Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:36 - ಕನ್ನಡ ಸತ್ಯವೇದವು J.V. (BSI)

36 ಆತನು ನಿಮ್ಮ ಶಿಕ್ಷಣಕ್ಕೋಸ್ಕರ ಆಕಾಶದಿಂದ ತನ್ನ ಸ್ವರವನ್ನು ನಿಮಗೆ ಕೇಳಿಸುವಂತೆ ಮಾಡಿದನು; ಮತ್ತು ಭೂವಿುಯ ಮೇಲೆ ತಾನಿದ್ದ ಮಹಾ ಅಗ್ನಿಜ್ವಾಲೆಯನ್ನು ನೋಡಿಸಿದನು; ಅದಲ್ಲದೆ ಆ ಅಗ್ನಿಜ್ವಾಲೆಯೊಳಗಿಂದ ಆತನು ಆಡಿದ ಮಾತುಗಳನ್ನು ಕೇಳಿಸುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಆತನು ನಿಮ್ಮ ಶಿಕ್ಷಣಕ್ಕೋಸ್ಕರ ಆಕಾಶದಿಂದ ತನ್ನ ಸ್ವರವನ್ನು ನಿಮಗೆ ಕೇಳಿಸುವಂತೆ ಮಾಡಿದನು; ಮತ್ತು ತನ್ನ ಮಹಾ ಅಗ್ನಿಜ್ವಾಲೆಯನ್ನು ಭೂಮಿಯ ಮೇಲೆ ತೋರಿಸಿದನು. ಅದಲ್ಲದೆ ಆ ಅಗ್ನಿಜ್ವಾಲೆಯೊಳಗಿಂದ ಆತನು ಆಡಿದ ಮಾತುಗಳನ್ನು ಕೇಳಿಸುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ನೀವು ಕಲಿತುಕೊಳ್ಳಬೇಕೆಂದೇ ಸರ್ವೇಶ್ವರ ಆಕಾಶದಿಂದ ತಮ್ಮ ಸ್ವರ ನಿಮಗೆ ಕೇಳಿಸುವ ಹಾಗೆ ಮಾಡಿದರು; ತಾವಿದ್ದ ಮಹಾ ಅಗ್ನಿಜ್ವಾಲೆಯನ್ನು ಭೂಮಿಯ ಮೇಲೆ ನೀವು ನೋಡುವಂತೆ ಮಾಡಿದರು; ಆ ಅಗ್ನಿಜ್ವಾಲೆಯ ಒಳಗಿಂದ ಅವರು ಆಡಿದ ಮಾತುಗಳನ್ನು ನೀವು ಕೇಳಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಆಕಾಶದಿಂದ ಆತನ ಮಾತುಗಳನ್ನು ನೀವು ಕೇಳುವಂತೆ ಮಾಡಿದನು; ಭೂಮಿಯ ಮೇಲೆ ಒಂದು ದೊಡ್ಡ ಬೆಂಕಿಯನ್ನು ನೋಡುವಂತೆ ಮಾಡಿದನು; ಮತ್ತು ಅದರೊಳಗಿಂದ ನಿಮ್ಮೊಡನೆ ಮಾತನಾಡಿದನು. ನಿಮಗೆ ಪಾಠಗಳನ್ನು ಕಲಿಸುವುದಕ್ಕಾಗಿ ಇವೆಲ್ಲವನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ದೇವರು ನಿಮ್ಮ ಶಿಕ್ಷಣಕ್ಕಾಗಿ ಆಕಾಶದೊಳಗಿಂದ ತಮ್ಮ ಸ್ವರವನ್ನು ನಿಮಗೆ ಕೇಳಮಾಡಿದರು, ಭೂಮಿಯ ಮೇಲೆ ತಮ್ಮ ದೊಡ್ಡ ಬೆಂಕಿಯನ್ನು ನಿಮಗೆ ತೋರಿಸಿದರು. ನೀವು ಬೆಂಕಿಯೊಳಗಿಂದ ಅವರ ಮಾತುಗಳನ್ನು ಕೇಳಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:36
12 ತಿಳಿವುಗಳ ಹೋಲಿಕೆ  

ತುತೂರಿಯ ಧ್ವನಿ ಹೆಚ್ಚಾಗುತ್ತಾ ಬಂದಾಗ ಮೋಶೆಯು [ದೇವರ ಸಂಗಡ] ಮಾತಾಡಿದನು; ಆಗ ದೇವರು ಬಾಯಿ ಮಾತಿನಿಂದ ಉತ್ತರಕೊಟ್ಟನು.


ಯೆಹೋವನು ಮೋಶೆಗೆ - ಇಗೋ ನಾನು ನಿನ್ನ ಸಂಗಡ ಮಾತಾಡುವಾಗ ಜನರು ಕೇಳಿ ಯಾವಾಗಲೂ ನಿನ್ನನ್ನು ನಂಬುವಂತೆ ನಾನು ಕಾರ್ಮುಗಿಲಲ್ಲಿ ನಿನ್ನ ಬಳಿಗೆ ಬರುವೆನು ಎಂದು ಹೇಳಿದನು.


ಸೀನಾಯಿ ಬೆಟ್ಟದ ಮೇಲೆ ಇಳಿದು ಬಂದು ಆಕಾಶದ ಕಡೆಯಿಂದ ಅವರೊಡನೆ ಮಾತಾಡಿ ಅವರಿಗೆ ನೀತಿನಿಯಮಗಳನ್ನೂ ಯಥಾರ್ಥ ಧರ್ಮೋಪದೇಶವನ್ನೂ ಶ್ರೇಷ್ಠವಾದ ಆಜ್ಞಾವಿಧಿಗಳನ್ನೂ ಅನುಗ್ರಹಿಸಿದಿ.


ದೇವರು ಬೆಂಕಿಯ ಜ್ವಾಲೆಯೊಳಗಿಂದ ಮಾತಾಡಿದ ಸ್ವರವು ನಿಮಗೆ ಕೇಳಿಸಿತಲ್ಲಾ; ಬೇರೆ ಯಾವ ಜನರಾದರೂ ದೇವರ ಸ್ವರವನ್ನು ಕೇಳಿ ಬದುಕಿದ್ದುಂಟೋ?


ನೀವು ಮಾತಾಡುತ್ತಿರುವಾತನ ಮಾತನ್ನು ಕೇಳಲೊಲ್ಲೆವೆಂದು ಹೇಳಬಾರದು. ಭೂವಿುಯ ಮೇಲೆ ದೈವೋಕ್ತಿಗಳನ್ನಾಡಿದವನಿಗೆ ಕಿವಿಗೊಡ ಮನಸ್ಸಿಲ್ಲದೆ ಇದ್ದ ಇಸ್ರಾಯೇಲ್ಯರು ದಂಡನೆಗೆ ತಪ್ಪಿಸಿಕೊಳ್ಳದಿದ್ದರೆ ಪರಲೋಕದಿಂದ ಮಾತಾಡುವವನಿಗೆ ನಾವು ಕಿವಿಗೊಡ ಮನಸ್ಸಿಲ್ಲದೆ ತೊಲಗಿದರೆ ಹೇಗೆ ತಪ್ಪಿಸಿಕೊಂಡೇವು?


ನೀವು ಮುಟ್ಟುವದಕ್ಕೆ ಸಾಧ್ಯವಾದಂಥ ಮತ್ತು ಬೆಂಕಿಹತ್ತಿದಂಥ ಬೆಟ್ಟಕ್ಕೂ ಮೋಡದ ಮೊಬ್ಬಿಗೂ ಕತ್ತಲೆಗೂ ಬಿರುಗಾಳಿಗೂ ತುತೂರಿಯ ಧ್ವನಿಗೂ ಮಾತುಗಳ ಶಬ್ದಕ್ಕೂ ಬಂದವರಲ್ಲ.


ಯೆಹೋವನ ತೇಜಸ್ಸು ಸೀನಾಯಿ ಬೆಟ್ಟದ ಮೇಲೆ ನಿಂತಿತು, ಮತ್ತು ಆ ಮೇಘವು ಆರು ದಿನಗಳವರೆಗೂ ಬೆಟ್ಟವನ್ನು ಮುಚ್ಚಿಕೊಂಡಿತ್ತು. ಏಳನೆಯ ದಿನದಲ್ಲಿ ಯೆಹೋವನು ಮೇಘದೊಳಗಿಂದ ಕೂಗಿ ಮೋಶೆಯನ್ನು ಕರೆದನು.


ತಂದೆ ಮಗನನ್ನು ಹೇಗೋ ಹಾಗೆಯೇ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಶಿಕ್ಷಿಸುತ್ತಾ ಬಂದನೆಂಬದನ್ನು ನೀವು ಆಲೋಚಿಸಿಕೊಂಡು


ಯೆಹೋವನು ಬೆಂಕಿಯೊಳಗೆ ಸೀನಾಯಿ ಬೆಟ್ಟದ ಮೇಲಕ್ಕೆ ಇಳಿದು ಬಂದದರಿಂದ ಆ ಬೆಟ್ಟವೆಲ್ಲಾ ಹೊಗೆಯಿಂದ ಆವರಿಸಿಕೊಂಡಿತು. ಆ ಹೊಗೆ ಆವಿಗೆಯ ಹೊಗೆಯಂತೆ ಏರಿತು; ಅದಲ್ಲದೆ ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.


ಯೆಹೋವನು ಆ ಬೆಂಕಿಯ ಜ್ವಾಲೆಯೊಳಗಿಂದ ನಿಮ್ಮ ಸಂಗಡ ಮಾತಾಡಿದ್ದೂ; ಮಾತಾಡಿದ ಸ್ವರ ನಿಮಗೆ ಕೇಳಿಸಿತೇ ಹೊರತು ಯಾವ ಆಕಾರವೂ ಕಾಣಿಸದೆ ಹೋದದ್ದೂ;


ಹೋರೇಬಿನಲ್ಲಿ ಯೆಹೋವನು ಬೆಂಕಿಯ ಜ್ವಾಲೆಯೊಳಗಿಂದ ನಿಮ್ಮ ಸಂಗಡ ಮಾತಾಡಿದಾಗ ನಿಮಗೆ ಯಾವ ಆಕಾರವೂ ಕಾಣಿಸಲಿಲ್ಲವಷ್ಟೆ. ಆದದರಿಂದ ನೀವು ನಿಮ್ಮ ನಿಮ್ಮ ಮನಸ್ಸುಗಳನ್ನು ಬಹು ಜಾಗರೂಕತೆಯಿಂದ ಕಾಪಾಡಿಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು