ಧರ್ಮೋಪದೇಶಕಾಂಡ 4:7 - ಕನ್ನಡ ಸತ್ಯವೇದವು J.V. (BSI)7 ನಾವು ನಮ್ಮ ದೇವರಾದ ಯೆಹೋವನಿಗೆ ಮೊರೆಯಿಡುವಾಗೆಲ್ಲಾ ಆತನು ಸಮೀಪವಾಗಿಯೇ ಇದ್ದಾನಲ್ಲಾ; ಬೇರೆ ಎಷ್ಟು ದೊಡ್ಡ ಜನಾಂಗಕ್ಕಾದರೂ ಯಾವ ದೇವರು ಹೀಗೆ ಸಮೀಪವಾಗಿರುವನು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಾವು ನಮ್ಮ ದೇವರಾದ ಯೆಹೋವನಿಗೆ ಮೊರೆಯಿಡುವಾಗೆಲ್ಲಾ ಆತನು ಸಮೀಪವಾಗಿಯೇ ಇದ್ದಾನಲ್ಲಾ; ಬೇರೆ ಎಷ್ಟು ದೊಡ್ಡ ಜನಾಂಗಕ್ಕಾದರೂ ಯಾವ ದೇವರು ಹೀಗೆ ಸಮೀಪವಾಗಿರುವನು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಾವು ಮೊರೆಯಿಡುವಾಗಲೆಲ್ಲಾ ನಮ್ಮ ದೇವರಾದ ಸರ್ವೇಶ್ವರ ನಮಗೆ ಸಮೀಪವಾಗಿರುವಂತೆ ಬೇರೆ ಯಾವ ಜನಾಂಗಕ್ಕೆ, ಅದೆಷ್ಟೇ ದೊಡ್ಡದಾಗಿರಲಿ, ಯಾವ ದೇವರು ಹೀಗೆ ಸಮೀಪವಾಗಿರುತ್ತಾರೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 “ನಾವು ನಮ್ಮ ದೇವರಾದ ಯೆಹೋವನಿಗೆ ಪ್ರಾರ್ಥಿಸುವಾಗ ಆತನು ನಮ್ಮ ಹತ್ತಿರವೇ ಇದ್ದಾನೆ. ಯಾವ ದೇಶದವರಿಗೂ ಆತನಂಥ ದೇವರಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಾವು ನಮ್ಮ ದೇವರಾದ ಯೆಹೋವ ದೇವರಿಗೆ ಮೊರೆಯಿಡುವಾಗೆಲ್ಲಾ ಅವರು ಸಮೀಪವಾಗಿಯೇ ಇದ್ದಾರಲ್ಲಾ. ಬೇರೆ ಎಷ್ಟು ದೊಡ್ಡ ಜನಾಂಗಕ್ಕಾದರೂ ಯಾವ ದೇವರು ಹೀಗೆ ಸಮೀಪವಾಗಿರುವರು? ಅಧ್ಯಾಯವನ್ನು ನೋಡಿ |
ಇಸ್ರಾಯೇಲ್ಯರೇ, ನೀವು ಎಷ್ಟೋ ಧನ್ಯರು; ನಿಮ್ಮಷ್ಟು ಭಾಗ್ಯವಂತರು ಯಾರಿದ್ದಾರೆ? ನೀವು ಯೆಹೋವನ ಅನುಗ್ರಹದಿಂದ ಜಯವನ್ನು ಹೊಂದಿದವರು. ಆತನೇ ನಿಮ್ಮನ್ನು ಕಾಯುವ ಡಾಲೂ ನಿಮ್ಮ ಗೌರವವನ್ನು ಕಾಪಾಡುವ ಕತ್ತಿಯೂ ಆಗಿದ್ದಾನೆ. ಆದದರಿಂದ ನಿಮ್ಮ ಶತ್ರುಗಳು ನಿಮ್ಮ ಮುಂದೆ ಮುದುರಿಕೊಳ್ಳುತ್ತಾರೆ; ನೀವೋ ಅವರಿಗಿದ್ದ ಎತ್ತರವಾದ ಸೀಮೆಯಲ್ಲಿ ಜಯಶಾಲಿಗಳಾಗಿ ಸಂಚರಿಸುತ್ತೀರಿ.