Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 7:8 - ಕನ್ನಡ ಸತ್ಯವೇದವು J.V. (BSI)

8 ಯೆಹೋವನು ನಿಮ್ಮನ್ನು ಪ್ರೀತಿಸಿ ತಾನು ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ನೆರವೇರಿಸಬೇಕೆಂದು ಐಗುಪ್ತ್ಯರ ಅರಸನಾದ ಫರೋಹನ ಕೈಕೆಳಗೆ ದಾಸರಾಗಿದ್ದ ನಿಮ್ಮನ್ನು ಬಿಡುಗಡೆ ಮಾಡಿ ತನ್ನ ಭುಜಬಲವನ್ನು ಪ್ರಯೋಗಿಸಿ ಆ ದೇಶದೊಳಗಿಂದ ಬರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನು ನಿಮ್ಮನ್ನು ಪ್ರೀತಿಸಿ, ತಾನು ನಿಮ್ಮ ಪೂರ್ವಿಕರಿಗೆ ಮಾಡಿದ ಪ್ರಮಾಣವನ್ನು ನೆರವೇರಿಸಬೇಕೆಂದು ಐಗುಪ್ತ್ಯರ ಅರಸನಾದ ಫರೋಹನ ಕೈಕೆಳಗೆ ದಾಸರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ, ತನ್ನ ಭುಜಬಲವನ್ನು ಪ್ರಯೋಗಿಸಿ ಆ ದೇಶದೊಳಗಿಂದ ಬರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆದರೂ ಸರ್ವೇಶ್ವರ ನಿಮ್ಮನ್ನು ಪ್ರೀತಿಸಿ, ತಾವು ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ನೆರವೇರಿಸಬೇಕೆಂದು, ಈಜಿಪ್ಟಿನ ರಾಜ ಫರೋಹನ ಕೈಕೆಳಗೆ ಗುಲಾಮರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ, ತಮ್ಮ ಭುಜಬಲ ಪ್ರಯೋಗಿಸಿ, ಆ ದೇಶದಿಂದ ಬರಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ಯೆಹೋವನು ತನ್ನ ಪರಾಕ್ರಮವನ್ನು ತೋರಿಸಿ ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು. ನಿಮ್ಮನ್ನು ದಾಸತ್ವದಿಂದ ಬಿಡುಗಡೆ ಮಾಡಿದನು; ಫರೋಹನ ಹಿಡಿತದಿಂದ ನಿಮ್ಮನ್ನು ಬಿಡಿಸಿದನು; ಯಾಕೆಂದರೆ ಆತನು ನಿಮ್ಮನ್ನು ಪ್ರೀತಿಸುತ್ತಾನೆ; ನಿಮ್ಮ ಪೂರ್ವಿಕರಿಗೆ ತಾನು ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರು ನಿಮ್ಮನ್ನು ಪ್ರೀತಿಸಿದ್ದರಿಂದಲೂ, ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ನೆರವೇರಿಸುವುದರಿಂದಲೂ, ಯೆಹೋವ ದೇವರು ನಿಮ್ಮನ್ನು ಬಲವಾದ ಕೈಯಿಂದ ಹೊರಗೆ ಬರಮಾಡಿ ನಿಮ್ಮನ್ನು ಗುಲಾಮತನದಿಂದಲೂ, ಈಜಿಪ್ಟಿನ ಅರಸನಾದ ಫರೋಹನ ಕೈಯಿಂದಲೂ ವಿಮೋಚಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 7:8
44 ತಿಳಿವುಗಳ ಹೋಲಿಕೆ  

ನೀನು ದಾಸತ್ವದಲ್ಲಿದ್ದ ಐಗುಪ್ತದೇಶದೊಳಗಿಂದ ನಿನ್ನನ್ನು ಬಿಡುಗಡೆ ಮಾಡಿದ ಯೆಹೋವನು ಎಂಬ ನಿನ್ನ ದೇವರು ನಾನೇ.


ನಾನು ನಿನ್ನನ್ನು ಪ್ರೀತಿಸಿರುವದು ಶಾಶ್ವತ ಪ್ರೇಮದಿಂದಲೇ; ಆದಕಾರಣ ನಿನ್ನನ್ನು ಮಮತೆಯಿಂದ ಸೆಳೆದುಕೊಂಡಿದ್ದೇನೆ,


ನಿನ್ನ ಸೇವಕರಾದ ಅಬ್ರಹಾಮ್ ಇಸಾಕ್ ಯಾಕೋಬರನ್ನು ನೆನಪಿಗೆ ತಂದುಕೋ. ನೀನು ನಿನ್ನ ಜೀವದಾಣೆ ಪ್ರಮಾಣಮಾಡಿ ಅವರಿಗೆ - ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಮಾಡುವೆನೆಂದೂ ನಾನು ಸೂಚಿಸಿರುವ ಈ ಪ್ರದೇಶಗಳನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನೆಂದೂ ಅವರು ಈ ದೇಶವನ್ನು ಶಾಶ್ವತವಾಗಿ ಸ್ವಾಧೀನದಲ್ಲಿಟ್ಟುಕೊಳ್ಳುವರೆಂದೂ ಮಾತುಕೊಡಲಿಲ್ಲವೇ ಅಂದನು.


ನೀನು ನನ್ನ ದೃಷ್ಟಿಯಲ್ಲಿ ಅಮೂಲ್ಯನೂ ಮಾನ್ಯನೂ ಪ್ರಿಯನೂ ಆಗಿರುವದರಿಂದ ನಾನು ನಿನಗೆ ಬದಲಾಗಿ ಮನುಷ್ಯರನ್ನೂ ನಿನ್ನ ಪ್ರಾಣಕ್ಕೆ ಪ್ರತಿಯಾಗಿ ಜನಾಂಗಗಳನ್ನೂ ಕೊಡುವೆನು.


ಆದರೂ ಆತನು ನಿಮ್ಮ ಪಿತೃಗಳಲ್ಲಿ ಇಷ್ಟವುಳ್ಳವನಾಗಿ ಅವರನ್ನು ಪ್ರೀತಿಸಿದದರಿಂದ ಈಗ ನಿಮ್ಮ ಅನುಭವಕ್ಕೆ ಬಂದಂತೆ ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನೇ ಎಲ್ಲಾ ಜನಾಂಗಗಳೊಳಗಿಂದ ಆದುಕೊಂಡನು.


ಇನ್ನು ಮೇಲೆ ನಿಮ್ಮ ಮಕ್ಕಳು - ಇದು ಯಾತಕ್ಕೆ ಎಂದು ವಿಚಾರಿಸುವಾಗ ನೀವು ಅವರಿಗೆ - ನಾವು ದಾಸತ್ವದಲ್ಲಿದ್ದ ಐಗುಪ್ತದೇಶದೊಳಗಿಂದ ಯೆಹೋವನು ಭುಜಬಲದಿಂದ ನಮ್ಮನ್ನು ಬಿಡಿಸಿದನು.


ಮೋಶೆ ಇಸ್ರಾಯೇಲ್ಯರಿಗೆ - ನೀವು ದಾಸತ್ವದಲ್ಲಿದ್ದ ಐಗುಪ್ತ ದೇಶದೊಳಗಿಂದ ಬಿಡುಗಡೆಯಾದ ಈ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಆ ಸ್ಥಳದಿಂದ ಬಿಡಿಸಿದನಲ್ಲಾ. ಈ ದಿನದಲ್ಲಿ ನೀವು ಹುಳಿಬೆರೆತದ್ದನ್ನು ತಿನ್ನಕೂಡದು.


ಹೌದು, ತಂದೆಯೇ, ಹೀಗೆ ಮಾಡುವದೇ ಒಳ್ಳೇದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.


ನಿನ್ನ ದೇವರಾದ ಯೆಹೋವನು ನಿನ್ನ ಮಧ್ಯದಲ್ಲಿ ಶೂರನಾಗಿದ್ದಾನೆ, ನಿನ್ನನ್ನು ರಕ್ಷಿಸುವನು; ನಿನ್ನಲ್ಲಿ ಉಲ್ಲಾಸಿಸೇ ಉಲ್ಲಾಸಿಸುವನು; ತನ್ನ ಪ್ರೀತಿಯಲ್ಲಿ ಮುಣುಗಿ ಮೌನವಾಗಿರುವನು; ನಿನ್ನಲ್ಲಿ ಆನಂದಿಸಿ ಹರ್ಷಧ್ವನಿಗೈಯುವನು ಎಂದು ಹೇಳೋಣವಾಗುವದು.


ಹೀಗೆ ಆತನು ತನ್ನ ಪರಿಶುದ್ಧವಚನವನ್ನೂ ತನ್ನ ಸೇವಕನಾದ ಅಬ್ರಹಾಮನನ್ನೂ ನೆನಪುಮಾಡಿಕೊಂಡು


ನಮ್ಮ ಪಿತೃಗಳಿಗೆ ಕತ್ತಿಯೇ ಈ ದೇಶವನ್ನು ಸ್ವಾಧೀನಮಾಡಿಕೊಡಲಿಲ್ಲ; ಅವರ ಭುಜಬಲವೇ ಅವರಿಗೆ ಜಯಕೊಡಲಿಲ್ಲ. ನಿನ್ನ ಭುಜಬಲ, ಹಸ್ತ, ಪ್ರಸನ್ನತೆ ಇವೇ ಅವರಿಗೆ ಜಯವನ್ನುಂಟುಮಾಡಿದವು; ನಿನ್ನ ಒಲುಮೆ ಅವರಿಗಿತ್ತಲ್ಲಾ.


ಆತನು ನನ್ನನ್ನು ಬಿಡಿಸಿ ವಿಶಾಲಸ್ಥಳದಲ್ಲಿ ಸೇರಿಸಿದನು; ನನ್ನನ್ನು ಮೆಚ್ಚಿ ರಕ್ಷಿಸಿದನು.


ಯೆಹೋವನು ದಯದಿಂದ ನಿಮ್ಮನ್ನು ಸ್ವಕೀಯಜನವನ್ನಾಗಿ ಆರಿಸಿಕೊಂಡ ಮೇಲೆ ಆತನು ತನ್ನ ಮಹೋನ್ನತ ನಾಮದ ನಿವಿುತ್ತವಾಗಿ ನಿಮ್ಮನ್ನು ಕೈಬಿಡುವದೇ ಇಲ್ಲ.


ಆತನು ನಿಮ್ಮ ಪಿತೃಗಳನ್ನು ಪ್ರೀತಿಸಿ ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನೂ ಆದುಕೊಂಡು


ಬೇರೆ ಯಾವ ದೇವರಾದರೂ ಮನಶ್ಶೋಧನೆ, ಮಹತ್ಕಾರ್ಯ, ಉತ್ಪಾತ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಮಹಾಭೀತಿ ಇವುಗಳನ್ನು ಪ್ರಯೋಗಿಸಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯೊಳಗಿಂದ ತಪ್ಪಿಸುವದಕ್ಕೆ ಪ್ರಯತ್ನಿಸಿದ್ದುಂಟೋ? ನಿಮ್ಮ ದೇವರಾದ ಯೆಹೋವನಾದರೋ ಐಗುಪ್ತದೇಶದಲ್ಲಿ ನಿಮಗೋಸ್ಕರ ಇದನ್ನೆಲ್ಲಾ ನಿಮ್ಮ ಕಣ್ಣಿಗೆದುರಾಗಿ ನಡಿಸಿದನಲ್ಲಾ.


ನಿಮ್ಮನ್ನಾದರೋ ಯೆಹೋವನು ತನಗೆ ಸ್ವಕೀಯಜನರನ್ನಾಗಿ ಮಾಡಿಕೊಳ್ಳಬೇಕೆಂದು ಸಂಕಲ್ಪಿಸಿ ಕಬ್ಬಿಣವನ್ನು ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತದೇಶದಿಂದ ತಪ್ಪಿಸಿದನು; ಆ ಸಂಕಲ್ಪವು ಈಗ ನೆರವೇರಿತಲ್ಲಾ.


ದೇವರು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದ ನಾವು ಪ್ರೀತಿಸುತ್ತೇವೆ.


ಅವರು ಸುವಾರ್ತೆಯನ್ನು ಬೇಡವೆಂದದ್ದರಿಂದ ದೇವರು ನಿಮಗೆ ಹಿತವನ್ನು ಉಂಟುಮಾಡಿ ಅವರನ್ನು ಶತ್ರುಗಳೆಂದೆಣಿಸಿದ್ದಾನೆ. ಆದರೂ ಅವರು ತಾನು ಆರಿಸಿಕೊಂಡ ಅಬ್ರಹಾಮ ಇಸಾಕ ಯಾಕೋಬರೆಂಬ ಪಿತೃಗಳ ವಂಶಸ್ಥರಾಗಿರುವದರಿಂದ ಅವರನ್ನು ಪ್ರಿಯರೆಂದು ಎಣಿಸಿದ್ದಾನೆ.


ಅವನು ತಡಮಾಡಲು ಯೆಹೋವನು ಅವನನ್ನು ಕನಿಕರಿಸಿದ್ದರಿಂದ ಆ ಮನುಷ್ಯರು ಅವನನ್ನೂ ಅವನ ಹೆಂಡತಿ ಮಕ್ಕಳನ್ನೂ ಕೈಹಿಡಿದು ಹೊರಗೆ ತಂದು ಊರಾಚೆಗೆ ಬಿಟ್ಟರು. ಹೊರಗೆ ತಂದ ಮೇಲೆ ಆತನು -


ದೇವರು ಆ ಸೀಮೆಯ ಪಟ್ಟಣಗಳನ್ನು ನಾಶಮಾಡಿದಾಗ ಲೋಟನು ವಾಸವಾಗಿದ್ದ ಊರುಗಳನ್ನು ಕೆಡವಿದರೂ ಅಬ್ರಹಾಮನನ್ನು ನೆನಸಿ ಲೋಟನನ್ನು ತಪ್ಪಿಸಿ ಕಾಪಾಡಿದನು.


ನಾನು ಮಾಡಿದ ವಾಗ್ದಾನವನ್ನು ನೆನಸಿಕೊಂಡೆನು. ಆದದರಿಂದ ನೀನು ಇಸ್ರಾಯೇಲ್ಯರಿಗೆ [ನನ್ನ ಹೆಸರಿನಲ್ಲಿ] ಹೇಳಬೇಕಾದದ್ದೇನಂದರೆ - ನಾನು ಯೆಹೋವನು; ಐಗುಪ್ತ್ಯರು ನಿಮ್ಮಿಂದ ಮಾಡಿಸುವ ಬಿಟ್ಟೀಕೆಲಸಗಳನ್ನು ನಾನು ತಪ್ಪಿಸಿ ಅವರಲ್ಲಿ ನಿಮಗಿರುವ ದಾಸತ್ವವನ್ನು ತೊಲಗಿಸಿ ನನ್ನ ಕೈ ಚಾಚಿ ಅವರಿಗೆ ಮಹಾಶಿಕ್ಷೆಗಳನ್ನು ವಿಧಿಸಿ ನಿಮ್ಮನ್ನು ರಕ್ಷಿಸುವೆನು.


ನಿನ್ನನ್ನು ಮೆಚ್ಚಿ ತನ್ನ ಸನ್ನಿಧಿಯಲ್ಲಿ ಅರಸನಾಗುವದಕ್ಕೆ ನಿನ್ನನ್ನು ತನ್ನ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ನಿನ್ನ ದೇವರು ಇಸ್ರಾಯೇಲ್ಯರನ್ನು ಪ್ರೀತಿಸಿ ಅವರನ್ನು ನಿರಂತರವಾಗಿ ಸ್ಥಿರಗೊಳಿಸಬೇಕೆಂದಿರುವದರಿಂದ ಅವರ ನೀತಿನ್ಯಾಯಗಳನ್ನು ಸ್ಥಾಪಿಸುವದಕ್ಕೋಸ್ಕರ ನಿನ್ನನ್ನೇ ಅರಸನನ್ನಾಗಿ ನೇವಿುಸಿದ್ದಾನೆ ಎಂದು ಹೇಳಿದಳು.


ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಶ್ರೀಮುಖಸ್ವರೂಪದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ ಪುರಾತನಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.


ಆದಕಾರಣ ನೀನು ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ ವಂಶದವರೇ, ನಿಮ್ಮ ನಿವಿುತ್ತವಲ್ಲ, ನೀವು ಜನಾಂಗಗಳೊಳಗೆ ಸೇರಿ ಅಪಕೀರ್ತಿಗೆ ಗುರಿಮಾಡಿದ ನನ್ನ ಪರಿಶುದ್ಧನಾಮದ ನಿವಿುತ್ತವೇ ಈ ರಕ್ಷಣಕಾರ್ಯವನ್ನು ಮಾಡುತ್ತೇನೆ.


ನಾನು ನಿನ್ನನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ ದಾಸತ್ವದಿಂದ ಬಿಡಿಸಿದೆನು; ಮೋಶೆಯನ್ನೂ ಆರೋನನನ್ನೂ ವಿುರ್ಯಾಮಳನ್ನೂ ನಿನಗೆ ನಾಯಕರನ್ನಾಗಿ ಕಳುಹಿಸಿದೆನು.


ನೀನು ಪುರಾತನ ಕಾಲದಿಂದಲೂ ನಮ್ಮ ಪಿತೃಗಳಿಗೆ ಪ್ರಮಾಣಮಾಡಿರುವಂತೆ ಯಾಕೋಬನ ವಂಶದವರಿಗೆ ಸತ್ಯಪರನಾಗಿಯೂ ಅಬ್ರಹಾಮನ ವಂಶದವರಿಗೆ ಪ್ರೀತಿಪರನಾಗಿಯೂ ನಡೆಯುವಿ.


ಯೆಹೋವನು ಇಂತೆನ್ನುತ್ತಾನೆ - ನಾನು ನಿಮ್ಮನ್ನು ಪ್ರೀತಿಸಿದ್ದೇನೆ; ನೀವೋ - ಯಾವ ವಿಷಯದಲ್ಲಿ ನಮ್ಮನ್ನು ಪ್ರೀತಿಸಿದ್ದೀ ಅಂದುಕೊಳ್ಳುತ್ತೀರಲ್ಲಾ. ಏಸಾವನು ಯಾಕೋಬನ ಅಣ್ಣನಲ್ಲವೆ,


ಆ ದೇಶವನ್ನು ನಿಮಗೇ ಕೊಟ್ಟಿದ್ದೇನೆ; ಯೆಹೋವನೆಂಬ ನಾನು ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೂ ಅವರ ಸಂತತಿಯವರಿಗೂ ಆ ದೇಶವನ್ನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದೆನಲ್ಲಾ. ಅದರಲ್ಲಿ ಪ್ರವೇಶಮಾಡಿ ಸ್ವಾಧೀನಮಾಡಿಕೊಳ್ಳಿರಿ ಎಂದು ಆಜ್ಞಾಪಿಸಿದನು.


ನೀನು ದಾಸತ್ವದಲ್ಲಿದ್ದ ಐಗುಪ್ತದೇಶದೊಳಗಿಂದ ನಿನ್ನನ್ನು ಬಿಡುಗಡೆ ಮಾಡಿದ ಯೆಹೋವನೆಂಬ ನಿನ್ನ ದೇವರು ನಾನೇ.


ನಿಮ್ಮ ಜೀವಮಾನಕಾಲವೆಲ್ಲಾ ಅವರ ಯೋಗಕ್ಷೇಮವನ್ನು ಬಯಸಲೇ ಬಾರದು.


ಆತನು ತನ್ನ ಜನರನ್ನು ಪ್ರೀತಿಸುತ್ತಾನೆ; [ಯೆಹೋವನೇ,] ನಿನ್ನ ಭಕ್ತರೆಲ್ಲರೂ ನಿನ್ನ ಆಶ್ರಯದಲ್ಲಿಯೇ ಇದ್ದಾರೆ; ನಿನ್ನ ಚರಣ ಸನ್ನಿಧಾನದಲ್ಲಿ ಕೂತಿರುವರು; ನೀನು ಹೇಳುವ ಆಜ್ಞೆಗಳನ್ನು ಶಿರಸ್ಸಾವಹಿಸುವರು.


ನಿನ್ನನ್ನು ಮೆಚ್ಚಿ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ಆತನು ಇಸ್ರಾಯೇಲ್ಯರನ್ನು ಸದಾ ಪ್ರೀತಿಸುವವನಾಗಿರುವದರಿಂದ ಅವರ ನೀತಿನ್ಯಾಯಗಳನ್ನು ಸ್ಥಾಪಿಸುವದಕ್ಕೋಸ್ಕರ ನಿನ್ನನ್ನೇ ಅರಸನನ್ನಾಗಿ ನೇವಿುಸಿದ್ದಾನೆ ಎಂದು ಹೇಳಿದಳು.


ಆತನು ಆ ಒಡಂಬಡಿಕೆಯನ್ನು ಅಬ್ರಹಾಮನ ಸಂಗಡ ಮಾಡಿಕೊಂಡನು; ಇಸಾಕನಿಗೆ ಆಣೆಯಿಟ್ಟನು.


ದೇವರೇ, ನೀನೇ ನನ್ನ ಅರಸನು; ಯಾಕೋಬವಂಶಕ್ಕೆ ಜಯಪ್ರದನಾಗು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು