ಧರ್ಮೋಪದೇಶಕಾಂಡ 8:15 - ಕನ್ನಡ ಸತ್ಯವೇದವು J.V. (BSI)15-16 ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ಪರೀಕ್ಷಿಸಿದನಂತರ ನಿಮಗೆ ಮೇಲನ್ನುಂಟುಮಾಡಬೇಕೆಂಬ ಉದ್ದೇಶದಿಂದ ಐಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ ವಿಷಸರ್ಪಗಳೂ ಚೇಳುಗಳೂ ಇದ್ದ ಆ ಘೋರವಾದ ಮಹಾರಣ್ಯವನ್ನೂ ನೀರು ಬತ್ತಿಹೋದ ಭೂವಿುಗಳನ್ನೂ ದಾಟಿಸಿ ಗಟ್ಟಿಯಾದ ಬಂಡೆಯೊಳಗಿಂದ ನೀರನ್ನು ಹೊರಡಿಸಿಕೊಟ್ಟು ನಿಮ್ಮ ಪೂರ್ವಿಕರಿಗೆ ತಿಳಿಯದೆ ಇದ್ದ ಮನ್ನವನ್ನು ಕೊಟ್ಟು ಪೋಷಿಸಿದಾತನನ್ನು ನೀವು ಮರೆತು ಮನಸ್ಸಿನೊಳಗೆ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆತನು ಐಗುಪ್ತ ದೇಶದಲ್ಲಿ ದಾಸರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ, ವಿಷಸರ್ಪಗಳೂ ಮತ್ತು ಚೇಳುಗಳೂ ಇದ್ದ ಆ ಘೋರವಾದ ಮಹಾ ಅರಣ್ಯವನ್ನೂ, ನೀರು ಬತ್ತಿಹೋದ ಭೂಮಿಗಳನ್ನೂ ದಾಟಿಸಿದ್ದನ್ನು ಮತ್ತು ಗಟ್ಟಿಯಾದ ಬಂಡೆಯೊಳಗಿಂದ ನೀರು ಹೊರಡಿಸಿದ್ದನ್ನು ಮರೆಯಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15-16 ಅವರು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ಪರೀಕ್ಷಿಸಿದ ನಂತರ ನಿಮಗೆ ಒಳಿತನ್ನು ಉಂಟುಮಾಡಬೇಕೆಂಬ ಉದ್ದೇಶದಿಂದ ಈಜಪ್ಟ್ ದೇಶದಲ್ಲಿ ಗುಲಾಮರಾಗಿದ್ದ ನಿಮ್ಮನ್ನು ಬಿಡುಗಡೆ ಮಾಡಿದರು. ವಿಷಸರ್ಪಗಳೂ ಚೇಳುಗಳೂ ಇದ್ದ ಆ ಘೋರವಾದ ಮಹಾಮರುಭೂಮಿಯನ್ನೂ ನೀರು ಬತ್ತಿಹೋಗಿದ್ದ ಭೂಮಿಗಳನ್ನೂ ದಾಟಿಸಿದರು; ಗಟ್ಟಿಯಾದ ಬಂಡೆಯೊಳಗಿಂದ ನೀರನ್ನು ಹೊರಡಿಸಿಕೊಟ್ಟರು. ನಿಮ್ಮ ಪೂರ್ವಿಕರಿಗೆ ತಿಳಿಯದೆ ಇದ್ದ ಮನ್ನವನ್ನು ಕೊಟ್ಟು ಪೋಷಿಸಿದರು. ಅಂಥವರನ್ನು ಮರೆತು ಮನಸ್ಸಿನಲ್ಲೇ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆತನು ನಿಮ್ಮನ್ನು ಭಯಂಕರವಾದ ಆ ಅಡವಿಯಲ್ಲಿ ಮೊದಲು ನಡೆಸಿದನು. ಅಲ್ಲಿ ವಿಷದ ಹಾವುಗಳು, ಚೇಳುಗಳು ಇದ್ದವು. ನೆಲವು ಕಾದಿದ್ದು ಎಲ್ಲಿಯೂ ನೀರು ಸಿಗುತ್ತಿರಲಿಲ್ಲ. ಆದರೆ ನಿಮ್ಮ ದೇವರಾದ ಯೆಹೋವನು ಬಂಡೆಯೊಳಗಿಂದ ನೀರನ್ನು ನಿಮಗೆ ಒದಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ದೇವರು ಅಗ್ನಿಸರ್ಪಗಳೂ, ಚೇಳುಗಳೂ ತುಂಬಿದ ಮತ್ತು ನೀರಿಲ್ಲದ ಆ ಭಯಂಕರವಾದ ವಿಶಾಲ ಮರುಭೂಮಿಯಲ್ಲಿ ನಿಮ್ಮನ್ನು ನಡೆಸಿ, ಗಟ್ಟಿಯಾದ ಬಂಡೆಯೊಳಗಿಂದ ನಿಮಗೆ ನೀರು ಬರಮಾಡಿದರು. ಅಧ್ಯಾಯವನ್ನು ನೋಡಿ |