ಧರ್ಮೋಪದೇಶಕಾಂಡ 9:4 - ಕನ್ನಡ ಸತ್ಯವೇದವು J.V. (BSI)4 ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿದನಂತರ ನೀವು ಮನಸ್ಸಿನಲ್ಲಿ - ಯೆಹೋವನು ನಮ್ಮನ್ನು ಈ ದೇಶಕ್ಕೆ ಕರತಂದು ಅದನ್ನು ನಮಗೆ ಸ್ವಾಧೀನಪಡಿಸಿದ್ದು ನಮ್ಮ ಪುಣ್ಯಫಲವೇ ಅಂದುಕೊಳ್ಳಬಾರದು. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೇ ಯೆಹೋವನು ನಿಮ್ಮ ಎದುರಿನಿಂದ ಅವರನ್ನು ಹೊರಡಿಸುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿದ ನಂತರ ನೀವು ನಿಮ್ಮ ಮನಸ್ಸಿನಲ್ಲಿ, “ಯೆಹೋವನು ನಮ್ಮನ್ನು ಈ ದೇಶಕ್ಕೆ ಕರೆತಂದು ಅದನ್ನು ನಮಗೆ ಸ್ವಾಧೀನಪಡಿಸಿದ್ದಕ್ಕೆ ಕಾರಣ ನಮ್ಮ ಸದಾಚಾರವೇ” ಅಂದುಕೊಳ್ಳಬಾರದು. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೇ ಯೆಹೋವನು ನಿಮ್ಮ ಎದುರಿನಿಂದ ಅವರನ್ನು ಹೊರಡಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 “ನಿಮ್ಮ ದೇವರಾದ ಸರ್ವೇಶ್ವರ ಅವರನ್ನು ನಿಮ್ಮ ಬಳಿಯಿಂದ ಹೊರಡಿಸಿದನಂತರ ನೀವು ಮನಸ್ಸಿನಲ್ಲೇ, ‘ಸರ್ವೇಶ್ವರ ನಮ್ಮನ್ನು ಈ ನಾಡಿಗೆ ಕರೆತಂದು ಅದನ್ನು ನಮಗೆ ಸ್ವಾಧೀನಪಡಿಸಿದ್ದು ನಮ್ಮ ಪುಣ್ಯಫಲವೇ’ ಎಂದುಕೊಳ್ಳಬಾರದು. ಆ ಜನಾಂಗಗಳ ದುರ್ನಡತೆಯ ಕಾರಣದಿಂದಲೇ ಸರ್ವೇಶ್ವರ ನಿಮ್ಮ ಬಳಿಯಿಂದ ಅವರನ್ನು ಹೊರದಬ್ಬುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 “ಅಲ್ಲಿಯ ಜನರನ್ನು ದೇವರಾದ ಯೆಹೋವನು ಹೊಡೆದೋಡಿಸುವನು. ಆದರೆ ನೀವು ನಿಮ್ಮ ಮನಸ್ಸಿನಲ್ಲಿ, ‘ನಾವು ನೀತಿವಂತರಾಗಿದುದ್ದರಿಂದ ಮತ್ತು ಒಳ್ಳೆಯವರಾಗಿದ್ದುದರಿಂದ ಆತನು ನಮ್ಮನ್ನು ಈ ಒಳ್ಳೆಯ ದೇಶಕ್ಕೆ ತಂದನು’ ಎಂದು ನೆನಸಿಕೊಳ್ಳಬೇಡಿ. ಅದು ಕಾರಣವಲ್ಲ. ಅಲ್ಲಿಯ ಜನರು ಬಹು ಕೆಟ್ಟವರಾಗಿದ್ದ ಕಾರಣ ಯೆಹೋವನು ಅವರನ್ನು ಹೊರಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ನಿಮ್ಮ ಮುಂದೆ ತೆಗೆದುಹಾಕಿದಾಗ, “ಯೆಹೋವ ದೇವರು ನಮ್ಮನ್ನು ಈ ದೇಶವನ್ನು ಸ್ವಾಧೀನಪಡಿಸಲು ಕರೆದುಕೊಂಡು ಬಂದಿದ್ದು ನಮ್ಮ ನೀತಿಯ ನಿಮಿತ್ತವೇ,” ಎಂದು ನೀವು ನಿಮ್ಮ ಹೃದಯದಲ್ಲಿ ಹೇಳಿಕೊಳ್ಳಬಾರದು. ಆ ಜನಾಂಗಗಳ ಕೆಟ್ಟತನದ ನಿಮಿತ್ತವೇ ಯೆಹೋವ ದೇವರು ಅವರನ್ನು ನಿಮ್ಮ ಮುಂದೆ ಹೊರಡಿಸುತ್ತಾರೆ. ಅಧ್ಯಾಯವನ್ನು ನೋಡಿ |
ನೀವು ಅವರ ದೇಶಕ್ಕೆ ಬಂದು ಅದನ್ನು ಸ್ವಾಧೀನಮಾಡಿಕೊಳ್ಳುವದಕ್ಕೆ ನಿಮ್ಮ ಪುಣ್ಯವೇ ಆಗಲಿ ನಿಮ್ಮ ಸುಸ್ವಭಾವವೇ ಆಗಲಿ ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೂ ನಿಮ್ಮ ದೇವರಾದ ಯೆಹೋವನು ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದದರಿಂದಲೂ ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುತ್ತಾನೆ.