Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 9:1 - ಕನ್ನಡ ಸತ್ಯವೇದವು J.V. (BSI)

1 ಇಸ್ರಾಯೇಲ್ಯರೇ ಕೇಳಿರಿ. ನಿಮಗಿಂತ ಮಹಾಬಲಿಷ್ಠ ಜನಾಂಗಗಳನ್ನೂ ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ ಸ್ವಾಧೀನಮಾಡಿಕೊಳ್ಳುವದಕ್ಕೆ ನೀವು ಈ ಯೊರ್ದನ್ ಹೊಳೆಯನ್ನು ಇಂದು ದಾಟುವವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಸ್ರಾಯೇಲರೇ ಕೇಳಿರಿ, ನಿಮಗಿಂತ ಮಹಾ ಬಲಿಷ್ಠ ಜನಾಂಗಗಳನ್ನೂ ಮತ್ತು ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ ಸ್ವಾಧೀನ ಮಾಡಿಕೊಳ್ಳುವುದಕ್ಕೆ ನೀವು ಈ ಯೊರ್ದನ್ ನದಿಯನ್ನು ಇಂದು ದಾಟಲಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಇಸ್ರಯೇಲರೇ ಕೇಳಿ : ನಿಮಗಿಂತ ಮಹಾಬಲಿಷ್ಠ ಜನಾಂಗಗಳನ್ನು ಹಾಗು ಗಗನ ಮುಟ್ಟುವ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳಲು, ನೀವು ಈ ಜೋರ್ಡನ್ ನದಿಯನ್ನು ಇಂದು ದಾಟಲಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಇಸ್ರೇಲ್ ಜನರೇ, ಕೇಳಿರಿ. ಈ ದಿನ ನೀವು ಜೋರ್ಡನ್ ನದಿಯನ್ನು ದಾಟಿ ಆ ದೇಶವನ್ನು ಪ್ರವೇಶಿಸಿ ನಿಮಗಿಂತ ಬಲಿಷ್ಠವಾದ ಜನಾಂಗಗಳನ್ನು ಹೊಡೆದೋಡಿಸುವಿರಿ. ಅವರ ಪಟ್ಟಣಗಳು ದೊಡ್ಡದಾಗಿವೆ; ಅದರ ಗೋಡೆಗಳು ಆಕಾಶದಷ್ಟು ಎತ್ತರವಾಗಿವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇಸ್ರಾಯೇಲರೇ, ಕೇಳಿರಿ, ನೀವು ಹೋಗಿ ನಿಮಗಿಂತ ದೊಡ್ಡ, ಬಲಿಷ್ಠ ಜನಾಂಗಗಳನ್ನೂ, ಆಕಾಶದವರೆಗೆ ಭದ್ರಮಾಡಿದ ದೊಡ್ಡ ಪಟ್ಟಣಗಳನ್ನೂ ಸ್ವಾಧೀನಮಾಡಿಕೊಳ್ಳುವುದಕ್ಕೆ ಈ ಹೊತ್ತು ಯೊರ್ದನ್ ನದಿಯನ್ನು ದಾಟಲಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 9:1
24 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸ್ವಾಧೀನ ಮಾಡಿಕೊಳ್ಳುವದಕ್ಕೆ ನೀವು ಯೊರ್ದನ್ ಹೊಳೆಯನ್ನು ದಾಟುತ್ತೀರಲ್ಲಾ.


ಈಗ ನಿಮ್ಮ ಅನುಭವಕ್ಕೆ ಬಂದ ಪ್ರಕಾರ ನಿಮಗಿಂತ ಮಹಾಬಲಿಷ್ಠವಾದ ಜನಾಂಗಗಳನ್ನು ಹೊರಡಿಸಲೂ ಅವರ ದೇಶದಲ್ಲಿ ನಿಮ್ಮನ್ನು ಸೇರಿಸಿ ಆ ದೇಶವನ್ನು ನಿಮಗೇ ಸ್ವದೇಶವಾಗಿ ಕೊಡಲೂಬೇಕೆಂದು ಸಂಕಲ್ಪಿಸಿ ತಾನೇ ನಿಮ್ಮೊಂದಿಗಿದ್ದು ತನ್ನ ಅಪಾರ ಸಾಮರ್ಥ್ಯದಿಂದ ನಿಮ್ಮನ್ನು ಐಗುಪ್ತದೇಶದೊಳಗಿಂದ ಬರಮಾಡಿದನಲ್ಲಾ.


ನಾವು ಹೋಗಬೇಕಾದ ಆ ಸೀಮೆ ಎಂಥದೆಂದು ಆಲೋಚಿಸಿರಿ; ಅಲ್ಲಿ ಹೋಗಿದ್ದ ನಮ್ಮ ಸಹೋದರರು ನಮಗೆ - ಆ ದೇಶದ ಜನರು ನಮಗಿಂತ ಹೆಚ್ಚಾಗಿಯೂ ಉದ್ದವಾಗಿಯೂ ಇದ್ದಾರೆ; ಅವರಿರುವ ಪಟ್ಟಣಗಳು ದೊಡ್ಡವೂ ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಳ್ಳವೂ ಆಗಿವೆ; ಅಲ್ಲಿ ಉನ್ನತಪುರುಷರನ್ನು ನೋಡಿದೆವೆಂದು ಹೇಳಿ ನಮ್ಮ ಧೈರ್ಯವನ್ನು ಕೆಡಿಸಿದ್ದಾರೆ ಅಂದುಕೊಳ್ಳುತ್ತಿದ್ದಿರಿ.


ನೀವು ಪಾಳೆಯದ ಎಲ್ಲಾ ಕಡೆಗೂ ಹೋಗಿ ಜನರಿಗೆ - ನೀವು ಇನ್ನು ಮೂರು ದಿವಸಗಳಲ್ಲಿ ಈ ಯೊರ್ದನ್ ಹೊಳೆಯನ್ನು ದಾಟಿ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವಾಸ್ತ್ಯವಾಗಿ ಕೊಡುವ ದೇಶವನ್ನು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗಬೇಕು. ಆದದರಿಂದ ನಿಮಗೋಸ್ಕರ ಆಹಾರವನ್ನು ಸಿದ್ಧಮಾಡಿಕೊಳ್ಳಿರಿ ಎಂದು ಹೇಳಬೇಕು ಅಂದನು.


ಆತನು ಆ ಜನಾಂಗಗಳನ್ನೆಲ್ಲಾ ನಿಮ್ಮ ಎದುರಿನಿಂದ ಹೊರಡಿಸುವನು; ನಿಮಗಿಂತಲೂ ಮಹಾಬಲಿಷ್ಠ ಜನಾಂಗಗಳ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ.


ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿ ಸಂಖ್ಯೆಯಲ್ಲಿಯೂ ಬಲದಲ್ಲಿಯೂ ನಿಮಗೆ ಮೀರುವ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು, ಯೆಬೂಸಿಯರು ಎಂಬ ಏಳು ಜನಾಂಗಗಳನ್ನು


ಆ ಕಾಲದಲ್ಲಿ ನಾನು ನಿಮಗೆ - ನಿಮ್ಮ ದೇವರಾದ ಯೆಹೋವನು ಈ ಪ್ರದೇಶವನ್ನೇ ನಿಮಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿದ್ದಾನೆ. ಆದರೆ ನಿಮ್ಮ ಭಟರೆಲ್ಲರೂ ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಾದ ಇಸ್ರಾಯೇಲ್ಯರ ಮುಂದೆ ಹೊರಟು ಹೊಳೇ ದಾಟಿ ಹೋಗಬೇಕು.


ಜನರು ಮೊದಲನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ಯೊರ್ದನನ್ನು ದಾಟಿ ಯೆರಿಕೋವಿನ ಪೂರ್ವ ಪ್ರಾಂತದಲ್ಲಿರುವ ಗಿಲ್ಗಾಲೆಂಬಲ್ಲಿ ಇಳುಕೊಂಡರು.


ನೀವು ನಿಮ್ಮ ದೇವರಾದ ಯೆಹೋವನ ಮಂಜೂಷದ ಮುಂದಾಗಿ ಯೊರ್ದನಿನ ಮಧ್ಯಕ್ಕೆ ಹೋಗಿ ಇಸ್ರಾಯೇಲ್ ಕುಲಗಳ ಸಂಖ್ಯೆಗೆ ಸರಿಯಾಗುವಂತೆ ಪ್ರತಿಯೊಬ್ಬನು ಒಂದೊಂದು ಕಲ್ಲನ್ನು ಹೆಗಲ ಮೇಲೆ ಹೊತ್ತುಕೊಂಡು ಬನ್ನಿರಿ.


ಮೇಲಣಿಂದ ಬರುವ ನೀರು ಬಹುದೂರದಲ್ಲಿದ್ದ ಚಾರೆತಾನಿನ ಹತ್ತಿರವಿರುವ ಆದಾಮ್ ಊರಿನ ತನಕ ರಾಶಿಯಾಗಿ ನಿಂತುಕೊಂಡಿತು. ಕೆಳಗಣ ನೀರು ಅರಾಬಾ ತಗ್ಗಿನಲ್ಲಿರುವ ಲವಣ ಸಮುದ್ರಕ್ಕೆ ಹರಿದುಹೋಯಿತು. ಜನರು ಯೆರಿಕೋವಿನ ಎದುರಿನಲ್ಲಿ ಹೊಳೆದಾಟಿದರು.


ಜನರು ಯೊರ್ದನ್ ಹೊಳೆಯನ್ನು ದಾಟುವದಕ್ಕೋಸ್ಕರ ತಮ್ಮ ಡೇರೆಗಳನ್ನು ಕಿತ್ತುಕೊಂಡು ಹೊರಟರು. ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಅವರ ಮುಂದೆ ಇದ್ದರು.


ಮತ್ತು ಯಾಜಕರಿಗೆ - ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದಾಗಿ ನಡೆದು ಹೊಳೆ ದಾಟಿರಿ ಎಂದು ಆಜ್ಞಾಪಿಸಲು ಅವರು ಆ ಮಂಜೂಷವನ್ನು ಹೊತ್ತುಕೊಂಡು ಅವರ ಮುಂದಾಗಿ ಹೋದರು.


ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಪ್ರವೇಶಿಸುವದಕ್ಕೆ ನೀವು ಯೊರ್ದನ್ ಹೊಳೆಯನ್ನು ದಾಟುವಾಗ ಅಂದರೆ ನಿಮ್ಮ ಪಿತೃಗಳ ದೇವರಾದ ಯೆಹೋವನು ತಾನು ವಾಗ್ದಾನ ಮಾಡಿದಂತೆ ನಿಮಗೆ ಕೊಡುವ ಹಾಲೂ ಜೇನೂ ಹರಿಯುವ ದೇಶವನ್ನು ಪ್ರವೇಶಿಸುವದಕ್ಕೆ ನೀವು ಯೊರ್ದನ್ ಹೊಳೆಯನ್ನು ದಾಟುವಾಗ ನೀವು ದೊಡ್ಡ ಕಲ್ಲುಗಳನ್ನು ನಿಲ್ಲಿಸಿ ಅವುಗಳಿಗೆ ಗಿಲಾವುಮಾಡಿಸಿ ಈ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ಅವುಗಳ ಮೇಲೆ ಬರಿಸಬೇಕು.


ಅವರು ಬೆಟ್ಟವನ್ನು ಹತ್ತಿ ಕಾನಾನ್‍ದೇಶದ ದಕ್ಷಿಣಪ್ರಾಂತ್ಯವನ್ನು ದಾಟಿ ಹೆಬ್ರೋನಿಗೆ ಬಂದರು. ಅಲ್ಲಿ ಅಹೀಮನ್, ಶೇಷೈ, ತಲ್ಮೈ ಎಂಬ ಉನ್ನತರಾದ ಪುರುಷರು ಇದ್ದರು. ಹೆಬ್ರೋನ್ ಪಟ್ಟಣವು ಐಗುಪ್ತದೇಶದಲ್ಲಿರುವ ಚೋವನ್ ಪಟ್ಟಣಕ್ಕಿಂತ ಏಳು ವರುಷ ಮುಂಚೆ ಕಟ್ಟಲ್ಪಟ್ಟದ್ದು.


ಒಂದು ಪಟ್ಟಣವನ್ನೂ ಆಕಾಶವನ್ನು ಮುಟ್ಟುವ ಗೋಪುರವನ್ನೂ ಕಟ್ಟಿ ದೊಡ್ಡ ಹೆಸರನ್ನು ಪಡೆಯೋಣ; ಹೀಗೆ ಮಾಡಿದರೆ ಭೂವಿುಯ ಮೇಲೆಲ್ಲಾ ಚದರುವದಕ್ಕೆ ಆಸ್ಪದವಾಗುವದಿಲ್ಲ ಅಂದುಕೊಂಡರು. ಕಟ್ಟುವಾಗ ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನೂ ಸುಣ್ಣಕ್ಕೆ ಬದಲಾಗಿ ಕಲ್ಲರಗನ್ನೂ ಉಪಯೋಗಿಸಿದರು.


ನಿಮ್ಮ ದೇವರಾದ ಯೆಹೋವನು ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣ ಮಾಡಿಕೊಟ್ಟ ದೇಶದಲ್ಲಿ ನಿಮ್ಮನ್ನು ಸೇರಿಸಿದಾಗ ನೀವು ಕಟ್ಟದ ಒಳ್ಳೆಯ ದೊಡ್ಡ ಪಟ್ಟಣಗಳನ್ನೂ


ಆ ವೃಕ್ಷವು ಬೆಳೆದು ಬಲಗೊಂಡಿತ್ತು. ಅದರ ತುದಿಯು ಆಕಾಶವನ್ನು ಮುಟ್ಟಿತ್ತು. ಅದು ಭೂಲೋಕದ ಕಟ್ಟಕಡೆಗೂ ಕಾಣಿಸುತ್ತಿತ್ತು.


ಮೋಶೆ ಬೆಟ್ಟದಿಂದ ಇಳಿಯದೆ ತಡಮಾಡಿದ್ದನ್ನು ಇಸ್ರಾಯೇಲ್ಯರು ನೋಡಿ ಆರೋನನ ಬಳಿಗೆ ಕೂಡಿಬಂದು - ಏಳು; ನಮ್ಮ ಮುಂದುಗಡೆಯಲ್ಲಿ ಹೋಗುವದಕ್ಕೆ ನಮಗೆ ದೇವರುಗಳನ್ನು ಮಾಡಿಕೊಡು; ಐಗುಪ್ತದೇಶದಿಂದ ನಮ್ಮನ್ನು ಕರಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ ಎಂದು ಹೇಳಿದರು.


ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸು - ನೀವು ಯೊರ್ದನ್ ಹೊಳೆಯನ್ನು ದಾಟಿ ಕಾನಾನ್ ದೇಶವನ್ನು ಸೇರಿದಾಗ


ಇಸ್ರಾಯೇಲ್ಯರೇ, ಕೇಳಿರಿ; ನೀವು ಬದುಕಿಕೊಂಡು ನಿಮ್ಮ ಪಿತೃಗಳ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಂತೆ ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನಿಸಿ ಅನುಸರಿಸಬೇಕು.


ನಿಮ್ಮ ದೇವರಾದ ಯೆಹೋವನು ಕೊಡುವ ದೇಶವನ್ನು ನಿಮ್ಮ ಸಹೋದರರು ಸ್ವಾಧೀನಮಾಡಿಕೊಂಡು ಅವರೂ ನಿಮ್ಮಂತೆ ವಿಶ್ರಾಂತಿಹೊಂದಿದನಂತರ ಯೆಹೋವನ ಸೇವಕನಾದ ಮೋಶೆಯು ನಿಮಗೆ ಯೊರ್ದನ್ ಹೊಳೆಯ ಪೂರ್ವದಿಕ್ಕಿನಲ್ಲಿ ಸ್ವಾಸ್ತ್ಯವಾಗಿ ಕೊಟ್ಟ ದೇಶಕ್ಕೆ ತಿರಿಗಿ ಬಂದು ಅದನ್ನು ಅನುಭವಿಸಬಹುದು ಎಂಬದೇ.


ಹೀಗಿರಲಾಗಿ ಯೆಹೋವನು ಆ ದಿನದಲ್ಲಿ ಸೂಚಿಸಿದಂಥ ಈ ಪರ್ವತಪ್ರದೇಶವನ್ನು ನನಗೆ ಕೊಡು. ಇದರಲ್ಲಿ ಉನ್ನತ ಪುರುಷರಿರುತ್ತಾರೆಂದೂ ಇದರ ಪಟ್ಟಣಗಳು ದೊಡ್ಡವೂ ಕೋಟೆಕೊತ್ತಲುಳ್ಳವುಗಳೂ ಆಗಿವೆ ಎಂದೂ ಆ ಕಾಲದಲ್ಲಿ ನೀನು ಕೇಳಿದಿಯಲ್ಲಾ. ಅವರೆಲ್ಲರನ್ನೂ ಓಡಿಸಿ ಬಿಡುವದಕ್ಕೋಸ್ಕರ ಯೆಹೋವನು ತನ್ನ ಮಾತಿಗನುಸಾರವಾಗಿ ನನಗೆ ಸಹಾಯ ಮಾಡುವನೆಂದು ನಿರೀಕ್ಷಿಸಿಕೊಂಡಿದ್ದೇನೆ ಅಂದನು.


ಆಹಾ, ಅವರಿಗೆ ಎದುರಾಗಿ ನಿಂತ ಅಮೋರಿಯರನ್ನು ನಾನೇ ಧ್ವಂಸಮಾಡಿದೆನು; ಆ ಶತ್ರುವು ದೇವದಾರು ಮರದಷ್ಟು ಎತ್ತರವಾಗಿ ಅಲ್ಲೋನ್ ಮರದ ಹಾಗೆ ದೃಢವಾಗಿ ಇದ್ದರೂ ಮೇಲೆ ಅದರ ಫಲವನ್ನು, ಕೆಳಗೆ ಅದರ ಬುಡವನ್ನು ನಾಶಪಡಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು