ಧರ್ಮೋಪದೇಶಕಾಂಡ 8:3 - ಕನ್ನಡ ಸತ್ಯವೇದವು J.V. (BSI)3 ಮನುಷ್ಯರು ಆಹಾರಮಾತ್ರದಿಂದಲ್ಲ, ಯೆಹೋವನ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೂ ಬದುಕುತ್ತಾರೆಂಬದು ನಿಮಗೆ ತಿಳಿಯುವಂತೆ ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ಹಸಿವೆಯಿಂದ ಬಳಲಿಸಿ ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಮನ್ನವನ್ನು ಕೊಟ್ಟು ಪೋಷಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಮನುಷ್ಯರು ಆಹಾರದಿಂದ ಮಾತ್ರವಲ್ಲ, ಯೆಹೋವನ ಬಾಯಿಂದ ಹೊರಡುವ ಪ್ರತಿಯೊಂದು ನುಡಿಯಿಂದಲೂ ಬದುಕುತ್ತಾರೆ ಎಂಬುದು ನಿಮಗೆ ತಿಳಿಯುವಂತೆ ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ಹಸಿವೆಯಿಂದ ಬಳಲಿಸಿ, ನಿಮಗೂ, ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಮನ್ನವನ್ನು ಕೊಟ್ಟು ಪೋಷಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಮಾನವರು ಆಹಾರ ಮಾತ್ರದಿಂದಲ್ಲ, ಸರ್ವೇಶ್ವರ ಆಡುವ ಪ್ರತಿಯೊಂದು ಮಾತಿನಿಂದಲೂ ಜೀವಿಸುತ್ತಾರೆಂಬುದು ನಿಮಗೆ ತಿಳಿಯುವಂತೆ ಅವರು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿದರು. ಹಸಿವೆಯಿಂದ ಬಳಲಿಸಿದರು. ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಮನ್ನವನ್ನು ಕೊಟ್ಟು ಪೋಷಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಯೆಹೋವನು ನಿಮ್ಮನ್ನು ದೀನರನ್ನಾಗಿ ಮಾಡಿ ನಿಮಗೆ ಹಸಿವೆಯಾಗುವಂತೆ ಮಾಡಿದನು. ಆ ಬಳಿಕ ಮನ್ನದ ಮೂಲಕ ನಿಮ್ಮ ಹಸಿವೆಯನ್ನು ನೀಗಿದನು. ಇದರ ವಿಷಯವಾಗಿ ನೀವು ಹಿಂದೆಂದೂ ಕೇಳಿರಲಿಲ್ಲ. ನಿಮ್ಮ ಪೂರ್ವಿಕರೂ ನೋಡಿರಲಿಲ್ಲ. ಆತನು ಹೀಗೇಕೆ ಮಾಡಿದನು? ಯಾಕೆಂದರೆ ಕೇವಲ ರೊಟ್ಟಿ ತಿಂದ ಮಾತ್ರದಿಂದ ಮನುಷ್ಯರು ಬದುಕದೆ ಯೆಹೋವನ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೇ ಬದುಕುವರೆಂಬುದನ್ನು ನೀವು ತಿಳಿಯಬೇಕೆಂದು ಹೀಗೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಮನುಷ್ಯನು ಜೀವಿಸುವುದು ರೊಟ್ಟಿಯಿಂದ ಮಾತ್ರವಲ್ಲ ಯೆಹೋವ ದೇವರ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೂ ಬದುಕುತ್ತಾನೆಂದು ನಿಮಗೆ ಬೋಧಿಸುವಂತೆ ದೇವರು ನಿಮ್ಮನ್ನು ಹಸಿವೆಯಿಂದ ಬಳಲುವಂತೆ ಮಾಡಿದರು. ನೀವು ತಿಳಿಯದಂಥ ಮತ್ತು ನಿಮ್ಮ ಪಿತೃಗಳು ತಿಳಿಯದಂಥ ಮನ್ನವನ್ನು ನಿಮಗೆ ಉಣ್ಣಲು ಕೊಟ್ಟರು. ಅಧ್ಯಾಯವನ್ನು ನೋಡಿ |