Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 7:13 - ಕನ್ನಡ ಸತ್ಯವೇದವು J.V. (BSI)

13 ನಿಮ್ಮನ್ನು ಪ್ರೀತಿಸಿ ಅಭಿವೃದ್ಧಿಪಡಿಸಿ ಹೆಚ್ಚಿಸುವನು. ಆತನು ನಿಮ್ಮ ಪಿತೃಗಳಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಿಮ್ಮ ಸಂತಾನವನ್ನೂ ವ್ಯವಸಾಯವನ್ನೂ ನಿಮಗಿರುವ ಧಾನ್ಯದ್ರಾಕ್ಷಾರಸ, ಎಣ್ಣೆ ಇವುಗಳನ್ನೂ ನಿಮ್ಮ ದನಕುರಿಗಳಲ್ಲಿ ಹುಟ್ಟಿದ್ದನ್ನೂ ಅಭಿವೃದ್ಧಿಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆತನು ನಿಮ್ಮನ್ನು ಪ್ರೀತಿಸಿ, ಅಭಿವೃದ್ಧಿಪಡಿಸಿ ಹೆಚ್ಚಿಸುವನು. ಆತನು ನಿಮ್ಮ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಿಮ್ಮ ಸಂತಾನವನ್ನೂ, ವ್ಯವಸಾಯವನ್ನೂ, ನಿಮಗಿರುವ ದವಸ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನೂ, ನಿಮ್ಮ ದನ ಮತ್ತು ಕುರಿಗಳಲ್ಲಿ ಹುಟ್ಟಿದ್ದನ್ನೂ ಅಭಿವೃದ್ಧಿಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಿಮ್ಮನ್ನು ಅಚಲವಾಗಿ ಪ್ರೀತಿಸಿ, ಅಭಿವೃದ್ಧಿಗೊಳಿಸುವರು; ನಿಮ್ಮ ಪಿತೃಗಳಿಗೆ ಪ್ರಮಾಣಮಾಡಿಕೊಟ್ಟ ನಾಡಿನಲ್ಲಿ ನಿಮ್ಮ ಸಂತಾನವನ್ನು, ವ್ಯವಸಾಯವನ್ನು, ದವಸಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು ಹಾಗು ದನಕುರಿಗಳ ಮಂದೆಯನ್ನು ವೃದ್ಧಿಗೊಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಮತ್ತು ಆತನು ಆಶೀರ್ವದಿಸುವನು. ನಿಮ್ಮ ಜನಾಂಗವು ವೃದ್ಧಿಯಾಗುವಂತೆ ಮಾಡುವನು. ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಆಶೀರ್ವದಿಸುವನು. ನಿಮ್ಮ ಹೊಲಗಳಲ್ಲಿ ಸಮೃದ್ಧಿಯಾದ ಬೆಳೆಯು ಉಂಟಾಗುವಂತೆ ಆಶೀರ್ವದಿಸುವನು. ಆತನು ನಿಮಗೆ ಧಾನ್ಯ, ಹೊಸ ದ್ರಾಕ್ಷಾರಸ ಮತ್ತು ಎಣ್ಣೆಗಳನ್ನು ಕೊಡುವನು. ನಿಮ್ಮ ದನಕುರಿಗಳು ಮರಿಗಳನ್ನು ಈಯುವಂತೆ ಆಶೀರ್ವದಿಸುವನು. ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ದೇಶದಲ್ಲಿ ನೀವು ನೆಲೆಸಿರುವಾಗ ನಿಮಗೆ ಈ ಆಶೀರ್ವಾದಗಳೆಲ್ಲಾ ಪ್ರಾಪ್ತವಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವರು ನಿಮ್ಮನ್ನು ಪ್ರೀತಿಸಿ, ನಿಮ್ಮನ್ನು ಆಶೀರ್ವದಿಸಿ, ನಿಮ್ಮನ್ನು ಅಭಿವೃದ್ಧಿಗೊಳಿಸಿ ಮತ್ತು ನಿಮಗೆ ಕೊಡುತ್ತೇನೆಂದು ಅವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಆ ದೇಶದಲ್ಲಿ ನಿಮ್ಮ ಗರ್ಭದ ಫಲವನ್ನೂ ಅಂದರೆ, ಭೂಮಿಯ ಹುಟ್ಟುವಳಿಯನ್ನೂ, ನಿಮ್ಮ ಧಾನ್ಯವನ್ನೂ, ನಿಮ್ಮ ಹೊಸ ದ್ರಾಕ್ಷಾರಸವನ್ನೂ, ನಿಮ್ಮ ಎಣ್ಣೆಯನ್ನೂ, ನಿಮ್ಮ ಪಶುಗಳನ್ನೂ, ನಿಮ್ಮ ಕುರಿಗಳ ಮಂದೆಗಳನ್ನೂ ಆಶೀರ್ವದಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 7:13
26 ತಿಳಿವುಗಳ ಹೋಲಿಕೆ  

ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಕೊಂಡು ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ತಂದೆಗೆ ಪ್ರಿಯನಾಗಿರುವನು; ನಾನೂ ಅವನನ್ನು ಪ್ರೀತಿಸಿ ಅವನಿಗೆ ಕಾಣಿಸಿಕೊಳ್ಳುವೆನು ಎಂದು ಹೇಳಿದನು.


ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಕೊಂಡು ನಡೆದು ಆತನ ಪ್ರೀತಿಯಲ್ಲಿ ನೆಲೆಗೊಂಡಿರುವ ಮೇರೆಗೆ ನೀವು ನನ್ನ ಆಜ್ಞೆಗಳನ್ನು ಕೈಕೊಂಡು ನಡೆದರೆ ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.


ನೀವು ನನ್ನ ಮೇಲೆ ಮಮತೆಯಿಟ್ಟು ನನ್ನನ್ನು ತಂದೆಯ ಬಳಿಯಿಂದ ಹೊರಟುಬಂದವನೆಂದು ನಂಬಿದ್ದರಿಂದ ತಂದೆಯು ತಾನೇ ನಿಮ್ಮ ಮೇಲೆ ಮಮತೆ ಇಡುತ್ತಾನಲ್ಲವೇ.


ನಿಮ್ಮ ದೇವರಾದ ಯೆಹೋವನೊಬ್ಬನನ್ನೇ ಆರಾಧಿಸಬೇಕು; ಆಗ ಆತನು ನಿಮ್ಮ ಅನ್ನಪಾನಗಳನ್ನು ಆಶೀರ್ವದಿಸುವನು. ನಿಮ್ಮೊಳಗೆ ಯಾವ ವ್ಯಾಧಿಯೂ ಉಂಟಾಗದಂತೆ ಮಾಡುವೆನು;


ಹೀಗಿರುವದರಿಂದ, ನೀವು ಮೊದಲು ದೇವರ ರಾಜ್ಯಕ್ಕಾಗಿಯೂ ನೀತಿಗಾಗಿಯೂ ತವಕಪಡಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.


ಯೆಹೋವನ ಆಶೀರ್ವಾದವು ಭಾಗ್ಯದಾಯಕವು; ಅದು ವ್ಯಸನವನ್ನು ಸೇರಿಸದು.


ಯೆಹೋವನು ಯೋಬನ ಮೊದಲನೆಯ ಸ್ಥಿತಿಗಿಂತಲೂ ಅವನ ಕಡೆಯ ಸ್ಥಿತಿಯನ್ನು ಹೀಗೆ ಹೆಚ್ಚಾಗಿ ಆಶೀರ್ವದಿಸಿದನು; ಅವನಿಗೆ ಹದಿನಾಲ್ಕು ಸಾವಿರ ಕುರಿಗಳೂ ಆರು ಸಾವಿರ ಒಂಟೆಗಳೂ ಒಂದು ಸಾವಿರ ಜೋಡಿ ಎತ್ತುಗಳೂ ಒಂದು ಸಾವಿರ ಹೆಣ್ಣುಕತ್ತೆಗಳೂ ಉಂಟಾದವು.


ಯೆಹೋವನು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಮೇರೆಗೆ ನಿಮಗೆ ಕೊಡುವ ದೇಶದಲ್ಲಿ ಆತನು ನಿಮಗೆ ಸಂತಾನಪಶುವ್ಯವಸಾಯಗಳ ಸಮೃದ್ಧಿಯನ್ನುಂಟುಮಾಡುವನು.


ಅವನು ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗಿರುವನು. ಅಂಥ ಮರವು ತಕ್ಕ ಕಾಲದಲ್ಲಿ ಫಲಕೊಡುತ್ತದಲ್ಲಾ; ಅದರ ಎಲೆ ಬಾಡುವದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವದು.


ನಿಮ್ಮನ್ನು ಎಲ್ಲಾ ಜನಾಂಗಗಳಲ್ಲಿ ಹೆಚ್ಚು ಮಂದಿ ಎಂದು ಇಷ್ಟಪಟ್ಟು ಆದುಕೊಳ್ಳಲಿಲ್ಲ; ನೀವು ಎಲ್ಲಾ ಜನಾಂಗಗಳಿಗಿಂತಲೂ ಸ್ವಲ್ಪಮಂದಿಯಷ್ಟೆ.


ಯಾಕಂದರೆ ನೀತಿಸ್ವರೂಪನಾದ ಯೆಹೋವನು ನೀತಿಯನ್ನು ಮೆಚ್ಚುವವನಾಗಿದ್ದಾನೆ. ಸಜ್ಜನರು ಆತನ ಸಾನ್ನಿಧ್ಯದಲ್ಲಿ ಇರುವರು.


ನಾನು ನಿಮ್ಮ ಮೇಲೆ ಕಟಾಕ್ಷವಿಟ್ಟು ಬಹುಸಂತಾನವನ್ನು ಕೊಟ್ಟು ಹೆಚ್ಚಿಸಿ ನಿಮಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು.


ಕೇವಲ ಯೆಹೋವನಿಗೇ ಆಗಲಿ ಎಂದು ನೀವು ಗೊತ್ತುಮಾಡಿದ್ದರಲ್ಲಿ ಸ್ವಲ್ಪವನ್ನಾದರೂ ತೆಗೆದುಕೊಳ್ಳಬಾರದು. ನೀವು ಹೀಗೆ ನಡೆದು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟು ನಾನು ಈಗ ನಿಮಗೆ ಬೋಧಿಸುವ ಆತನ ಎಲ್ಲಾ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಗೆ ಸರಿಯಾದದ್ದನ್ನು ಮಾಡಿದರೆ ಆತನು ರೋಷಾಗ್ನಿಯನ್ನು ಬಿಟ್ಟು ನಿಮಗೆ ದಯೆಯನ್ನು ತೋರಿಸಿ ನಿಮ್ಮನ್ನು ಕರುಣಿಸಿ ತಾನು ನಿಮ್ಮ ಪಿತೃಗಳಿಗೆ ವಾಗ್ದಾನಮಾಡಿದಂತೆ ನಿಮ್ಮ ಸಂತತಿಯನ್ನು ಹೆಚ್ಚಿಸುವನು.


ನಿಮ್ಮ ಪಿತೃಗಳಿಗೆ ಸ್ವಾಸ್ತ್ಯವಾಗಿದ್ದ ದೇಶದಲ್ಲಿ ಸೇರಿಸಿ ಅದು ನಿಮಗೂ ಸ್ವದೇಶವಾಗುವಂತೆ ಮಾಡಿ ನಿಮಗೆ ಮೇಲನ್ನುಂಟುಮಾಡಿ ಪಿತೃಗಳಿಗಿಂತಲೂ ಅಧಿಕವಾಗಿ ನಿಮ್ಮನ್ನು ಹೆಚ್ಚಿಸುವನು.


ಪುತ್ರಸಂತಾನವು ಯೆಹೋವನಿಂದ ಬಂದ ಸ್ವಾಸ್ತ್ಯವು; ಗರ್ಭಫಲವು ಆತನ ಬಹುಮಾನವೇ.


ಯೆಹೋವನು ಕುರುಡರಿಗೆ ಕಣ್ಣು ಕೊಡುತ್ತಾನೆ. ಯೆಹೋವನು ಕುಗ್ಗಿದವರನ್ನು ಉದ್ಧರಿಸುತ್ತಾನೆ. ಯೆಹೋವನು ನೀತಿವಂತರನ್ನು ಪ್ರೀತಿಸುತ್ತಾನೆ.


ದುಷ್ಟನ ನಡತೆಯು ಯೆಹೋವನಿಗೆ ಅಸಹ್ಯ; ಧರ್ಮಾಸಕ್ತನು ಆತನಿಗೆ ಪ್ರಿಯ.


ಆ ದೇಶವನ್ನು ನಿಮಗೇ ಕೊಟ್ಟಿದ್ದೇನೆ; ಯೆಹೋವನೆಂಬ ನಾನು ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೂ ಅವರ ಸಂತತಿಯವರಿಗೂ ಆ ದೇಶವನ್ನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದೆನಲ್ಲಾ. ಅದರಲ್ಲಿ ಪ್ರವೇಶಮಾಡಿ ಸ್ವಾಧೀನಮಾಡಿಕೊಳ್ಳಿರಿ ಎಂದು ಆಜ್ಞಾಪಿಸಿದನು.


ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದರೆ ಆತನು ಭೂವಿುಯ ಮೇಲಿರುವ ಎಲ್ಲಾ ಜನಾಂಗಗಳಿಗಿಂತಲೂ ನಿಮ್ಮನ್ನು ಉನ್ನತಸ್ಥಿತಿಗೆ ತರುವನು.


ನಮ್ಮ ದೇವರೇ, ಮಹೋನ್ನತನೂ ಪರಾಕ್ರವಿುಯೂ ಭಯಂಕರನೂ ಆಗಿರುವಾತನೇ, ಕೃಪಾವಾಗ್ದಾನಗಳನ್ನು ನೆರವೇರಿಸುವ ದೇವರೇ, ಅಶ್ಶೂರದ ರಾಜರ ಕಾಲದಿಂದ ಇಂದಿನವರೆಗೆ ನಮ್ಮ ಅರಸರಿಗೂ ಪ್ರಭುಗಳಿಗೂ ಯಾಜಕರಿಗೂ ಪ್ರವಾದಿಗಳಿಗೂ ಹಿರಿಯರಿಗೂ ನಿನ್ನ ಎಲ್ಲಾ ಪ್ರಜೆಗಳಿಗೂ ಪ್ರಾಪ್ತವಾದ ಕಷ್ಟವು ಅಲ್ಪವು ಎಂದೆಣಿಸಬೇಡ.


ನೀನು ಅವನಿಗೂ ಅವನ ಮನೆಗೂ ಅವನ ಎಲ್ಲಾ ಸ್ವಾಸ್ತ್ಯಕ್ಕೂ ಸುತ್ತುಮುತ್ತಲು ಬೇಲಿಯನ್ನು ಹಾಕಿದ್ದೀಯಲ್ಲಾ. ಅವನು ಕೈಹಾಕಿದ ಕೆಲಸವನ್ನು ನೀನು ಸಫಲಪಡಿಸುತ್ತಿರುವದರಿಂದ ಅವನ ಸಂಪತ್ತು ದೇಶದಲ್ಲಿ ವೃದ್ಧಿಯಾಗುತ್ತಾ ಬಂದಿದೆ.


ಆತನು ಆಶೀರ್ವದಿಸಿದ್ದರಿಂದ ಅವರು ಬಹಳವಾಗಿ ಹೆಚ್ಚಿದರು. ಅವರಿಗೆ ದನಕರುಗಳೇನೂ ಕಡಿಮೆ ಇರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು