Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:5 - ಕನ್ನಡ ಸತ್ಯವೇದವು J.V. (BSI)

5 ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿನಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಸರ್ವೇಶ್ವರ ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಯೆಹೋವನು ನನಗೆ ಆಜ್ಞಾಪಿಸಿದ ವಿಧಿನಿಯಮಗಳನ್ನು ನಾನು ನಿಮಗೆ ಬೋಧಿಸಿದೆನು. ಈಗ ನೀವು ಸ್ವಾಧೀನಪಡಿಸಿಕೊಳ್ಳುವ ದೇಶದಲ್ಲಿ ನೀವು ನೆಲೆಸುವಾಗ ಆ ವಿಧಿನಿಯಮಗಳನ್ನು ಅನುಸರಿಸಬೇಕೆಂದು ನಾನು ನಿಮಗೆ ಬೋಧಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನೀವು ಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನೀವು ಮಾಡಬೇಕೆಂದು ನನ್ನ ದೇವರಾದ ಯೆಹೋವ ದೇವರು ನನಗೆ ಆಜ್ಞಾಪಿಸಿದ ಆಜ್ಞಾವಿಧಿಗಳನ್ನೂ ನಿಮಗೆ ಬೋಧಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:5
24 ತಿಳಿವುಗಳ ಹೋಲಿಕೆ  

ನಾನು ನಿಮಗೆ ಆಜ್ಞಾಪಿಸಿದ್ದನ್ನೆಲ್ಲಾ ಕಾಪಾಡಿಕೊಳ್ಳುವದಕ್ಕೆ ಅವರಿಗೆ ಉಪದೇಶ ಮಾಡಿರಿ. ನೋಡಿರಿ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿವಸ ನಿಮ್ಮ ಸಂಗಡ ಇರುತ್ತೇನೆ ಎಂದು ಹೇಳಿದನು.


ಮೋಶೆಯು ಸೇವಕನಾಗಿ ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದನು; ಅವನು ಮುಂದೆ ಪ್ರಕಟವಾಗಬೇಕಾಗಿದ್ದ ಸಂಗತಿಗಳಿಗೆ ಸಾಕ್ಷಿಯಾಗಿದ್ದನು.


ಇಸ್ರಾಯೇಲ್ಯರೇ, ಕೇಳಿರಿ; ನೀವು ಬದುಕಿಕೊಂಡು ನಿಮ್ಮ ಪಿತೃಗಳ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಂತೆ ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನಿಸಿ ಅನುಸರಿಸಬೇಕು.


ಯಾಕಂದರೆ ಒಂದನ್ನೂ ಮರೆಮಾಡದೆ ದೇವರ ಸಂಕಲ್ಪವನ್ನೆಲ್ಲಾ ನಿಮಗೆ ತಿಳಿಸಿದೆನು.


ನಾನು ನಿಮಗೆ ತಿಳಿಸಿದ ಮೊದಲನೆಯ ಸಂಗತಿಗಳೊಳಗೆ ಒಂದು ಸಂಗತಿಯನ್ನು ನಿಮಗೆ ತಿಳಿಸಿಕೊಟ್ಟೆನು. ಅದು ನಾನು ಸಹ ಕಲಿತುಕೊಂಡದ್ದೇ. ಅದೇನಂದರೆ ಶಾಸ್ತ್ರದಲ್ಲಿ ಮುಂತಿಳಿಸಿರುವ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳ ನಿವಾರಣೆಗಾಗಿ ಸತ್ತನು; ಹೂಣಲ್ಪಟ್ಟನು;


ಪ್ರತಿಮನುಷ್ಯನು ತನ್ನನ್ನು ಪರೀಕ್ಷಿಸಿಕೊಂಡವನಾಗಿ ಆ ರೊಟ್ಟಿಯಲ್ಲಿ ತಕ್ಕೊಂಡು ತಿನ್ನಲಿ, ಆ ಪಾತ್ರೆಯಲ್ಲಿ ಕುಡಿಯಲಿ.


ಮತ್ತು ನೀನು ದೇವರ ಆಜ್ಞಾವಿಧಿಗಳನ್ನು ಬೋಧಿಸಿ ಅವರು ನಡೆಯಬೇಕಾದ ಮಾರ್ಗವನ್ನೂ ಮಾಡಬೇಕಾದ ಕಾರ್ಯಗಳನ್ನೂ ಅವರಿಗೆ ತಿಳಿಯಪಡಿಸಬೇಕು.


ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಈ ಆಜ್ಞೆಗಳನ್ನು ಕೊಟ್ಟನು. ಮೋಶೆ ಸೀನಾಯಿ ಅರಣ್ಯದಲ್ಲಿ - ಇಸ್ರಾಯೇಲ್ಯರು ಅರ್ಪಿಸಬೇಕಾದದ್ದನ್ನು ಯೆಹೋವನಿಗೆ ಸಮರ್ಪಿಸಬೇಕೆಂದು ಆಜ್ಞಾಪಿಸಿ ಅವರಿಗೆ ಮೇಲೆ ಕಂಡ ವಿಧಿಗಳನ್ನು ಕೊಟ್ಟನು.


ಯೆಹೋವನು ಸೀನಾಯಿಬೆಟ್ಟದಲ್ಲಿ ಮೋಶೆಯ ಮೂಲಕವಾಗಿ ಇಸ್ರಾಯೇಲ್ಯರ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ ಕೊಟ್ಟ ಆಜ್ಞಾವಿಧಿಗಳು ಮೇಲೆ ಕಂಡವುಗಳೇ.


ಯೆಹೋವನು ಸೀನಾಯಿಬೆಟ್ಟದಲ್ಲಿ ಮೋಶೆಯ ಮೂಲಕ ಇಸ್ರಾಯೇಲ್ಯರಿಗೆ ಕೊಟ್ಟ ಆಜ್ಞೆಗಳು ಇವೇ.


ನಿಮ್ಮ ದೇವರಾದ ಯೆಹೋವನು ಕೊಟ್ಟ ಆಜ್ಞೆಗಳನ್ನೇ ನಾನು ನಿಮಗೆ ತಿಳಿಸುತ್ತಾ ಇದ್ದೇನೆ. ಈ ಮಾತುಗಳನ್ನು ನೀವು ಕೈಕೊಳ್ಳಬೇಕೇ ಹೊರತು ಅವುಗಳಿಗೆ ಏನೂ ಕೂಡಿಸಬಾರದು, ಅವುಗಳಿಂದ ಏನೂ ತೆಗೆದುಬಿಡಬಾರದು.


ನಿಮ್ಮ ದೇವರಾದ ಯೆಹೋವನನ್ನು ಹೊಂದಿಕೊಂಡವರಾದ ನೀವಾದರೋ ಇಂದಿನವರೆಗೂ ಉಳಿದುಕೊಂಡಿದ್ದೀರಿ.


ದೇವರೇ, ನೀನು ಬಾಲ್ಯಾರಭ್ಯ ನನ್ನನ್ನು ಉಪದೇಶಿಸುತ್ತಾ ಬಂದಿದ್ದೀ; ನಾನು ನಿನ್ನ ಅದ್ಭುತಕೃತ್ಯಗಳನ್ನು ಇಂದಿನವರೆಗೂ ಪ್ರಚುರಪಡಿಸುತ್ತಿದ್ದೇನೆ.


ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು. ಪಶುಗಳಿಗೆ ಬೇರೆ ಜಾತಿಯ ಪಶುಗಳನ್ನು ಹಾರಿಸಬಾರದು; ನಿಮ್ಮ ಹೊಲಗಳಲ್ಲಿ ವಿುಶ್ರಬೀಜಗಳನ್ನು ಬಿತ್ತಬಾರದು; ನಾರೂ ಉಣ್ಣೆಯೂ ಕೂಡಿರುವ ಬಟ್ಟೆಯನ್ನು ಹಾಕಿಕೊಳ್ಳಬಾರದು.


ನಿಮಗೂ ನಿಮ್ಮ ಸಂತತಿಯವರಿಗೂ ಶುಭವುಂಟಾಗುವಂತೆಯೂ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸದಾಕಾಲ ಬಾಳುವಂತೆಯೂ ನಾನು ನಿಮಗೆ ಈಗ ತಿಳಿಸಿದ ಆತನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು.


ಮೋಶೆ ಇಸ್ರಾಯೇಲ್ಯರೆಲ್ಲರನ್ನು ಕರೆದು ಹೀಗಂದನು - ಇಸ್ರಾಯೇಲ್ಯರೇ, ನಾನು ಈಗ ನಿಮಗೆ ತಿಳಿಸುವ ಆಜ್ಞಾವಿಧಿಗಳನ್ನು ಕೇಳಿರಿ; ಇವುಗಳನ್ನು ಗ್ರಹಿಸಿಕೊಂಡು ಅನುಸರಿಸಿ ನಡೆಯಬೇಕು.


ನೀವು ಹೊಳೆ ದಾಟಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಅನುಸರಿಸುವದಕ್ಕಾಗಿ ನಿಮಗೆ ಬೋಧಿಸಬೇಕೆಂದು ನಿಮ್ಮ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದ ಧರ್ಮೋಪದೇಶವೂ ವಿಧಿನಿರ್ಣಯಗಳೂ ಇವೇ.


ಆದಕಾರಣ ನಾನು ಈಗ ನಿಮಗೆ ಬೋಧಿಸುವ ಧರ್ಮೋಪದೇಶವನ್ನೂ ಆಜ್ಞಾವಿಧಿಗಳನ್ನೂ ನೀವು ಅನುಸರಿಸುವವರಾಗಿರಬೇಕು.


ನಾನು ಈಗ ನಿಮಗೆ ಬೋಧಿಸುವ ನಿಮ್ಮ ದೇವರಾದ ಯೆಹೋವನ ಆಜ್ಞಾವಿಧಿನಿರ್ಣಯಗಳನ್ನು ಕೈಕೊಳ್ಳದವರೂ ಆತನನ್ನು ಮರೆಯುವವರೂ ಆಗಬೇಡಿರಿ, ನೋಡಿರಿ.


ನೀವು ಆ ದೇಶವನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಮಾಡುವಾಗ ನಾನು ಈಗ ನಿಮಗೆ ತಿಳಿಸುವ ಎಲ್ಲಾ ಆಜ್ಞಾವಿಧಿಗಳನ್ನು ಅನುಸರಿಸಿ ನಡೆಯಲೇಬೇಕು.


ಯೆಹೋವನು ನನಗೆ ಹೀಗೆ ಹೇಳಿದನು - ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸಲೇವಿುನ ಬೀದಿಗಳಲ್ಲಿಯೂ ಈ ಮಾತುಗಳನ್ನೆಲ್ಲಾ ಸಾರು - ಈ ನಿಬಂಧನವಾಕ್ಯಗಳನ್ನೆಲ್ಲಾ ಕೇಳಿ ಕೈಕೊಳ್ಳಿರಿ.


ಕೈಕೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅವರಿಗೆ ತಿಳಿಸಿಕೊಟ್ಟೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು