Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 8:2 - ಕನ್ನಡ ಸತ್ಯವೇದವು J.V. (BSI)

2 ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಈ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿದ್ದನ್ನೂ ನೀವು ತನ್ನ ಆಜ್ಞೆಗಳನ್ನು ಕೈಕೊಳ್ಳುವವರೋ ಅಲ್ಲವೋ ಎಂದು ತಿಳಿದುಕೊಳ್ಳುವದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನೂ ನೆನಪಿಗೆ ತಂದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಈ ನಲ್ವತ್ತು ವರ್ಷ ಅರಣ್ಯದಲ್ಲಿ ನಡಿಸಿದ್ದನ್ನೂ, ನೀವು ಆತನ ಆಜ್ಞೆಗಳನ್ನು ಕೈಕೊಳ್ಳುತ್ತಿರೋ ಇಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನೂ ನೆನಪಿಗೆ ತಂದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಈ ನಲವತ್ತು ವರ್ಷ ಮರುಭೂಮಿಯಲ್ಲಿ ನಡೆಸಿದ್ದನ್ನು ಹಾಗು ನೀವು ಅವರ ಆಜ್ಞೆಗಳನ್ನು ಕೈಕೊಳ್ಳುವವರೋ ಅಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನು ನೆನಪಿಗೆ ತಂದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಿಮ್ಮ ದೇವರಾದ ಯೆಹೋವನು ಈ ನಲವತ್ತು ವರ್ಷಗಳ ಕಾಲ ನಿಮ್ಮನ್ನು ಅರಣ್ಯ ಪ್ರಯಾಣದಲ್ಲಿ ಮೊದಲು ನಡೆಸಿದ್ದನ್ನು ನೀವು ಯಾವಾಗಲೂ ಸ್ಮರಿಸಬೇಕು. ಯೆಹೋವನು ನಿಮ್ಮನ್ನು ಪರೀಕ್ಷಿಸುತ್ತಿದ್ದನು ಮತ್ತು ನಿಮ್ಮನ್ನು ದೀನರನ್ನಾಗಿ ಮಾಡಬೇಕೆಂದಿದ್ದನು. ನಿಮ್ಮ ಹೃದಯದ ಆಲೋಚನೆಗಳನ್ನು ಆತನು ತಿಳಿದುಕೊಳ್ಳಬೇಕೆಂದಿದ್ದನು; ನೀವು ಆತನ ಆಜ್ಞೆಗಳಿಗೆ ವಿಧೇಯರಾಗುವಿರೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಈ ನಲವತ್ತು ವರ್ಷ ಮರುಭೂಮಿಯಲ್ಲಿ ತಗ್ಗಿಸಿ, ನೀವು ದೇವರ ಆಜ್ಞೆಗಳನ್ನು ಕಾಪಾಡುವಿರೋ ಇಲ್ಲವೋ ಎಂದು ನಿಮ್ಮ ಹೃದಯವನ್ನು ಪರೀಕ್ಷಿಸುವುದಕ್ಕೆ ನಿಮ್ಮನ್ನು ನಡೆಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 8:2
46 ತಿಳಿವುಗಳ ಹೋಲಿಕೆ  

ಬಂಗಾರವು ನಾಶವಾಗುವಂಥದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟಾಹಾಕಿ ಶೋಧಿಸುವದುಂಟಷ್ಟೆ. ಬಂಗಾರಕ್ಕಿಂತ ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವ ಮಾನಗಳನ್ನು ಉಂಟುಮಾಡುವದು.


ಆಗ ಯೆಹೋವನು ಮೋಶೆಗೆ - ಇಗೋ ನಾನು ಆಕಾಶದಿಂದ ನಿಮಗೋಸ್ಕರ ಆಹಾರವನ್ನು ಸುರಿಸುವೆನು. ಈ ಜನರು ಪ್ರತಿದಿನವೂ ಹೊರಗೆ ಹೋಗಿ ಆಯಾ ದಿನಕ್ಕೆ ಬೇಕಾದಷ್ಟು ಮಾತ್ರ ಕೂಡಿಸಿಕೊಳ್ಳಬೇಕು. ಇದರಿಂದ ಇವರು ನನ್ನ ಬೋಧನೆಯನ್ನು ಅನುಸರಿಸಿ ನಡೆಯುವವರೋ ಅಲ್ಲವೋ ಎಂದು ಪರೀಕ್ಷಿಸಿ ತಿಳಿಯುತ್ತೇನೆ.


ನೀವು ಕೈಹಾಕಿದ ಎಲ್ಲಾ ಕೆಲಸಗಳನ್ನೂ ನಿಮ್ಮ ದೇವರಾದ ಯೆಹೋವನು ಸಫಲಪಡಿಸಿದ್ದಾನಲ್ಲಾ. ಈ ದೊಡ್ಡ ಅರಣ್ಯದಲ್ಲಿ ನೀವು ಸಂಚರಿಸುತ್ತಿರುವಾಗೆಲ್ಲಾ ಆತನು ನಿಮ್ಮನ್ನು ಪರಾಂಬರಿಸುತ್ತಾ ಬಂದನು. ಈ ನಾಲ್ವತ್ತು ವರುಷ ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಇದ್ದದರಿಂದ ನಿಮಗೆ ಏನೂ ಕಡಿಮೆಯಾಗಲಿಲ್ಲ ಎಂದು ಹೇಳಿದನು.


ಆದದರಿಂದ ಅವನ ದೇಶದಲ್ಲುಂಟಾದ ಅದ್ಭುತದ ವಿಷಯವನ್ನು ವಿಚಾರಿಸುವದಕ್ಕಾಗಿ ಬಾಬೆಲಿನ ಪ್ರಭುಗಳ ರಾಯಭಾರಿಗಳು ಅವನ ಬಳಿಗೆ ಬಂದಾಗ ದೇವರು ಅವನನ್ನು ಪರೀಕ್ಷಿಸುವದಕ್ಕೂ ಅವನ ಸರ್ವಾಂತರ್ಯವನ್ನು ತಿಳುಕೊಳ್ಳುವದಕ್ಕೂ ಅವನನ್ನು ಕೈಬಿಟ್ಟನು.


ಆಗ ಯೆಹೋವನು ಅವನಿಗೆ ಒಂದು ಗಿಡವನ್ನು ತೋರಿಸಿದನು. ಅದನ್ನು ಆ ನೀರಿನಲ್ಲಿ ಹಾಕಿದಾಗ ನೀರು ಸಿಹಿಯಾಯಿತು. ಅಲ್ಲಿ ಯೆಹೋವನು ಇಸ್ರಾಯೇಲ್ಯರಿಗಾಗಿ ಒಂದು ನಿಯಮವನ್ನು ನಿರ್ಣಯಮಾಡಿ ಅವರನ್ನು ಪರೀಕ್ಷಿಸಿ ಹೀಗಂದನು -


ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆಗಲಾತನು ನಿಮ್ಮನ್ನು ಮೇಲಕ್ಕೆ ತರುವನು.


ಆತನು ಪ್ರತಿಮನುಷ್ಯನ ಆಂತರ್ಯವನ್ನು ತಿಳಿದವನಾದ ಕಾರಣ ಯಾವನೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿ ಕೊಡಬೇಕಾದ ಅವಶ್ಯವಿರಲಿಲ್ಲ.


ಆತನು ನಮ್ಮ ಮೇಲೆ ಅತಿಶಯವಾದ ಕೃಪೆಯನ್ನು ಇಡುತ್ತಾನೆ. ಆದುದರಿಂದ - ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ ಎಂದು ಶಾಸ್ತ್ರವು ಹೇಳುತ್ತದೆ.


ನಾಲ್ಪತ್ತು ವರುಷ ನಾನು ನಿಮ್ಮನ್ನು ಅರಣ್ಯದಲ್ಲಿ ನಡಿಸಿಕೊಂಡು ಬಂದಿದ್ದೇನೆ. ನಿಮ್ಮ ಮೈಮೇಲಿದ್ದ ಉಡುಪಾಗಲಿ ಕಾಲಲ್ಲಿದ್ದ ಕೆರವಾಗಲಿ ಜೀರ್ಣವಾಗಲಿಲ್ಲ;


ಇವನು ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ತನ್ನ ಮನೆಗೆ ಹೋದನು, ಆ ಫರಿಸಾಯನು ಅಂಥವನಾಗಿ ಹೋಗಲಿಲ್ಲ ಎಂದು ನಿಮಗೆ ಹೇಳುತ್ತೇನೆ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.


[ಇಸ್ರಾಯೇಲ್ಯರೇ,] ಅಮೋರಿಯರ ದೇಶವನ್ನು ನಿಮಗೆ ದೊರಕಿಸಬೇಕೆಂದು ನಾನು ನಿಮ್ಮನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿಕೊಂಡು ಬಂದೆನು,


ಸಾಮಾನ್ಯರ ಗರ್ವವು ಕುಗ್ಗುವದು, ಮುಖಂಡರ ಅಹಂಕಾರವೂ ತಗ್ಗುವದು, ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.


ಬೆಳ್ಳಿಬಂಗಾರಗಳನ್ನು ಪುಟಕುಲಿಮೆಗಳು ಶೋಧಿಸುವವು; ಹೃದಯಗಳನ್ನು ಶೋಧಿಸುವವನು ಯೆಹೋವನೇ.


ಆತನು ತನ್ನ ಪ್ರಜೆಯನ್ನು ಅರಣ್ಯದೊಳಗೆ ಕರತಂದನು; ಆತನ ಕೃಪೆಯು ಶಾಶ್ವತವಾದದ್ದು.


ನಮ್ಮ ಪೂರ್ವಿಕರು ಐಗುಪ್ತದಲ್ಲಿ ನಿನ್ನ ಅದ್ಭುತಕ್ರಿಯೆಗಳನ್ನು ಲಕ್ಷಿಸಲಿಲ್ಲ; ನಿನ್ನ ಕೃಪಾತಿಶಯವನ್ನು ಸ್ಮರಿಸಲಿಲ್ಲ. ಕೆಂಪು ಸಮುದ್ರದ ಬಳಿಯಲ್ಲಿ ನಿನಗೆ ತಿರುಗಿಬಿದ್ದರು.


ಕಷ್ಟದಲ್ಲಿ ಮೊರೆಯಿಟ್ಟ ನಿನ್ನನ್ನು ವಿಮೋಚಿಸಿದೆನು; ಗುಡುಗುವ ಮೋಡದಲ್ಲಿದ್ದು ನಿನಗೆ ಉತ್ತರವನ್ನು ಕೊಟ್ಟೆನು; ಮೆರೀಬಾ ಪ್ರವಾಹಗಳ ಬಳಿಯಲ್ಲಿ ನಿನ್ನನ್ನು ಪರೀಕ್ಷಿಸಿದೆನು. ಸೆಲಾ.


ಯೆಹೋವನ ಕೃತ್ಯಗಳನ್ನು ವರ್ಣಿಸುವೆನು; ಪೂರ್ವದಿಂದ ನೀನು ನಡಿಸಿದ ಅದ್ಭುತಗಳನ್ನು ನೆನಪುಮಾಡಿಕೊಳ್ಳುವೆನು.


ಹೀಗೆ ಮನುಷ್ಯನನ್ನು ಅವನ ದುಷ್ಕಾರ್ಯದಿಂದ ತಪ್ಪಿಸುವನು, ಮಾನವನಿಗೆ ಗರ್ವವನ್ನು ಮರೆಮಾಡುವನು;


ಆದರೆ ಆ ಕಷ್ಟದಲ್ಲಿ ಮನಸ್ಸೆಯು ತನ್ನ ದೇವರಾದ ಯೆಹೋವನ ಪ್ರಸನ್ನತೆಯನ್ನು ಬೇಡಿಕೊಂಡನು. ಅವನು ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನನ್ನು ಪ್ರಾರ್ಥಿಸಲು


ನಿಮ್ಮ ದೇವರಾದ ಯೆಹೋವನು - ಇವರು ಸಂಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ತನ್ನನ್ನೇ ಪ್ರೀತಿಸುವವರು ಹೌದೋ ಅಲ್ಲವೋ ಎಂಬದನ್ನು ತಿಳಿದುಕೊಳ್ಳುವದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾನೆ.


ನಿಮ್ಮ ದೇವರಾದ ಯೆಹೋವನು ಫರೋಹನಿಗೂ ಐಗುಪ್ತ್ಯರೆಲ್ಲರಿಗೂ ಮಾಡಿದ್ದನ್ನು ನೆನಪಿಗೆ ತಂದುಕೊಳ್ಳಿರಿ.


ನೀವು ಹೋಗಬೇಕಾದ ದಾರಿಯನ್ನು ತೋರಿಸುವದಕ್ಕೂ ದಂಡು ಇಳಿಯಬೇಕಾದ ಸ್ಥಳಗಳನ್ನು ಗೊತ್ತುಮಾಡುವದಕ್ಕೂ ರಾತ್ರಿಹೊತ್ತು ಬೆಂಕಿಯಲ್ಲಿಯೂ ಹಗಲುಹೊತ್ತು ಮೇಘದಲ್ಲಿಯೂ ಮಾರ್ಗದಲ್ಲಿ ನಿಮ್ಮ ಮುಂದುಗಡೆ ಹೋದ ದೇವರನ್ನು ನೀವು ನಂಬಲಿಲ್ಲ.


ಮೋಶೆಯು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನನ್ನೂ ಅಷ್ಟಾರೋತ್, ಎದ್ರೈ ಎಂಬ ಪಟ್ಟಣಗಳಲ್ಲಿದ್ದ ಬಾಷಾನಿನ ಅರಸನಾದ ಓಗನನ್ನೂ ಜಯಿಸಿದ ತರುವಾಯ,


ಈ ಸಂಗತಿಗಳು ಆದ ಮೇಲೆ ದೇವರು ಅಬ್ರಹಾಮನನ್ನು ಪರಿಶೋಧಿಸಿದನು. ಹೇಗಂದರೆ ಆತನು ಅವನನ್ನು - ಅಬ್ರಹಾಮನೇ ಎಂದು ಕರೆಯಲು ಅವನು - ಇಗೋ, ಇದ್ದೇನೆ ಅಂದನು.


ಅವಳ ಮಕ್ಕಳನ್ನು ಕೊಂದೇ ಕೊಲ್ಲುವೆನು; ಆಗ ನಾನು ಮನುಷ್ಯರ ಅಂತರಿಂದ್ರಿಯವನ್ನೂ ಹೃದಯವನ್ನೂ ಪರೀಕ್ಷಿಸುವವನಾಗಿದ್ದೇನೆಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು. ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಹಾಗೆ ಪ್ರತಿಫಲ ಕೊಡುವೆನು.


ಅವನ ದೇವಪ್ರಾರ್ಥನೆಯೂ ಅವನಿಗೆ ದೊರಕಿದ ಸದುತ್ತರವೂ ಅವನು ತನ್ನನ್ನು ತಗ್ಗಿಸಿಕೊಳ್ಳುವದಕ್ಕಿಂತ ಮುಂಚೆ ಮಾಡಿದ ಅಪರಾಧದ್ರೋಹಗಳೂ ಅವನು ಅಲ್ಲಲ್ಲಿ ಪೂಜಾಸ್ಥಳಗಳನ್ನು ಏರ್ಪಡಿಸಿ ಅಶೇರಸ್ತಂಭ ವಿಗ್ರಹ ಇವುಗಳನ್ನು ನಿಲ್ಲಿಸಿದ್ದೂ ದರ್ಶಿಗಳ ಚರಿತ್ರೆಯಲ್ಲಿ ಬರೆದಿರುತ್ತವೆ.


ಇಸ್ರಾಯೇಲ್ಯರು ಜನವಾಸವಿರುವ ಪ್ರದೇಶಕ್ಕೆ ಬರುವ ತನಕ ಅಂದರೆ ಕಾನಾನ್ ದೇಶದ ಮೇರೆಯನ್ನು ಸೇರುವ ತನಕ ನಾಲ್ವತ್ತು ವರುಷ ಮನ್ನವನ್ನೇ ಊಟಮಾಡುತ್ತಿದ್ದರು.


ಅದಕ್ಕೆ ಮೋಶೆ - ಭಯಪಡಬೇಡಿರಿ. ದೇವರು ನಿಮ್ಮನ್ನು ಪರೀಕ್ಷಿಸಬೇಕೆಂತಲೂ ತನಗೆ ಭಯಪಟ್ಟು ನೀವು ಪಾಪವನ್ನು ಮಾಡದೆ ಇರಬೇಕೆಂತಲೂ ಬಂದಿದ್ದಾನೆ ಅಂದನು.


ನೀವು ಮಾಡಿದ ದ್ರೋಹದ ಫಲವನ್ನು ನಿಮ್ಮ ಮಕ್ಕಳು ಅನುಭವಿಸುವವರಾಗಿ ನಾಲ್ವತ್ತು ವರುಷ ಅರಣ್ಯವಾಸಿಗಳಾಗಿರಬೇಕು.


ಇವರೂ ತಮ್ಮ ಹಿರಿಯರಂತೆ ಜಾಗರೂಕತೆಯಿಂದ ಯೆಹೋವನಾದ ನನ್ನ ಮಾರ್ಗದಲ್ಲಿ ನಡೆಯುವರೋ ಇಲ್ಲವೋ ಎಂದು ಈ ಜನಾಂಗಗಳ ಮೂಲಕವಾಗಿ ಪರೀಕ್ಷಿಸುವೆನು ಅಂದನು.


ತಾನು ಮೋಶೆಯ ಮೂಲಕವಾಗಿ ಇವರ ಪಿತೃಗಳಿಗೆ ವಿಧಿಸಿದ ಆಜ್ಞೆಗಳನ್ನು ಇಸ್ರಾಯೇಲ್ಯರು ಕೈಕೊಂಡು ನಡೆಯುವರೋ ಇಲ್ಲವೋ ಎಂಬದನ್ನು ಪರೀಕ್ಷಿಸಿ ತಿಳುಕೊಳ್ಳುವದಕ್ಕೋಸ್ಕರ ಯೆಹೋವನು ಅವರನ್ನು ಉಳಿಸಿದನು.


ಕರುಣಾನಿಧಿಯಾದ ನೀನು ಅವರನ್ನು ಅರಣ್ಯದಲ್ಲಿ ಕೈಬಿಡಲಿಲ್ಲ, ಹಗಲಿನಲ್ಲಿ ಅವರಿಗೆ ದಾರಿ ತೋರಿಸುತ್ತಿದ್ದ ಮೇಘ ಸ್ತಂಭವೂ ರಾತ್ರಿವೇಳೆಯಲ್ಲಿ ಅವರು ನಡೆಯತಕ್ಕ ದಾರಿಯಲ್ಲಿ ಬೆಳಕು ಕೊಡುತ್ತಿದ್ದ ಅಗ್ನಿಸ್ತಂಭವೂ ಅವರನ್ನು ಬಿಟ್ಟುಹೋಗಲಿಲ್ಲ.


ನಾನು ನಿಮ್ಮ ದೇವರಾದ ಯೆಹೋವನು; ನೀವು ನನ್ನ ಆಜ್ಞೆಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ನಡಿಸಿರಿ;


ಪೂರ್ವಕಾಲವನ್ನು ನೆನಪಿಗೆ ತಂದುಕೊಳ್ಳಿರಿ; ಪೂರ್ವಿಕರ ಚರಿತ್ರೆಯನ್ನು ಆಲೋಚಿಸಿರಿ. ನಿಮ್ಮ ನಿಮ್ಮ ತಂದೆಗಳನ್ನು ವಿಚಾರಿಸಿದರೆ ಅವರು ತಿಳಿಸುವರು; ಹಿರಿಯರನ್ನು ಕೇಳಿದರೆ ಅವರು ವಿವರಿಸುವರು; ಹೇಗಂದರೆ -


ನನ್ನ ಮನವೇ, ಯೆಹೋವನನ್ನು ಕೊಂಡಾಡು; ಆತನ ಉಪಕಾರಗಳಲ್ಲಿ ಒಂದನ್ನೂ ಮರೆಯಬೇಡ.


ನಮ್ಮನ್ನು ಐಗುಪ್ತದೇಶದೊಳಗಿಂದ ಬರಮಾಡಿ ಕಾಡಾಗಿಯೂ ಹಳ್ಳಕೊಳ್ಳವಾಗಿಯೂ ನಿರ್ಜಲವಾಗಿಯೂ ಘೋರಾಂಧಕಾರವಾಗಿಯೂ ಯಾರೂ ಹಾದುಹೋಗದೆಯೂ ಯಾರೂ ವಾಸಿಸದೆಯೂ ಇರುವ ಅರಣ್ಯದಲ್ಲಿ ನಡಿಸಿದ ಯೆಹೋವನು ಎಲ್ಲಿ ಎಂದು ಅವರು ಅಂದುಕೊಳ್ಳಲಿಲ್ಲವಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು