Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:42 - ಕನ್ನಡ ಸತ್ಯವೇದವು J.V. (BSI)

42 ಮೊದಲು ಯಾವ ದ್ವೇಷವೂ ಇಲ್ಲದೆ ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಲಿ ಎಂದು ಆ ಪಟ್ಟಣಗಳನ್ನು ನೇವಿುಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಯಾವ ದ್ವೇಷವೂ ಇಲ್ಲದೆ ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಲಿ ಎಂದು ಆ ಪಟ್ಟಣಗಳನ್ನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಪೂರ್ವಕಲ್ಪಿತ ಯಾವ ದ್ವೇಷವೂ ಇಲ್ಲದೆ, ಕೈತಪ್ಪಿ, ಮತ್ತೊಬ್ಬನನ್ನು ಕೊಂದವನು ಆ ನಗರಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಲಿ ಎಂದು ಆ ನಗರಗಳನ್ನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಯಾವನಾದರೂ ಒಬ್ಬ ಮನುಷ್ಯನನ್ನು ಉದ್ದೇಶವಿಲ್ಲದೆ ಆಕಸ್ಮಿಕವಾಗಿ ಕೊಂದರೆ ಅವನು ಈ ಮೂರು ನಗರಗಳಲ್ಲಿ ಯಾವುದಾದರೊಂದರಲ್ಲಿ ಆಶ್ರಯ ತೆಗೆದುಕೊಂಡಲ್ಲಿ ಅವನು ಮರಣದಂಡನೆಯಿಂದ ಪಾರಾಗುವನು ಅಂದರೆ ಅವನು ಕೊಲೆಯಾದವನನ್ನು ದ್ವೇಷಿಸದೆ ಇದ್ದಲ್ಲಿ ಮತ್ತು ಅವನನ್ನು ಕೊಲ್ಲಬೇಕೆಂಬ ಉದ್ದೇಶವಿಲ್ಲದಿದ್ದಲ್ಲಿ ಕೊಲೆಗಾರನು ಆ ನಗರದಲ್ಲಿ ಸುರಕ್ಷಿತನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಯಾವ ಹಗೆಯಿಲ್ಲದೆ ತನ್ನ ನೆರೆಯವನನ್ನು ಕೈತಪ್ಪಿ ಕೊಂದವನು ಆ ನಗರಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳುವಂತೆ ಆ ನಗರಗಳನ್ನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:42
7 ತಿಳಿವುಗಳ ಹೋಲಿಕೆ  

ಆಶ್ರಯವನ್ನು ಹೊಂದಬೇಕೆಂದು ಓಡಿಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಎರಡು ನಿಶ್ಚಲವಾದ ಆಧಾರಗಳು ಇರುವ ಕಾರಣ ಬಲವಾದ ಧೈರ್ಯವುಂಟಾಯಿತು.


ಮನುಷ್ಯ ಹತ್ಯಮಾಡಿದವರು ಆಶ್ರಯಕ್ಕಾಗಿ ಓಡಿಹೋಗುವದಕ್ಕೋಸ್ಕರ ನೀವು ನೇವಿುಸುವ ಆರು ಆಶ್ರಯ ನಗರಗಳನ್ನೂ ಬೇರೆ ನಾಲ್ವತ್ತೆರಡು ಪಟ್ಟಣಗಳನ್ನೂ


ಆ ಕಾಲದಲ್ಲಿ ಮೋಶೆ ಯೊರ್ದನ್ ಹೊಳೆಯ ಪೂರ್ವದಿಕ್ಕಿನಲ್ಲಿ ಮೂರು ಆಶ್ರಯನಗರಗಳನ್ನು ಗೊತ್ತುಮಾಡಿದನು.


ಅವು ಯಾವವಂದರೆ - ರೂಬೇನ್ಯರಿಗೋಸ್ಕರ ಮೀಶೋರ್ ಎಂಬ ಎತ್ತರವಾದ ಬೈಲುಸೀಮೆಯ ಅರಣ್ಯದಲ್ಲಿರುವ ಬೆಚೆರ್; ಗಾದ್ಯರಿಗೋಸ್ಕರ ಗಿಲ್ಯಾದಿನಲ್ಲಿರುವ ರಾಮೋತ್; ಮನಸ್ಸೆಯವರಿಗೋಸ್ಕರ ಬಾಷಾನಿನಲ್ಲಿರುವ ಗೋಲಾನ್ ಇವುಗಳೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು