ಧರ್ಮೋಪದೇಶಕಾಂಡ 6:7 - ಕನ್ನಡ ಸತ್ಯವೇದವು J.V. (BSI)7 ಇವುಗಳನ್ನು ನಿಮ್ಮ ಮಕ್ಕಳಿಗೆ ಅಭ್ಯಾಸಮಾಡಿಸಿ ಮನೆಯಲ್ಲಿ ಕೂತಿರುವಾಗಲೂ ದಾರಿನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಇವುಗಳ ವಿಷಯದಲ್ಲಿ ಮಾತಾಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಇವುಗಳನ್ನು ನಿಮ್ಮ ಮಕ್ಕಳಿಗೆ ಅಭ್ಯಾಸಮಾಡಿಸಿ, ಮನೆಯಲ್ಲಿ ಕುಳಿತಿರುವಾಗಲೂ, ದಾರಿಯಲ್ಲಿ ನಡೆಯುವಾಗಲೂ, ಮಲಗುವಾಗಲೂ ಮತ್ತು ಏಳುವಾಗಲೂ ಇವುಗಳ ವಿಷಯದಲ್ಲಿ ಮಾತನಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಇವುಗಳನ್ನು ನಿನ್ನ ಮಕ್ಕಳಿಗೆ ಮನದಟ್ಟಾಗಿಸು; ಮನೆಯಲ್ಲಿರುವಾಗಲು, ಪ್ರಯಾಣದಲ್ಲಿರುವಾಗಲು, ಮಲಗುವಾಗಲು, ಏಳುವಾಗಲು ಇವುಗಳನ್ನು ಕುರಿತು ಪಾಠಹೇಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನಿಮ್ಮ ಮಕ್ಕಳಿಗೆ ಇದನ್ನು ಕಲಿಸಲು ಮರೆಯಬೇಡಿರಿ. ನಿಮ್ಮ ಮನೆಗಳಲ್ಲಿ ಕುಳಿತಿರುವಾಗ, ರಸ್ತೆಗಳಲ್ಲಿ ನಡೆಯುತ್ತಿರುವಾಗ, ನೀವು ಮಲಗಿರುವಾಗ, ಎದ್ದಾಗ ಈ ಆಜ್ಞೆಗಳ ಕುರಿತಾಗಿ ಮಾತಾಡಿಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅವುಗಳನ್ನು ನಿಮ್ಮ ಮಕ್ಕಳಿಗೆ ಅಭ್ಯಾಸ ಮಾಡಿಸಿ, ನಿಮ್ಮ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯವಾಗಿ ಮಾತನಾಡಬೇಕು. ಅಧ್ಯಾಯವನ್ನು ನೋಡಿ |