ಧರ್ಮೋಪದೇಶಕಾಂಡ 7:6 - ಕನ್ನಡ ಸತ್ಯವೇದವು J.V. (BSI)6 ಯಾಕಂದರೆ ನೀವು ನಿಮ್ಮ ದೇವರಾದ ಯೆಹೋವನಿಗೆ ಮೀಸಲಾದ ಜನರಾಗಿದ್ದೀರಲ್ಲವೇ; ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯ ಜನವಾಗುವದಕ್ಕೆ ಆದುಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯಾಕೆಂದರೆ ನೀವು ನಿಮ್ಮ ದೇವರಾದ ಯೆಹೋವನಿಗೆ ಮೀಸಲಾದ ಪರಿಶುದ್ಧ ಜನರಾಗಿದ್ದೀರಲ್ಲವೇ; ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನವಾಗುವುದಕ್ಕೆ ಆರಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಏಕೆಂದರೆ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲಾದ ಜನರು; ಜಗದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನರಾಗಲು ಅವರು ಆಯ್ದುಕೊಂಡಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯಾಕೆಂದರೆ ನೀವು ಯೆಹೋವನ ಪ್ರಜೆಗಳಾಗಿದ್ದೀರಿ. ಭೂಲೋಕದಲ್ಲಿರುವ ಎಲ್ಲಾ ಜನಾಂಗಗಳಿಂದ ಆತನು ನಿಮ್ಮನ್ನು ಆರಿಸಿಕೊಂಡಿದ್ದಾನೆ. ನೀವು ಆತನ ಸ್ವಕೀಯ ಪ್ರಜೆಯಾಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಏಕೆಂದರೆ ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಪರಿಶುದ್ಧ ಜನರು. ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಭೂಮಿಯ ಮೇಲಿರುವ ಎಲ್ಲಾ ಜನರೊಳಗಿಂದ ತಮಗೆ ಸ್ವಂತ ಜನರಾಗಿರಲು ತಮ್ಮ ಆಸ್ತಿಯಾಗಿ ಆರಿಸಿಕೊಂಡಿದ್ದಾರೆ. ಅಧ್ಯಾಯವನ್ನು ನೋಡಿ |