Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 9:13 - ಕನ್ನಡ ಸತ್ಯವೇದವು J.V. (BSI)

13 ಅದಲ್ಲದೆ ಆತನು ನನಗೆ - ಈ ಜನರ ಸ್ವಭಾವವನ್ನು ನಾನು ನೋಡುತ್ತಾ ಬಂದಿದ್ದೇನೆ; ಇವರು ನನ್ನ ಆಜ್ಞೆಗೆ ಒಳಗಾಗದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದಲ್ಲದೆ ಆತನು ನನಗೆ, “ಈ ಜನರ ಸ್ವಭಾವವನ್ನು ನಾನು ನೋಡುತ್ತಾ ಬಂದಿದ್ದೇನೆ; ಇವರು ನನ್ನ ಆಜ್ಞೆಗೆ ಅವಿಧೇಯರಾದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 “ಅದಲ್ಲದೆ ಅವರು ನನಗೆ, ‘ಈ ಜನರ ಸ್ವಭಾವವನ್ನು ನಾನು ನೋಡುತ್ತಾ ಬಂದಿದ್ದೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ಅಲ್ಲದೆ ಯೆಹೋವನು ನನಗೆ, ‘ನಾನು ಈ ಜನರನ್ನು ಗಮನಿಸುತ್ತಿದ್ದೇನೆ. ಇವರು ತುಂಬಾ ಹಠಮಾರಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಇದಲ್ಲದೆ ಯೆಹೋವ ದೇವರು ನನಗೆ, “ನಾನು ಈ ಜನರನ್ನು ನೋಡಿದ್ದೇನೆ. ಇಗೋ, ಇದು ಆಜ್ಞೆಗೆ ವಿಧೇಯವಾಗದ ಜನಾಂಗವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 9:13
12 ತಿಳಿವುಗಳ ಹೋಲಿಕೆ  

ಆದದರಿಂದ ನೀವು ಆಜ್ಞೆಗೆ ಮಣಿಯದ ನಿಮ್ಮ ದುಸ್ವಭಾವವನ್ನು ಬಿಟ್ಟುಬಿಟ್ಟು ನಿಮ್ಮ ಹೃದಯದಲ್ಲೇ ಸುನ್ನತಿ ಮಾಡಿಕೊಳ್ಳಿರಿ.


ನಿಮ್ಮ ದೇವರಾದ ಯೆಹೋವನು ಆ ಉತ್ತಮದೇಶವನ್ನು ನಿಮಗೆ ಸ್ವದೇಶವಾಗಿ ಕೊಡುವದು ನಿಮ್ಮ ಪುಣ್ಯಫಲವಲ್ಲವೆಂದು ಚೆನ್ನಾಗಿ ತಿಳಿದುಕೊಳ್ಳಿರಿ. ನೀವು ಆತನ ಆಜ್ಞೆಗೆ ಮಣಿಯದ ಜನರೇ ಆಗಿದ್ದೀರಿ.


ಅವರು ದೇವರಾದ ಯೆಹೋವನನ್ನು ನಂಬದೆ ಆತನ ಆಜ್ಞೆಗಳಿಗೆ ಮಣಿಯದೆ ಇದ್ದ ತಮ್ಮ ಹಿರಿಯರಂತೆ ಆತನಿಗೆ ಕಿವಿಗೊಡದೆ ಹೋದರು;


ಯಾಕಂದರೆ ನೀವು ಹಟಹಿಡಿದು ಆಜ್ಞೆಗೆ ಒಳಗಾಗದವರೆಂಬದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಯೆಹೋವನಿಗೆ ವಿರೋಧವಾಗಿ ತಿರುಗಿ ಬಿದ್ದಿದ್ದೀರಿ; ನಾನು ಹೋದ ತರುವಾಯ ನೀವು ತಿರುಗಿ ಬೀಳುವದು ಮತ್ತಷ್ಟು ನಿಶ್ಚಯ.


ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರ, ಸೂಳೆಗಾರ, ಸುಳ್ಳುಸಾಕ್ಷಿ, ಕೂಲಿಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನೂ ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು, ಅಂತು ನನಗಂಜದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರಸಾಕ್ಷಿಯಾಗಿರುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ.


ನಾನು ಇಸ್ರಾಯೇಲ್ ಮನೆತನದಲ್ಲಿ ಅಸಹ್ಯವನ್ನು ನೋಡಿದ್ದೇನೆ; ಎಫ್ರಾಯೀವಿುನೊಳಗೆ ಸೂಳೆತನವು ನಡೆಯುತ್ತದೆ, ಇಸ್ರಾಯೇಲು ಹೊಲೆಯಾಗಿದೆ.


ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಹೇಕಾರಗಳನ್ನು, ನಿನ್ನ ಕೆಟ್ಟ ಸೂಳೆಗಾರಿಕೆಯನ್ನು, ಅಂತು ಗುಡ್ಡಗಳಲ್ಲಿಯೂ ಬೈಲಿನಲ್ಲಿಯೂ ನೀನು ನಡಿಸಿದ ಅಸಹ್ಯಕಾರ್ಯಗಳನ್ನು ನೋಡಿದ್ದೇನೆ. ಯೆರೂಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ನೀನು ಶುದ್ಧಳಾಗಲು ಇನ್ನೆಷ್ಟು ಕಾಲಬೇಕು?


ನನ್ನ ಹೆಸರುಗೊಂಡಿರುವ ಈ ಆಲಯವು ನಿಮ್ಮ ದೃಷ್ಟಿಯಲ್ಲಿ ಕಳ್ಳರ ಗವಿಯಾಯಿತೋ? ಆಹಾ, ನಾನೇ, ನಾನೇ ಇದನ್ನೆಲ್ಲಾ ನೋಡಿದ್ದೇನೆ ಎಂಬದು ಯೆಹೋವನಾದ ನನ್ನ ನುಡಿ.


[ಆತನು ಆಜ್ಞಾಪಿಸುವದೇನಂದರೆ - ] ಪ್ರಜೆಗಳಿರಾ, ಇಸ್ರಾಯೇಲ್ಯರೇ, ದೇವರಾದ ನಾನೇ ನಿಮ್ಮ ದೇವರು; ನಿಮಗೆ ಖಂಡಿತವಾಗಿ ಹೇಳುತ್ತೇನೆ, ಕೇಳಿರಿ.


ನಾನು ಇಳಿದು ಹೋಗಿ ನನಗೆ ಮುಟ್ಟಿದ ಮೊರೆಯಂತೆಯೇ ಅವರು ಮಾಡಿದರೋ ಇಲ್ಲವೋ ಎಂದು ನೋಡಿ ತಿಳುಕೊಳ್ಳುತ್ತೇನೆ ಅಂದನು.


ನರಪುತ್ರರು ಕಟ್ಟುತ್ತಿದ್ದ ಆ ಪಟ್ಟಣವನ್ನೂ ಗೋಪುರವನ್ನೂ ನೋಡುವದಕ್ಕೆ ಯೆಹೋವನು ಇಳಿದು ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು