Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 8:1 - ಕನ್ನಡ ಸತ್ಯವೇದವು J.V. (BSI)

1 ನಾನು ಈಗ ನಿಮಗೆ ಬೋಧಿಸುವ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು. ಅನುಸರಿಸಿದರೆ ನೀವು ಬದುಕಿಕೊಂಡು ಹೆಚ್ಚಿ ಯೆಹೋವನು ನಿಮ್ಮ ಪಿತೃಗಳಿಗೆ ಪ್ರಮಾಣರೂಪವಾಗಿ ಕೊಟ್ಟ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಾನು ಈಗ ನಿಮಗೆ ಬೋಧಿಸುವ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು. ಅನುಸರಿಸಿದರೆ ನೀವು ಬದುಕಿ ಅಭಿವೃದ್ಧಿಹೊಂದುವಿರಿ, ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ನಾನು ಈಗ ನಿಮಗೆ ಬೋಧಿಸುವ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು. ಅನುಸರಿಸಿದರೆ ನೀವು ಬಾಳಿ ಅಭಿವೃದ್ಧಿಯಾಗುವಿರಿ. ಸರ್ವೇಶ್ವರ ನಿಮ್ಮ ಪಿತೃಗಳಿಗೆ ಪ್ರಮಾಣರೂಪವಾಗಿ ಕೊಟ್ಟ ನಾಡನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ನಾನು ಈ ದಿನ ಕೊಡುವ ಎಲ್ಲಾ ಆಜ್ಞೆಗಳನ್ನು ನೀವು ಅನುಸರಿಸಬೇಕು. ಆಗ ನೀವು ದೊಡ್ಡ ಜನಾಂಗವಾಗಿ ಅಭಿವೃದ್ಧಿಯಾಗುವಿರಿ. ನಿಮ್ಮ ಪೂರ್ವಿಕರಿಗೆ ಯೆಹೋವನು ವಾಗ್ದಾನ ಮಾಡಿದ ದೇಶವನ್ನು ನೀವು ಪಡೆದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನೀವು ಬದುಕಿ ಅಭಿವೃದ್ಧಿಯಾಗಿ ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ದೇಶಕ್ಕೆ ಹೋಗಿ, ಅದನ್ನು ಸ್ವಾಧೀನ ಮಾಡಿಕೊಳ್ಳುವ ಹಾಗೆ ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಆಜ್ಞೆಗಳನ್ನೆಲ್ಲಾ ಲಕ್ಷ್ಯವಿಟ್ಟು ಕೈಗೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 8:1
9 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರೇ, ಕೇಳಿರಿ; ನೀವು ಬದುಕಿಕೊಂಡು ನಿಮ್ಮ ಪಿತೃಗಳ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಂತೆ ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನಿಸಿ ಅನುಸರಿಸಬೇಕು.


ಆದದರಿಂದ ನೀವು ಸ್ವಲ್ಪವಾದರೂ ತಪ್ಪದೆ ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆಯೇ ನಡೆದುಕೊಳ್ಳಬೇಕು.


ನಾನು ನಿಮ್ಮ ದೇವರಾದ ಯೆಹೋವನು; ನೀವು ನನ್ನ ಆಜ್ಞೆಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ನಡಿಸಿರಿ;


ಆ ದೇಶವನ್ನು ನಿಮಗೇ ಕೊಟ್ಟಿದ್ದೇನೆ; ಯೆಹೋವನೆಂಬ ನಾನು ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೂ ಅವರ ಸಂತತಿಯವರಿಗೂ ಆ ದೇಶವನ್ನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದೆನಲ್ಲಾ. ಅದರಲ್ಲಿ ಪ್ರವೇಶಮಾಡಿ ಸ್ವಾಧೀನಮಾಡಿಕೊಳ್ಳಿರಿ ಎಂದು ಆಜ್ಞಾಪಿಸಿದನು.


ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಬಹುಕಾಲ ಶುಭವುಳ್ಳವರಾಗಿ ಬದುಕಿಕೊಳ್ಳುವಂತೆ ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದ ಮಾರ್ಗದಲ್ಲೇ ನಡೆಯಬೇಕು.


ಆದದರಿಂದ ನಿಮ್ಮ ದೇವರಾದ ಯೆಹೋವನೇ ತಾನು ನಿಮ್ಮ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ಈಗ ನಿಮ್ಮ ಅನುಭವಕ್ಕೆ ಬಂದ ರೀತಿಯಲ್ಲಿ ನೆರವೇರಿಸುವವನಾಗಿ ನಿಮಗೆ ಇಷ್ಟು ಭಾಗ್ಯವನ್ನು ಸಂಪಾದಿಸುವದಕ್ಕೆ ಸಾಮರ್ಥ್ಯವನ್ನು ಕೊಟ್ಟವನೆಂದು ಜ್ಞಾಪಕಮಾಡಿಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು