ಧರ್ಮೋಪದೇಶಕಾಂಡ 4:6 - ಕನ್ನಡ ಸತ್ಯವೇದವು J.V. (BSI)6 ಇವುಗಳನ್ನು ಕೈಕೊಂಡು ಅನುಸರಿಸಿರಿ. ಅನುಸರಿಸಿದರೇ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ ವಿವೇಕಿಗಳೂ ಎಂದು ತಿಳಿಯುವರು. ಅವರು ಈ ಆಜ್ಞೆಗಳ ವಿಷಯದಲ್ಲಿ ವರ್ತಮಾನವನ್ನು ಕೇಳಿ - ಈ ದೊಡ್ಡ ಜನಾಂಗವು ಜ್ಞಾನ ವಿವೇಕವುಳ್ಳ ಜನಾಂಗ ಎಂದು ಮಾತಾಡಿಕೊಳ್ಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಇವುಗಳನ್ನು ಕೈಕೊಂಡು ಅನುಸರಿಸಿರಿ. ನೀವು ಅನುಸರಿಸಿ ನಡೆದರೆ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ, ವಿವೇಕಿಗಳೂ ಎಂದು ತಿಳಿಯುವರು. ಅವರು ಈ ಆಜ್ಞೆಗಳ ವಿಷಯದಲ್ಲಿ ವರ್ತಮಾನವನ್ನು ಕೇಳಿ, “ಈ ದೊಡ್ಡ ಜನಾಂಗವು ಜ್ಞಾನವಿವೇಕವುಳ್ಳ ಜನಾಂಗ” ಎಂದು ಹೇಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಇವುಗಳನ್ನು ಕೈಗೊಂಡು ಅನುಸರಿಸಿರಿ. ಅನುಸರಿಸಿದ್ದೇ ಆದರೆ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ ವಿವೇಕಿಗಳೂ ಎಂದು ತಿಳಿಯುವರು; ಈ ಆಜ್ಞೆಗಳ ಬಗ್ಗೆ ಅವರು ಅರಿತುಕೊಂಡಾಗ, ‘ಈ ದೊಡ್ಡ ಜನಾಂಗ ಎಂಥಾ ಜ್ಞಾನವಿವೇಕವುಳ್ಳ ಜನಾಂಗ’, ಎಂದು ಮಾತಾಡಿಕೊಳ್ಳುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆ ನಿಯಮಗಳನ್ನು ಪರಿಪೂರ್ಣವಾಗಿ ಅಭ್ಯಾಸಿಸಿರಿ, ‘ಆಗ ಅನ್ಯಜನರು ನಿಮ್ಮನ್ನು ನೋಡಿ ನೀವು ಜ್ಞಾನಿಗಳು’ ಎಂದು ತಿಳಿದುಕೊಳ್ಳುವರು. ಆ ದೇಶದ ಜನರು ನಿಮ್ಮ ವಿಧಿನಿಯಮಗಳನ್ನು ಕೇಳಿ, ‘ನಿಜವಾಗಿಯೂ ಈ ಮಹಾ ಜನಾಂಗದ ಜನರು ಬುದ್ಧಿಯುಳ್ಳವರು ಮತ್ತು ಜ್ಞಾನಿಗಳು’ ಎಂದು ಹೇಳುವರು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಹೀಗಿರುವುದರಿಂದ ನೀವು ಅವುಗಳನ್ನು ಎಚ್ಚರದಿಂದ ಕೈಗೊಂಡು ಅನುಸರಿಸಿರಿ. ಏಕೆಂದರೆ ಇತರ ಜನಗಳು ನಿಮ್ಮನ್ನು ಜ್ಞಾನಿಗಳೂ ವಿವೇಕಿಗಳೂ ಎಂದು ತಿಳಿಯುವರು. ಈ ಆಜ್ಞೆಗಳ ಬಗ್ಗೆ ಅವರು ಅರಿತುಕೊಂಡಾಗ, “ನಿಶ್ಚಯವಾಗಿ ಇದು ದೊಡ್ಡ ಜನಾಂಗವು ಎಂತಹ ಜ್ಞಾನವೂ ವಿವೇಕವೂ ಉಳ್ಳ ಜನಾಂಗವಾಗಿದೆ” ಎನ್ನುವರು. ಅಧ್ಯಾಯವನ್ನು ನೋಡಿ |