Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 5:15 - ಕನ್ನಡ ಸತ್ಯವೇದವು J.V. (BSI)

15 ಐಗುಪ್ತದೇಶದಲ್ಲಿ ನೀವೂ ದಾಸತ್ವದಲ್ಲಿದ್ದದ್ದನ್ನೂ ನಿಮ್ಮ ದೇವರಾದ ಯೆಹೋವನು ಭುಜಪರಾಕ್ರಮದಿಂದಲೂ ಶಿಕ್ಷಾಹಸ್ತದಿಂದಲೂ ನಿಮ್ಮನ್ನು ಬಿಡುಗಡೆಮಾಡಿದ್ದನ್ನೂ ಜ್ಞಾಪಕಮಾಡಿಕೊಳ್ಳಿರಿ. ನೀವು ಸಬ್ಬತ್ ದಿನವನ್ನು ಆಚರಿಸಬೇಕೆಂಬದನ್ನು ನಿಮ್ಮ ದೇವರಾದ ಯೆಹೋವನು ಇದಕ್ಕಾಗಿಯೇ ಆಜ್ಞಾಪಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಐಗುಪ್ತ ದೇಶದಲ್ಲಿ ನೀವು ದಾಸತ್ವದಲ್ಲಿದ್ದುದ್ದನ್ನೂ, ನಿಮ್ಮ ದೇವರಾದ ಯೆಹೋವನು ಭುಜಪರಾಕ್ರಮದಿಂದಲೂ ಮತ್ತು ಶಿಕ್ಷಾಹಸ್ತದಿಂದಲೂ ನಿಮ್ಮನ್ನು ಬಿಡುಗಡೆಮಾಡಿದ್ದನ್ನೂ ಜ್ಞಾಪಕಮಾಡಿಕೊಳ್ಳಿರಿ. ನೀವು ಸಬ್ಬತ್‍ ದಿನವನ್ನು ಆಚರಿಸಬೇಕೆಂದು ನಿಮ್ಮ ದೇವರಾದ ಯೆಹೋವನು ಇದಕ್ಕಾಗಿಯೇ ಆಜ್ಞಾಪಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಈಜಿಪ್ಟ್ ದೇಶದಲ್ಲಿ ನೀವೂ ಗುಲಾಮತನದಲ್ಲಿದ್ದುದನ್ನೂ ನಿಮ್ಮ ದೇವರಾದ ಸರ್ವೇಶ್ವರ ಭುಜಪರಾಕ್ರಮದಿಂದ ಹಾಗು ಶಿಕ್ಷಾಹಸ್ತದಿಂದ ನಿಮ್ಮನ್ನು ಬಿಡುಗಡೆಮಾಡಿದ್ದನ್ನೂ ನೆನಪಿಗೆ ತಂದುಕೊಳ್ಳಿ. ನೀವು ವಿಶ್ರಾಂತಿ ದಿನವನ್ನು ಆಚರಿಸಬೇಕೆಂಬುದನ್ನು ನಿಮ್ಮ ದೇವರಾದ ಸರ್ವೇಶ್ವರ ಇದಕ್ಕಾಗಿಯೇ ಆಜ್ಞಾಪಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನೀವು ಈಜಿಪ್ಟ್ ದೇಶದಲ್ಲಿ ಗುಲಾಮರಾಗಿದ್ದಿರೆಂಬುದನ್ನು ಮರೆಯಬೇಡಿ. ನಿಮ್ಮ ದೇವರಾದ ಯೆಹೋವನು ತನ್ನ ಮಹಾಶಕ್ತಿಯಿಂದ ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿ ನಿಮ್ಮನ್ನು ಸ್ವತಂತ್ರರನ್ನಾಗಿ ಮಾಡಿದನು. ಆದ್ದರಿಂದಲೇ ನಿಮ್ಮ ದೇವರು ಸಬ್ಬತ್ ದಿನವನ್ನು ಆಚರಿಸಬೇಕೆಂದು ಆಜ್ಞೆ ಮಾಡಿದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನೀನು ಈಜಿಪ್ಟ್ ದೇಶದಲ್ಲಿ ದಾಸನಾಗಿದ್ದಿಯೆಂದೂ, ನಿನ್ನ ದೇವರಾದ ಯೆಹೋವ ದೇವರು ನಿನ್ನನ್ನು ಅಲ್ಲಿಂದ ಬಲವಾದ ಹಸ್ತದಿಂದಲೂ ಚಾಚಿದ ಭುಜದಿಂದಲೂ ಹೊರಗೆ ಬರಮಾಡಿದರೆಂದೂ ಜ್ಞಾಪಕಮಾಡಿಕೊಳ್ಳಬೇಕು. ಆದಕಾರಣ ನಿನ್ನ ದೇವರಾದ ಯೆಹೋವ ದೇವರು ನಿನಗೆ ಸಬ್ಬತ್ ದಿನವನ್ನು ಆಚರಿಸಬೇಕೆಂದು ಆಜ್ಞಾಪಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 5:15
23 ತಿಳಿವುಗಳ ಹೋಲಿಕೆ  

ನೀನು ದಾಸತ್ವದಲ್ಲಿದ್ದ ಐಗುಪ್ತದೇಶದೊಳಗಿಂದ ನಿನ್ನನ್ನು ಬಿಡುಗಡೆ ಮಾಡಿದ ಯೆಹೋವನೆಂಬ ನಿನ್ನ ದೇವರು ನಾನೇ.


ಐಗುಪ್ತದೇಶದಲ್ಲಿ ನೀವೇ ದಾಸರಾಗಿರಲು ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡುಗಡೆಮಾಡಿದನೆಂಬದನ್ನು ಜ್ಞಾಪಕಮಾಡಿಕೊಳ್ಳಿರಿ. ಇದಕ್ಕೋಸ್ಕರವಾಗಿಯೇ ನಾನು ಈ ಆಜ್ಞೆಯನ್ನು ನಿಮಗೆ ಈಗ ಕೊಟ್ಟಿದ್ದೇನೆ.


ಐಗುಪ್ತದೇಶದಲ್ಲಿ ದಾಸರಾಗಿದ್ದೇವೆಂಬದನ್ನು ನೀವು ನೆನಪಿಗೆ ತಂದುಕೊಂಡು ಈ ವಿಧಿಗಳನ್ನು ಅನುಸರಿಸಿ ನಡೆಯಬೇಕು.


ಆತನು ನಮ್ಮನ್ನು ಸಕಲ ಅಧರ್ಮದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಶ್ರೀಮುಖಸ್ವರೂಪದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ ಪುರಾತನಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.


ಯೆಹೋವನೇ, ಕರುಣಿಸು, ನಾನು ನಿನ್ನ ಕಿಂಕರನು; ನಿನ್ನ ದಾಸಿಯ ಮಗನೂ ನಿನ್ನ ಸೇವಕನೂ ಆಗಿದ್ದೇನೆ. ನನ್ನ ಬಂಧನಗಳನ್ನು ಬಿಚ್ಚಿಬಿಟ್ಟಿದ್ದೀ.


ಆಗ ಯೆಹೋವನು ಅವನಿಗೆ - ನೀನು ಚೆನ್ನಾಗಿ ತಿಳಿಯತಕ್ಕದ್ದೇನಂದರೆ - ನಿನ್ನ ಸಂತತಿಯವರು ಅನ್ಯದೇಶದಲ್ಲಿ ಕೆಲವು ಕಾಲವಾಸವಾಗಿದ್ದು ಆ ದೇಶದವರಿಗೆ ದಾಸರಾಗುವರು. ನಾನೂರು ವರುಷ ಆ ದೇಶದವರಿಂದ ಬಾಧೆಪಡುವರು.


ಅವನು ತಡಮಾಡಲು ಯೆಹೋವನು ಅವನನ್ನು ಕನಿಕರಿಸಿದ್ದರಿಂದ ಆ ಮನುಷ್ಯರು ಅವನನ್ನೂ ಅವನ ಹೆಂಡತಿ ಮಕ್ಕಳನ್ನೂ ಕೈಹಿಡಿದು ಹೊರಗೆ ತಂದು ಊರಾಚೆಗೆ ಬಿಟ್ಟರು. ಹೊರಗೆ ತಂದ ಮೇಲೆ ಆತನು -


ನಾನು ಮಾಡಿದ ವಾಗ್ದಾನವನ್ನು ನೆನಸಿಕೊಂಡೆನು. ಆದದರಿಂದ ನೀನು ಇಸ್ರಾಯೇಲ್ಯರಿಗೆ [ನನ್ನ ಹೆಸರಿನಲ್ಲಿ] ಹೇಳಬೇಕಾದದ್ದೇನಂದರೆ - ನಾನು ಯೆಹೋವನು; ಐಗುಪ್ತ್ಯರು ನಿಮ್ಮಿಂದ ಮಾಡಿಸುವ ಬಿಟ್ಟೀಕೆಲಸಗಳನ್ನು ನಾನು ತಪ್ಪಿಸಿ ಅವರಲ್ಲಿ ನಿಮಗಿರುವ ದಾಸತ್ವವನ್ನು ತೊಲಗಿಸಿ ನನ್ನ ಕೈ ಚಾಚಿ ಅವರಿಗೆ ಮಹಾಶಿಕ್ಷೆಗಳನ್ನು ವಿಧಿಸಿ ನಿಮ್ಮನ್ನು ರಕ್ಷಿಸುವೆನು.


ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಾಣಮಾಡಿ ಏಳನೆಯ ದಿನದಲ್ಲಿ ವಿಶ್ರವಿುಸಿಕೊಂಡನು. ಆದದರಿಂದ ಯೆಹೋವನು ಸಬ್ಬತ್ ದಿನವನ್ನು ತನ್ನ ದಿನವಾಗಿರಲಿ ಎಂದು ಆಶೀರ್ವದಿಸಿದನು.


ತನ್ನ ಭುಜಬಲ, ಶಿಕ್ಷಾಹಸ್ತ ಇವುಗಳಿಂದ ಅವರನ್ನು ಬಿಡಿಸಿದನು; ಆತನ ಕೃಪೆಯು ಶಾಶ್ವತವಾದದ್ದು.


ಕರ್ತನೇ, ನಮ್ಮ ದೇವರೇ, ಭುಜಪರಾಕ್ರಮವನ್ನು ತೋರಿಸಿ ನಿನ್ನ ಜನರನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ ಇಂದಿನವರೆಗೂ ಪ್ರಸಿದ್ಧವಾಗಿರುವ ಹೆಸರನ್ನು ಪಡೆದುಕೊಂಡವನೇ, ಈಗ ಚಿತ್ತೈಸು. ನಾವು ಪಾಪಮಾಡಿ ಕೆಟ್ಟವರಾಗಿ ನಡೆದಿದ್ದೇವೆ.


ಮೋಶೆ ಇಸ್ರಾಯೇಲ್ಯರಿಗೆ - ನೀವು ದಾಸತ್ವದಲ್ಲಿದ್ದ ಐಗುಪ್ತ ದೇಶದೊಳಗಿಂದ ಬಿಡುಗಡೆಯಾದ ಈ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಆ ಸ್ಥಳದಿಂದ ಬಿಡಿಸಿದನಲ್ಲಾ. ಈ ದಿನದಲ್ಲಿ ನೀವು ಹುಳಿಬೆರೆತದ್ದನ್ನು ತಿನ್ನಕೂಡದು.


ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಐಗುಪ್ತದೇಶದಿಂದ ಬಿಡಿಸಿದನಾದದರಿಂದ ಆತನ ನಿಯಮವನ್ನು ಕುರಿತು ನೀವು ಮಾತಾಡಬೇಕೆಂಬದಕ್ಕಾಗಿ ಈ ಆಚಾರವು ನಿಮಗೆ ಕೈಯಲ್ಲಿ ಕಟ್ಟಿಕೊಂಡಿರುವ ದಾರದಂತೆಯೂ ಹುಬ್ಬುಗಳ ನಡುವೆ ಕಟ್ಟಿಕೊಂಡಿರುವ ಜ್ಞಾಪಕಪಟ್ಟಿಯಂತೆಯೂ ಇರುವದು.


ಇನ್ನು ಮೇಲೆ ನಿಮ್ಮ ಮಕ್ಕಳು - ಇದು ಯಾತಕ್ಕೆ ಎಂದು ವಿಚಾರಿಸುವಾಗ ನೀವು ಅವರಿಗೆ - ನಾವು ದಾಸತ್ವದಲ್ಲಿದ್ದ ಐಗುಪ್ತದೇಶದೊಳಗಿಂದ ಯೆಹೋವನು ಭುಜಬಲದಿಂದ ನಮ್ಮನ್ನು ಬಿಡಿಸಿದನು.


ಯೆಹೋವನು ಭುಜಬಲದಿಂದ ನಮ್ಮನ್ನು ಐಗುಪ್ತದೇಶದಿಂದ ಬಿಡಿಸಿದ ಸಂಗತಿಯನ್ನು ನೀವು ಜ್ಞಾಪಕದಲ್ಲಿಟ್ಟುಕೊಳ್ಳುವದಕ್ಕೆ ಈ ಪದ್ಧತಿಯು ಕೈಗೆ ಕಟ್ಟಿಕೊಂಡಿರುವ ದಾರದಂತೆಯೂ ಹುಬ್ಬುಗಳ ನಡುವೆ ಕಟ್ಟಿಕೊಂಡಿರುವ ಜ್ಞಾಪಕಪಟ್ಟಿಯಂತೆಯೂ ಇರುವದು.


ನೀನು ಐಗುಪ್ತದೇಶದಿಂದ ಕರಕೊಂಡು ಬಂದ ನಿನ್ನ ಜನರು ಕೆಟ್ಟುಹೋದರು; ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೆ ಬಿಟ್ಟುಹೋಗಿ ತಮಗೆ ಲೋಹವಿಗ್ರಹವನ್ನು ಮಾಡಿಸಿಕೊಂಡಿದ್ದಾರೆ ಎಂದು ಹೇಳಿದನು.


ಭುಜಬಲವನ್ನೂ ಶಿಕ್ಷಾಹಸ್ತವನ್ನೂ ಮಹಾಭೀತಿಗಳನ್ನೂ ಮಹತ್ಕಾರ್ಯಗಳನ್ನೂ ಉತ್ಪಾತಗಳನ್ನೂ ಪ್ರಯೋಗಿಸಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು