Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 5:22 - ಕನ್ನಡ ಸತ್ಯವೇದವು J.V. (BSI)

22 ಈ ಮಾತುಗಳನ್ನು ಯೆಹೋವನು ಆ ಬೆಟ್ಟದ ಮೇಲೆ ಬೆಂಕಿ, ಮೋಡ, ಕಾರ್ಗತ್ತಲು ಇವುಗಳ ಮಧ್ಯದೊಳಗಿಂದ ನಿಮ್ಮ ಸರ್ವಸಮೂಹಕ್ಕೆ ಕೇಳಿಸುವಂತೆ ಮಹಾ ಸ್ವರದಿಂದ ನುಡಿದನು; ಆಮೇಲೆ ಇನ್ನು ಮಾತಾಡಲಿಲ್ಲ. ಆತನು ಆ ಮಾತುಗಳನ್ನು ಎರಡು ಕಲ್ಲಿನ ಹಲಗೆಗಳಲ್ಲಿ ಕೆತ್ತಿ ನನಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಈ ಮಾತುಗಳನ್ನು ಯೆಹೋವನು ಆ ಬೆಟ್ಟದ ಮೇಲೆ ಬೆಂಕಿ, ಮೋಡ, ಕಾರ್ಗತ್ತಲು ಇವುಗಳ ಮಧ್ಯದೊಳಗಿಂದ ನಿಮ್ಮ ಸರ್ವಸಮೂಹಕ್ಕೆ ಕೇಳಿಸುವಂತೆ ಮಹಾ ಸ್ವರದಿಂದ ನುಡಿದನು. ಇದಲ್ಲದೆ ಆತನು ಮತ್ತೇನೂ ಹೇಳಲಿಲ್ಲ. ಆತನು ಆ ಮಾತುಗಳನ್ನು ಎರಡು ಕಲ್ಲಿನ ಹಲಗೆಗಳಲ್ಲಿ ಕೆತ್ತಿ ನನಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 “ಈ ಮಾತುಗಳನ್ನು ಸರ್ವೇಶ್ವರ ಆ ಬೆಟ್ಟದ ಮೇಲೆ ಬೆಂಕಿ, ಮೋಡ, ಕಾರ್ಗತ್ತಲು, ಇವುಗಳ ಮಧ್ಯೆ ನಿಮ್ಮ ಸರ್ವಸಮೂಹಕ್ಕೆ ಕೇಳಿಸುವಂತೆ ಮಹಾಸ್ವರದಿಂದ ನುಡಿದರು; ಬೇರೆ ಏನನ್ನೂ ಕೂಡಿಸದೆ, ಈ ಮಾತುಗಳನ್ನು ಎರಡು ಕಲ್ಲಿನ ಹಲಗೆಗಳಲ್ಲಿ ಬರೆದು ನನಗೆ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಮೋಶೆಯು ಹೇಳಿದ್ದೇನೆಂದರೆ: “ನೀವೆಲ್ಲಾ ಆ ಬೆಟ್ಟದ ಬಳಿಯಲ್ಲಿರುವಾಗ ದೇವರಾದ ಯೆಹೋವನು ಈ ಆಜ್ಞೆಗಳನ್ನು ನಿಮಗೆ ಕೊಟ್ಟನು. ಬೆಂಕಿ, ಮೋಡ ಮತ್ತು ಕಾರ್ಗತ್ತಲೊಳಗಿನಿಂದ ಯೆಹೋವನು ಗಟ್ಟಿಯಾದ ಸ್ವರದಲ್ಲಿ ಮಾತಾಡಿದ್ದನ್ನು ನೀವು ಕೇಳಿದಿರಿ. ಆತನು ಈ ಆಜ್ಞೆಗಳನ್ನು ಕೊಟ್ಟ ಬಳಿಕ ಬೇರೆ ಏನನ್ನೂ ಹೇಳಲಿಲ್ಲ. ಆತನು ತನ್ನ ಮಾತುಗಳನ್ನು ಎರಡು ಕಲ್ಲಿನ ಹಲಗೆಗಳ ಮೇಲೆ ಬರೆದು ನನಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಈ ಮಾತುಗಳನ್ನು ಯೆಹೋವ ದೇವರು ಬೆಟ್ಟದ ಮೇಲೆ ಬೆಂಕಿ, ಮೋಡ, ಕಾರ್ಗತ್ತಲು, ಇವುಗಳ ಮಧ್ಯದೊಳಗಿಂದ, ನಿಮ್ಮ ಸಭೆಗೆಲ್ಲಾ ಕೇಳಿಸುವಂತೆ ಮಹಾ ಸ್ವರದಿಂದ ನುಡಿದರು. ಅವರು ಹೆಚ್ಚೇನೂ ಕೂಡಿಸಲಿಲ್ಲ. ದೇವರು ಈ ಮಾತುಗಳನ್ನು ಕಲ್ಲಿನ ಎರಡು ಹಲಗೆಗಳಲ್ಲಿ ಬರೆದು ನನಗೆ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 5:22
11 ತಿಳಿವುಗಳ ಹೋಲಿಕೆ  

ಯೆಹೋವನು ಸೀನಾಯಿಬೆಟ್ಟದಲ್ಲಿ ಮೋಶೆಯ ಸಂಗಡ ಮಾತಾಡುವದನ್ನು ಮುಗಿಸಿದ ಮೇಲೆ ಅವನಿಗೆ ಆ ಎರಡು ಆಜ್ಞಾಶಾಸನಗಳನ್ನು ಕೊಟ್ಟನು. ಅವು ದೇವರ ಕೈಯಿಂದ ಕೆತ್ತಲ್ಪಟ್ಟ ಶಿಲಾಶಾಸನಗಳೇ.


ಯೆಹೋವನು ಮೋಶೆಗೆ - ನೀನು ಬೆಟ್ಟವನ್ನು ಹತ್ತಿ ಬಂದು ನನ್ನ ಹತ್ತಿರದಲ್ಲೇ ಇರು; ನೀನು ಆ ಧರ್ಮಶಾಸ್ತ್ರವನ್ನೂ ಆಜ್ಞೆಗಳನ್ನೂ ಜನರಿಗೆ ಬೋಧಿಸುವಂತೆ ನಾನು ಅವುಗಳನ್ನು ಬರೆದಿರುವ ಶಿಲಾಶಾಸನಗಳನ್ನು ನಿನಗೆ ಕೊಡುತ್ತೇನೆ ಎಂದು ಹೇಳಲಾಗಿ


ಯೆಹೋವನು ಆ ಬೆಟ್ಟದ ಮೇಲೆ ಬೆಂಕಿಯ ಜ್ವಾಲೆಯೊಳಗಿಂದ ಮುಖಾಮುಖಿಯಾಗಿ ನಿಮ್ಮ ಸಂಗಡ ಮಾತಾಡಲಾಗಿ


ಆತನು ನಿಮ್ಮ ಶಿಕ್ಷಣಕ್ಕೋಸ್ಕರ ಆಕಾಶದಿಂದ ತನ್ನ ಸ್ವರವನ್ನು ನಿಮಗೆ ಕೇಳಿಸುವಂತೆ ಮಾಡಿದನು; ಮತ್ತು ಭೂವಿುಯ ಮೇಲೆ ತಾನಿದ್ದ ಮಹಾ ಅಗ್ನಿಜ್ವಾಲೆಯನ್ನು ನೋಡಿಸಿದನು; ಅದಲ್ಲದೆ ಆ ಅಗ್ನಿಜ್ವಾಲೆಯೊಳಗಿಂದ ಆತನು ಆಡಿದ ಮಾತುಗಳನ್ನು ಕೇಳಿಸುವಂತೆ ಮಾಡಿದನು.


ನೀವು ಮುಟ್ಟುವದಕ್ಕೆ ಸಾಧ್ಯವಾದಂಥ ಮತ್ತು ಬೆಂಕಿಹತ್ತಿದಂಥ ಬೆಟ್ಟಕ್ಕೂ ಮೋಡದ ಮೊಬ್ಬಿಗೂ ಕತ್ತಲೆಗೂ ಬಿರುಗಾಳಿಗೂ ತುತೂರಿಯ ಧ್ವನಿಗೂ ಮಾತುಗಳ ಶಬ್ದಕ್ಕೂ ಬಂದವರಲ್ಲ.


ಜನರು ದೂರದಲ್ಲಿ ನಿಂತಿದ್ದರು; ಮೋಶೆಯೋ ದೇವರಿರುವ ಆ ಕಾರ್ಗತ್ತಲಿನ ಸಮೀಪಕ್ಕೆ ಸೇರಿದನು.


ಆ ಬೆಟ್ಟವು ಬೆಂಕಿಯಿಂದ ಪ್ರಜ್ವಲಿಸುತ್ತಿರುವಾಗ ಆ ಕತ್ತಲೊಳಗಿಂದ ದೇವರ ಸ್ವರವನ್ನು ಕೇಳಿ ನೀವು ಅಂದರೆ ನಿಮ್ಮ ಕುಲಾಧಿಪತಿಗಳೂ ಹಿರಿಯರೂ ನನ್ನ ಬಳಿಗೆ ಬಂದು -


ದೇವರು ಬೆಂಕಿಯ ಜ್ವಾಲೆಯೊಳಗಿಂದ ಮಾತಾಡಿದ ಸ್ವರವು ನಿಮಗೆ ಕೇಳಿಸಿತಲ್ಲಾ; ಬೇರೆ ಯಾವ ಜನರಾದರೂ ದೇವರ ಸ್ವರವನ್ನು ಕೇಳಿ ಬದುಕಿದ್ದುಂಟೋ?


ನಾನು ನಿಮಗೆ ಬರೆಯಿಸಿಕೊಟ್ಟ ಆಜ್ಞಾನಿಯಮವಿಧಿ ಧರ್ಮಶಾಸ್ತ್ರಗಳನ್ನು ತಪ್ಪದೆ ಕೈಕೊಳ್ಳಬೇಕು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು