Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:11 - ಕನ್ನಡ ಸತ್ಯವೇದವು J.V. (BSI)

11 ಆ ದಿನದಲ್ಲಿ ನೀವು ಹತ್ತಿರ ಬಂದು ಬೆಟ್ಟದ ಬುಡದಲ್ಲಿ ನಿಂತುಕೊಂಡಿರಲು ಮೊಬ್ಬೂ ಮೋಡವೂ ಕಾರ್ಗತ್ತಲೂ ಕವಿದು ಆ ಬೆಟ್ಟವು ಆಕಾಶದ ತುದಿಯವರೆಗೂ ಬೆಂಕಿಯಿಂದ ಉರಿದದ್ದೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆ ದಿನದಲ್ಲಿ ನೀವು ಹತ್ತಿರ ಬಂದು ಬೆಟ್ಟದ ಬುಡದಲ್ಲಿ ನಿಂತುಕೊಂಡಿರಲು ಕತ್ತಲೂ, ಮೋಡವೂ, ಕಾರ್ಗತ್ತಲೂ ಕವಿದು ಆ ಬೆಟ್ಟವು ಆಕಾಶದ ತುದಿಯವರೆಗೂ ಬೆಂಕಿಯಿಂದ ಉರಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅಂದು ನೀವು ಹತ್ತಿರ ಬಂದು ಆ ಬೆಟ್ಟದ ಬುಡದಲ್ಲಿ ನಿಂತುಕೊಂಡಿರಿ. ಬೆಟ್ಟವು ಬೆಂಕಿಯಿಂದ ಪ್ರಜ್ವಲಿಸುತ್ತಿರಲು ಅಂತರಿಕ್ಷದವರೆಗೂ ಕರಿಮೋಡವೂ ಕಾರ್ಗತ್ತಲೂ ಆವರಿಸಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆಗ ನೀವು ಬೆಟ್ಟದ ಸಮೀಪಕ್ಕೆ ಬಂದು ನಿಂತುಕೊಂಡಿರಿ. ಆ ಪರ್ವತವು ಬೆಂಕಿಯಿಂದ ಪ್ರಜ್ವಲಿಸಿ ಆಕಾಶದ ತನಕ ಮುಟ್ಟಿತ್ತು. ಆಗ ಕಾರ್ಮೋಡವೂ ಕತ್ತಲೆಯೂ ಆವರಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ನೀವು ಹತ್ತಿರ ಬಂದು ಬೆಟ್ಟದ ಕೆಳಗೆ ನಿಂತಿರಿ. ಆ ಬೆಟ್ಟವು ಕತ್ತಲೆಯಾಗಿದ್ದು, ಮೇಘಗಳೂ, ಗಾಢಾಂಧಕಾರವೂ ಉಂಟಾಗಿ ಆಕಾಶ ಮಧ್ಯದವರೆಗೆ ಬೆಂಕಿಯಿಂದ ಉರಿಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:11
10 ತಿಳಿವುಗಳ ಹೋಲಿಕೆ  

ಆ ಬೆಟ್ಟವು ಬೆಂಕಿಯಿಂದ ಪ್ರಜ್ವಲಿಸುತ್ತಿರುವಾಗ ಆ ಕತ್ತಲೊಳಗಿಂದ ದೇವರ ಸ್ವರವನ್ನು ಕೇಳಿ ನೀವು ಅಂದರೆ ನಿಮ್ಮ ಕುಲಾಧಿಪತಿಗಳೂ ಹಿರಿಯರೂ ನನ್ನ ಬಳಿಗೆ ಬಂದು -


ಯೆಹೋವನು ಮೋಶೆಗೆ - ಇಗೋ ನಾನು ನಿನ್ನ ಸಂಗಡ ಮಾತಾಡುವಾಗ ಜನರು ಕೇಳಿ ಯಾವಾಗಲೂ ನಿನ್ನನ್ನು ನಂಬುವಂತೆ ನಾನು ಕಾರ್ಮುಗಿಲಲ್ಲಿ ನಿನ್ನ ಬಳಿಗೆ ಬರುವೆನು ಎಂದು ಹೇಳಿದನು.


ಯೆಹೋವನು ಆ ಬೆಂಕಿಯ ಜ್ವಾಲೆಯೊಳಗಿಂದ ನಿಮ್ಮ ಸಂಗಡ ಮಾತಾಡಿದ್ದೂ; ಮಾತಾಡಿದ ಸ್ವರ ನಿಮಗೆ ಕೇಳಿಸಿತೇ ಹೊರತು ಯಾವ ಆಕಾರವೂ ಕಾಣಿಸದೆ ಹೋದದ್ದೂ;


ಕತ್ತಲನ್ನು ತನ್ನ ಸುತ್ತಲು ಗುಡಾರದಂತೆ ಕವಿಸಿಕೊಂಡು ಜಲಮಯವಾಗಿರುವ ನೀಲಮೇಘಗಳ ಮಧ್ಯದಲ್ಲಿ ಮರೆಯಾದನು.


ಮುಗಿಲೂ ಕಾರ್ಗತ್ತಲೆಯೂ ಆತನ ಸುತ್ತಲೂ ಇರುತ್ತವೆ; ನೀತಿನ್ಯಾಯಗಳು ಆತನ ಸಿಂಹಾಸನದ ಅಸ್ತಿವಾರ.


ಆತನು ಆಕಾಶವನ್ನು ತಗ್ಗಿಸಿ ಇಳಿದು ಬಂದನು; ಆತನ ಪಾದಗಳ ಕೆಳಗೆ ಕಾರ್ಗತ್ತಲಿತ್ತು.


ಭೂಕಂಪವಾದನಂತರ ಸಿಡಿಲುಂಟಾಯಿತು; ಅದರಲ್ಲಿಯೂ ಯೆಹೋವನಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು