Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 9:11 - ಕನ್ನಡ ಸತ್ಯವೇದವು J.V. (BSI)

11 ಆ ನಾಲ್ವತ್ತು ದಿನಗಳು ಕಳೆದ ಮೇಲೆ ಯೇಹೋವನು ತನ್ನ ನಿಬಂಧನೆಯಿರುವ ಆ ಎರಡು ಕಲ್ಲಿನ ಹಲಿಗೆಗಳನ್ನು ನನಗೆ ಕೊಟ್ಟು ನೀನು ಬೇಗ ಇಲ್ಲಿಂದ ಇಳಿದುಹೋಗು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆ ನಲ್ವತ್ತು ದಿನಗಳು ಕಳೆದ ಮೇಲೆ ಯೆಹೋವನು ತನ್ನ ಆಜ್ಞೆಗಳಿರುವ ಆ ಎರಡು ಕಲ್ಲಿನ ಹಲಿಗೆಗಳನ್ನು ನನಗೆ ಕೊಟ್ಟು, “ನೀನು ಬೇಗ ಇಲ್ಲಿಂದ ಹೋಗು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆ ನಲವತ್ತು ದಿನಗಳು ಕಳೆದ ಮೇಲೆ ಸರ್ವೇಶ್ವರ ತಮ್ಮ ನಿಬಂಧನೆಯಿದ್ದ ಆ ಎರಡು ಕಲ್ಲಿನ ಹಲಗೆಗಳನ್ನು ನನಗೆ ಕೊಟ್ಟು, ‘ನೀನು ಬೇಗ ಇಲ್ಲಿಂದ ಇಳಿದುಹೋಗು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಹಾಗೆ ನಲವತ್ತು ದಿನಗಳ ಅಂತ್ಯದಲ್ಲಿ ಯೆಹೋವನು ಒಡಂಬಡಿಕೆಯನ್ನು ಬರೆದಿದ್ದ ಆ ಎರಡು ಕಲ್ಲಿನ ಹಲಗೆಗಳನ್ನು ನನಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಲವತ್ತು ದಿವಸ ಹಗಲು ರಾತ್ರಿಗಳಾದ ಮೇಲೆ ಯೆಹೋವ ದೇವರು ನನಗೆ ಒಡಂಬಡಿಕೆಯ ಹಲಗೆಗಳಾದ ಆ ಎರಡು ಕಲ್ಲಿನ ಹಲಗೆಗಳನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 9:11
6 ತಿಳಿವುಗಳ ಹೋಲಿಕೆ  

ಯೆಹೋವನು ನಿಮ್ಮ ಸಂಗಡ ಮಾಡಿದ ನಿಬಂಧನೆಯನ್ನು ಬರೆದ ಆ ಕಲ್ಲಿನ ಹಲಿಗೆಗಳನ್ನು ತೆಗೆದುಕೊಳ್ಳುವದಕ್ಕೆ ನಾನು ಬೆಟ್ಟವನ್ನು ಹತ್ತಿದ್ದಾಗ ನಾನು ಅನ್ನಪಾನಗಳನ್ನು ಬಿಟ್ಟು ಹಗಲಿರುಳು ನಾಲ್ವತ್ತು ದಿನ ಆ ಬೆಟ್ಟದಲ್ಲಿದ್ದೆನು.


ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದ ತಗಡನ್ನು ಮಡಾಯಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು; ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆ ಬರೆದಿದ್ದ ಕಲ್ಲಿನ ಹಲಿಗೆಗಳೂ ಇದ್ದವು;


ಅವರು ಯೆಹೋವನ ಬೆಟ್ಟವನ್ನು ಬಿಟ್ಟು ಮೂರು ದಿನದ ಪ್ರಯಾಣದಷ್ಟು ದೂರ ಹೋದರು. ಇಳುಕೊಳ್ಳತಕ್ಕ ಸ್ಥಳವನ್ನು ನೋಡುವದಕ್ಕೋಸ್ಕರ ಯೆಹೋವನ ಒಡಂಬಡಿಕೆಯ ಮಂಜೂಷವು ಆ ಮೂರು ದಿವಸ ಅವರ ಮುಂದಾಗಿ ಹೋಗುತ್ತಿತ್ತು.


ಮೋಶೆ ಬೆಟ್ಟದಿಂದ ಇಳಿಯದೆ ತಡಮಾಡಿದ್ದನ್ನು ಇಸ್ರಾಯೇಲ್ಯರು ನೋಡಿ ಆರೋನನ ಬಳಿಗೆ ಕೂಡಿಬಂದು - ಏಳು; ನಮ್ಮ ಮುಂದುಗಡೆಯಲ್ಲಿ ಹೋಗುವದಕ್ಕೆ ನಮಗೆ ದೇವರುಗಳನ್ನು ಮಾಡಿಕೊಡು; ಐಗುಪ್ತದೇಶದಿಂದ ನಮ್ಮನ್ನು ಕರಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ ಎಂದು ಹೇಳಿದರು.


ಯೆಹೋವನು ಸೀನಾಯಿಬೆಟ್ಟದಲ್ಲಿ ಮೋಶೆಯ ಸಂಗಡ ಮಾತಾಡುವದನ್ನು ಮುಗಿಸಿದ ಮೇಲೆ ಅವನಿಗೆ ಆ ಎರಡು ಆಜ್ಞಾಶಾಸನಗಳನ್ನು ಕೊಟ್ಟನು. ಅವು ದೇವರ ಕೈಯಿಂದ ಕೆತ್ತಲ್ಪಟ್ಟ ಶಿಲಾಶಾಸನಗಳೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು