ಧರ್ಮೋಪದೇಶಕಾಂಡ 9:26 - ಕನ್ನಡ ಸತ್ಯವೇದವು J.V. (BSI)26 ನಾನು ಆತನನ್ನು ಬೇಡಿಕೊಳ್ಳುತ್ತಾ - ಕರ್ತನಾದ ಯೆಹೋವನೇ, ನೀನು ನಿನ್ನ ಮಹಿಮೆಯಿಂದ ರಕ್ಷಿಸಿ ನಿನ್ನ ಭುಜಬಲದಿಂದ ಐಗುಪ್ತ್ಯರಿಂದ ಬಿಡುಗಡೆಮಾಡಿದ ನಿನ್ನ ಸ್ವಕೀಯ ಜನರನ್ನು ನಾಶಮಾಡಬೇಡ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ನಾನು ಆತನನ್ನು ಬೇಡಿಕೊಳ್ಳುತ್ತಾ, “ಕರ್ತನಾದ ಯೆಹೋವನೇ, ನೀನು ನಿನ್ನ ಮಹಿಮೆಯಿಂದ ರಕ್ಷಿಸಿ ನಿನ್ನ ಭುಜಬಲದಿಂದ ಐಗುಪ್ತ್ಯರಿಂದ ಬಿಡುಗಡೆಮಾಡಿದ ನಿನ್ನ ಸ್ವಕೀಯ ಜನರನ್ನು ನಾಶಮಾಡಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ನಾನು ಅವರನ್ನು ಬೇಡಿಕೊಳ್ಳುತ್ತಾ, ‘ಸರ್ವೇಶ್ವರಾ, ದೇವರೇ, ನೀವು ನಿಮ್ಮ ಮಹಿಮೆಯಿಂದ ರಕ್ಷಿಸಿ, ನಿಮ್ಮ ಭುಜಬಲ ಪ್ರಯೋಗಿಸಿ ಈಜಿಪ್ಟಿನಿಂದ ಬಿಡುಗಡೆಮಾಡಿದ ನಿಮ್ಮ ಸ್ವಕೀಯ ಜನರನ್ನು ನಾಶಮಾಡಬೇಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ‘ನನ್ನ ಒಡೆಯನೇ, ಯೆಹೋವನೇ, ನಿನ್ನ ಜನರನ್ನು ನೀನು ನಾಶಮಾಡಬೇಡ. ಅವರು ನಿನ್ನ ಜನಾಂಗ. ನಿನ್ನ ಪರಾಕ್ರಮದಿಂದ ನೀನು ಈಜಿಪ್ಟಿನಿಂದ ಅವರನ್ನು ಬಿಡಿಸಿ ಹೊರತಂದಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ನಾನು ಯೆಹೋವ ದೇವರಿಗೆ ಪ್ರಾರ್ಥನೆಮಾಡಿ, “ಸಾರ್ವಭೌಮ ಯೆಹೋವ ದೇವರೇ, ನೀವು ನಿಮ್ಮ ಮಹಿಮೆಯಿಂದ ವಿಮೋಚಿಸಿ, ಬಲವಾದ ಕೈಯಿಂದ ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದ ನಿಮ್ಮ ಜನರನ್ನು ನಾಶಮಾಡಬೇಡಿ. ಅಧ್ಯಾಯವನ್ನು ನೋಡಿ |
ಆ ಪ್ರವಾದಿಗೆ ಅಥವಾ ಆ ಕನಸುಕಂಡವನಿಗೆ ಮರಣ ಶಿಕ್ಷೆಯಾಗಬೇಕು. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ ಐಗುಪ್ತದೇಶದೊಳಗಿಂದ ಕರತಂದ ನಿಮ್ಮ ದೇವರಾದ ಯೆಹೋವನಿಗೆ ವಿರೋಧವಾಗಿ ಅವನು ದ್ರೋಹದ ಮಾತುಗಳನ್ನಾಡಿ ನಿಮ್ಮ ದೇವರಾದ ಯೆಹೋವನು ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕೆಂದಿದ್ದನಲ್ಲಾ. ಅವನನ್ನು ಕೊಲ್ಲಿಸಿ ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.