ಧರ್ಮೋಪದೇಶಕಾಂಡ 6:22 - ಕನ್ನಡ ಸತ್ಯವೇದವು J.V. (BSI)22 ಆತನು ಐಗುಪ್ತ್ಯರನ್ನೂ ಫರೋಹನನ್ನೂ ಅವನ ಮನೆಯವರನ್ನೂ ಬಾಧಕವಾದ ದೊಡ್ಡ ಮಹತ್ಕಾರ್ಯಗಳಿಂದಲೂ ಉತ್ಪಾತಗಳಿಂದಲೂ ನಮ್ಮ ಕಣ್ಣೆದುರಿನಲ್ಲಿ ಶಿಕ್ಷಿಸಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆತನು ಐಗುಪ್ತ್ಯರನ್ನೂ, ಫರೋಹನನ್ನೂ ಮತ್ತು ಅವನ ಮನೆಯವರನ್ನೂ ಬಾಧಕವಾದ ದೊಡ್ಡ ಮಹತ್ಕಾರ್ಯಗಳಿಂದಲೂ, ಉತ್ಪಾತಗಳಿಂದಲೂ ನಮ್ಮ ಕಣ್ಣೆದುರಿನಲ್ಲಿ ಶಿಕ್ಷಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಭಯಂಕರ ಆದ ಮಹತ್ಕಾರ್ಯಗಳಿಂದ ಮತ್ತು ಸೂಚಕಕಾರ್ಯಗಳಿಂದ ಈಜಿಪ್ಟಿನವರನ್ನೂ ಫರೋಹನನ್ನೂ ಅವನ ಮನೆಯವರನ್ನೂ ನಮ್ಮ ಕಣ್ಣೆದುರಿನಲ್ಲೇ ಶಿಕ್ಷಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಯೆಹೋವನು ಈಜಿಪ್ಟಿನವರನ್ನೂ ಫರೋಹನನ್ನೂ ಅವನ ಪರಿವಾರದವರನ್ನೂ ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ಮಹತ್ಕಾರ್ಯಗಳಿಂದಲೂ ಭಯಂಕರ ಕಾರ್ಯಗಳಿಂದಲೂ ಬಾಧಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಯೆಹೋವ ದೇವರು ನಮ್ಮ ಕಣ್ಣ ಮುಂದೆಯೇ ಈಜಿಪ್ಟಿನ ಮೇಲೆಯೂ, ಫರೋಹನ ಮೇಲೆಯೂ, ಅವನ ಎಲ್ಲಾ ಮನೆಯ ಮೇಲೆಯೂ ಭಯಂಕರವಾದ ದೊಡ್ಡ ಗುರುತುಗಳನ್ನೂ, ಅದ್ಭುತಗಳನ್ನೂ ಕಳುಹಿಸಿದರು. ಅಧ್ಯಾಯವನ್ನು ನೋಡಿ |
ಇಸ್ರಾಯೇಲ್ಯರು ತಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ನಾನು ಐಗುಪ್ತ್ಯರ ನಡುವೆ ನಡಿಸಿರುವ ಮಹತ್ಕಾರ್ಯಗಳನ್ನು ವಿವರಿಸಿ - ಯೆಹೋವನು ಐಗುಪ್ತ್ಯರನ್ನು ತನಗೆ ಇಷ್ಟಬಂದಂತೆ ಆಡಿಸಿ ಶಿಕ್ಷಿಸಿದನು ಎಂಬದಾಗಿ ತಿಳಿಸುವದಕ್ಕೂ ನಾನು ಫರೋಹನ ಹೃದಯವನ್ನೂ ಅವನ ಪರಿವಾರದವರ ಹೃದಯಗಳನ್ನೂ ಮೊಂಡುಮಾಡಿದ್ದೇನೆ. ಇದಲ್ಲದೆ ಈ ಮಹತ್ಕಾರ್ಯಗಳಿಂದ ನೀವು ನನ್ನನ್ನೇ ಯೆಹೋವನೆಂದು ತಿಳುಕೊಳ್ಳುವಿರಿ.