Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 9:7 - ಕನ್ನಡ ಸತ್ಯವೇದವು J.V. (BSI)

7 ನೀವು ಅರಣ್ಯದಲ್ಲಿ ನಿಮ್ಮ ದೇವರಾದ ಯೆಹೋವನಿಗೆ ಕೋಪಹುಟ್ಟಿಸಿದ್ದನ್ನು ನೆನಪುಮಾಡಿಕೊಳ್ಳಿರಿ; ಅದನ್ನು ಮರೆಯಬೇಡಿರಿ. ನೀವು ಐಗುಪ್ತದೇಶವನ್ನು ಬಿಟ್ಟಂದಿನಿಂದ ಈ ಸ್ಥಳಕ್ಕೆ ಬಂದ ದಿನದವರೆಗೂ ಯೆಹೋವನ ಆಜ್ಞೆಗಳನ್ನು ಧಿಕ್ಕರಿಸುವವರಾಗಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀವು ಅರಣ್ಯದಲ್ಲಿ ನಿಮ್ಮ ದೇವರಾದ ಯೆಹೋವನಿಗೆ ಕೋಪಹುಟ್ಟಿಸಿದ್ದನ್ನು ನೆನಪುಮಾಡಿಕೊಳ್ಳಿರಿ; ಅದನ್ನು ಮರೆಯಬೇಡಿರಿ. ನೀವು ಐಗುಪ್ತದೇಶವನ್ನು ಬಿಟ್ಟಂದಿನಿಂದ ಈ ಸ್ಥಳಕ್ಕೆ ಬಂದ ದಿನದವರೆಗೂ ಯೆಹೋವನ ಆಜ್ಞೆಗಳನ್ನು ಧಿಕ್ಕರಿಸುವವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ನೀವು ಮರುಭೂಮಿಯಲ್ಲಿ ನಿಮ್ಮ ದೇವರಾದ ಸರ್ವೇಶ್ವರನಿಗೆ ಕೋಪ ಹುಟ್ಟಿಸಿದ್ದನ್ನು ನೆನಪುಮಾಡಿಕೊಳ್ಳಿ. ಅದನ್ನು ಮರೆಯಬೇಡಿ. ನೀವು ಈಜಿಪ್ಟ್ ದೇಶವನ್ನು ಬಿಟ್ಟಂದಿನಿಂದ ಈ ಸ್ಥಳಕ್ಕೆ ಬಂದ ದಿನದವರೆಗೂ ಸರ್ವೇಶ್ವರನ ಆಜ್ಞೆಗಳನ್ನು ಧಿಕ್ಕರಿಸುತ್ತಾ ಬಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ನೀವು ಅರಣ್ಯದಲ್ಲಿ ಪ್ರಯಾಣ ಮಾಡುತ್ತಿದ್ದಾಗ ನಿಮ್ಮ ದೇವರಾದ ಯೆಹೋವನನ್ನು ನೀವು ಸಿಟ್ಟಿಗೆಬ್ಬಿಸಿದ್ದನ್ನು ಮರೆಯಬೇಡಿರಿ. ನೀವು ಈಜಿಪ್ಟ್ ದೇಶವನ್ನು ಬಿಟ್ಟುಬಂದಂದಿನಿಂದ ಈ ದಿನದ ತನಕವೂ ಆತನ ಮಾತನ್ನು ಅನುಸರಿಸಲು ನಿರಾಕರಿಸಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನೀವು ಮರುಭೂಮಿಯಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಕೋಪವನ್ನೆಬ್ಬಿಸಿದ್ದನ್ನು ಜ್ಞಾಪಕಮಾಡಿಕೊಳ್ಳಿರಿ. ಮರೆಯಬೇಡಿರಿ. ನೀವು ಈಜಿಪ್ಟ್ ದೇಶದಿಂದ ಹೊರಟ ದಿವಸ ಮೊದಲ್ಗೊಂಡು ಈ ಸ್ಥಳಕ್ಕೆ ಬರುವವರೆಗೆ ಯೆಹೋವ ದೇವರಿಗೆ ವಿರೋಧವಾಗಿ ತಿರುಗಿಬೀಳುತ್ತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 9:7
33 ತಿಳಿವುಗಳ ಹೋಲಿಕೆ  

ಆಗ ಅವರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತಾಡುತ್ತಾ - ನೀವು ನಮ್ಮನ್ನು ಈ ಮರಳುಕಾಡಿನಲ್ಲಿ ಕೊಲ್ಲಬೇಕೆಂದು ಐಗುಪ್ತದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ; ಈ ನಿಸ್ಸಾರವಾದ ಆಹಾರವನ್ನು ತಿಂದು ತಿಂದು ನಮಗೆ ಬೇಸರವಾಯಿತೆಂದು ಹೇಳುವವರಾದರು.


ಅರಣ್ಯದಲ್ಲಿ ಇಸ್ರಾಯೇಲ್ಯರ ಸಮೂಹವೆಲ್ಲಾ ಮೋಶೆ ಆರೋನರ ಮೇಲೆ ಗುಣುಗುಟ್ಟಿ


ಅವರು ಮೋಶೆಗೆ - ಐಗುಪ್ತದೇಶದಲ್ಲಿ ಸಮಾಧಿಗಳಿಲ್ಲವಾದದರಿಂದ ಅರಣ್ಯದಲ್ಲಿ ಸಾಯಲಿ ಎಂಬದಾಗಿ ನಮ್ಮನ್ನು ಇಲ್ಲಿಗೆ ಕರಕೊಂಡು ಬಂದಿಯೇನು? ಯಾಕೆ ನಮಗೆ ಈ ಪ್ರಕಾರ ಮಾಡಿ ಐಗುಪ್ತದೇಶದಿಂದ ಕರಕೊಂಡು ಬಂದಿ?


ಆ ಸ್ತ್ರೀಯರು ತಮ್ಮ ದೇವತೆಗಳಿಗೆ ಮಾಡಿದ ಔತಣದ ಯಜ್ಞಗಳಿಗೆ ಇಸ್ರಾಯೇಲ್ಯರನ್ನು ಕರಿಸಲು ಇವರು ಆ ಭೋಜನವನ್ನು ಮಾಡಿ ಅವರ ದೇವತೆಗಳಿಗೆ ನಮಸ್ಕರಿಸುವವರಾದರು.


ಅವರ ಮಧ್ಯದಲ್ಲಿದ್ದ ಇತರ ಜನರು ಮಾಂಸವನ್ನು ಆಶಿಸಿದರು. ಇಸ್ರಾಯೇಲ್ಯರು ಕೂಡ ತಿರಿಗಿ ಅತ್ತುಕೊಂಡು - ಮಾಂಸವು ನಮಗೆ ಹೇಗೆ ಲಭಿಸೀತು;


ನೀವು ಜನ್ಮದಿಂದ ಅನ್ಯಜನರಾಗಿದ್ದೀರಿ; ಶರೀರದಲ್ಲಿ ಕೈಯಿಂದ ಸುನ್ನತಿಮಾಡಿಸಿಕೊಂಡು ಸುನ್ನತಿಯವರೆನಿಸಿಕೊಳ್ಳುವವರು ನಿಮ್ಮನ್ನು ಸುನ್ನತಿಯಿಲ್ಲದವರೆಂದು ಹೇಳುತ್ತಾರೆ.


ನಾನಂತೂ ಅಪೊಸ್ತಲರಲ್ಲಿ ಕನಿಷ್ಠನಷ್ಟೆ; ನಾನು ದೇವರ ಸಭೆಯನ್ನು ಹಿಂಸೆಪಡಿಸಿದ್ದರಿಂದ ಅಪೊಸ್ತಲನೆನಿಸಿಕೊಳ್ಳುವದಕ್ಕೆ ಯೋಗ್ಯನಲ್ಲ.


ಆಗ ನೀವು ನಿಮ್ಮ ದುರ್ಮಾರ್ಗ ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿಮ್ಮ ಅಪರಾಧಗಳ ಮತ್ತು ಅಸಹ್ಯಕಾರ್ಯಗಳ ನಿವಿುತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.


ನೀವು ನಿಮ್ಮನ್ನು ಹೊಲಸುಮಾಡಿಕೊಂಡಿರುವ ನಿಮ್ಮ ನಡತೆಯನ್ನೂ ನಿಮ್ಮ ಎಲ್ಲಾ ಕಾರ್ಯಗಳನ್ನೂ ಅಲ್ಲಿ ಜ್ಞಾಪಕಕ್ಕೆ ತಂದುಕೊಂಡು ನೀವು ನಡಿಸಿರುವ ಸಕಲ ದುಷ್ಕೃತ್ಯಗಳ ನಿವಿುತ್ತ ನಿಮ್ಮನ್ನು ನೋಡಿ ನೀವೇ ಅಸಹ್ಯಪಡುವಿರಿ.


ಯಾಕಂದರೆ ನೀವು ಹಟಹಿಡಿದು ಆಜ್ಞೆಗೆ ಒಳಗಾಗದವರೆಂಬದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಯೆಹೋವನಿಗೆ ವಿರೋಧವಾಗಿ ತಿರುಗಿ ಬಿದ್ದಿದ್ದೀರಿ; ನಾನು ಹೋದ ತರುವಾಯ ನೀವು ತಿರುಗಿ ಬೀಳುವದು ಮತ್ತಷ್ಟು ನಿಶ್ಚಯ.


ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಈ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿದ್ದನ್ನೂ ನೀವು ತನ್ನ ಆಜ್ಞೆಗಳನ್ನು ಕೈಕೊಳ್ಳುವವರೋ ಅಲ್ಲವೋ ಎಂದು ತಿಳಿದುಕೊಳ್ಳುವದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನೂ ನೆನಪಿಗೆ ತಂದುಕೊಳ್ಳಿರಿ.


ಕುಡಿಯುವದಕ್ಕೆ ನೀರಿಲ್ಲದ ಕಾರಣ ಜನರು ಮೋಶೆಯ ಸಂಗಡ ವಾದಿಸುತ್ತಾ - ನಮಗೆ ಕುಡಿಯುವದಕ್ಕೆ ನೀರು ದೊರಕಿಸಿಕೊಡಬೇಕು ಎಂದು ಹೇಳಿದಾಗ ಮೋಶೆ - ನೀವು ನನ್ನ ಸಂಗಡ ವಾದಿಸುವದೇನು? ಯೆಹೋವನನ್ನು ಯಾಕೆ ಪರೀಕ್ಷಿಸುತ್ತೀರಿ ಎಂದು ಅವರಿಗೆ ಹೇಳಿದನು.


ಫರೋಹನು ಸಮೀಪಿಸುತ್ತಿರುವಾಗ ಇಸ್ರಾಯೇಲ್ಯರು ಕಣ್ಣೆತ್ತಿ ತಮ್ಮ ಹಿಂದೆ ಹೊರಟುಬಂದಿದ್ದ ಐಗುಪ್ತ್ಯರನ್ನು ಕಂಡು ಬಹಳ ಭಯಪಟ್ಟವರಾಗಿ ಯೆಹೋವನಿಗೆ ಮೊರೆಯಿಟ್ಟರು.


ನೀವು ಆತನಲ್ಲಿ ಲಕ್ಷ್ಯವಿಟ್ಟು ಆತನ ಮಾತಿಗೆ ಕಿವಿಗೊಡಬೇಕು; ಆತನಿಗೆ ಅವಿಧೇಯರಾಗಿರಬಾರದು; ಅವಿಧೇಯರಾದರೆ ನಿಮ್ಮನ್ನು ಕ್ಷವಿುಸಲಾರನು; ನನ್ನ ನಾಮಮಹಿಮೆ ಆತನಲ್ಲಿ ಇರುವದು.


ಈ ಮನುಷ್ಯರೆಲ್ಲರು ಐಗುಪ್ತದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿರುವ ಮಹತ್ಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದರೂ ನನ್ನ ಮಾತಿಗೆ ಕಿವಿಗೊಡದೆ ಪದೇಪದೇ ನನ್ನನ್ನು ಪರೀಕ್ಷಿಸಿದದರಿಂದ


ತರುವಾಯ ಯೆಹೋವನು ಮೋಶೆಗೆ - ಆರೋನನ ಕೋಲನ್ನು ತಿರಿಗಿ ಆಜ್ಞಾಶಾಸನಗಳ ಮುಂದೆ ಇಡಬೇಕು. ಅದು ತಿರುಗಿಬೀಳುವವರಿಗೆ ದೃಷ್ಟಾಂತವಾಗಿ ಅಲ್ಲೇ ಇರಬೇಕು; ಇವರು ಇನ್ನು ಮುಂದೆ ನನಗೆ ವಿರೋಧವಾಗಿ ಗುಣುಗುಟ್ಟಿ ನಾಶವಾಗದಂತೆ ನೀನು ಹೀಗೆ ಮಾಡಬೇಕು ಎಂದು ಆಜ್ಞಾಪಿಸಿದನು.


ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿದನಂತರ ನೀವು ಮನಸ್ಸಿನಲ್ಲಿ - ಯೆಹೋವನು ನಮ್ಮನ್ನು ಈ ದೇಶಕ್ಕೆ ಕರತಂದು ಅದನ್ನು ನಮಗೆ ಸ್ವಾಧೀನಪಡಿಸಿದ್ದು ನಮ್ಮ ಪುಣ್ಯಫಲವೇ ಅಂದುಕೊಳ್ಳಬಾರದು. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೇ ಯೆಹೋವನು ನಿಮ್ಮ ಎದುರಿನಿಂದ ಅವರನ್ನು ಹೊರಡಿಸುತ್ತಾನೆ.


ನನಗೆ ನಿಮ್ಮ ಪರಿಚಯವಾದಂದಿನಿಂದಲೂ ನೀವು ಯೆಹೋವನ ಆಜ್ಞೆಯನ್ನು ಉಲ್ಲಂಘಿಸುವವರೇ.


ನೀನು ಕೇಳಿಲ್ಲ, ತಿಳಿದೂ ಇಲ್ಲ, ಪುರಾತನಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ; ನೀನು ದೊಡ್ಡ ವಂಚಕನು, ಆಗರ್ಭದ್ರೋಹಿ ಎನಿಸಿಕೊಂಡವನು ಎಂದು ನಾನು ತಿಳಿದುಕೊಂಡಿದ್ದೆನಷ್ಟೆ.


ನನ್ನ ಮಾತುಗಳನ್ನು ಕೇಳಲೊಲ್ಲದಿದ್ದ ತಮ್ಮ ಮೂಲ ಪಿತೃಗಳ ದುಷ್ಕೃತ್ಯಗಳ ಕಡೆಗೆ ತಿರುಗಿಕೊಂಡು ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸಿದ್ದಾರೆ; ಇಸ್ರಾಯೇಲ್ ವಂಶದವರೂ ಯೆಹೂದ ವಂಶದವರೂ ನಾನು ಅವರ ಪಿತೃಗಳ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿದ್ದಾರೆ.


ಇಸ್ರಾಯೇಲ್ ವಂಶವೂ ಯೆಹೂದ ವಂಶವೂ ತಮ್ಮ ಚಿಕ್ಕಂದಿನಿಂದ ನನ್ನ ಚಿತ್ತಕ್ಕೆ ವಿರುದ್ಧವಾಗಿಯೇ ನಡೆಯುತ್ತಾ ಬಂದಿವೆ; ಹೌದು, ಇಸ್ರಾಯೇಲ್ ವಂಶದವರು ತಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ರೇಗಿಸುತ್ತಲೇ ಬಂದಿದ್ದಾರೆ. ಇದು ಯೆಹೋವನ ನುಡಿ.


ಅವರಾದರೋ ನನ್ನ ಮಾತನ್ನು ಕೇಳಲೊಲ್ಲದೆ ನನ್ನ ಮೇಲೆ ತಿರುಗಿಬಿದ್ದರು; ತಮ್ಮ ಕಣ್ಣಿಗೆ ಇಷ್ಟವಾದ ಅಸಹ್ಯವಸ್ತುಗಳನ್ನು ಯಾರೂ ಬಿಸಾಟುಬಿಡಲಿಲ್ಲ. ಐಗುಪ್ತದ ವಿಗ್ರಹಗಳನ್ನು ತ್ಯಜಿಸಲಿಲ್ಲ; ಆಗ ನಾನು ಇವರ ಮೇಲೆ ಐಗುಪ್ತದೇಶದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ನನ್ನ ಕೋಪವನ್ನು ತೀರಿಸಿಕೊಳ್ಳುವೆನು ಅಂದುಕೊಂಡೆನು.


ನಿಮ್ಮ ಪಿತೃಗಳು, ಯೆಹೂದದ ಅರಸರು, ಅವರ ಹೆಂಡಿರು, ನೀವು, ನಿಮ್ಮ ಹೆಂಡಿರು, ಇವರೆಲ್ಲರೂ ಯೆಹೂದದೇಶದಲ್ಲಿಯೂ ಯೆರೂಸಲೇವಿುನ ಬೀದಿಗಳಲ್ಲಿಯೂ ನಡಿಸಿದ ದುರಾಚಾರಗಳನ್ನು ಮರೆತುಬಿಟ್ಟಿರೋ?


ಆದರೆ ಇಸ್ರಾಯೇಲ್ ವಂಶದವರು ಅರಣ್ಯದಲ್ಲಿ ನನ್ನ ಮೇಲೆ ತಿರುಗಿಬಿದ್ದರು. ಕೈಕೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿದರು, ನಾನು ನೇವಿುಸಿದ ಸಬ್ಬತ್ ದಿನಗಳನ್ನು ವಿಶೇಷವಾಗಿ ಹೊಲೆಮಾಡಿದರು; ಆಗ ನಾನು ಅವರ ಮೇಲೆ ಅರಣ್ಯದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ಇವರನ್ನು ಧ್ವಂಸಮಾಡುವೆನು ಅಂದುಕೊಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು