Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 8:7 - ಕನ್ನಡ ಸತ್ಯವೇದವು J.V. (BSI)

7 ನಿಮ್ಮ ದೇವರಾದ ಯೆಹೋವನು ಉತ್ತಮದೇಶಕ್ಕೆ ನಿಮ್ಮನ್ನು ಸೇರಿಸುತ್ತಾನೆ. ಆ ದೇಶದ ಹಳ್ಳಗಳಲ್ಲಿ ನೀರು ಯಾವಾಗಲೂ ಹರಿಯುತ್ತದೆ; ಮತ್ತು ತಗ್ಗುಗಳಲ್ಲಾಗಲಿ ಗುಡ್ಡಗಳಲ್ಲಾಗಲಿ ಎಲ್ಲಾ ಕಡೆಯೂ ಬಾವಿಗಳಲ್ಲಿಯೂ ಬುಗ್ಗೆಗಳಿಂದಲೂ ನೀರು ಉಕ್ಕುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿಮ್ಮ ದೇವರಾದ ಯೆಹೋವನು ಉತ್ತಮವಾದ ದೇಶಕ್ಕೆ ನಿಮ್ಮನ್ನು ಸೇರಿಸುತ್ತಾನೆ. ಆ ದೇಶದ ಹಳ್ಳಗಳಲ್ಲಿ ನೀರು ಯಾವಾಗಲೂ ಹರಿಯುತ್ತದೆ; ಮತ್ತು ತಗ್ಗುಗಳಲ್ಲಾಗಲಿ, ಗುಡ್ಡಗಳಲ್ಲಾಗಲಿ ಎಲ್ಲಾ ಕಡೆಯೂ ಬುಗ್ಗೆಗಳಿಂದ ನೀರು ಉಕ್ಕುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ನಿಮ್ಮ ದೇವರಾದ ಸರ್ವೇಶ್ವರ ಉತ್ತಮವಾದ ನಾಡಿಗೆ ನಿಮ್ಮನ್ನು ಸೇರಿಸುತ್ತಾರೆ. ಆ ನಾಡಿನ ಹಳ್ಳಗಳಲ್ಲಿ ನೀರು ಯಾವಾಗಲೂ ಹರಿಯುತ್ತಿರುತ್ತದೆ; ತಗ್ಗುಗಳಲ್ಲಾಗಲಿ, ಗುಡ್ಡಗಳಲ್ಲಿ ಆಗಲಿ, ಎಲ್ಲಾ ಕಡೆಯು ಬಾವಿಗಳಿಂದಲೂ ಬುಗ್ಗೆಗಳಿಂದಲೂ ನೀರು ಉಕ್ಕುತ್ತಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಿಮ್ಮ ದೇವರಾದ ಯೆಹೋವನು ಉತ್ತಮವಾದ ದೇಶವನ್ನು ನಿಮಗೆ ಕೊಡುತ್ತಿದ್ದಾನೆ. ಆ ದೇಶದಲ್ಲಿ ನೀರು ಸಮೃದ್ಧಿಯಾಗಿರುವುದು. ನೀರು ಕಣಿವೆಗಳಲ್ಲಿಯೂ ಬೆಟ್ಟಗಳಲ್ಲಿಯೂ ನೆಲದ ಮೇಲೂ ಹರಿದುಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಒಳ್ಳೆಯ ದೇಶಕ್ಕೆ ಬರಮಾಡುತ್ತಾರೆ. ಅದು ನೀರಿನ ಹಳ್ಳಗಳೂ, ತಗ್ಗುಗಳಲ್ಲಿಯೂ, ಬೆಟ್ಟದಲ್ಲಿಯೂ, ಉಕ್ಕುವ ಬುಗ್ಗೆಗಳೂ ಇರುವ ದೇಶವಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 8:7
17 ತಿಳಿವುಗಳ ಹೋಲಿಕೆ  

ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ತಪ್ಪಿಸುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಪೆರಿಜೀಯರೂ ಹಿವ್ವಿಯರೂ ಯೆಬೂಸಿಯರೂ ವಾಸವಾಗಿರುವ ದೇಶಕ್ಕೆ ನಡಿಸಿಕೊಂಡು ಹೋಗುವದಕ್ಕೂ ಇಳಿದುಬಂದಿದ್ದೇನೆ.


ಸಕಲದೇಶ ಶಿರೋಮಣಿಯಾದ ದೇಶವನ್ನು ನಿಮಗಾಗಿ ನೋಡಿದ್ದೇನೆ; ನಾನು ನಿಮ್ಮನ್ನು ಐಗುಪ್ತದೇಶದೊಳಗಿಂದ ಉದ್ಧರಿಸಿ ಹಾಲೂ ಜೇನೂ ಹರಿಯುವ ಆ ದೇಶಕ್ಕೆ ಸೇರಿಸುವೆನು ಎಂದು ಪ್ರಮಾಣಮಾಡಿ


ಅವನು ತನ್ನ ವಾಹನಪಶುವನ್ನು ದ್ರಾಕ್ಷಾಲತೆಗೆ ಕಟ್ಟುವನು, ರಾಜದ್ರಾಕ್ಷೆಗೆ ತನ್ನ ಕತ್ತೆಯನ್ನು ಬಿಗಿಯುವನು; ದ್ರಾಕ್ಷಾರಸದಲ್ಲಿ ತನ್ನ ಬಟ್ಟೆಗಳನ್ನು ಒಗೆಯುವನು, ದ್ರಾಕ್ಷಾರಸದಲ್ಲಿಯೇ ತನ್ನ ವಸ್ತ್ರಗಳನ್ನು ಅದ್ದಿ ತೊಳೆಯುವನು:


ಆತನ ಆಜ್ಞೆಗಳನ್ನು ಅನುಸರಿಸುವವರಾಗಿ ಆತನು ಹೇಳಿದ ಮಾರ್ಗದಲ್ಲೇ ನಡೆದು ಆತನಲ್ಲಿ ಭಯಭಕ್ತಿಯುಳ್ಳವರಾಗಿರಬೇಕು.


ಆ ದೇಶದಲ್ಲಿ ಗೋದಿ, ಜವೆಗೋದಿ, ದ್ರಾಕ್ಷೆ, ಅಂಜೂರ, ದಾಳಿಂಬ ಇವುಗಳು ಬೆಳೆಯುತ್ತವೆ; ಎಣ್ಣೆ ಮರಗಳೂ ಜೇನೂ ಸಿಕ್ಕುತ್ತವೆ.


ಸ್ವಲ್ಪ ಕಾಲವಾದನಂತರ ನಾನು ಬಂದು ನಿಮ್ಮನ್ನು ಧಾನ್ಯ ದ್ರಾಕ್ಷಾರಸ ಆಹಾರ ದ್ರಾಕ್ಷೇತೋಟ ಎಣ್ಣೇಮರ ಜೇನುತುಪ್ಪ ಇವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾದ ಇನ್ನೊಂದು ದೇಶಕ್ಕೆ ಕರಕೊಂಡುಹೋಗುವೆನು; ನೀವು ಸಾಯುವದಿಲ್ಲ, ಬದುಕುವಿರಿ. ಯೆಹೋವನು ನಮ್ಮನ್ನು ರಕ್ಷಿಸುವನು ಎಂದು ನಂಬಿಕೆಯನ್ನು ನಿಮ್ಮಲ್ಲಿ ಹುಟ್ಟಿಸುವದಕ್ಕೆ ಪ್ರಯತ್ನಿಸುವ ಹಿಜ್ಕೀಯನಿಗೆ ಕಿವಿಗೊಡಬೇಡಿರಿ.


ಮತ್ತು ಅವರು ಆ ರಮಣೀಯದೇಶವನ್ನು ತಿರಸ್ಕರಿಸಿ ಆತನ ಮಾತನ್ನು ನಂಬಲಿಲ್ಲ.


ನಾನು ನಿಮ್ಮನ್ನು ಫಲವತ್ತಾದ ಸೀಮೆಗೆ ಕರತಂದು ಅದರ ಫಲವನ್ನೂ ಸಾರವನ್ನೂ ಅನುಭವಿಸುವ ಹಾಗೆ ಮಾಡಿದೆನು; ಆದರೆ ನೀವು ಪ್ರವೇಶಿಸಿ ಆ ನನ್ನ ದೇಶವನ್ನು ಹೊಲೆಮಾಡಿ ನನ್ನ ಸ್ವಾಸ್ತ್ಯವನ್ನು ಅಸಹ್ಯಪಡಿಸಿದಿರಿ.


ಆಮೇಲೆ - ಅದು ಆ [ದೇವದಾರು ಇದ್ದ] ದೇಶದ ಒಂದು ಬೀಜವನ್ನು ತೆಗೆದುಕೊಂಡು ಫಲವತ್ತಾದ ನೀರಾವರಿಯ ಭೂವಿುಯಲ್ಲಿ ನೆಟ್ಟು ನೀರವಂಜಿಯ ಹಾಗೆ ಬೆಳೆಯಿಸಿತು.


ನೀವು ಅಲ್ಲಿಗೆ ಹೋಗುವದಾದರೆ ಅಲ್ಲಿನ ಜನರು ನಿರ್ಭಯದಿಂದ ಜೀವಿಸುವವರೆಂದೂ ಅವರ ದೇಶವು ಬಹು ವಿಸ್ತಾರವಾಗಿದೆಯೆಂದೂ ತಿಳಿದುಕೊಳ್ಳುವಿರಿ. ದೇವರು ಅದನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ; ಅದರಲ್ಲಿ ದೊರಕದಿರುವ ಪದಾರ್ಥಗಳು ಲೋಕದಲ್ಲೇ ಇಲ್ಲ ಅಂದರು.


ಬುಗ್ಗೆಗಳನ್ನು ತಗ್ಗುಗಳಿಗೆ ಬರಮಾಡುತ್ತೀ; ಅವು ಪರ್ವತಗಳ ನಡುವೆ ಹರಿದು ಹೋಗುತ್ತವೆ.


ನನ್ನ ಪ್ರಿಯನನ್ನೂ ಅವನ ತೋಟವನ್ನೂ ಕುರಿತು ನನ್ನ ಪ್ರಿಯನ ಒಂದು ಗೀತವನ್ನು ನಾನು ಹಾಡುವೆ, ಕೇಳಿರಿ. ಸಾರವತ್ತಾದ ಗುಡ್ಡದ ಮೇಲೆ ನನ್ನ ಪ್ರಿಯನಿಗೆ ದ್ರಾಕ್ಷೆಯ ತೋಟವಿತ್ತು.


ಸ್ವಲ್ಪ ಕಾಲವಾದನಂತರ ನಾನು ಬಂದು ನಿಮ್ಮನ್ನು ಧಾನ್ಯ ದ್ರಾಕ್ಷಾರಸ, ಆಹಾರ, ದ್ರಾಕ್ಷೇತೋಟ ಇವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾದ ಇನ್ನೊಂದು ದೇಶಕ್ಕೆ ಕರಕೊಂಡು ಹೋಗುವೆನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು