ಧರ್ಮೋಪದೇಶಕಾಂಡ 8:10 - ಕನ್ನಡ ಸತ್ಯವೇದವು J.V. (BSI)10 ನೀವು ಹೊಟ್ಟೆತುಂಬಾ ಉಂಡು ಸುಖದಿಂದಿರುವಾಗ ನಿಮ್ಮ ದೇವರಾದ ಯೆಹೋವನು ನಿಮಗೆ ಉತ್ತಮ ದೇಶವನ್ನು ಕೊಟ್ಟದ್ದಕ್ಕಾಗಿ ಆತನನ್ನು ಸ್ತುತಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನೀವು ಹೊಟ್ಟೆ ತುಂಬಾ ಊಟಮಾಡಿ ಸುಖದಿಂದಿರುವಾಗ ನಿಮ್ಮ ದೇವರಾದ ಯೆಹೋವನು ನಿಮಗೆ ಉತ್ತಮ ದೇಶವನ್ನು ಕೊಟ್ಟಿದ್ದಕ್ಕಾಗಿ ಆತನನ್ನು ಸ್ತುತಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನೀವು ಹೊಟ್ಟೆತುಂಬ ಉಂಡು ಸುಖದಿಂದಿರುವಾಗ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಇಂಥ ಉತ್ತಮ ನಾಡನ್ನು ಕೊಟ್ಟದ್ದಕ್ಕಾಗಿ ಅವರನ್ನು ಸ್ತುತಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನಿಮಗೆ ಬೇಕಾದಷ್ಟು ಆಹಾರ ಇರುವುದು. ಆಗ ನೀವು ನಿಮಗೆ ಉತ್ತಮ ದೇಶವನ್ನು ಕೊಟ್ಟಿರುವ ಯೆಹೋವ ದೇವರನ್ನು ಸ್ತುತಿಸುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನೀವು ತಿಂದು ತೃಪ್ತಿ ಹೊಂದಿದಾಗ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ಒಳ್ಳೆಯ ದೇಶದಲ್ಲಿ ಅವರನ್ನು ಸ್ತುತಿಸಬೇಕು. ಅಧ್ಯಾಯವನ್ನು ನೋಡಿ |
ನಾನು ಪ್ರಮಾಣಮಾಡಿಕೊಟ್ಟ ದೇಶದಲ್ಲಿ ಇವರು ಸೇರುವದಕ್ಕಿಂತ ಮುಂಚಿತವಾಗಿಯೇ ಇವರು ಈಗಲೂ ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆ. ನಾನು ಇವರ ಪಿತೃಗಳಿಗೆ ಪ್ರಮಾಣಮಾಡಿದಂತೆ ಹಾಲೂ ಜೇನೂ ಹರಿಯುವ ದೇಶಕ್ಕೆ ಇವರನ್ನು ಸೇರಿಸಿದ ಮೇಲೆ ಇವರು ಚೆನ್ನಾಗಿ ಉಂಡು ಕೊಬ್ಬಿದವರಾದಾಗ ಇತರ ದೇವರುಗಳನ್ನು ಅವಲಂಬಿಸಿ ಸೇವಿಸಿ ನನ್ನನ್ನು ತಾತ್ಸಾರಮಾಡಿ ನನ್ನ ನಿಬಂಧನೆಯನ್ನು ಮೀರುವರು. ಅನಂತರ ಅನೇಕ ಕಷ್ಟಗಳೂ ವಿಪತ್ತುಗಳೂ ಸಂಭವಿಸಿದಾಗ ಈ ಪದ್ಯವು ಇವರ ಸಂತತಿಯವರ ಬಾಯಲ್ಲಿ ಇದ್ದುಕೊಂಡು ಅವರ ಮುಂದೆ ಸಾಕ್ಷಿಕೊಡುವದು ಎಂದು ಹೇಳಿದನು.