ಧರ್ಮೋಪದೇಶಕಾಂಡ 4:4 - ಕನ್ನಡ ಸತ್ಯವೇದವು J.V. (BSI)4 ನಿಮ್ಮ ದೇವರಾದ ಯೆಹೋವನನ್ನು ಹೊಂದಿಕೊಂಡವರಾದ ನೀವಾದರೋ ಇಂದಿನವರೆಗೂ ಉಳಿದುಕೊಂಡಿದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಿಮ್ಮ ದೇವರಾದ ಯೆಹೋವನನ್ನು ನೀವು ನಂಬಿ ನಡೆದುದರಿಂದ ನೀವಾದರೋ ಇಂದಿನವರೆಗೂ ಉಳಿದಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಿಮ್ಮ ದೇವರಾದ ಸರ್ವೇಶ್ವರನನ್ನು ಅವಲಂಭಿಸಿದ ನೀವಾದರೋ ಇಂದಿನವರೆಗೂ ಉಳಿದುಕೊಂಡಿದ್ದೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆದರೆ ಯಾರು ದೇವರಾದ ಯೆಹೋವನನ್ನು ಮಾತ್ರ ಸೇವಿಸಿದರೋ ಅವರು ಈಗಲೂ ಜೀವಂತರಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆದರೆ ನಿಮ್ಮ ದೇವರಾದ ಯೆಹೋವ ದೇವರಿಗೆ ವಿಧೇಯರಾದ ನೀವೆಲ್ಲರು ಇಂದಿನವರೆಗೆ ಬದುಕಿದ್ದೀರಿ. ಅಧ್ಯಾಯವನ್ನು ನೋಡಿ |
ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಜನರು ಕೂತಿದ್ದರು; ನ್ಯಾಯತೀರಿಸುವ ಅಧಿಕಾರವು ಅವರಿಗೆ ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿವಿುತ್ತವಾಗಿಯೂ ದೇವರ ವಾಕ್ಯದ ನಿವಿುತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ನಮಸ್ಕರಿಸದೆ ತಮ್ಮ ಹಣೆಯ ಮೇಲೆ ಮತ್ತು ಕೈಯ ಮೇಲೆ ಗುರುತುಹಾಕಿಸಿಕೊಳ್ಳದೆ ಇರುವವರನ್ನೂ ಕಂಡೆನು. ಅವರು ಜೀವಿತರಾಗಿ ಎದ್ದು ಸಾವಿರ ವರುಷ ಕ್ರಿಸ್ತನೊಂದಿಗೆ ಆಳಿದರು.