ಧರ್ಮೋಪದೇಶಕಾಂಡ 4:23 - ಕನ್ನಡ ಸತ್ಯವೇದವು J.V. (BSI)23 ಎಚ್ಚರಿಕೆಯಾಗಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಮಾಡಿದ ನಿಬಂಧನೆಯನ್ನು ನೀವು ಮರೆತು ಪೂಜಿಸಬೇಡಿರೆಂದು ಆತನು ನಿಷೇಧಿಸಿದ ಯಾವ ವಸ್ತುವಿನ ವಿಗ್ರಹವನ್ನೂ ಮಾಡಿಕೊಳ್ಳಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಎಚ್ಚರಿಕೆಯಾಗಿರಿ, ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಮಾಡಿದ ನಿಬಂಧನೆಯನ್ನು ನೀವು ಮರೆತು, ಪೂಜಿಸಬೇಡಿರೆಂದು ಆತನು ನಿಷೇಧಿಸಿದ ಯಾವ ವಸ್ತುವಿನ ವಿಗ್ರಹವನ್ನೂ ಮಾಡಿಕೊಳ್ಳಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 “ಎಚ್ಚರಿಕೆಯಾಗಿರಿ; ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಮರೆತುಬಿಡಬೇಡಿ. ಅವರು ಪೂಜಿಸಬೇಡಿರೆಂದು ನಿಷೇಧಿಸಿದ ಯಾವ ವಿಗ್ರಹ ವಸ್ತುಗಳನ್ನೂ ಮಾಡಿಕೊಳ್ಳಬೇಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ನೀವು ಆ ದೇಶದಲ್ಲಿ ವಾಸಿಸುವಾಗ ನಿಮ್ಮ ದೇವರಾದ ಯೆಹೋವನೊಡನೆ ನೀವು ಮಾಡಿರುವ ಒಡಂಬಡಿಕೆಯನ್ನು ಮರೆಯಬೇಡಿರಿ. ನೀವು ಆತನ ಕಟ್ಟಳೆಗಳಿಗೆ ವಿಧೇಯರಾಗಿರಿ. ಯಾವ ವಿಗ್ರಹಗಳನ್ನಾಗಲಿ ಮಾಡಿಕೊಳ್ಳಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಡಬೇಡಿರಿ. ನಿಮ್ಮ ದೇವರಾದ ಯೆಹೋವ ದೇವರು ಪೂಜಿಸಬೇಡವೆಂದು ಹೇಳಿದ ಯಾವ ಕೆತ್ತಿದ ವಿಗ್ರಹವನ್ನು ಮಾಡಿಕೊಳ್ಳದಂತೆ ಜಾಗ್ರತೆಯಾಗಿರಿ. ಅಧ್ಯಾಯವನ್ನು ನೋಡಿ |
ನಾನು ಪ್ರಮಾಣಮಾಡಿಕೊಟ್ಟ ದೇಶದಲ್ಲಿ ಇವರು ಸೇರುವದಕ್ಕಿಂತ ಮುಂಚಿತವಾಗಿಯೇ ಇವರು ಈಗಲೂ ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆ. ನಾನು ಇವರ ಪಿತೃಗಳಿಗೆ ಪ್ರಮಾಣಮಾಡಿದಂತೆ ಹಾಲೂ ಜೇನೂ ಹರಿಯುವ ದೇಶಕ್ಕೆ ಇವರನ್ನು ಸೇರಿಸಿದ ಮೇಲೆ ಇವರು ಚೆನ್ನಾಗಿ ಉಂಡು ಕೊಬ್ಬಿದವರಾದಾಗ ಇತರ ದೇವರುಗಳನ್ನು ಅವಲಂಬಿಸಿ ಸೇವಿಸಿ ನನ್ನನ್ನು ತಾತ್ಸಾರಮಾಡಿ ನನ್ನ ನಿಬಂಧನೆಯನ್ನು ಮೀರುವರು. ಅನಂತರ ಅನೇಕ ಕಷ್ಟಗಳೂ ವಿಪತ್ತುಗಳೂ ಸಂಭವಿಸಿದಾಗ ಈ ಪದ್ಯವು ಇವರ ಸಂತತಿಯವರ ಬಾಯಲ್ಲಿ ಇದ್ದುಕೊಂಡು ಅವರ ಮುಂದೆ ಸಾಕ್ಷಿಕೊಡುವದು ಎಂದು ಹೇಳಿದನು.