ಧರ್ಮೋಪದೇಶಕಾಂಡ 5:24 - ಕನ್ನಡ ಸತ್ಯವೇದವು J.V. (BSI)24 ನಮ್ಮ ದೇವರಾದ ಯೆಹೋವನು ತನ್ನ ಘನವನ್ನೂ ಮಹಿಮೆಯನ್ನೂ ನಮಗೆ ತೋರಿಸಿ ಅಗ್ನಿಜ್ವಾಲೆಯೊಳಗಿಂದ ತನ್ನ ಸ್ವರವನ್ನು ನಮಗೆ ಕೇಳಿಸಿದನಲ್ಲಾ. ಮನುಷ್ಯನು ತನ್ನ ಸಂಗಡ ದೇವರು ಮಾತಾಡಿದರೂ ಸಾಯದೆ ಬದುಕಿದ್ದುಂಟೆಂಬದು ಈ ಹೊತ್ತು ನಮಗೆ ತಿಳಿಯಬಂತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 “ನಮ್ಮ ದೇವರಾದ ಯೆಹೋವನು ತನ್ನ ಘನವನ್ನೂ ಮತ್ತು ಮಹಿಮೆಯನ್ನೂ ನಮಗೆ ತೋರಿಸಿ, ಅಗ್ನಿಜ್ವಾಲೆಯೊಳಗಿಂದ ತನ್ನ ಸ್ವರವನ್ನು ನಮಗೆ ಕೇಳುವಂತೆ ಮಾಡಿದನಲ್ಲಾ. ಮನುಷ್ಯನು ತನ್ನ ಸಂಗಡ ದೇವರು ಮಾತನಾಡಿದರೂ ಸಾಯದೆ ಬದುಕಿದ್ದುಂಟೆಂಬುದು ಈ ಹೊತ್ತು ನಮಗೆ ತಿಳಿಯಬಂತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ‘ಇಗೋ, ನಮ್ಮ ದೇವರಾದ ಸರ್ವೇಶ್ವರ ತಮ್ಮ ಪ್ರತಿಭೆಯನ್ನೂ ಮಹಿಮೆಯನ್ನೂ ನಮಗೆ ತೋರಿಸಿದ್ದಾರೆ; ಅಗ್ನಿಜ್ವಾಲೆಯೊಳಗಿಂದ ತಮ್ಮ ಸ್ವರವನ್ನು ನಮಗೆ ಕೇಳಿಸಿದ್ದಾರೆ; ದೇವರು ಮನುಷ್ಯನೊಡನೆ ಮಾತಾಡಿದ್ದನ್ನೂ, ಆದರೂ ಆ ಮನುಷ್ಯ ಸಾಯದೆ ಬದುಕಿರುವುದನ್ನೂ ಇಂದು ನಾವು ಕಂಡೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ‘ನಮ್ಮ ದೇವರಾದ ಯೆಹೋವನು ತನ್ನ ಮಹಿಮೆಯನ್ನೂ ಪ್ರತಾಪವನ್ನೂ ನಮಗೆ ತೋರಿಸಿದ್ದಾನೆ. ಬೆಂಕಿಯೊಳಗಿಂದ ಆತನು ಮಾತನಾಡಿದ್ದನ್ನು ನಾವು ಕೇಳಿದ್ದೇವೆ. ದೇವರು ಒಬ್ಬನೊಡನೆ ಸ್ವತಃ ಮಾತನಾಡಿದ ಬಳಿಕವೂ ಅವನು ಜೀವದಿಂದುಳಿಯಲು ಸಾಧ್ಯ ಎಂಬುದನ್ನು ನಾವು ಕಣ್ಣಾರೆ ಕಂಡೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 “ಇಗೋ, ನಮ್ಮ ದೇವರಾದ ಯೆಹೋವ ದೇವರು ತಮ್ಮ ಮಹಿಮೆಯನ್ನೂ, ತಮ್ಮ ಘನವನ್ನೂ ನಮಗೆ ತೋರಿಸಿದ್ದಾರೆ. ಅವರ ಸ್ವರವನ್ನು ಬೆಂಕಿಯೊಳಗಿಂದ ಕೇಳಿದ್ದೇವೆ. ದೇವರು ಮನುಷ್ಯರ ಸಂಗಡ ಮಾತನಾಡಿದ ಮೇಲೂ, ಅವರು ಬದುಕುತ್ತಾರೆಂದು ಈ ಹೊತ್ತು ನೋಡಿದ್ದೇವೆ. ಅಧ್ಯಾಯವನ್ನು ನೋಡಿ |