Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 5:3 - ಕನ್ನಡ ಸತ್ಯವೇದವು J.V. (BSI)

3 ಆತನು ನಮ್ಮ ಪೂರ್ವಿಕರ ಸಂಗಡ ಈ ನಿಬಂಧನೆಯನ್ನು ಮಾಡದೆ ಈಗ ಇಲ್ಲಿ ಜೀವದಿಂದಿರುವ ನಮ್ಮ ಸಂಗಡಲೇ ಇದನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆತನು ನಮ್ಮ ಪೂರ್ವಿಕರ ಸಂಗಡ ಈ ನಿಬಂಧನೆಯನ್ನು ಮಾಡದೆ, ಈಗ ಇಲ್ಲಿ ಜೀವದಿಂದಿರುವ ನಮ್ಮ ಸಂಗಡಲೇ ಇದನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಮ್ಮ ಪೂರ್ವಿಕರ ಸಂಗಡ ಈ ಒಡಂಬಡಿಕೆಯನ್ನು ಮಾಡದೆ ಈಗ ಇಲ್ಲಿ ಜೀವದಿಂದಿರುವ ನಮ್ಮ ಸಂಗಡವೇ ಇದನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನು ನಮ್ಮ ಪೂರ್ವಿಕರೊಂದಿಗೆ ಒಡಂಬಡಿಕೆ ಮಾಡದೆ ಈಗ ಇಲ್ಲಿ ಜೀವಂತರಾಗಿರುವ ನಮ್ಮೊಂದಿಗೆ ಮಾಡಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೆಹೋವ ದೇವರು ಆ ಒಡಂಬಡಿಕೆಯನ್ನು ನಮ್ಮ ಪಿತೃಗಳ ಸಂಗಡ ಅಲ್ಲ, ನಮ್ಮ ಸಂಗಡವೇ ಮಾಡಿದರು. ನಾವೆಲ್ಲರೂ ಈ ಹೊತ್ತು ಇಲ್ಲಿ ಜೀವದಿಂದಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 5:3
12 ತಿಳಿವುಗಳ ಹೋಲಿಕೆ  

ನಿಮಗೆ ಸತ್ಯವಾಗಿ ಹೇಳುತ್ತೇನೆ, ನೀವು ನೋಡುತ್ತಿರುವ ಕಾರ್ಯಗಳನ್ನು ಬಹು ಮಂದಿ ಪ್ರವಾದಿಗಳೂ ಸತ್ಪುರುಷರೂ ನೋಡಬೇಕೆಂದು ಅಪೇಕ್ಷಿಸಿದರೂ ನೋಡಲಿಲ್ಲ; ನೀವು ಕೇಳುತ್ತಿರುವ ಸಂಗತಿಗಳನ್ನು ಅವರು ಕೇಳಬೇಕೆಂದು ಅಪೇಕ್ಷಿಸಿದರೂ ಕೇಳಲಿಲ್ಲ.


ಆದರೆ ಆ ನನ್ನ ಒಡಂಬಡಿಕೆಯನ್ನು ಇಸಾಕನ ಸಂಗಡಲೇ ಸ್ಥಾಪಿಸಿಕೊಳ್ಳುತ್ತೇನೆ; ಬರುವ ವರುಷ ಇದೇ ಕಾಲದಲ್ಲಿ ಸಾರಳು ಅವನನ್ನು ಹೆರುವಳು ಅಂದನು.


ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನೆಂದು ನಾನು ನಿನಗೋಸ್ಕರವೂ ನಿನ್ನ ಸಂತತಿಯ ಎಲ್ಲಾ ತಲಾಂತರಗಳಿಗೋಸ್ಕರವೂ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು.


ಯೆಹೋವನು ಹೋರೇಬಿನಲ್ಲಿ ಇಸ್ರಾಯೇಲ್ಯರೊಡನೆ ಮಾಡಿದ ನಿಬಂಧನವಲ್ಲದೆ ಆತನು ಮೋವಾಬ್ಯರ ದೇಶದಲ್ಲಿ ಅವರೊಡನೆ ಮಾಡಬೇಕೆಂದು ಮೋಶೆಗೆ ಆಜ್ಞಾಪಿಸಿದ ನಿಬಂಧನ ವಚನಗಳು.


ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತದೇಶದೊಳಗಿಂದ ಕರತಂದಾಗ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ನಾನು ಅವರಿಗೆ ಪತಿಯಾಗಿದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿದರಷ್ಟೆ.


ಇಸ್ರಾಯೇಲ್ಯರ ದೇವರಾದ ಯೆಹೋವನು ಇಂತೆನ್ನುತ್ತಾನೆ - ಐಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮ ಪಿತೃಗಳನ್ನು ನಾನು ಅಲ್ಲಿಂದ ಕರತಂದಾಗ -


ಈ ಸಂಗತಿಗಳನ್ನೆಲ್ಲಾ ನೀವು ಜ್ಞಾಪಕಮಾಡಿಕೊಂಡು ಈ ನಿಬಂಧನವಾಕ್ಯಗಳನ್ನು ಅನುಸರಿಸಿ ನಡೆಯಬೇಕು; ಆಗ ನೀವು ನಡಿಸುವ ಎಲ್ಲಾ ಕೆಲಸಗಳಲ್ಲಿಯೂ ಜಾಣರಾಗಿ ಅಭಿವೃದ್ಧಿಹೊಂದುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು