Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 9:21 - ಕನ್ನಡ ಸತ್ಯವೇದವು J.V. (BSI)

21 ಮತ್ತು ನೀವು ಯಾವದರ ಮೂಲಕ ಪಾಪವನ್ನು ಮಾಡಿದ್ದಿರೋ ಆ ಬಸವನನ್ನು ನಾನು ತೆಗೆದುಕೊಂಡು ಬೆಂಕಿಯಿಂದ ಸುಟ್ಟು ಒಡೆದು ಅರೆದು ಧೂಳುಮಾಡಿ ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ಬೀಸಾಡಿಬಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಮತ್ತು ನೀವು ಯಾವುದರ ಮೂಲಕ ಪಾಪವನ್ನು ಮಾಡಿದ್ದಿರೋ ಆ ಬಸವನನ್ನು ನಾನು ತೆಗೆದುಕೊಂಡು ಬೆಂಕಿಯಿಂದ ಸುಟ್ಟು, ಒಡೆದು, ಅರೆದು ಧೂಳುಮಾಡಿ, ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ಬೀಸಾಡಿಬಿಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಮತ್ತು ನಿಮ್ಮ ಪಾಪಕ್ಕೆ ಕಾರಣವಾದ ಆ ಹೋರಿಕರುವನ್ನು ನಾನು ತೆಗೆದುಕೊಂಡು, ಬೆಂಕಿಯಿಂದ ಸುಟ್ಟು, ಒಡೆದು, ಅರೆದು, ಧೂಳುಮಾಡಿ ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ಬಿಸಾಡಿಬಿಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನೀವು ಮಾಡಿದ ಬಂಗಾರದ ಬಸವನನ್ನು ತೆಗೆದುಕೊಂಡು ಚೂರುಚೂರು ಮಾಡಿ, ಬೆಂಕಿಯಲ್ಲಿ ಸುಟ್ಟುಬಿಟ್ಟೆನು. ಮತ್ತೆ ಅದನ್ನು ಒಡೆದು ಧೂಳನ್ನಾಗಿ ಮಾಡಿ ಆ ಧೂಳನ್ನು ಬೆಟ್ಟದಿಂದ ಹರಿಯುತ್ತಿದ್ದ ನದಿಯಲ್ಲಿ ಬಿಸಾಡಿಬಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಇದಲ್ಲದೆ ನೀವು ಯಾವದರ ಮೂಲಕ ಪಾಪವನ್ನು ಮಾಡಿದ್ದೀರೋ ಆ ಚಿನ್ನದ ಕರುವನ್ನು ನಾನು ತೆಗೆದುಕೊಂಡು, ಬೆಂಕಿಯಿಂದ ಸುಟ್ಟು, ಒಡೆದು, ಅರೆದು, ಧೂಳುಮಾಡಿ, ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ಬಿಸಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 9:21
9 ತಿಳಿವುಗಳ ಹೋಲಿಕೆ  

ಜನರು ಮಾಡಿಸಿಕೊಂಡಿದ್ದ ಬಸವನನ್ನು ಅವನು ಹಿಡಿದು ಬೆಂಕಿಯಿಂದ ಸುಟ್ಟು ಅರೆದು ಪುಡಿಪುಡಿಮಾಡಿ ನೀರಿನ ಮೇಲೆ ಚೆಲ್ಲಿ ಇಸ್ರಾಯೇಲ್ಯರಿಗೆ ಆ ನೀರನ್ನು ಕುಡಿಸಿದನು.


ನೀವು ನಿಮ್ಮ ಕೈಯಿಂದ ರೂಪಿಸಿಕೊಂಡಿರುವ ಬೆಳ್ಳಿಯ ಮತ್ತು ಬಂಗಾರದ ವಿಗ್ರಹಗಳನ್ನು ಆ ದಿನದಲ್ಲಿ ಪ್ರತಿಯೊಬ್ಬನೂ ಬಿಸಾಟುಬಿಡುವನು; ಅವುಗಳನ್ನು ರೂಪಿಸಿದ್ದು ಪಾಪವಷ್ಟೆ.


ಎಫ್ರಾಯೀಮು ಯಜ್ಞವೇದಿಗಳನ್ನು ಹೆಚ್ಚೆಚ್ಚಾಗಿ ಕಟ್ಟಿ ಪಾಪಮಾಡಿದೆ; ಕಟ್ಟಿದ ಯಜ್ಞವೇದಿಗಳೇ ಅದಕ್ಕೆ ಪಾಪವಾಗಿ ಪರಿಣವಿುಸಿವೆ.


ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನೂ ಎರಕದ ನಿಮ್ಮ ಬೊಂಬೆಗಳ ಬಂಗಾರದ ಮುಲಾಮನ್ನೂ ನೀವು ಹೊಲಸು ಮಾಡಿ ಆ ವಿಗ್ರಹಗಳನ್ನು - ತೊಲಗಿ ಎಂದು ಹೊಲೆಯಂತೆ ಬಿಸಾಟುಬಿಡುವಿರಿ.


ಅದಲ್ಲದೆ ಯೆಹೋವನು ಆರೋನನ ಮೇಲೆ ಬಹಳ ಸಿಟ್ಟುಗೊಂಡು ಅವನನ್ನೂ ನಾಶಮಾಡಬೇಕೆಂದಿದ್ದದರಿಂದ ನಾನು ಅವನಿಗೋಸ್ಕರವಾಗಿಯೂ ಆ ಕಾಲದಲ್ಲಿ ಪ್ರಾರ್ಥಿಸಿದೆನು.


ಅದರ ಎರಕದ ಬೊಂಬೆಗಳೆಲ್ಲಾ ಒಡೆಯಲ್ಪಡುವವು; ಅದರ ಸಮಸ್ತ ಸಂಪಾದನೆಯು ಸುಟ್ಟುಹೋಗುವದು, ಅದರ ಸಕಲ ವಿಗ್ರಹಗಳನ್ನು ಹಾಳುಮಾಡುವೆನು; ಅದು ಸೂಳೆತನದ ಸಂಪಾದನೆಯಾಗಿ ಕೂಡಿಸಿಟ್ಟುಕೊಂಡವುಗಳು, ಸೂಳೆತನದ ಸಂಪಾದನೆಯಾಗಿಯೇ ಪರರಪಾಲಾಗುವವು.


ಇವನ ತಾಯಿಯಾದ ಮಾಕಳು ಅಶೇರದೇವತೆಯ ಒಂದು ಅಸಹ್ಯವಾದ ಮೂರ್ತಿಯನ್ನು ಮಾಡಿಸಿದದರಿಂದ ಆಸನು ಆಕೆಯನ್ನು ಗದ್ದುಗೆಯಿಂದ ತಳ್ಳಿ ಆ ಮೂರ್ತಿಯನ್ನು ಕಡಿದು ಕಿದ್ರೋನ್‍ಹಳ್ಳದ ಹತ್ತಿರ ಸುಡಿಸಿದನು.


ಅಶೇರಸ್ತಂಭಗಳನ್ನೂ ವಿಗ್ರಹಗಳನ್ನೂ ಒಡಿಸಿ ಪುಡಿಪುಡಿಮಾಡಿಸಿ ಇಸ್ರಾಯೇಲ್‍ದೇಶದಲ್ಲಿದ್ದ ಸೂರ್ಯಸ್ತಂಭಗಳನ್ನು ಕಡಿಸಿ ಯೆರೂಸಲೇವಿುಗೆ ಹಿಂದಿರುಗಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು