Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:12 - ಕನ್ನಡ ಸತ್ಯವೇದವು J.V. (BSI)

12 ಯೆಹೋವನು ಆ ಬೆಂಕಿಯ ಜ್ವಾಲೆಯೊಳಗಿಂದ ನಿಮ್ಮ ಸಂಗಡ ಮಾತಾಡಿದ್ದೂ; ಮಾತಾಡಿದ ಸ್ವರ ನಿಮಗೆ ಕೇಳಿಸಿತೇ ಹೊರತು ಯಾವ ಆಕಾರವೂ ಕಾಣಿಸದೆ ಹೋದದ್ದೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಗ ಯೆಹೋವನು ಆ ಬೆಂಕಿಯ ಜ್ವಾಲೆಯೊಳಗಿಂದ ನಿಮ್ಮ ಸಂಗಡ ಮಾತನಾಡಿದನು. ಆತನು ಮಾತನಾಡಿದ ಸ್ವರ ನಿಮಗೆ ಕೇಳಿಸಿತೇ ಹೊರತು ಯಾವ ಆಕಾರವೂ ಕಾಣಿಸಲ್ಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆ ಅಗ್ನಿಜ್ವಾಲೆಯಿಂದ ಸರ್ವೇಶ್ವರ ನಿಮ್ಮ ಸಂಗಡ ಮಾತಾಡಿದರು. ಆ ವಾಣಿಯ ಶಬ್ದವನ್ನು ನೀವು ಕೇಳಿದಿರಿ. ಆಕಾರ ಯಾವುದೂ ಕಾಣಿಸಲಿಲ್ಲ, ಸ್ವರ ಮಾತ್ರ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆ ಬೆಂಕಿಯೊಳಗಿಂದ ಯೆಹೋವನು ಮಾತನಾಡಿದನು. ಅದು ಯಾರೋ ಮಾತಾಡಿದಂತಿತ್ತು, ಆದರೆ ನೀವು ಯಾರನ್ನೂ ಕಾಣಲಿಲ್ಲ. ನೀವು ಸ್ವರವನ್ನು ಮಾತ್ರ ಕೇಳಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಬೆಂಕಿಯ ಮಧ್ಯದೊಳಗಿಂದ ಯೆಹೋವ ದೇವರು ನಿಮ್ಮ ಸಂಗಡ ಮಾತಾಡಿದರು. ವಾಕ್ಯಗಳ ಧ್ವನಿಯನ್ನು ನೀವು ಕೇಳಿದಿರಿ, ಆದರೆ ಆಕಾರವನ್ನು ನೋಡಲಿಲ್ಲ, ಧ್ವನಿಯನ್ನು ಮಾತ್ರ ಕೇಳಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:12
24 ತಿಳಿವುಗಳ ಹೋಲಿಕೆ  

ಈ ಮಾತುಗಳನ್ನು ಯೆಹೋವನು ಆ ಬೆಟ್ಟದ ಮೇಲೆ ಬೆಂಕಿ, ಮೋಡ, ಕಾರ್ಗತ್ತಲು ಇವುಗಳ ಮಧ್ಯದೊಳಗಿಂದ ನಿಮ್ಮ ಸರ್ವಸಮೂಹಕ್ಕೆ ಕೇಳಿಸುವಂತೆ ಮಹಾ ಸ್ವರದಿಂದ ನುಡಿದನು; ಆಮೇಲೆ ಇನ್ನು ಮಾತಾಡಲಿಲ್ಲ. ಆತನು ಆ ಮಾತುಗಳನ್ನು ಎರಡು ಕಲ್ಲಿನ ಹಲಗೆಗಳಲ್ಲಿ ಕೆತ್ತಿ ನನಗೆ ಕೊಟ್ಟನು.


ಯೆಹೋವನು ಆ ಬೆಟ್ಟದ ಮೇಲೆ ಬೆಂಕಿಯ ಜ್ವಾಲೆಯೊಳಗಿಂದ ಮುಖಾಮುಖಿಯಾಗಿ ನಿಮ್ಮ ಸಂಗಡ ಮಾತಾಡಲಾಗಿ


ಹೋರೇಬಿನಲ್ಲಿ ಯೆಹೋವನು ಬೆಂಕಿಯ ಜ್ವಾಲೆಯೊಳಗಿಂದ ನಿಮ್ಮ ಸಂಗಡ ಮಾತಾಡಿದಾಗ ನಿಮಗೆ ಯಾವ ಆಕಾರವೂ ಕಾಣಿಸಲಿಲ್ಲವಷ್ಟೆ. ಆದದರಿಂದ ನೀವು ನಿಮ್ಮ ನಿಮ್ಮ ಮನಸ್ಸುಗಳನ್ನು ಬಹು ಜಾಗರೂಕತೆಯಿಂದ ಕಾಪಾಡಿಕೊಳ್ಳಬೇಕು.


ಆಗ - ಈತನು ಪ್ರಿಯನಾಗಿರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ ಎಂದು ಆಕಾಶವಾಣಿ ಆಯಿತು.


ಆತನು ನಿಮ್ಮ ಶಿಕ್ಷಣಕ್ಕೋಸ್ಕರ ಆಕಾಶದಿಂದ ತನ್ನ ಸ್ವರವನ್ನು ನಿಮಗೆ ಕೇಳಿಸುವಂತೆ ಮಾಡಿದನು; ಮತ್ತು ಭೂವಿುಯ ಮೇಲೆ ತಾನಿದ್ದ ಮಹಾ ಅಗ್ನಿಜ್ವಾಲೆಯನ್ನು ನೋಡಿಸಿದನು; ಅದಲ್ಲದೆ ಆ ಅಗ್ನಿಜ್ವಾಲೆಯೊಳಗಿಂದ ಆತನು ಆಡಿದ ಮಾತುಗಳನ್ನು ಕೇಳಿಸುವಂತೆ ಮಾಡಿದನು.


ದೇವರು ಬೆಂಕಿಯ ಜ್ವಾಲೆಯೊಳಗಿಂದ ಮಾತಾಡಿದ ಸ್ವರವು ನಿಮಗೆ ಕೇಳಿಸಿತಲ್ಲಾ; ಬೇರೆ ಯಾವ ಜನರಾದರೂ ದೇವರ ಸ್ವರವನ್ನು ಕೇಳಿ ಬದುಕಿದ್ದುಂಟೋ?


ಆತನು ಅದೃಶ್ಯನಾದ ದೇವರ ಪ್ರತಿರೂಪನೂ ಸೃಷ್ಟಿಗೆಲ್ಲಾ ಜ್ಯೇಷ್ಠಪುತ್ರನ ಸ್ಥಾನಹೊಂದಿದವನೂ ಆಗಿದ್ದಾನೆ.


ಕರ್ತನ ದಾರಿಯನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ ಎಂಬದಾಗಿ ಪ್ರವಾದಿಯಾದ ಯೆಶಾಯನಿಂದ ಸೂಚಿತನಾದವನು ಇವನೇ.


ಹೀಗಿರಲು ದೇವರನ್ನು ಯಾರಿಗೆ ಹೋಲಿಸೀರಿ? ಯಾವ ರೂಪವನ್ನು ಆತನಿಗೆ ಸಮಮಾಡೀರಿ?


ಆಹಾ, ವಾಣಿಯು ಮತ್ತೆ ಕೇಳಿಸಿ - ಕೂಗು ಎನ್ನುತ್ತದೆ. ಅದಕ್ಕೆ ನಾನು - ಏನು ಕೂಗಲಿ ಎಂದು ಕೇಳಲು ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ, ಅದರ ಲಾವಣ್ಯವೆಲ್ಲಾ ಅಡವಿಯ ಹೂವಿನಂತಿದೆ.


ಇಗೋ ಒಂದು ವಾಣಿ! - ಅರಣ್ಯದಲ್ಲಿ ಯೆಹೋವನ ದಾರಿಯನ್ನು ಸರಿಪಡಿಸಿರಿ, ಅಡವಿಯಲ್ಲಿ ನಮ್ಮ ದೇವರಿಗೆ ರಾಜ ಮಾರ್ಗವನ್ನು ನೆಟ್ಟಗೆ ಮಾಡಿರಿ;


ನೀವು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿಕೊಳ್ಳುವಾಗ ಇದೇ ಮಾರ್ಗ, ಇದರಲ್ಲೇ ನಡೆಯಿರಿ ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವದು.


ಯೆಹೋವನು ಮೋಶೆಗೆ ಹೀಗಂದನು - ನೀನು ಇಸ್ರಾಯೇಲ್ಯರಿಗೆ ಹೇಳಬೇಕಾದದ್ದೇನಂದರೆ - ನಾನು ಆಕಾಶದಿಂದ ನಿಮ್ಮ ಸಂಗಡ ಮಾತಾಡಿದ್ದನ್ನು ನೋಡಿದ್ದೀರಷ್ಟೆ.


ಹೀಗೆ ಮಾತಾಡುತ್ತಿರುವಾಗಲೇ ಕಾಂತಿಯುಳ್ಳ ಮೋಡವು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿಂದ - ಈತನು ಪ್ರಿಯನಾಗಿರುವ ನನ್ನ ಮಗನು; ಈತನನ್ನು ನಾನು ಮೆಚ್ಚಿದ್ದೇನೆ; ಈತನ ಮಾತನ್ನು ಕೇಳಿರಿ ಎಂಬ ಆಕಾಶವಾಣಿ ಆಯಿತು.


ಅವನ ಸಂಗಡ ನಾನು ಗೂಢವಾಗಿ ಅಲ್ಲ, ಪ್ರತ್ಯಕ್ಷದಲ್ಲಿ ಸ್ಪಷ್ಟವಾಗಿಯೇ ಮಾತಾಡುವೆನು. ಅವನು ಯೆಹೋವನ ಸ್ವರೂಪವನ್ನೇ ದೃಷ್ಟಿಸುವನು. ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತಾಡುವದಕ್ಕೆ ಭಯಪಡಬೇಕಾಗಿತ್ತು ಎಂದು ಹೇಳಿ ಕೋಪಗೊಂಡು ಹೋದನು.


ಆ ಶಬ್ದವನ್ನು ಕೇಳಿದವರು ತಮಗೆ ಇನ್ನು ಒಂದು ಮಾತನ್ನಾದರೂ ಹೇಳಬಾರದೆಂದು ಬೇಡಿಕೊಂಡರು;


ಯೆಹೋವನು ಮೋಶೆಗೆ - ಇಗೋ ನಾನು ನಿನ್ನ ಸಂಗಡ ಮಾತಾಡುವಾಗ ಜನರು ಕೇಳಿ ಯಾವಾಗಲೂ ನಿನ್ನನ್ನು ನಂಬುವಂತೆ ನಾನು ಕಾರ್ಮುಗಿಲಲ್ಲಿ ನಿನ್ನ ಬಳಿಗೆ ಬರುವೆನು ಎಂದು ಹೇಳಿದನು.


ಆ ದಿನದಲ್ಲಿ ನೀವು ಹತ್ತಿರ ಬಂದು ಬೆಟ್ಟದ ಬುಡದಲ್ಲಿ ನಿಂತುಕೊಂಡಿರಲು ಮೊಬ್ಬೂ ಮೋಡವೂ ಕಾರ್ಗತ್ತಲೂ ಕವಿದು ಆ ಬೆಟ್ಟವು ಆಕಾಶದ ತುದಿಯವರೆಗೂ ಬೆಂಕಿಯಿಂದ ಉರಿದದ್ದೂ;


ನೀವು ಅನುಸರಿಸಬೇಕೆಂದು ಆತನು ನೇವಿುಸಿದ ನಿಬಂಧನೆಯನ್ನು ಅಂದರೆ ಹತ್ತು ಕಟ್ಟಳೆಗಳನ್ನು ನಿಮಗೆ ವಿವರಿಸಿ ಎರಡುಕಲ್ಲಿನ ಹಲಗೆಗಳಲ್ಲಿ ಕೆತ್ತಿಸಿದ್ದೂ;


ಆಗ ಯೆಹೋವನು ತನ್ನ ಕೈಯಿಂದಲೇ ಬರೆದು ಆ ಎರಡು ಕಲ್ಲಿನ ಹಲಿಗೆಗಳನ್ನು ನನ್ನ ವಶಕ್ಕೆ ಕೊಟ್ಟನು. ನೀವು ಸಭೆಕೂಡಿದ ದಿನದಲ್ಲಿ ಯೆಹೋವನು ಆ ಬೆಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ ನಿಮ್ಮ ಸಂಗಡ ಹೇಳಿದ ಮಾತುಗಳು ಆ ಹಲಿಗೆಗಳಲ್ಲಿದ್ದವು.


ಯೆಹೋವನು ಬೆಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ ನೀವು ಸಭೇಕೂಡಿದ ದಿನದಲ್ಲಿ ನಿಮ್ಮ ಸಂಗಡ ಹೇಳಿದ ಮಾತುಗಳನ್ನು ಅಂದರೆ ಆ ಹತ್ತು ಕಟ್ಟಳೆಗಳನ್ನು ಆತನು ಮೊದಲಿನಂತೆಯೇ ಆ ಹಲಿಗೆಗಳ ಮೇಲೆ ಬರೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು