Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 7:16 - ಕನ್ನಡ ಸತ್ಯವೇದವು J.V. (BSI)

16 ನಿಮ್ಮ ದೇವರಾದ ಯೆಹೋವನು ನಿಮ್ಮಿಂದ ಪರಾಜಯಪಡಿಸುವ ಜನಾಂಗಗಳನ್ನೆಲ್ಲಾ ನೀವು ಕನಿಕರಿಸದೆ ನಾಶಮಾಡಬೇಕು. ಅವರ ದೇವರುಗಳನ್ನು ಪೂಜಿಸಲೇಬಾರದು; ಪೂಜಿಸಿದರೆ ಅವು ನಿಮಗೆ ಉರುಲಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಿಮ್ಮ ದೇವರಾದ ಯೆಹೋವನು ನಿಮ್ಮಿಂದ ಪರಾಜಯ ಹೊಂದುವ ಜನಾಂಗಗಳನ್ನೆಲ್ಲಾ ನೀವು ಕನಿಕರಿಸದೆ ನಾಶಮಾಡಬೇಕು. ಅವರ ದೇವರುಗಳನ್ನು ಪೂಜಿಸಲೇಬಾರದು; ಪೂಜಿಸಿದರೆ ಅವು ನಿಮ್ಮ ಜೀವಕ್ಕೆ ಉರುಲಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಿಮ್ಮ ದೇವರಾದ ಸರ್ವೇಶ್ವರಾ, ನಿಮ್ಮಿಂದ ಪರಾಜಯಪಡಿಸುವ ಜನರುಗಳನ್ನೆಲ್ಲಾ ನೀವು ಕನಿಕರಿಸದೆ ನಾಶಮಾಡಬೇಕು. ಅವರ ದೇವರುಗಳನ್ನು ಪೂಜಿಸಲೇಬಾರದು; ಪೂಜಿಸಿದರೆ ಅವು ನಿಮಗೆ ಉರುಲಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆ ದೇಶದಲ್ಲಿ ನೀವು ಯೆಹೋವನ ಸಹಾಯದಿಂದ ಸೋಲಿಸುವ ಜನರನ್ನೆಲ್ಲಾ ಕೊಂದುಬಿಡಬೇಕು. ಅವರಿಗೆ ಕನಿಕರ ತೋರಬಾರದು. ಅವರ ದೇವರುಗಳನ್ನು ಪೂಜಿಸಕೂಡದು! ಯಾಕೆಂದರೆ ಅವು ನಿಮಗೆ ಉರುಲಾಗಿ ನಿಮ್ಮ ಜೀವಿತವನ್ನು ಹಾಳುಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಒಪ್ಪಿಸುವ ಜನರನ್ನೆಲ್ಲಾ ನೀವು ಸಂಹರಿಸಬೇಕು. ಅವರ ಮೇಲೆ ನೀವು ಕಟಾಕ್ಷವಿಡಬಾರದು. ಅವರ ದೇವರುಗಳನ್ನು ಆರಾಧಿಸಬಾರದು. ಏಕೆಂದರೆ ಅವು ನಿಮಗೆ ಉರುಲಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 7:16
21 ತಿಳಿವುಗಳ ಹೋಲಿಕೆ  

ಅವರು ನಿಮ್ಮ ದೇಶದಲ್ಲೇ ವಾಸವಾಗಿರಬಾರದು; ವಾಸವಾಗಿದ್ದರೆ ನನಗೆ ವಿರೋಧವಾಗಿ ನಿಮ್ಮಲ್ಲಿ ದ್ರೋಹಬುದ್ಧಿಯನ್ನು ಹುಟ್ಟಿಸಾರು; ನೀವು ಅವರ ದೇವತೆಗಳನ್ನು ಪೂಜಿಸಿದರೆ ಆ ಪೂಜೆಯು ನಿಮಗೆ ಉರುಲಾಗುವದು.


ಈ ಬಂಗಾರದಿಂದ ಗಿದ್ಯೋನನು ಒಂದು ಏಫೋದನ್ನು ಮಾಡಿಸಿ ಅದನ್ನು ತನ್ನ ಊರಾದ ಒಫ್ರದಲ್ಲಿಟ್ಟನು. ಅದರಿಂದ ಇಸ್ರಾಯೇಲ್ಯರೆಲ್ಲರೂ ದೇವದ್ರೋಹಿಗಳಾದರು; ಅದು ಗಿದ್ಯೋನನಿಗೂ ಅವನ ಮನೆಯವರಿಗೂ ಉರುಲಾಯಿತು.


ಮೋಸ ಹೋಗಬೇಡಿರಿ; ದುಸ್ಸಹವಾಸವು ಸದಾಚಾರವನ್ನು ಕೆಡಿಸುತ್ತದೆ.


ಆ ಪರಪುರುಷನ ಪ್ರಧಾನ ಸ್ಥಾನವನ್ನು ಹಿಡಿದುಕೊಂಡರೆ ಕನಿಕರಿಸದೆ ಅವಳ ಕೈ ಕಡಿದುಹಾಕಿಸಬೇಕು.


ನೀವು ಅಂಥವರನ್ನು ಕನಿಕರಿಸಬಾರದು; ಪ್ರಾಣಕ್ಕೆ ಪ್ರತಿಯಾಗಿ ಪ್ರಾಣವನ್ನೂ ಕಣ್ಣಿಗೆ ಪ್ರತಿಯಾಗಿ ಕಣ್ಣನ್ನೂ ಹಲ್ಲಿಗೆ ಪ್ರತಿಯಾಗಿ ಹಲ್ಲನ್ನೂ ಕೈಗೆ ಪ್ರತಿಯಾಗಿ ಕೈಯನ್ನೂ ಕಾಲಿಗೆ ಪ್ರತಿಯಾಗಿ ಕಾಲನ್ನೂ ಅವನಿಗೆ ನಷ್ಟಪಡಿಸಬೇಕು.


ನೀವು ಅವನನ್ನು ಕನಿಕರಿಸಬಾರದು. ನಿಮಗೆ ಶುಭವುಂಟಾಗುವಂತೆ ನಿರಪರಾಧಿಯ ಪ್ರಾಣವನ್ನು ತೆಗೆದವನು ಇಸ್ರಾಯೇಲ್ಯರಲ್ಲಿ ಉಳಿಯದಂತೆ ಮಾಡಬೇಕು.


ಅವನನ್ನು ಕನಿಕರಿಸಕೂಡದು, ತಪ್ಪಿಸಕೂಡದು, ಬಚ್ಚಿಡಕೂಡದು; ಕೊಲ್ಲಿಸಲೇಬೇಕು.


ಅವರ ವಿಗ್ರಹಗಳನ್ನು ಸೇವಿಸಿದರು; ಅವು ಅವರಿಗೆ ಉರುಲಿನಂತಾದವು.


ನಿಮ್ಮ ಎದುರಿನಿಂದ ಹೊರಡಿಸುವವನಾಗಿ ಅವರನ್ನು ನಿಮ್ಮಿಂದ ಪರಾಜಯಪಡಿಸುವಾಗ ನೀವು ಅವರನ್ನು ನಿಶ್ಶೇಷವಾಗಿ ಸಂಹರಿಸಬೇಕು. ಅವರ ಸಂಗಡ ಒಡಂಬಡಿಕೆಮಾಡಿಕೊಳ್ಳಬಾರದು, ಅವರನ್ನು ಕನಿಕರಿಸಬಾರದು.


ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಸೇವಕರನ್ನೂ ವ್ಯಾಧಿಖಡ್ಗಕ್ಷಾಮಗಳಿಂದ ಹತಶೇಷರಾದ ಪ್ರಜೆಗಳನ್ನೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಕೊಟ್ಟುಬಿಡುವೆನು; ಅವನು ಅವರನ್ನು ಕರುಣಿಸದೆ ಕನಿಕರಪಡದೆ ಉಳಿಸದೆ ಕತ್ತಿಯಿಂದ ಸಂಹರಿಸುವನು.


ಅವರ ಕನ್ಯೆಯರನ್ನು ತಾವು ತಂದು ತಮ್ಮ ಕನ್ಯೆಯರನ್ನು ಅವರ ಕುಮಾರರಿಗೆ ಕೊಟ್ಟು ಅವರ ದೇವತೆಗಳನ್ನು ಸೇವಿಸಿದರು.


ನೀವು ಹೀಗೆ ಮಾಡುವದಾದರೆ ನಾನು ಈ ದೇಶ ನಿವಾಸಿಗಳನ್ನು ನಿಮ್ಮೆದುರಿನಿಂದ ಓಡಿಸಿ ಬಿಡುವದಿಲ್ಲ; ಅವರು ನಿಮ್ಮನ್ನು ಉಪದ್ರವಪಡಿಸುವರು; ಅವರ ದೇವತೆಗಳು ನಿಮಗೆ ಉರುಲಾಗುವವು ಎಂದು ಮೊದಲೇ ಹೇಳಿದೆನಲ್ಲಾ ಅಂದನು.


ನೀವು ದೇಶದ ನಿವಾಸಿಗಳನ್ನು ಹೊರಡಿಸಿಬಿಡದೆ ಹೋದರೆ ಅವರಲ್ಲಿ ನೀವು ಉಳಿಸಿದವರು ನಿಮಗೆ ಕಣ್ಣುಚುಚ್ಚುವ ಮುಳ್ಳುಗಳಂತೆಯೂ ಪಕ್ಕೆ ತಿವಿಯುವ ಶೂಲಗಳಂತೆಯೂ ಆಗಿ ನೀವು ವಾಸಿಸುವ ದೇಶದಲ್ಲಿ ನಿಮಗೆ ಕಂಟಕರಾಗಿರುವರು.


ತಮ್ಮ ಪಿತೃಗಳನ್ನು ಐಗುಪ್ತದಿಂದ ಕರತಂದ ದೇವರಾದ ಯೆಹೋವನನ್ನು ಬಿಟ್ಟು ಅನ್ಯದೇವತೆಗಳನ್ನು ಅಂದರೆ ತಮ್ಮ ಸುತ್ತಣ ಜನಾಂಗಗಳ ದೇವರುಗಳನ್ನು ಅವಲಂಬಿಸಿ ಅವುಗಳಿಗೆ ಅಡ್ಡಬಿದ್ದು ಯೆಹೋವನನ್ನು ರೇಗಿಸಿದರು.


ಅವರು ದೇವರೆಂದು ಮಾಡಿಕೊಂಡ ಮರದ ವಿಗ್ರಹಗಳನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು. ಆ ವಿಗ್ರಹಗಳ ಮೇಲಿರುವ ಬೆಳ್ಳಿಬಂಗಾರವನ್ನು ನೀವು ಆಶಿಸಬಾರದು; ಅದನ್ನು ತೆಗೆದುಕೊಂಡರೆ ಅದು ನಿಮಗೆ ಉರುಲಾಗುವದು. ಅದು ನಿಮ್ಮ ದೇವರಾದ ಯೆಹೋವನಿಗೆ ಹೇಯವಾದದ್ದು.


ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಇಸ್ರಾಯೇಲ್ಯರು ಅವರೆಲ್ಲರನ್ನೂ ಕರುಣೆಯಿಲ್ಲದೆ ಸಂಹರಿಸಿಬಿಡುವ ಹಾಗೆ ಆತನು ತಾನೇ ಆ ಜನರ ಹೃದಯಗಳನ್ನು ಕಠಿಣಪಡಿಸಿ ಯುದ್ಧಕ್ಕೆ ಬರಮಾಡಿದನು.


ಅನ್ಯಜನಾಂಗದವರನ್ನು ಸಂಹರಿಸಬೇಕೆಂಬ ಯೆಹೋವನ ಆಜ್ಞೆಗೆ ಅವಿಧೇಯರಾಗಿ


ಆ ಶಿಕ್ಷೆಯನ್ನು ನಡಿಸುವಾಗ ತಪ್ಪು ಕಂಡವನೇ ಮೊದಲು ಕೈಹಾಕಬೇಕು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು