Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 6:1 - ಕನ್ನಡ ಸತ್ಯವೇದವು J.V. (BSI)

1 ನೀವು ಹೊಳೆ ದಾಟಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಅನುಸರಿಸುವದಕ್ಕಾಗಿ ನಿಮಗೆ ಬೋಧಿಸಬೇಕೆಂದು ನಿಮ್ಮ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದ ಧರ್ಮೋಪದೇಶವೂ ವಿಧಿನಿರ್ಣಯಗಳೂ ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನೀವು ಯೊರ್ದನ್ ನದಿ ದಾಟಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಅನುಸರಿಸುವುದಕ್ಕಾಗಿ ನಿಮಗೆ ಬೋಧಿಸಬೇಕೆಂದು ನಿಮ್ಮ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದ ಧರ್ಮೋಪದೇಶವೂ ಮತ್ತು ವಿಧಿನಿಯಮಗಳೂ ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿ ನಿಮಗೆ ಬೋಧಿಸಲು ನನಗೆ ಆಜ್ಞಾಪಿಸಿದ ಈ ಧರ್ಮೋಪದೇಶವನ್ನೂ ವಿಧಿನಿರ್ಣಯಗಳನ್ನೂ ನೀವು ನದಿದಾಟಿ ಸ್ವಾಧೀನಪಡಿಸಿಕೊಳ್ಳಲಿರುವ ಆ ನಾಡಿನಲ್ಲಿ ಅನುಸರಿಸಬೆಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ನಿಮ್ಮದೇವರಾದ ಯೆಹೋವನು ನಿಮಗೆ ಉಪದೇಶಿಸಲೆಂದು ನನಗೆ ಕೊಟ್ಟ ಆಜ್ಞೆಗಳು, ಕಟ್ಟಳೆಗಳು ಮತ್ತು ನಿಯಮಗಳು ಇವೇ. ನೀವು ವಾಸಮಾಡಲು ಪ್ರವೇಶಿಸಲಿರುವ ದೇಶದಲ್ಲಿ ಅವುಗಳನ್ನು ಪಾಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಬೋಧಿಸಲು ನನಗೆ ನಡೆಸಿದ ಈ ಆಜ್ಞೆಗಳನ್ನೂ, ತೀರ್ಪುಗಳನ್ನೂ, ನಿಯಮಗಳನ್ನೂ ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ಅನುಸರಿಸಬೇಕಾದವುಗಳು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 6:1
16 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರೇ, ಕೇಳಿರಿ; ನೀವು ಬದುಕಿಕೊಂಡು ನಿಮ್ಮ ಪಿತೃಗಳ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಂತೆ ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನಿಸಿ ಅನುಸರಿಸಬೇಕು.


ನಿಮ್ಮ ಪಿತೃಗಳ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವ ದೇಶದಲ್ಲಿ ನೀವು ಭೂವಿುಯ ಮೇಲಿರುವ ದಿನಗಳಲ್ಲೆಲ್ಲಾ ಅನುಸರಿಸಬೇಕಾದ ಆಜ್ಞಾವಿಧಿಗಳು ಇವೇ -


ಇಸ್ರಾಯೇಲ್ಯರು ಐಗುಪ್ತದೇಶದಿಂದ ಬಂದಾಗ ಯೊರ್ದನ್ ಹೊಳೆಯ ಆಚೆ ಬೇತ್‍ಪೆಗೋರಿಗೆ ಎದುರಾಗಿರುವ ಕಣಿವೆಯಲ್ಲಿ ಹೆಷ್ಬೋನಿನಲ್ಲಿ ವಾಸಿಸಿದ ಅಮೋರಿಯರ ಅರಸನಾದ ಸೀಹೋನನ ದೇಶದಲ್ಲಿ ಮೋಶೆ ಇಸ್ರಾಯೇಲ್ಯರಿಗೆ ತಿಳಿಸಿದ ಆಜ್ಞಾವಿಧಿನಿರ್ಣಯಗಳು ಇವೇ. (ಮೋಶೆಯೂ ಇಸ್ರಾಯೇಲ್ಯರೂ ಐಗುಪ್ತದೇಶದಿಂದ ಬಂದಾಗ ಆ ಸೀಹೋನನನ್ನು ಜಯಿಸಿದ್ದರು.


ನೀನಾದರೋ ಇಲ್ಲೇ ನನ್ನ ಹತ್ತಿರ ನಿಂತಿರು; ನೀನು ಅವರಿಗೆ ಬೋಧಿಸಬೇಕಾದ ಎಲ್ಲಾ ಧರ್ಮೋಪದೇಶವನ್ನೂ ವಿಧಿನಿರ್ಣಯಗಳನ್ನೂ ನಿನಗೆ ತಿಳಿಸುತ್ತೇನೆ. ನಾನು ಅವರಿಗೆ ಸ್ವಂತಕ್ಕಾಗಿ ಕೊಡುವ ದೇಶದಲ್ಲಿ ಅವರು ಇವುಗಳನ್ನು ಅನುಸರಿಸಬೇಕು ಎಂದು ಹೇಳಿದನು.


ಯೆಹೋವನು ಸೀನಾಯಿಬೆಟ್ಟದಲ್ಲಿ ಮೋಶೆಯ ಮೂಲಕ ಇಸ್ರಾಯೇಲ್ಯರಿಗೆ ಕೊಟ್ಟ ಆಜ್ಞೆಗಳು ಇವೇ.


ನನ್ನ ಸೇವಕನಾದ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗೂ ಒಬ್ಬನೇ ಪಾಲಕನಿರುವನು; ಅವರು ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು.


ನೀವು ಹೊಳೆ ದಾಟಿ ಸ್ವಾಧೀನಮಾಡಿಕೊಳ್ಳುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನಿಮಗೆ ಬೋಧಿಸಬೇಕೆಂದು ಯೆಹೋವನು ಆ ಕಾಲದಲ್ಲಿ ನನಗೆ ಆಜ್ಞಾಪಿಸಿದ್ದೂ; ಇವುಗಳನ್ನೆಲ್ಲಾ ನೀವು ನೆನಪಿನಲ್ಲಿಟ್ಟುಕೊಂಡು ನಿಮ್ಮ ಸಂತತಿಯವರಿಗೆ ತಿಳಿಸಬೇಕು.


ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.


ಯೊರ್ದನ್ ಹೊಳೆಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಯೆಹೋವನು ಮೋಶೆಯ ಮೂಲಕ ಇಸ್ರಾಯೇಲ್ಯರಿಗೆ ಕೊಟ್ಟ ಆಜ್ಞಾವಿಧಿಗಳು ಇವೇ.


ಮತ್ತು ನೀನು ಅವರಿಗೆ ನೇವಿುಸಬೇಕಾದ ನ್ಯಾಯವಿಧಿಗಳು ಯಾವವಂದರೆ -


ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಬಹುಕಾಲ ಶುಭವುಳ್ಳವರಾಗಿ ಬದುಕಿಕೊಳ್ಳುವಂತೆ ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದ ಮಾರ್ಗದಲ್ಲೇ ನಡೆಯಬೇಕು.


ನೀವೂ ನಿಮ್ಮ ಪುತ್ರಪೌತ್ರಾದಿಸಂತತಿಯವರೂ ಜೀವಮಾನದಲ್ಲೆಲ್ಲಾ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದುಕೊಂಡು ನಾನು ಈಗ ಬೋಧಿಸುವ ಆತನ ವಿಧಿನಿರ್ಣಯಗಳನ್ನೆಲ್ಲಾ ಅನುಸರಿಸಬೇಕೆಂದೂ ನೀವು ಬಹುಕಾಲ ಬಾಳಬೇಕೆಂದೂ ಇವುಗಳನ್ನು ಆಜ್ಞಾಪಿಸಿದ್ದಾನೆ.


ಆತನು ತನ್ನ ಜನರನ್ನು ಪ್ರೀತಿಸುತ್ತಾನೆ; [ಯೆಹೋವನೇ,] ನಿನ್ನ ಭಕ್ತರೆಲ್ಲರೂ ನಿನ್ನ ಆಶ್ರಯದಲ್ಲಿಯೇ ಇದ್ದಾರೆ; ನಿನ್ನ ಚರಣ ಸನ್ನಿಧಾನದಲ್ಲಿ ಕೂತಿರುವರು; ನೀನು ಹೇಳುವ ಆಜ್ಞೆಗಳನ್ನು ಶಿರಸ್ಸಾವಹಿಸುವರು.


ನಾನು ನಿಮ್ಮ ದೇವರಾದ ಯೆಹೋವನು; ನೀವು ನನ್ನ ಆಜ್ಞೆಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ನಡಿಸಿರಿ;


ನಾನು ನಿಮಗೆ ಹೇಳಿದ್ದನ್ನೆಲ್ಲಾ ಜಾಗರೂಕತೆಯಾಗಿ ಕೈಕೊಳ್ಳಬೇಕು. ಬೇರೆ ಯಾವ ದೇವರ ಹೆಸರನ್ನು ಸ್ಮರಿಸಲೂ ಕೂಡದು; ಉಚ್ಚರಿಸಲೂ ಕೂಡದು.


ಆ ಕಾಲದಲ್ಲಿ ನಾನು ನಿಮಗೆ - ನಿಮ್ಮ ದೇವರಾದ ಯೆಹೋವನು ಈ ಪ್ರದೇಶವನ್ನೇ ನಿಮಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿದ್ದಾನೆ. ಆದರೆ ನಿಮ್ಮ ಭಟರೆಲ್ಲರೂ ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಾದ ಇಸ್ರಾಯೇಲ್ಯರ ಮುಂದೆ ಹೊರಟು ಹೊಳೇ ದಾಟಿ ಹೋಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು