ಧರ್ಮೋಪದೇಶಕಾಂಡ 5:5 - ಕನ್ನಡ ಸತ್ಯವೇದವು J.V. (BSI)5 ನೀವು ಆ ಬೆಂಕಿಯ ಜ್ವಾಲೆಯ ದೆಸೆಯಿಂದ ಭಯಪಟ್ಟು ಬೆಟ್ಟವನ್ನು ಹತ್ತದೆಹೋಗಲಾಗಿ ನಾನು ಯೆಹೋವನಿಗೂ ನಿಮಗೂ ನಡುವೆ ನಿಂತು ಆತನು ಆಡಿದ ಮಾತುಗಳನ್ನು ನಿಮಗೆ ತಿಳಿಸಿದೆನು. ಆತನು ಹೇಳಿದ್ದೇನಂದರೆ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನೀವು ಆ ಬೆಂಕಿಯ ಜ್ವಾಲೆಯ ದೆಸೆಯಿಂದ ಭಯಪಟ್ಟು, ಬೆಟ್ಟವನ್ನು ಹತ್ತದೆ ಇದ್ದುದರಿಂದ ನಾನು ಯೆಹೋವನಿಗೂ ಮತ್ತು ನಿಮಗೂ ನಡುವೆ ನಿಂತು ಆತನು ಹೇಳಿದ ಮಾತುಗಳನ್ನು ನಿಮಗೆ ತಿಳಿಸಿದೆನು. ಆತನು ಹೇಳಿದ್ದೇನೆಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನೀವು ಆ ಅಗ್ನಿಜ್ವಾಲೆಯನ್ನು ನೋಡಿ ಭಯಪಟ್ಟಿರಿ; ಬೆಟ್ಟವನ್ನು ಹತ್ತದೆ ಹೋದಿರಿ! ಆಗ ನಾನು ಸರ್ವೇಶ್ವರನಿಗೂ ನಿಮಗೂ ನಡುವೆ ನಿಂತು ಅವರು ನುಡಿದ ಮಾತುಗಳನ್ನು ನಿಮಗೆ ತಿಳಿಸಿದೆನು. ಅವರು ನುಡಿದದ್ದು ಇದು: ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆದರೆ ನೀವು ಬೆಂಕಿಗೆ ಭಯಪಟ್ಟಿದ್ದರಿಂದ ಬೆಟ್ಟವನ್ನು ಏರಲಿಲ್ಲ. ಆಗ ನಾನು ನಿಮಗೂ ಯೆಹೋವನಿಗೂ ಮಧ್ಯದಲ್ಲಿದ್ದುಕೊಂಡು ಯೆಹೋವನು ಹೇಳಿದ್ದನ್ನು ತಿಳಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆ ಕಾಲದಲ್ಲಿ ನಾನು ಯೆಹೋವ ದೇವರ ವಾಕ್ಯವನ್ನು ನಿಮಗೆ ತಿಳಿಸಿದ ಹಾಗೆ ಯೆಹೋವ ದೇವರಿಗೂ, ನಿಮಗೂ ನಡುವೆ ನಿಂತಿದ್ದೆನು. ಏಕೆಂದರೆ ನೀವು ಆ ಬೆಂಕಿಗೆ ಭಯಪಟ್ಟು, ಬೆಟ್ಟದ ಮೇಲೆ ಏರಲಿಲ್ಲ. ದೇವರು ಹೇಳಿದ್ದೇನೆಂದರೆ: ಅಧ್ಯಾಯವನ್ನು ನೋಡಿ |