ಧರ್ಮೋಪದೇಶಕಾಂಡ 7:12 - ಕನ್ನಡ ಸತ್ಯವೇದವು J.V. (BSI)12 ನೀವು ಈ ವಿಧಿಗಳನ್ನು ಲಕ್ಷ್ಯವಿಟ್ಟು ಅನುಸರಿಸಿದರೆ ಅದಕ್ಕೆ ಪ್ರತಿಯಾಗಿ ನಿಮ್ಮ ದೇವರಾದ ಯೆಹೋವನು ನಿಮ್ಮ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನೂ ಕೃಪೆಯನ್ನೂ ನಿಮ್ಮಲ್ಲಿ ನೆರವೇರಿಸುವವನಾಗಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನೀವು ಈ ವಿಧಿಗಳನ್ನು ಲಕ್ಷ್ಯವಿಟ್ಟು ಅನುಸರಿಸಿದರೆ, ಅದಕ್ಕೆ ಪ್ರತಿಯಾಗಿ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ಒಡಂಬಡಿಕೆಯನ್ನು ನಂಬಿಗಸ್ತಿಕೆಯಿಂದ ನೆರವೇರಿಸುವವನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 “ಈ ವಿಧಿಗಳನ್ನು ನೀವು ಲಕ್ಷ್ಯವಿಟ್ಟು ಅನುಸರಿಸಿದರೆ, ಅದಕ್ಕೆ ಪ್ರತಿಯಾಗಿ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪಿತೃಗಳಿಗೆ ಪ್ರಮಾಣ ಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸುವರು, ನಿಮಗೆ ಕೃಪೆತೋರುವರು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 “ನೀವು ಈ ಕಟ್ಟಳೆಗಳಿಗೆ ಕಿವಿಗೊಡುವುದಾದರೆ ಮತ್ತು ಅವುಗಳಿಗೆ ಎಚ್ಚರಿಕೆಯಿಂದ ವಿಧೇಯರಾದರೆ, ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರೊಡನೆ ಮಾಡಿಕೊಂಡ ಪ್ರೀತಿಯ ಒಡಂಬಡಿಕೆಯನ್ನು ನೆರವೇರಿಸುವನು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನೀವು ಈ ನ್ಯಾಯಗಳನ್ನು ಕೇಳಿ ಕಾಪಾಡಿ ನಡೆದುಕೊಂಡರೆ, ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಒಡಂಬಡಿಕೆಯನ್ನೂ, ಕರುಣೆಯನ್ನೂ ನಿಮಗೋಸ್ಕರ ನೆರವೇರಿಸುವರು. ಅಧ್ಯಾಯವನ್ನು ನೋಡಿ |
ನಾನು ನಿಮ್ಮ ದೇವರಾಗಿದ್ದು ಹಾಲೂ ಜೇನೂ ಹರಿಯುವ ದೇಶವನ್ನು ಕೊಡುವದಾಗಿ ನಿಮ್ಮ ಮೂಲಪಿತೃಗಳಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು ಎಂದು ಹೇಳಿದೆನಷ್ಟೆ; ಆ ನನ್ನ ಮಾತು ಈಗ ಕೈಗೂಡಿದೆ. ನಾನು ಅವರಿಗೆ ವಿಧಿಸಿದ ನಿಬಂಧನವಾಕ್ಯಗಳಿಗೆ ಕಿವಿಗೊಡದವನು ಶಾಪಗ್ರಸ್ತನಾಗಲಿ ಎಂಬದಾಗಿ ಇಸ್ರಾಯೇಲ್ಯರ ದೇವರಾದ ಯೆಹೋವನು ನುಡಿಯುತ್ತಾನೆಂದೇ ಸಾರಬೇಕು. ಆಗ ನಾನು - ಅಪ್ಪಣೆಯಂತಾಗಲಿ, ಯೆಹೋವನೇ, ಎಂದು ಉತ್ತರಕೊಟ್ಟೆನು.