Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 5:1 - ಕನ್ನಡ ಸತ್ಯವೇದವು J.V. (BSI)

1 ಮೋಶೆ ಇಸ್ರಾಯೇಲ್ಯರೆಲ್ಲರನ್ನು ಕರೆದು ಹೀಗಂದನು - ಇಸ್ರಾಯೇಲ್ಯರೇ, ನಾನು ಈಗ ನಿಮಗೆ ತಿಳಿಸುವ ಆಜ್ಞಾವಿಧಿಗಳನ್ನು ಕೇಳಿರಿ; ಇವುಗಳನ್ನು ಗ್ರಹಿಸಿಕೊಂಡು ಅನುಸರಿಸಿ ನಡೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಮೋಶೆ ಎಲ್ಲಾ ಇಸ್ರಾಯೇಲರನ್ನು ಕರೆದು, “ಇಸ್ರಾಯೇಲರೇ, ನಾನು ಈಗ ನಿಮಗೆ ತಿಳಿಸುವ ಆಜ್ಞಾವಿಧಿಗಳನ್ನು ಕೇಳಿರಿ; ಇವುಗಳನ್ನು ಗ್ರಹಿಸಿಕೊಂಡು ಅನುಸರಿಸಿ ನಡೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಮೋಶೆ ಇಸ್ರಯೇಲರನ್ನು ಕರೆದು ಹೀಗೆ ಸಂಬೋಧಿಸಿದನು: “ಇಸ್ರಯೇಲರೇ, ನಾನು ಈಗ ನಿಮಗೆ ತಿಳಿಸಲಿರುವ ಆಜ್ಞಾವಿಧಿಗಳನ್ನು ಕಿವಿಗೊಟ್ಟು ಕೇಳಿ; ಇವುಗಳನ್ನು ಗ್ರಹಿಸಿಕೊಂಡು ಅನುಸರಿಸಿ ನಡೆಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇಸ್ರೇಲ್ ಸಮೂಹದವರನ್ನೆಲ್ಲಾ ಮೋಶೆ ಒಟ್ಟಾಗಿ ಸೇರಿಸಿ ಅವರಿಗೆ ಹೇಳಿದ್ದೇನೆಂದರೆ: “ಇಸ್ರೇಲ್ ಜನರೇ, ನಾನು ಈ ಹೊತ್ತು ಹೇಳುವ ಕಟ್ಟಳೆಗಳಿಗೆ ಕಿವಿಗೊಡಿರಿ. ಇವುಗಳನ್ನು ಕಲಿತುಕೊಂಡು ಪಾಲಿಸುವವರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಮೋಶೆಯು ಇಸ್ರಾಯೇಲರನ್ನೆಲ್ಲಾ ಕರೆದು ಅವರಿಗೆ ಹೀಗೆ ಹೇಳಿದನು: ಇಸ್ರಾಯೇಲರೇ, ನಾನು ಈ ಹೊತ್ತು ನೀವು ಕೇಳುವಂತೆ ಹೇಳುವ ನಿಯಮಗಳನ್ನೂ, ನ್ಯಾಯಗಳನ್ನೂ ಕೇಳಿರಿ. ಇವುಗಳನ್ನು ಕಲಿತು ಕೈಗೊಂಡು ನಡೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 5:1
17 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರೇ, ಕೇಳಿರಿ; ನೀವು ಬದುಕಿಕೊಂಡು ನಿಮ್ಮ ಪಿತೃಗಳ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಂತೆ ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನಿಸಿ ಅನುಸರಿಸಬೇಕು.


ಆದದರಿಂದ ಅವರು ನಿಮಗೆ ಏನೇನು ಹೇಳುತ್ತಾರೋ ಅದನ್ನೆಲ್ಲಾ ಮಾಡಿರಿ, ಕಾಪಾಡಿಕೊಳ್ಳಿರಿ; ಆದರೆ ಅವರ ನಡತೆಯ ಪ್ರಕಾರ ನಡೆಯಬೇಡಿರಿ; ಅವರು ಹೇಳುತ್ತಾರೇ ಹೊರತು ನಡೆಯುವದಿಲ್ಲ.


ಇಸ್ರಾಯೇಲ ಪುರುಷರೇ, ನಿಮ್ಮ ಪ್ರಧಾನರು, ಗೋತ್ರದವರು, ಹಿರಿಯರು, ಅಧಿಕಾರಿಗಳು,


ಮೋಶೆ ಇಸ್ರಾಯೇಲ್ಯರೆಲ್ಲರನ್ನು ಕರೆದು ಹೀಗಂದನು - ಯೆಹೋವನು ಐಗುಪ್ತದೇಶದಲ್ಲಿ ನಿಮ್ಮ ಕಣ್ಣು ಮುಂದೆ ಫರೋಹನಿಗೂ ಅವನ ಪರಿವಾರದವರಿಗೂ


ಯೊರ್ದನ್ ಹೊಳೆಯ ಆಚೆ, ಪಾರಾನಿಗೂ ತೋಫೆಲ್ ಲಾಬಾನ್ ಹಚೇರೋತ್ ದೀಜಾಹಾಬ್ ಎಂಬ ಸ್ಥಳಗಳಿಗೂ ನಡುವೆ, ಅರಣ್ಯದಲ್ಲಿ ಅರಾಬಾ ಎಂಬ ತಗ್ಗಾದ ಪ್ರದೇಶದಲ್ಲಿ ಸೂಫಿಗೆ ಎದುರಾಗಿ ಮೋಶೆಯು ಇಸ್ರಾಯೇಲ್ಯರೆಲ್ಲರಿಗೆ ಮಾಡಿದ ಉಪನ್ಯಾಸಗಳು.


ಮತ್ತು ನೀನು ದೇವರ ಆಜ್ಞಾವಿಧಿಗಳನ್ನು ಬೋಧಿಸಿ ಅವರು ನಡೆಯಬೇಕಾದ ಮಾರ್ಗವನ್ನೂ ಮಾಡಬೇಕಾದ ಕಾರ್ಯಗಳನ್ನೂ ಅವರಿಗೆ ತಿಳಿಯಪಡಿಸಬೇಕು.


ಅರಾಬಾ ಎಂಬ ತಗ್ಗಿನಲ್ಲಿ ಪಿಸ್ಗಾ ಬೆಟ್ಟದ ಬುಡದಲ್ಲಿರುವ ಅರಾಬದ ಸಮುದ್ರದವರೆಗೆ ಯೊರ್ದನ್ ಹೊಳೆಯ ಆಚೆ ಇರುವ ಭಾಗವನ್ನೆಲ್ಲಾ ಸ್ವಾಧೀನಮಾಡಿಕೊಂಡಿದ್ದರು.)


ನಮ್ಮ ದೇವರಾದ ಯೆಹೋವನು ಹೋರೇಬಿನಲ್ಲಿ ನಮ್ಮ ಸಂಗಡ ನಿಬಂಧನೆಯನ್ನು ಮಾಡಿದನು.


ಆಗ ಅವರು ಮೊಂಡರೂ ಅವಿಧೇಯರೂ ಚಪಲಚಿತ್ತರೂ ದೇವದ್ರೋಹಿಗಳೂ ಆದ ತಮ್ಮ ಪೂರ್ವಿಕರಂತಾಗದೆ


ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ ಆತನ ದೃಷ್ಟಿಗೆ ಸರಿಬೀಳುವದನ್ನು ಮಾಡಿ ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನು.


ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.


ನಿಮ್ಮ ದೇವರಾದ ಯೆಹೋವನು ನಿಮಗೆ ನೇವಿುಸಿದ ಆಜ್ಞಾವಿಧಿನಿರ್ಣಯಗಳನ್ನು ಅನುಸರಿಸಲೇಬೇಕು.


ಆದದರಿಂದ ನಿಮ್ಮ ದೇವರಾದ ಯೆಹೋವನಲ್ಲಿ ಪ್ರೀತಿಯಿಟ್ಟು ಆತನ ನಿಯಮಗಳನ್ನು ಕೈಕೊಂಡು ಆತನ ಆಜ್ಞಾವಿಧಿನಿರ್ಣಯಗಳನ್ನು ಯಾವಾಗಲೂ ಅನುಸರಿಸಬೇಕು.


ನಿಮ್ಮ ಪಿತೃಗಳ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವ ದೇಶದಲ್ಲಿ ನೀವು ಭೂವಿುಯ ಮೇಲಿರುವ ದಿನಗಳಲ್ಲೆಲ್ಲಾ ಅನುಸರಿಸಬೇಕಾದ ಆಜ್ಞಾವಿಧಿಗಳು ಇವೇ -


ಅವನು ಮದದಿಂದ ತನ್ನ ಸ್ವದೇಶದವರನ್ನು ಹಿಯ್ಯಾಳಿಸದೆ ಯೆಹೋವನ ಆಜ್ಞೆಯನ್ನು ಮೀರಿ ಎಡಬಲಕ್ಕೆ ತಿರುಗಿಕೊಳ್ಳದೆ ತನ್ನ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಈ ಧರ್ಮಶಾಸ್ತ್ರದ ಎಲ್ಲಾ ವಾಕ್ಯಗಳನ್ನೂ ವಿಧಿಗಳನ್ನೂ ಅನುಸರಿಸುವದಕ್ಕೆ ಅಭ್ಯಾಸ ಮಾಡಿಕೊಳ್ಳುವಂತೆ ಈ ಗ್ರಂಥವು ಅವನ ಬಳಿಯಲ್ಲೇ ಇರಬೇಕು; ಅವನು ತನ್ನ ಜೀವಮಾನದ ದಿನಗಳೆಲ್ಲಾ ಅದರಲ್ಲಿ ಓದಿಕೊಳ್ಳುತ್ತಾ ಇರಬೇಕು.


ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆ ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದರೆ ಈ ಅಶುಭಗಳು ನಿಮಗೆ ಪ್ರಾಪ್ತವಾಗುವವು -


ಈ ಧರ್ಮಶಾಸ್ತ್ರವು ಯಾವಾಗಲೂ ನಿನ್ನ ಬಾಯಲ್ಲಿರಲಿ; ಹಗಲಿರುಳು ಅದನ್ನು ಧ್ಯಾನಿಸುತ್ತಾ ಅದರಲ್ಲಿ ಬರೆದಿರುವದನ್ನೆಲ್ಲಾ ಕೈಕೊಂಡು ನಡಿ. ಆಗ ನಿನ್ನ ಮಾರ್ಗದಲ್ಲೆಲ್ಲಾ ಸಫಲನಾಗುವಿ, ಕೃತಾರ್ಥನಾಗುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು