ಧರ್ಮೋಪದೇಶಕಾಂಡ 5:21 - ಕನ್ನಡ ಸತ್ಯವೇದವು J.V. (BSI)21 ಮತ್ತೊಬ್ಬನ ಹೆಂಡತಿಯನ್ನು ಅಪೇಕ್ಷಿಸಬಾರದು; ಮತ್ತೊಬ್ಬನ ಹೊಲ ಮನೆ ಗಂಡಾಳು ಹೆಣ್ಣಾಳು ಎತ್ತು ಕತ್ತೆ ಮುಂತಾದ ಯಾವದನ್ನೂ ಆಶಿಸಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 “ಮತ್ತೊಬ್ಬನ ಹೆಂಡತಿಯನ್ನು ಅಪೇಕ್ಷಿಸಬಾರದು; ಮತ್ತೊಬ್ಬನ ಹೊಲ, ಮನೆ, ಗಂಡಾಳು, ಹೆಣ್ಣಾಳು, ಎತ್ತು ಮತ್ತು ಕತ್ತೆ ಮುಂತಾದವುಗಳನ್ನು ಆಶಿಸಬಾರದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ‘ನೆರೆಯವನ ಹೆಂಡತಿಯನ್ನು ಅಪೇಕ್ಷಿಸಬೇಡ; ಅವನ ಮನೆ, ಹೊಲ, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ ಮುಂತಾದ ಯಾವುದನ್ನೂ ಬಯಸಬಾರದು,. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ‘ಇನ್ನೊಬ್ಬನ ಹೆಂಡತಿಯನ್ನು ಆಶಿಸಬಾರದು. ಅವನ ಮನೆಯನ್ನಾಗಲಿ ಹೊಲವನ್ನಾಗಲಿ ಸೇವಕರನ್ನಾಗಲಿ ದನವನ್ನಾಗಲಿ ಕತ್ತೆಯನ್ನಾಗಲಿ ನೀವು ಅಪೇಕ್ಷಿಸಬಾರದು. ಇನ್ನೊಬ್ಬನ ವಸ್ತುಗಳಲ್ಲಿ ಯಾವುದನ್ನೂ ಆಶಿಸಬಾರದು!’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನಿನ್ನ ನೆರೆಯವನ ಹೆಂಡತಿಯನ್ನು ಆಶಿಸಬೇಡ. ನಿನ್ನ ನೆರೆಯವನ ಮನೆಯನ್ನೂ, ಅವನ ಹೊಲವನ್ನೂ, ಅವನ ದಾಸನನ್ನಾಗಲಿ, ಅವನ ದಾಸಿಯನ್ನಾಗಲಿ, ಅವನ ಎತ್ತನ್ನಾಗಲಿ, ಅವನ ಕತ್ತೆಯನ್ನಾಗಲಿ, ನಿನ್ನ ನೆರೆಯವನಿಗೆ ಇರುವ ಯಾವುದನ್ನೂ ಆಶಿಸಬೇಡ.” ಅಧ್ಯಾಯವನ್ನು ನೋಡಿ |