ಧರ್ಮೋಪದೇಶಕಾಂಡ 5:32 - ಕನ್ನಡ ಸತ್ಯವೇದವು J.V. (BSI)32 ಆದದರಿಂದ ನೀವು ಸ್ವಲ್ಪವಾದರೂ ತಪ್ಪದೆ ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆಯೇ ನಡೆದುಕೊಳ್ಳಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಆದುದರಿಂದ ನೀವು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿಕೊಳ್ಳದೆ ತಪ್ಪಿ ನಡೆಯದೆ ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆಯೇ ನಡೆದುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 “ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸಿದಂತೆಯೇ ನಡೆದುಕೊಳ್ಳಿ, ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳಬೇಡಿ. ಬದಲಿಗೆ, ನಿಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸಿದ ಮಾರ್ಗದಲ್ಲೇ ಮುನ್ನಡೆಯಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 “ಆದ್ದರಿಂದ, ಇಸ್ರೇಲ್ ಜನರೇ, ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಅನುಸರಿಸಲು ನೀವು ಎಚ್ಚರದಿಂದಿರಬೇಕು. ಆತನನ್ನು ಹಿಂಬಾಲಿಸುವುದನ್ನು ನಿಲ್ಲಿಸಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಹೀಗಿರುವುದರಿಂದ ನೀವು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಜ್ಞಾಪಿಸಿದಂತೆ ಅವುಗಳನ್ನು ಕೈಗೊಂಡು ನಡೆಯಬೇಕು. ಎಡಕ್ಕಾದರೂ, ಬಲಕ್ಕಾದರೂ ತಿರುಗಬೇಡಿರಿ. ಅಧ್ಯಾಯವನ್ನು ನೋಡಿ |