Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 5:27 - ಕನ್ನಡ ಸತ್ಯವೇದವು J.V. (BSI)

27 ನೀನೇ ಹತ್ತಿರಕ್ಕೆ ಹೋಗಿ ನಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ತಿಳಿದುಕೊಂಡು ಬಂದು ನಮಗೆ ತಿಳಿಸು; ತಿಳಿಸಿದಾಗ ನಾವು ನಡಿಸುವೆವು ಎಂದು ಹೇಳಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನೀನೇ ಹತ್ತಿರಕ್ಕೆ ಹೋಗಿ ನಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ತಿಳಿದುಕೊಂಡು ಬಂದು ನಮಗೆ ತಿಳಿಸು; ತಿಳಿಸಿದಾಗ ನಾವು ನಡಿಸುವೆವು” ಎಂದು ಹೇಳಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ನೀನೇ ಹತ್ತಿರಕ್ಕೆ ಹೋಗಿ, ನಮ್ಮ ದೇವರಾದ ಸರ್ವೇಶ್ವರನ ಆಜ್ಞೆಗಳನ್ನೆಲ್ಲಾ ತಿಳಿದುಕೊಂಡು ಬಂದು ನಮಗೆ ತಿಳಿಸು; ತಿಳಿಸಿದಾಗ ನಾವು ಅದರಂತೆ ನಡೆಯುತ್ತೇವೆ’ ಎಂದು ಹೇಳಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಮೋಶೆಯೇ, ನೀನು ಹತ್ತಿರ ಹೋಗಿ ಯೆಹೋವನು ಹೇಳುವುದನ್ನೆಲ್ಲಾ ಕೇಳಿ ನಮಗೆ ಅದನ್ನು ತಿಳಿಸು. ನಾವು ನಿನ್ನ ಮಾತುಗಳನ್ನು ಕೇಳಿ ನೀನು ಹೇಳಿದ ಹಾಗೆ ಮಾಡುವೆವು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನೀನೇ ಸಮೀಪಕ್ಕೆ ಹೋಗಿ ನಮ್ಮ ದೇವರಾದ ಯೆಹೋವ ದೇವರು ಹೇಳುವುದನ್ನೆಲ್ಲಾ ಕೇಳಿ, ನಮ್ಮ ದೇವರಾದ ಯೆಹೋವ ದೇವರು ನಿನಗೆ ಹೇಳಿದ್ದನ್ನೆಲ್ಲಾ ನಮಗೆ ಹೇಳು. ಆಗ ನಾವು ಕೇಳಿ ಅದರಂತೆ ಮಾಡುತ್ತೇವೆ,” ಎಂದು ಹೇಳಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 5:27
11 ತಿಳಿವುಗಳ ಹೋಲಿಕೆ  

ಅವರು ಮೋಶೆಗೆ - ನೀನೇ ನಮ್ಮ ಸಂಗಡ ಮಾತಾಡು; ನಾವು ಕೇಳುವೆವು. ದೇವರು ನಮ್ಮ ಸಂಗಡ ಮಾತಾಡಿದರೆ ನಾವು ಸತ್ತೇವು ಎಂದು ಹೇಳಿದರು.


ಆ ಶಬ್ದವನ್ನು ಕೇಳಿದವರು ತಮಗೆ ಇನ್ನು ಒಂದು ಮಾತನ್ನಾದರೂ ಹೇಳಬಾರದೆಂದು ಬೇಡಿಕೊಂಡರು;


ಜನರೆಲ್ಲರೂ - ಯೆಹೋವನು ಹೇಳಿದಂತೆಯೇ ಮಾಡುವೆವು ಎಂದು ಒಗ್ಗಟ್ಟಾಗಿ ಪ್ರತ್ಯುತ್ತರ ಕೊಡಲಾಗಿ ಮೋಶೆ ಯೆಹೋವನ ಬಳಿಗೆ ಹೋಗಿ ಅವರ ಮಾತುಗಳನ್ನು ಆತನಿಗೆ ಅರಿಕೆ ಮಾಡಿದನು.


ಮೋಶೆ ಜನರ ಬಳಿಗೆ ಬಂದು ಯೆಹೋವನ ಎಲ್ಲಾ ಮಾತುಗಳನ್ನೂ ನ್ಯಾಯವಿಧಿಗಳನ್ನೂ ವಿವರಿಸಲು ಜನರೆಲ್ಲರು - ಯೆಹೋವನ ಮಾತುಗಳನ್ನೆಲ್ಲಾ ಅನುಸರಿಸಿ ನಡೆಯುವೆವು ಎಂದು ಒಗ್ಗಟ್ಟಾಗಿ ಉತ್ತರ ಕೊಟ್ಟರು.


ಬೆಂಕಿಯ ಜ್ವಾಲೆಯೊಳಗಿಂದ ಮಾತಾಡುವ ಚೈತನ್ಯಸ್ವರೂಪನಾದ ದೇವರ ಸ್ವರವನ್ನು ನಾವು ಕೇಳಿದಂತೆ ಎಲ್ಲಾ ಮನುಷ್ಯರೊಳಗೆ ಬೇರೆ ಯಾರು ಕೇಳಿ ಬದುಕಿದರು? ಹೀಗಿರುವದರಿಂದ ನಾವು ಯಾಕೆ ಸಾಯಬೇಕು?


ನಿಮ್ಮ ಮಾತುಗಳನ್ನು ಯೆಹೋವನು ಕೇಳಿ ನನಗೆ - ಈ ಜನರು ನಿನಗೆ ಹೇಳಿದ ಮಾತುಗಳನ್ನು ಕೇಳಿದ್ದೇನೆ; ಆ ಮಾತುಗಳೆಲ್ಲಾ ಒಳ್ಳೆಯವೇ.


ಅದಕ್ಕೆ ಜನರು - ನಮ್ಮ ದೇವರಾದ ಯೆಹೋವನನ್ನೇ ಸೇವಿಸುತ್ತಾ ಆತನ ಮಾತನ್ನು ಕೇಳುವೆವು ಅಂದರು.


ನಮ್ಮ ದೇವರಾದ ಯೆಹೋವನ ಮಾತು ಹಿತವಾಗಲಿ ಅಹಿತವಾಗಲಿ ಆತನ ಸನ್ನಿಧಿಯಲ್ಲಿ ವಿಚಾರಿಸುವದಕ್ಕೆ ನಿನ್ನನ್ನು ಕಳುಹಿಸುವ ನಾವು ಅದನ್ನು ಕೈಕೊಳ್ಳುವೆವು; ನಮ್ಮ ದೇವರಾದ ಯೆಹೋವನ ಮಾತನ್ನು ನಾವು ಕೇಳಿದರೆ ನಮಗೆ ಶುಭವಾಗುವದಷ್ಟೆ ಎಂಬದಾಗಿ ಹೇಳಿದರು.


ಮತ್ತು ನೀನು ದೇವರ ಆಜ್ಞಾವಿಧಿಗಳನ್ನು ಬೋಧಿಸಿ ಅವರು ನಡೆಯಬೇಕಾದ ಮಾರ್ಗವನ್ನೂ ಮಾಡಬೇಕಾದ ಕಾರ್ಯಗಳನ್ನೂ ಅವರಿಗೆ ತಿಳಿಯಪಡಿಸಬೇಕು.


ಆ ಗುಡುಗುವಿುಂಚುಗಳನ್ನೂ ತುತೂರಿ ಧ್ವನಿಯಾಗುತ್ತಿರುವದನ್ನೂ ಬೆಟ್ಟದಿಂದ ಹೊಗೆ ಹೊರಡುವದನ್ನೂ ಜನರೆಲ್ಲರು ನೋಡಿ ನಡುಗುತ್ತಾ ದೂರದಲ್ಲಿ ನಿಂತುಕೊಂಡರು.


ಅವರು ಯೆರೆಮೀಯನಿಗೆ - ನಿನ್ನ ದೇವರಾದ ಯೆಹೋವನು ನಿನ್ನ ಮೂಲಕ ನಮಗೆ ಕಳುಹಿಸುವ ಮಾತಿನಂತೆ ನಾವು ನಡೆಯದಿದ್ದರೆ ಯೆಹೋವನು ಸ್ಥಿರವಾದ ಸತ್ಯಸಾಕ್ಷಿಯಾಗಿ ನಿಂತು ನಮ್ಮನ್ನು ಖಂಡಿಸಲಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು