ಟವನ್ನು ಹತ್ತಿ ನಾನು ಇಸ್ರಾಯೇಲ್ಯರಿಗೆ ವಾಗ್ದಾನಮಾಡಿದ ದೇಶವನ್ನು ನೋಡು.


ಮುಂಚೆ ಲಯಿಷ್ ಎಂಬ ಹೆಸರಿದ್ದ ಆ ಪಟ್ಟಣಕ್ಕೆ ಈಗ ದಾನ್ ಎಂದು ಹೆಸರಿಟ್ಟರು. ದಾನ್ ಎಂಬದು ಇವರ ಮೂಲಪುರುಷನೂ ಇಸ್ರಾಯೇಲನ ಮಗನೂ ಆದವನ ಹೆಸರು.


ನಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಮಾಡಿ ಅವರ ಸಂತತಿಯವರಿಗೆ ಕೊಡುವೆನೆಂದು ವಾಗ್ದಾನಮಾಡಿದ ದೇಶವು ಇದೇ; ನಿನಗೆ ಪ್ರತ್ಯಕ್ಷವಾಗಿ ತೋರಿಸಿದ್ದೇನೆ. ಆದರೆ ನೀನು ಹೊಳೆದಾಟಿ ಅಲ್ಲಿಗೆ ಹೋಗಕೂಡದೆಂದು ಹೇಳಿದನು.


ನಾನು ಇಸ್ರಾಯೇಲ್ಯರಿಗೆ ಕೊಡುವ ದೇಶವನ್ನು ನೀನು ದೂರದಿಂದ ನೋಡಬಹುದೇ ಹೊರತು ಅದರಲ್ಲಿ ಪ್ರವೇಶಿಸಕೂಡದು ಎಂದು ಆಜ್ಞಾಪಿಸಿದನು.


ಆದರೆ ಪಿಸ್ಗಾ ಬೆಟ್ಟವನ್ನು ಹತ್ತಿ ತುದಿಯಲ್ಲಿ ನಿಂತು ಚತುರ್ದಿಕ್ಕುಗಳಲ್ಲಿ ಸುತ್ತಲೂ ಇರುವ ದೇಶವನ್ನು ಕಣ್ಣು ತುಂಬಾ ನೋಡಬಹುದು.


ಅಲ್ಮೋನ್ ದಿಬ್ಲಾತಯಿವಿುನಿಂದ ಹೊರಟು ಅಬಾರೀಮ್ ಬೆಟ್ಟಗಳಲ್ಲಿರುವ ನೇಬೋವಿನ ಮೂಡಣದಲ್ಲಿ ಇಳಿದುಕೊಂಡರು.


ಬಾಮೋತಿನಿಂದ ಮೋವಾಬ್ಯರ ಬೈಲಿನ ಪ್ರದೇಶದಲ್ಲಿರುವ ತಗ್ಗಿಗೆ ಅಂದರೆ ಪಿಸ್ಗಾ ಎಂಬ ಬೆಟ್ಟದ ಸೀಮೆಯ ಅಂಚಿಗೆ ಬಂದರು. ಆ ಬೆಟ್ಟದ ಮೇಲಿನಿಂದ ಕೆಳಗಿರುವ ಯೆಷೀಮೋನ್ ಎಂಬ ಅರಣ್ಯ ಪ್ರದೇಶವು ಕಾಣಿಸುತ್ತದೆ.


ಅಬ್ರಾಮನು ತನ್ನ ತಮ್ಮನ ಮಗನು ಸೆರೆಗೆ ಸಿಕ್ಕಿದ್ದನ್ನು ಕೇಳಿ ತನ್ನ ಮನೆಯಲ್ಲೇ ಹುಟ್ಟಿ ಬೆಳೆದ ಶಿಕ್ಷಿತರಾದ ಮುನ್ನೂರ ಹದಿನೆಂಟು ಮಂದಿ ಆಳುಗಳನ್ನು ಯುದ್ಧಕ್ಕೆ ಸಿದ್ಧಮಾಡಿಕೊಂಡು ಹೊರಟು ಆ ರಾಜರನ್ನು ದಾನೂರಿನವರೆಗೆ ಹಿಂದಟ್ಟಿದನು.


ಲೋಟನು ಅಬ್ರಾಮನನ್ನು ಬಿಟ್ಟು ಬೇರೆಯಾದ ನಂತರ ಯೆಹೋವನು ಅಬ್ರಾಮನಿಗೆ - ನೀನಿರುವ ಸ್ಥಳದಿಂದ ದಕ್ಷಿಣೋತ್ತರಪೂರ್ವಪಶ್ಚಿಮಗಳಿಗೆ ಕಣ್ಣೆತ್ತಿ ನೋಡು.


ಅಲ್ಲಿಂದ ನನಗೋಸ್ಕರ ಅವರನ್ನು ಶಪಿಸಬೇಕು ಎಂದು ಹೇಳಿ ಪಿಸ್ಗಾ ಬೆಟ್ಟದ ತುದಿಯಲ್ಲಿರುವ ಚೋಫೀಮ್ ಬೈಲು ಎಂಬ ಸ್ಥಳಕ್ಕೆ ಕರಕೊಂಡುಹೋಗಿ ಅಲ್ಲಿಯೂ ಏಳು ಯಜ್ಞಪೀಠಗಳನ್ನು ಕಟ್ಟಿಸಿ ಪ್ರತಿಯೊಂದು ಪೀಠದಲ್ಲಿ ಒಂದು ಹೋರಿಯನ್ನೂ ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದನು.


ಆಗ ರೂಬೇನ್ಯರೂ ಗಾದ್ಯರೂ ಮನಸ್ಸೆಕುಲದ ಅರ್ಧಜನರೂ ಕಾನಾನ್ ದೇಶದ ಶೀಲೋವಿನಲ್ಲಿದ್ದ ಇಸ್ರಾಯೇಲ್ಯರನ್ನು ಬಿಟ್ಟು ಯೆಹೋವನ ಆಜ್ಞೆಗನುಸಾರವಾಗಿ ಮೋಶೆಯಿಂದ ತಮಗೆ ಸಿಕ್ಕಿದ ಸ್ವಾಸ್ತ್ಯವಾದ ಗಿಲ್ಯಾದ್ ದೇಶಕ್ಕೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು