Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 8:12 - ಕನ್ನಡ ಸತ್ಯವೇದವು J.V. (BSI)

12 ನೀವು ಹೊಟ್ಟೆತುಂಬಾ ಉಂಡು ಸುಖವಾಗಿದ್ದು ಒಳ್ಳೇ ಮನೆಗಳನ್ನು ಕಟ್ಟಿಸಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೀವು ಹೊಟ್ಟೆತುಂಬಾ ಊಟಮಾಡಿ, ಸುಖವಾಗಿದ್ದು ಒಳ್ಳೇ ಮನೆಗಳನ್ನು ಕಟ್ಟಿಸಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನೀವು ಹೊಟ್ಟೆ ತುಂಬ ಉಂಡು, ಸುಖವಾಗಿದ್ದು, ಒಳ್ಳೊಳ್ಳೆಯ ಮನೆಗಳನ್ನು ಕಟ್ಟಿಸಿಕೊಂಡು, ಅವುಗಳಲ್ಲಿ ವಾಸವಾಗಿರುವ ಕಾಲದಲ್ಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಗ ನಿಮಗೆ ಸಮೃದ್ಧಿಯಾಗಿ ಆಹಾರವಿರುವುದು. ನೀವು ಒಳ್ಳೆಯ ಮನೆಗಳನ್ನು ಕಟ್ಟಿಕೊಂಡು ವಾಸಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನೀವು ತಿಂದು ತೃಪ್ತಿಹೊಂದಿ, ಒಳ್ಳೆಯ ಮನೆಗಳನ್ನು ಕಟ್ಟಿ ಅವುಗಳಲ್ಲಿ ವಾಸಮಾಡುವಾಗಲೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 8:12
13 ತಿಳಿವುಗಳ ಹೋಲಿಕೆ  

ಹಾಗಾಗದೆ ಹೊಟ್ಟೆತುಂಬಿದವನಾದರೆ ಯೆಹೋವನು ಯಾರೋ ಎಂದು ನಿನ್ನನ್ನು ತಿರಸ್ಕರಿಸೇನು; ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿನ್ನ ಹೆಸರನ್ನು ಅಯೋಗ್ಯವಾಗಿ ಎತ್ತೇನು.


ಆದರೆ ಯೆಶುರೂನು ಚೆನ್ನಾಗಿ ತಿಂದು ಕೊಬ್ಬಿ ಅಗಡಾಗಿ ತನ್ನನ್ನು ಸೃಷ್ಟಿಸಿದ ದೇವರನ್ನು ಬಿಟ್ಟು ತನ್ನ ಆಶ್ರಯದುರ್ಗವನ್ನು ತಿರಸ್ಕರಿಸಿತು.


ನಿಮಗೆ ಸರ್ವಸಮೃದ್ಧಿಯುಂಟಾದ ಕಾಲದಲ್ಲಿಯೂ ನೀವು ನಿಮ್ಮ ದೇವರಾದ ಯೆಹೋವನನ್ನು ಹರ್ಷಾನಂದಗಳುಳ್ಳವರಾಗಿ ಸೇವಿಸದೆಹೋದದರಿಂದ ಯೆಹೋವನು ನಿಮ್ಮ ಮೇಲೆ ಶತ್ರುಗಳನ್ನು ಬರಮಾಡುವನು;


ಮತ್ತು ಲೋಟನ ದಿವಸಗಳಲ್ಲಿ ನಡೆದ ಪ್ರಕಾರ ನಡೆಯುವದು. ಅವರು ಊಟಮಾಡುತ್ತಿದ್ದರು, ಕುಡಿಯುತ್ತಿದ್ದರು, ಕೊಳ್ಳುತ್ತಿದ್ದರು, ಮಾರುತ್ತಿದ್ದರು, ನೆಡುತ್ತಿದ್ದರು, ಕಟ್ಟುತ್ತಿದ್ದರು.


ಈ ಆಲಯವು ಹಾಳುಬಿದ್ದಿದೆಯಲ್ಲಾ; ನೀವು ಒಳಗೋಡೆಗೆಲ್ಲಾ ಹಲಿಗೆಹೊದಿಸಿಕೊಂಡ ಸ್ವಂತ ಮನೆಗಳಲ್ಲಿ ವಾಸಿಸುವದಕ್ಕೆ ಈ ಸಮಯವು ತಕ್ಕದ್ದೋ?


ನೀವು ಬಡವರನ್ನು ತುಳಿದು ಅವರಿಂದ ಗೋದಿಯನ್ನು ಬಿಟ್ಟಿ ತೆಗೆದುಕೊಂಡ ಕಾರಣ ಕೆತ್ತಿದ ಕಲ್ಲಿನಿಂದ ನೀವು ಕಟ್ಟಿಕೊಂಡ ಮನೆಗಳಲ್ಲಿ ವಾಸಿಸದೆ ಇರುವಿರಿ, ಮಾಡಿಕೊಂಡ ಒಳ್ಳೊಳ್ಳೆಯ ತೋಟಗಳ ದ್ರಾಕ್ಷಾರಸವನ್ನು ಕುಡಿಯರಿ.


ಮತ್ತು ವಿಶೇಷ ಕಾರ್ಯಗಳನ್ನು ನಡಿಸಿದೆನು; ಮನೆಗಳನ್ನು ಕಟ್ಟಿಸಿಕೊಂಡೆನು,


ನಾನು ಪ್ರಮಾಣಮಾಡಿಕೊಟ್ಟ ದೇಶದಲ್ಲಿ ಇವರು ಸೇರುವದಕ್ಕಿಂತ ಮುಂಚಿತವಾಗಿಯೇ ಇವರು ಈಗಲೂ ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆ. ನಾನು ಇವರ ಪಿತೃಗಳಿಗೆ ಪ್ರಮಾಣಮಾಡಿದಂತೆ ಹಾಲೂ ಜೇನೂ ಹರಿಯುವ ದೇಶಕ್ಕೆ ಇವರನ್ನು ಸೇರಿಸಿದ ಮೇಲೆ ಇವರು ಚೆನ್ನಾಗಿ ಉಂಡು ಕೊಬ್ಬಿದವರಾದಾಗ ಇತರ ದೇವರುಗಳನ್ನು ಅವಲಂಬಿಸಿ ಸೇವಿಸಿ ನನ್ನನ್ನು ತಾತ್ಸಾರಮಾಡಿ ನನ್ನ ನಿಬಂಧನೆಯನ್ನು ಮೀರುವರು. ಅನಂತರ ಅನೇಕ ಕಷ್ಟಗಳೂ ವಿಪತ್ತುಗಳೂ ಸಂಭವಿಸಿದಾಗ ಈ ಪದ್ಯವು ಇವರ ಸಂತತಿಯವರ ಬಾಯಲ್ಲಿ ಇದ್ದುಕೊಂಡು ಅವರ ಮುಂದೆ ಸಾಕ್ಷಿಕೊಡುವದು ಎಂದು ಹೇಳಿದನು.


ಇವರು - ಮನೆಗಳನ್ನು ಕಟ್ಟಿಕೊಳ್ಳುವ ಕಾಲವು ಬಂದಿಲ್ಲ; ಈ ಪಟ್ಟಣವು ಹಂಡೆ, ನಾವು ಮಾಂಸ ಎಂದು ಹೇಳುತ್ತಾರೆ.


ಅವುಗಳಲ್ಲಿ ವಾಸವಾಗಿರುವ ಕಾಲದಲ್ಲಿ ನಿಮ್ಮ ದನಗಳೂ ಆಡುಕುರಿಗಳೂ ನಿಮ್ಮ ಬೆಳ್ಳಿಬಂಗಾರವೂ ಆಸ್ತಿಯೆಲ್ಲವೂ ಹೆಚ್ಚುತ್ತಿರುವಾಗ


ನಿಮ್ಮ ದೇವರಾದ ಯೆಹೋವನು ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣ ಮಾಡಿಕೊಟ್ಟ ದೇಶದಲ್ಲಿ ನಿಮ್ಮನ್ನು ಸೇರಿಸಿದಾಗ ನೀವು ಕಟ್ಟದ ಒಳ್ಳೆಯ ದೊಡ್ಡ ಪಟ್ಟಣಗಳನ್ನೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು