Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 6:17 - ಕನ್ನಡ ಸತ್ಯವೇದವು J.V. (BSI)

17 ನಿಮ್ಮ ದೇವರಾದ ಯೆಹೋವನು ನಿಮಗೆ ನೇವಿುಸಿದ ಆಜ್ಞಾವಿಧಿನಿರ್ಣಯಗಳನ್ನು ಅನುಸರಿಸಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಿಮ್ಮ ದೇವರಾದ ಯೆಹೋವನು ನಿಮಗೆ ನೇಮಿಸಿದ ಆಜ್ಞಾವಿಧಿನಿಯಮಗಳನ್ನು ಅನುಸರಿಸಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ನೇಮಿಸಿದ ಆಜ್ಞಾವಿಧಿನಿರ್ಣಯಗಳನ್ನು ಅನುಸರಿಸಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆತನ ಆಜ್ಞೆಗಳಿಗೆ ವಿಧೇಯರಾಗಿರಲು ಎಚ್ಚರದಿಂದಿರಬೇಕು. ಆತನು ನಿಮಗೆ ಕೊಟ್ಟ ವಿಧಿನಿಯಮಗಳನ್ನು ಪರಿಪಾಲಿಸಲು ತಯಾರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳನ್ನೂ, ಅವರು ನಿಮಗೆ ನೀಡಿದ ಷರತ್ತುಗಳನ್ನೂ, ಅವರ ತೀರ್ಪುಗಳನ್ನೂ ಎಚ್ಚರಿಕೆಯಿಂದ ಕೈಗೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 6:17
15 ತಿಳಿವುಗಳ ಹೋಲಿಕೆ  

ನಿನ್ನ ನೇಮಗಳನ್ನು ಜಾಗರೂಕತೆಯಿಂದ ಕೈಕೊಂಡು ನಡಿಸಬೇಕೆಂದು ನೀನೇ ಆಜ್ಞಾಪಿಸಿರುತ್ತೀ.


ನಾನು ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸುವವರಾಗಿ ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆದು ಆತನನ್ನೇ ಹೊಂದಿಕೊಂಡಿದ್ದರೆ


ಆದಕಾರಣ ಪ್ರಿಯರೇ, ನೀವು ಇವುಗಳನ್ನು ಎದುರು ನೋಡುವವರಾಗಿರುವದರಿಂದ ಶಾಂತರಾಗಿದ್ದು ಆತನೆದುರಿನಲ್ಲಿ ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಕಾಣಿಸಿಕೊಳ್ಳುವದಕ್ಕೆ ಪ್ರಯಾಸಪಡಿರಿ.


ಆದದರಿಂದ, ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವದಿಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರಿ.


ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಎಲ್ಲಾ ಮಾತುಗಳನ್ನು ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಇವು ಉತ್ತಮವೂ ಮನುಷ್ಯರಿಗೆ ಪ್ರಯೋಜನಕರವೂ ಆಗಿವೆ.


ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ ಆತನ ದೃಷ್ಟಿಗೆ ಸರಿಬೀಳುವದನ್ನು ಮಾಡಿ ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನು.


ನೀವು ಉಪಚಾರಮಾಡುವದರಲ್ಲಿ ಯಾವ ಆಸಕ್ತಿಯನ್ನು ತೋರಿಸಿದ್ದೀರೋ ನಿಮ್ಮ ನಿರೀಕ್ಷೆ ದೃಢಮಾಡಿಕೊಂಡು ಕಡೇ ತನಕ ಹಿಡಿಯುವದರಲ್ಲಿಯೂ ನಿಮ್ಮಲ್ಲಿ ಪ್ರತಿಯೊಬ್ಬರು ಅದೇ ಆಸಕ್ತಿಯನ್ನು ತೋರಿಸಬೇಕೆಂದು ಅಪೇಕ್ಷಿಸುತ್ತೇವೆ.


ನಾನು ಈಗ ನಿಮಗೆ ಬೋಧಿಸುವ ಆಜ್ಞೆಗಳಿಗೆ ನೀವು ಲಕ್ಷ್ಯಕೊಟ್ಟು ನಿಮ್ಮ ದೇವರಾದ ಯೆಹೋವನನ್ನು ಸಂಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ಪ್ರೀತಿಸಿ ಆತನನ್ನು ಸೇವಿಸಿದರೆ


ಮೋಶೆ ಇಸ್ರಾಯೇಲ್ಯರೆಲ್ಲರನ್ನು ಕರೆದು ಹೀಗಂದನು - ಇಸ್ರಾಯೇಲ್ಯರೇ, ನಾನು ಈಗ ನಿಮಗೆ ತಿಳಿಸುವ ಆಜ್ಞಾವಿಧಿಗಳನ್ನು ಕೇಳಿರಿ; ಇವುಗಳನ್ನು ಗ್ರಹಿಸಿಕೊಂಡು ಅನುಸರಿಸಿ ನಡೆಯಬೇಕು.


ನನ್ನಲ್ಲಿ ಭಯಭಕ್ತಿಯುಳ್ಳವರಾಗಿ ನನ್ನ ಆಜ್ಞೆಗಳನ್ನು ಅನುಸರಿಸುವ ಮನಸ್ಸು ಯಾವಾಗಲೂ ಅವರಲ್ಲಿ ಇದ್ದರೆ ಎಷ್ಟೋ ಮೇಲು; ಆಗ ಅವರಿಗೂ ಅವರ ಸಂತತಿಯವರಿಗೂ ಯಾವಾಗಲೂ ಶುಭವುಂಟಾಗುವದು.


ಆದದರಿಂದ ನೀವು ಸ್ವಲ್ಪವಾದರೂ ತಪ್ಪದೆ ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆಯೇ ನಡೆದುಕೊಳ್ಳಬೇಕು.


ಮೋಶೆಯು ಇಸ್ರಾಯೇಲ್ಯರ ಹಿರಿಯರ ಸಹಿತ ಜನರಿಗೆ - ನಾನು ಈಗ ಆಜ್ಞಾಪಿಸಿದ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು.


ಆತನ ಕಟ್ಟಳೆಗಳನ್ನು ಕೈಕೊಂಡು ಸಂಪೂರ್ಣಮನಸ್ಸಿನಿಂದ ಆತನನ್ನು ಹುಡುಕುವವರು ಭಾಗ್ಯವಂತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು