ಧರ್ಮೋಪದೇಶಕಾಂಡ 7:3 - ಕನ್ನಡ ಸತ್ಯವೇದವು J.V. (BSI)3 ಅವರೊಡನೆ ಬೀಗತನಮಾಡಬಾರದು; ಅವರ ಮಕ್ಕಳಿಗೆ ಹೆಣ್ಣುಗಳನ್ನು ಕೊಡಲೂಬಾರದು. ಅವರಿಂದ ತರಲೂಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವರೊಡನೆ ಬೀಗತನಮಾಡಬಾರದು; ಅವರ ಗಂಡು ಮಕ್ಕಳಿಗೆ ನಿಮ್ಮ ಹೆಣ್ಣುಮಕ್ಕಳನ್ನು ಕೊಡಲೂಬಾರದು ಮತ್ತು ಅವರ ಹೆಣ್ಣುಮಕ್ಕಳನ್ನು ನಿಮ್ಮ ಗಂಡುಮಕ್ಕಳಿಗೆ ತರಲೂಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅವರೊಡನೆ ಬೀಗತನ ಮಾಡಬಾರದು; ಅವರ ಮಕ್ಕಳಿಗೆ ಹೆಣ್ಣುಗಳನ್ನು ಕೊಡಲೂಬಾರದು, ಅವರಿಂದ ತರಲೂಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಅವರೊಳಗಿಂದ ಹೆಣ್ಣನ್ನು ತರಬೇಡಿ. ನಿಮ್ಮ ಗಂಡುಮಕ್ಕಳಾಗಲಿ ಹೆಣ್ಣುಮಕ್ಕಳಾಗಲಿ ಅವರನ್ನು ಮದುವೆಯಾಗಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವರ ಸಂಗಡ ಮದುವೆ ಮಾಡಿಕೊಳ್ಳಬಾರದು. ನಿಮ್ಮ ಪುತ್ರಿಯರನ್ನು ಅವರ ಮಕ್ಕಳಿಗೆ ಕೊಡಬಾರದು. ನಿಮ್ಮ ಪುತ್ರರಿಗೆ ಅವರ ಪುತ್ರಿಯರನ್ನು ತೆಗೆದುಕೊಳ್ಳಬಾರದು. ಅಧ್ಯಾಯವನ್ನು ನೋಡಿ |
ಹೀಗಿರಲಾಗಿ ನೀವು ನಿಮ್ಮ ಹೆಣ್ಣುಮಕ್ಕಳನ್ನು ಅವರ ಗಂಡುಮಕ್ಕಳಿಗೆ ಕೊಡಲೂಬಾರದು, ನಿಮ್ಮ ಗಂಡುಮಕ್ಕಳಿಗೋಸ್ಕರ ಅವರ ಹೆಣ್ಣು ಮಕ್ಕಳನ್ನು ತೆಗೆದುಕೊಳ್ಳಲೂಬಾರದು, ಅವರಿಗೋಸ್ಕರ ಸುಖಕ್ಷೇಮಗಳನ್ನು ಎಂದಿಗೂ ಬಯಸಬಾರದು. ಈ ಪ್ರಕಾರ ನಡೆದರೆ ನೀವು ಬಲಗೊಂಡು ಆ ದೇಶದ ಸಮೃದ್ಧಿಯನ್ನು ಅನುಭವಿಸಿ ಅದನ್ನು ನಿಮ್ಮ ಸಂತಾನದವರಿಗೆ ಶಾಶ್ವತಸ್ವಾಸ್ತ್ಯವನ್ನಾಗಿ ಬಿಡುವಿರಿ ಎಂದು ಹೇಳಿದಿಯಲ್ಲಾ.