Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 7:17 - ಕನ್ನಡ ಸತ್ಯವೇದವು J.V. (BSI)

17 ಆ ಜನಗಳು ನಮಗಿಂತ ಹೆಚ್ಚು ಮಂದಿ; ಅವರನ್ನು ಹೊರಡಿಸುವದು ನಮ್ಮಿಂದ ಹೇಗಾದೀತು ಅಂದುಕೊಳ್ಳುತ್ತೀರೋ? ಅವರಿಗೆ ಹೆದರಬೇಡಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆ ಜನಗಳು ನಮಗಿಂತ ಹೆಚ್ಚಾಗಿದ್ದಾರೆ; ಅವರನ್ನು ಹೊರಡಿಸುವುದು ನಮ್ಮಿಂದ ಹೇಗಾದೀತು ಅಂದುಕೊಳ್ಳುತ್ತೀರೋ? ಅವರಿಗೆ ಹೆದರಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ‘ಆ ಜನರು ನಮಗಿಂತ ಹೆಚ್ಚುಮಂದಿ ಇದ್ದಾರೆ; ಅವರನ್ನು ಹೊರದೂಡಲು ನಮ್ಮಿಂದ ಹೇಗಾದೀತು? ಎಂದುಕೊಳ್ಳುತ್ತೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ನಿಮ್ಮ ಮನಸ್ಸಿನಲ್ಲಿ, ‘ಈ ಜನಾಂಗಗಳು ನಮ್ಮ ಜನಾಂಗಗಳಿಗಿಂತ ದೊಡ್ಡದಾಗಿವೆ. ಇವರನ್ನು ಹೀಗೆ ಹೊರಡಿಸಲು ಸಾಧ್ಯವೇ ಎಂದು ಯಾಕೆ ಅಂದುಕೊಳ್ಳುತ್ತೀರಿ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ಈ ಜನಾಂಗದವರು ನಮಗಿಂತ ಹೆಚ್ಚು ಮಂದಿ ಇದ್ದಾರೆ. ನಾವು ಹೇಗೆ ಅವರನ್ನು ವಶಮಾಡಿಕೊಳ್ಳಬೇಕು?” ಎಂದು ನಿಮ್ಮ ಹೃದಯದಲ್ಲಿ ಅಂದುಕೊಳ್ಳುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 7:17
14 ತಿಳಿವುಗಳ ಹೋಲಿಕೆ  

ನಾನು ನಿಮಗೇ ಆ ದೇಶವನ್ನು ಸ್ವದೇಶವಾಗುವದಕ್ಕೆ ಕೊಟ್ಟದರಿಂದ ನೀವು ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸಬೇಕು.


ಅದಲ್ಲದೆ ಇವರು ತಾವು ಸಂಚರಿಸಿ ನೋಡಿದ ದೇಶದ ವಿಷಯವಾಗಿ ಇಸ್ರಾಯೇಲ್ಯರಿಗೆ ಅಶುಭಸಮಾಚಾರವನ್ನು ಹೇಳುವವರಾಗಿ - ನಾವು ಸಂಚರಿಸಿ ನೋಡಿದ ದೇಶವು ತನ್ನಲ್ಲಿ ವಾಸಿಸುವವರನ್ನು ನುಂಗಿಬಿಡುತ್ತದೆ; ಅದಲ್ಲದೆ ನಾವು ಅದರಲ್ಲಿ ನೋಡಿದ ಜನರೆಲ್ಲರೂ ಬಹಳ ಎತ್ತರವಾದವರು;


ಯೇಸು ಅವರ ಮನಸ್ಸಿನ ವಿಚಾರವನ್ನು ತಿಳಿದು ಒಂದು ಚಿಕ್ಕ ಮಗುವನ್ನು ಹಿಡಿದುಕೊಂಡು ತನ್ನ ಬಳಿಯಲ್ಲಿ ನಿಲ್ಲಿಸಿ ಅವರಿಗೆ -


ಆಗ ನೀನು ನಿನ್ನ ಮನದೊಳಗೆ - ನನಗೋಸ್ಕರ ಇವರನ್ನು ಯಾರು ಹೆತ್ತರು? ನಾನೋ ಮಕ್ಕಳನ್ನು ಕಳೆದುಕೊಂಡವಳು, ಪುತ್ರಹೀನಳು, ದೇಶಭ್ರಷ್ಟಳು, ತಿರುಕಳು; ಇವರನ್ನು ಸಾಕಿದವರು ಯಾರು? ಆಹಾ, ನಾನು ಒಂಟಿಯಾಗಿ ಉಳಿದಿದ್ದೆನಲ್ಲಾ; ಇವರೆಲ್ಲಿದ್ದರು? ಅಂದುಕೊಳ್ಳುವಿ.


ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ, ನಾನು ವಿಧವೆಯಾಗಿ ಕೂತುಕೊಳ್ಳುವದಿಲ್ಲ, ಪುತ್ರಶೋಕವನ್ನು ಅನುಭವಿಸುವದಿಲ್ಲ ಅಂದುಕೊಳ್ಳುವವಳೇ, ಭೋಗಾಸಕ್ತಳೇ, ನೆಮ್ಮದಿಯಾಗಿ ನೆಲೆಗೊಂಡಿರುವವಳೇ, ಈಗ ಇದನ್ನು ಕೇಳು -


ನೀನು ನಿನ್ನ ಮನಸ್ಸಿನಲ್ಲಿ - ನಾನು ಆಕಾಶಕ್ಕೆ ಹತ್ತಿ ಉತ್ತರದಿಕ್ಕಿನ ಕಟ್ಟಕಡೆಯಿರುವ ಸುರಗಣ ಪರ್ವತದಲ್ಲಿ ನನ್ನ ಸಿಂಹಾಸನವನ್ನು ದೇವರ ನಕ್ಷತ್ರಗಳಿಗಿಂತ ಮೇಲೆ ಏರಿಸಿ ಆಸೀನನಾಗುವೆನು;


ಪ್ರವಾದಿಯು ಹೇಳಿದ ಮಾತು ಯೆಹೋವನ ಮಾತಲ್ಲವೆಂದು ತಿಳಿದುಕೊಳ್ಳುವದು ಹೇಗೆ ಅಂದುಕೊಳ್ಳುತ್ತೀರೋ?


ನೀವು - ಬಿಡುಗಡೆಯುಂಟಾಗುವ ಏಳನೆಯ ವರುಷವು ಸಮೀಪವಾಯಿತೆಂದು ನೀಚವಾದ ಆಲೋಚನೆಯನ್ನು ಮಾಡಿ ಆ ಬಡ ಸಹೋದರನ ವಿಷಯದಲ್ಲಿ ಮೋರೆ ಕರ್ರಗೆಮಾಡಿಕೊಂಡು ಏನೂ ಕೊಡದೆ ಇರಬಾರದು, ನೋಡಿರಿ. [ಹಾಗೆ ಧಿಕ್ಕರಿಸಿದರೆ] ಅವನು ಒಂದು ವೇಳೆ ನಿಮ್ಮ ವಿಷಯದಲ್ಲಿ ಯೆಹೋವನಿಗೆ ಮೊರೆಯಿಟ್ಟಾನು, ನೀವು ದೋಷಿಗಳಾಗಿ ತೋರಿಬಂದೀರಿ.


ಈ ಭಾಗ್ಯವು ನಮ್ಮ ಸಾಮರ್ಥ್ಯ ಸಾಹಸಗಳಿಂದಲೇ ನಮಗುಂಟಾಯಿತು ಅಂದುಕೊಂಡೀರಿ.


ಇವು ನನಗೆ ಏಕೆ ಸಂಭವಿಸಿದವು ಎಂದು ನೀನು ಮನದೊಳಗೆ ಅಂದುಕೊಂಡರೆ ನಿನ್ನ ನೆರಿಗೆಯು ಕೀಳಲ್ಪಟ್ಟು ನಿನ್ನ ಹಿಮ್ಮಡಿಯು ನಾಚಿಕೆಗೆ ಈಡಾದದ್ದಕ್ಕೆ ನಿನ್ನ ಮಹಾಪಾಪವೇ ಕಾರಣ ಎಂದು ನಿನಗೆ ಗೊತ್ತಾಗುವದು.


ಯೆಹೋವನು ಮೋಶೆಗೆ - ಅವನಿಗೆ ಭಯಪಡಬೇಡ; ನಾನು ಅವನನ್ನೂ ಅವನ ಸಮಸ್ತ ಜನರನ್ನೂ ಅವನ ದೇಶವನ್ನೂ ನಿನಗೆ ಕೈವಶಮಾಡಿದ್ದೇನೆ; ನೀನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರವೇ ಇವರಿಗೂ ಮಾಡಬೇಕು ಎಂದು ಹೇಳಿದನು.


ನಾವು ಹೋಗಬೇಕಾದ ಆ ಸೀಮೆ ಎಂಥದೆಂದು ಆಲೋಚಿಸಿರಿ; ಅಲ್ಲಿ ಹೋಗಿದ್ದ ನಮ್ಮ ಸಹೋದರರು ನಮಗೆ - ಆ ದೇಶದ ಜನರು ನಮಗಿಂತ ಹೆಚ್ಚಾಗಿಯೂ ಉದ್ದವಾಗಿಯೂ ಇದ್ದಾರೆ; ಅವರಿರುವ ಪಟ್ಟಣಗಳು ದೊಡ್ಡವೂ ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಳ್ಳವೂ ಆಗಿವೆ; ಅಲ್ಲಿ ಉನ್ನತಪುರುಷರನ್ನು ನೋಡಿದೆವೆಂದು ಹೇಳಿ ನಮ್ಮ ಧೈರ್ಯವನ್ನು ಕೆಡಿಸಿದ್ದಾರೆ ಅಂದುಕೊಳ್ಳುತ್ತಿದ್ದಿರಿ.


ನಿಮ್ಮ ದೇವರಾದ ಯೆಹೋವನು ನಿಮಗೋಸ್ಕರ ಈ ಜನಾಂಗಗಳಿಗೆಲ್ಲಾ ಮಾಡಿದ್ದೆಲ್ಲವನ್ನೂ ನೋಡಿದ್ದೀರಷ್ಟೆ; ಹೌದು, ನಿಮಗಾಗಿ ಯುದ್ಧ ಮಾಡಿದಾತನು ನಿಮ್ಮ ದೇವರಾದ ಯೆಹೋವನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು