Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 6:3 - ಕನ್ನಡ ಸತ್ಯವೇದವು J.V. (BSI)

3 ಆದದರಿಂದ ಇಸ್ರಾಯೇಲ್ಯರೇ, ನಿಮ್ಮ ಪಿತೃಗಳ ದೇವರಾದ ಯೆಹೋವನು ವಾಗ್ದಾನಮಾಡಿದ ಪ್ರಕಾರ ಹಾಲೂ ಜೇನೂ ಹರಿಯುವ ಆ ದೇಶದಲ್ಲಿ ನಿಮಗೆ ಶುಭವುಂಟಾಗುವದಕ್ಕೂ ನೀವು ಬಹಳವಾಗಿ ಹೆಚ್ಚುವದಕ್ಕೂ ಈ ಆಜ್ಞೆಗಳನ್ನು ಲಕ್ಷ್ಯವಿಟ್ಟು ಕೇಳಿ ಅನುಸರಿಸಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆದುದರಿಂದ ಇಸ್ರಾಯೇಲರೇ, ನಿಮ್ಮ ಪೂರ್ವಿಕರ ದೇವರಾದ ಯೆಹೋವನು ವಾಗ್ದಾನಮಾಡಿದ ಪ್ರಕಾರ ಹಾಲೂ ಮತ್ತು ಜೇನೂ ಹರಿಯುವ ಆ ದೇಶದಲ್ಲಿ ನಿಮಗೆ ಶುಭವುಂಟಾಗುವುದಕ್ಕೂ, ನೀವು ಬಹಳವಾಗಿ ಹೆಚ್ಚುವುದಕ್ಕೂ ಈ ಆಜ್ಞೆಗಳನ್ನು ಲಕ್ಷ್ಯವಿಟ್ಟು ಕೇಳಿ ಅನುಸರಿಸಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆದುದರಿಂದ ಇಸ್ರಯೇಲರೇ, ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ವಾಗ್ದಾನ ಮಾಡಿದ ಪ್ರಕಾರ, ಹಾಲೂಜೇನೂ ಹರಿಯುವ ಆ ನಾಡಿನಲ್ಲಿ ನಿಮಗೆ ಶುಭವುಂಟಾಗುವಂತೆ, ನೀವು ಬಹಳವಾಗಿ ಹೆಚ್ಚಿ, ಅಭಿವೃದ್ಧಿಯಾಗುವಂತೆ, ಈ ಆಜ್ಞೆಗಳನ್ನು ಲಕ್ಷ್ಯವಿಟ್ಟು ಕೇಳಿ ಅನುಸರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಇಸ್ರೇಲಿನ ಜನರೇ, ಕಿವಿಗೊಟ್ಟು ಕೇಳಿರಿ. ದೇವರ ಆಜ್ಞೆಗಳಿಗೆ ವಿಧೇಯರಾಗಿರಿ. ಆಗ ನಿಮಗೆ ಎಲ್ಲಾದರಲ್ಲಿ ಶುಭವಾಗುವುದು. ನಿಮಗೆ ಹೆಚ್ಚು ಮಕ್ಕಳಾಗುವವು. ನೀವು ನೆಲೆಸುವ ದೇಶವು ನಿಮ್ಮ ಪೂರ್ವಿಕರಿಗೆ ದೇವರು ವಾಗ್ದಾನ ಮಾಡಿದ ಪ್ರಕಾರ ಫಲಭರಿತವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಹೀಗಿರುವುದರಿಂದ ಓ ಇಸ್ರಾಯೇಲರೇ, ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ವಾಗ್ದಾನ ಮಾಡಿದ ಪ್ರಕಾರ ಹಾಲೂ ಜೇನೂ ಹರಿಯುವ ದೇಶದಲ್ಲಿ ನಿಮಗೆ ಒಳ್ಳೆಯದಾಗುವ ಹಾಗೆಯೂ ನೀವು ಬಹಳವಾಗಿ ಹೆಚ್ಚುವ ಹಾಗೆಯೂ ಲಕ್ಷ್ಯವಿಟ್ಟು ಕೇಳಿ ವಿಧೇಯರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 6:3
25 ತಿಳಿವುಗಳ ಹೋಲಿಕೆ  

ನಿನ್ನ ಸಂತತಿಯನ್ನು ಹೆಚ್ಚಿಸೇ ಹೆಚ್ಚಿಸುವೆನು; ಅದನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರತೀರದಲ್ಲಿರುವ ಉಸುಬಿನಂತೆಯೂ ಅಸಂಖ್ಯವಾಗಿ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳುವರು.


ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ತಪ್ಪಿಸುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಪೆರಿಜೀಯರೂ ಹಿವ್ವಿಯರೂ ಯೆಬೂಸಿಯರೂ ವಾಸವಾಗಿರುವ ದೇಶಕ್ಕೆ ನಡಿಸಿಕೊಂಡು ಹೋಗುವದಕ್ಕೂ ಇಳಿದುಬಂದಿದ್ದೇನೆ.


ನಿನ್ನ ಸಂತತಿಯು ಭೂವಿುಯ ಧೂಳಿನಂತೆ ಅಸಂಖ್ಯವಾಗುವದು; ನೀನು ಪೂರ್ವಪಶ್ಚಿಮದಕ್ಷಿಣೋತ್ತರ ದಿಕ್ಕುಗಳಿಗೆ ಹರಡಿಕೊಳ್ಳುವಿ. ನಿನ್ನ ಮೂಲಕವೂ ನಿನ್ನ ಸಂತತಿಯ ಮೂಲಕವೂ ಭೂವಿುಯ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವದು.


ನಿನ್ನ ತಂದೆಯಾದ ಅಬ್ರಹಾಮನು ನನ್ನ ಮಾತನ್ನು ಕೇಳಿ ನಾನು ಹೇಳಿದಂತೆ ಮಾಡಿ ನನ್ನ ಆಜ್ಞಾನೇಮವಿಧಿಗಳನ್ನು ಕೈಕೊಂಡು ನಡೆದದರಿಂದ ನಾನು ಅವನಿಗೆ ಮಾಡಿದ ಪ್ರಮಾಣವನ್ನು ನೆರವೇರಿಸಿ


ಅವನನ್ನು ಹೊರಗೆ ಕರತಂದು - ಆಕಾಶದ ಕಡೆಗೆ ನೋಡು, ನಕ್ಷತ್ರಗಳನ್ನು ಲೆಕ್ಕಿಸುವದು ನಿನ್ನಿಂದಾದರೆ ಲೆಕ್ಕಿಸು; ನಿನ್ನ ಸಂತಾನವು ಅಷ್ಟಾಗುವದು ಅಂದನು.


ಆದರೆ ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ್ದ ಕಾಲವು ಹತ್ತರಕ್ಕೆ ಬರುತ್ತಿರುವಾಗ ನಮ್ಮ ಜನರು ಐಗುಪ್ತದೇಶದಲ್ಲಿ ಹೆಚ್ಚಿ ಬಹಳವಾದರು.


ಶಿಷ್ಟರಿಗೆ ಶುಭವೇ ಎಂದು ಹೇಳಿರಿ, ಅವರು ತಮ್ಮ ಸುಕೃತಫಲವನ್ನು ಅನುಭವಿಸುವರಷ್ಟೆ.


ಪಾಪಿಯು ನೂರು ಸಲ ಅಧರ್ಮಮಾಡಿ ಬಹುಕಾಲ ಬದುಕಿದರೂ ದೇವರ ಮುಂದೆ ಹೆದರಿ ಆತನಲ್ಲಿ ಭಯಭಕ್ತಿಯುಳ್ಳವರಿಗೆ ಮೇಲೇ ಆಗುವದೆಂದು ಬಲ್ಲೆನು.


ಇವುಗಳನ್ನು ಕೈಕೊಂಡು ಅನುಸರಿಸಿರಿ. ಅನುಸರಿಸಿದರೇ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ ವಿವೇಕಿಗಳೂ ಎಂದು ತಿಳಿಯುವರು. ಅವರು ಈ ಆಜ್ಞೆಗಳ ವಿಷಯದಲ್ಲಿ ವರ್ತಮಾನವನ್ನು ಕೇಳಿ - ಈ ದೊಡ್ಡ ಜನಾಂಗವು ಜ್ಞಾನ ವಿವೇಕವುಳ್ಳ ಜನಾಂಗ ಎಂದು ಮಾತಾಡಿಕೊಳ್ಳುವರು.


ಆದರೆ ಇಸ್ರಾಯೇಲ್ಯರು ಅಭಿವೃದ್ಧಿಯಾಗಿ ಅತ್ಯಧಿಕವಾಗಿ ಹೆಚ್ಚಿ ಬಹಳ ಬಲಗೊಂಡರು; ಆ ದೇಶದಲ್ಲೆಲ್ಲಾ ತುಂಬಿಕೊಂಡರು.


ನಿನ್ನ ಸಂತಾನದವರನ್ನು ಭೂವಿುಯ ಧೂಳಿನಷ್ಟು ಅಸಂಖ್ಯವಾಗಿ ಮಾಡುವೆನು. ಭೂವಿುಯಲ್ಲಿರುವ ಧೂಳನ್ನು ಲೆಕ್ಕಮಾಡುವದಾದರೆ ನಿನ್ನ ಸಂತಾನವನ್ನೂ ಲೆಕ್ಕಿಸಲಾದೀತು.


ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡಿ ಆಶೀರ್ವದಿಸಿ ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು.


ಐಗುಪ್ತದೇಶದಲ್ಲಿ ನಿಮಗುಂಟಾಗಿರುವ ದುರವಸ್ಥೆಯಿಂದ ನಿಮ್ಮನ್ನು ತಪ್ಪಿಸಿ ಹಾಲೂ ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಪೆರಿಜೀಯರೂ ಹಿವ್ವಿಯರೂ ಯೆಬೂಸಿಯರೂ ವಾಸವಾಗಿರುವ ದೇಶಕ್ಕೆ ಬರಮಾಡುವೆನೆಂದು ನಿರ್ಣಯಿಸಿದ್ದೇನೆ ಎಂಬದಾಗಿ ನನಗೆ ಹೇಳಿದನೆಂದು ತಿಳಿಸು.


ನಿಮಗೂ ನಿಮ್ಮ ಸಂತತಿಯವರಿಗೂ ಶುಭವುಂಟಾಗುವಂತೆಯೂ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸದಾಕಾಲ ಬಾಳುವಂತೆಯೂ ನಾನು ನಿಮಗೆ ಈಗ ತಿಳಿಸಿದ ಆತನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು.


ಆದರೆ ಈ ಒಂದಪ್ಪಣೆಯನ್ನು ಮಾತ್ರ ಕೊಟ್ಟೆನು - ನನ್ನ ಧ್ವನಿಗೆ ಕಿವಿಗೊಡಿರಿ, ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಪ್ರಜೆಯಾಗಿರುವಿರಿ; ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೇ ನಡೆಯಿರಿ.


ನಮ್ಮ ದೇವರಾದ ಯೆಹೋವನ ಮಾತು ಹಿತವಾಗಲಿ ಅಹಿತವಾಗಲಿ ಆತನ ಸನ್ನಿಧಿಯಲ್ಲಿ ವಿಚಾರಿಸುವದಕ್ಕೆ ನಿನ್ನನ್ನು ಕಳುಹಿಸುವ ನಾವು ಅದನ್ನು ಕೈಕೊಳ್ಳುವೆವು; ನಮ್ಮ ದೇವರಾದ ಯೆಹೋವನ ಮಾತನ್ನು ನಾವು ಕೇಳಿದರೆ ನಮಗೆ ಶುಭವಾಗುವದಷ್ಟೆ ಎಂಬದಾಗಿ ಹೇಳಿದರು.


ಅದಲ್ಲದೆ ಆತನು - ನಾನು ನಿನ್ನ ತಂದೆಯ ದೇವರು, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಅಂದಾಗ ಮೋಶೆ ದೇವರನ್ನು ನೋಡುವದಕ್ಕೆ ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.


ಆ ದೇಶದಲ್ಲಿ ಗೋದಿ, ಜವೆಗೋದಿ, ದ್ರಾಕ್ಷೆ, ಅಂಜೂರ, ದಾಳಿಂಬ ಇವುಗಳು ಬೆಳೆಯುತ್ತವೆ; ಎಣ್ಣೆ ಮರಗಳೂ ಜೇನೂ ಸಿಕ್ಕುತ್ತವೆ.


ಮತ್ತು ಯೆಹೋವನು ನಿಮ್ಮ ಪಿತೃಗಳಿಗೂ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ಆ ದೇಶದಲ್ಲಿ ನೀವು ಬಹುಕಾಲ ಬದುಕಿಕೊಳ್ಳುವಿರಿ; ಅದು ಹಾಲೂ ಜೇನೂ ಹರಿಯುವ ದೇಶ.


ನಮ್ಮನ್ನು ಬಿಡಿಸಿ ಐಗುಪ್ತದೇಶದಿಂದ ಕರತಂದು ಹಾಲೂ ಜೇನೂ ಹರಿಯುವ ಈ ದೇಶವನ್ನು ನಮಗೆ ಕೊಟ್ಟಿದ್ದಾನೆ.


ನೀನು ನಿನ್ನ ಪರಿಶುದ್ಧವಾಸಸ್ಥಾನವಾಗಿರುವ ಪರಲೋಕದಿಂದ ಕೆಳಗಿರುವ ನಮ್ಮನ್ನು ಕಟಾಕ್ಷಿಸಿ ನಿನ್ನ ಜನರಾದ ಇಸ್ರಾಯೇಲ್ಯರನ್ನೂ ಹಾಲೂ ಜೇನೂ ಹರಿಯುವ ದೇಶವೆಂದು ನೀನು ನಮ್ಮ ಪಿತೃಗಳಿಗೆ ವಾಗ್ದಾನಮಾಡಿದ ಮೇರೆಗೆ ನಮಗೆ ಕೊಟ್ಟಿರುವ ಈ ಭೂವಿುಯನ್ನೂ ಆಶೀರ್ವದಿಸು ದೇವರೇ ಎಂದು ಹೇಳಬೇಕು.


ನಾನು ಪ್ರಮಾಣಮಾಡಿಕೊಟ್ಟ ದೇಶದಲ್ಲಿ ಇವರು ಸೇರುವದಕ್ಕಿಂತ ಮುಂಚಿತವಾಗಿಯೇ ಇವರು ಈಗಲೂ ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆ. ನಾನು ಇವರ ಪಿತೃಗಳಿಗೆ ಪ್ರಮಾಣಮಾಡಿದಂತೆ ಹಾಲೂ ಜೇನೂ ಹರಿಯುವ ದೇಶಕ್ಕೆ ಇವರನ್ನು ಸೇರಿಸಿದ ಮೇಲೆ ಇವರು ಚೆನ್ನಾಗಿ ಉಂಡು ಕೊಬ್ಬಿದವರಾದಾಗ ಇತರ ದೇವರುಗಳನ್ನು ಅವಲಂಬಿಸಿ ಸೇವಿಸಿ ನನ್ನನ್ನು ತಾತ್ಸಾರಮಾಡಿ ನನ್ನ ನಿಬಂಧನೆಯನ್ನು ಮೀರುವರು. ಅನಂತರ ಅನೇಕ ಕಷ್ಟಗಳೂ ವಿಪತ್ತುಗಳೂ ಸಂಭವಿಸಿದಾಗ ಈ ಪದ್ಯವು ಇವರ ಸಂತತಿಯವರ ಬಾಯಲ್ಲಿ ಇದ್ದುಕೊಂಡು ಅವರ ಮುಂದೆ ಸಾಕ್ಷಿಕೊಡುವದು ಎಂದು ಹೇಳಿದನು.


ನಿನ್ನ ನೇಮಗಳನ್ನು ಜಾಗರೂಕತೆಯಿಂದ ಕೈಕೊಂಡು ನಡಿಸಬೇಕೆಂದು ನೀನೇ ಆಜ್ಞಾಪಿಸಿರುತ್ತೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು