Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 9:9 - ಕನ್ನಡ ಸತ್ಯವೇದವು J.V. (BSI)

9 ಯೆಹೋವನು ನಿಮ್ಮ ಸಂಗಡ ಮಾಡಿದ ನಿಬಂಧನೆಯನ್ನು ಬರೆದ ಆ ಕಲ್ಲಿನ ಹಲಿಗೆಗಳನ್ನು ತೆಗೆದುಕೊಳ್ಳುವದಕ್ಕೆ ನಾನು ಬೆಟ್ಟವನ್ನು ಹತ್ತಿದ್ದಾಗ ನಾನು ಅನ್ನಪಾನಗಳನ್ನು ಬಿಟ್ಟು ಹಗಲಿರುಳು ನಾಲ್ವತ್ತು ದಿನ ಆ ಬೆಟ್ಟದಲ್ಲಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೋವನು ನಿಮ್ಮ ಸಂಗಡ ಮಾಡಿದ ನಿಬಂಧನೆಯನ್ನು ಬರೆದ ಆ ಕಲ್ಲಿನ ಹಲಿಗೆಗಳನ್ನು ತೆಗೆದುಕೊಳ್ಳುವುದಕ್ಕೆ ನಾನು ಬೆಟ್ಟವನ್ನು ಹತ್ತಿದ್ದಾಗ ನಾನು ಅನ್ನ ಪಾನಗಳನ್ನು ಬಿಟ್ಟು ಹಗಲಿರುಳು ನಲ್ವತ್ತು ದಿನ ಆ ಬೆಟ್ಟದಲ್ಲಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಸರ್ವೇಶ್ವರ ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಬರೆದ ಆ ಕಲ್ಲಿನ ಹಲಗೆಗಳನ್ನು ತೆಗೆದುಕೊಳ್ಳುವುದಕ್ಕೆ ನಾನು ಬೆಟ್ಟವನ್ನು ಹತ್ತಿದಾಗ ಅನ್ನಪಾನಗಳನ್ನು ಬಿಟ್ಟು ಹಗಲಿರುಳು ನಲವತ್ತು ದಿನ ಆ ಬೆಟ್ಟದಲ್ಲಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಾನು ಕಲ್ಲಿನ ಹಲಗೆಗಳನ್ನು ತೆಗೆದುಕೊಂಡು ಬರಲು ಬೆಟ್ಟದ ಮೇಲೇರಿದ್ದೆನು. ಯೆಹೋವ ದೇವರು ನಿಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆ ಆ ಹಲಗೆಯ ಮೇಲೆ ಬರೆಯಲ್ಪಟ್ಟಿತ್ತು. ನಾನು ಆ ಬೆಟ್ಟದ ಮೇಲೆ ನಲವತ್ತು ದಿವಸ ಹಗಲಿರುಳು ಕಳೆದೆನು. ನಾನು ಅನ್ನವನ್ನಾಗಲಿ ನೀರನ್ನಾಗಲಿ ತೆಗೆದುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆ ಕಲ್ಲಿನ ಹಲಗೆಗಳು ಅಂದರೆ, ಯೆಹೋವ ದೇವರು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯ ಹಲಗೆಗಳನ್ನು ತೆಗೆದುಕೊಳ್ಳುವುದಕ್ಕೆ ನಾನು ಬೆಟ್ಟದ ಮೇಲೆ ಏರಿದಾಗ, ನಲವತ್ತು ದಿವಸ ಹಗಲುರಾತ್ರಿ ಬೆಟ್ಟದಲ್ಲಿದ್ದೆನು. ರೊಟ್ಟಿ ತಿನ್ನಲಿಲ್ಲ, ನೀರೂ ಕುಡಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 9:9
17 ತಿಳಿವುಗಳ ಹೋಲಿಕೆ  

ಮೋಶೆ ಆ ಬೆಟ್ಟದಲ್ಲಿ ಯೆಹೋವನ ಸನ್ನಿಧಿಯಲ್ಲಿ ಹಗಲಿರಳು ನಾಲ್ವತ್ತು ದಿನ ಇದ್ದನು. ಅವನು ಏನೂ ಊಟಮಾಡಲಿಲ್ಲ, ಏನೂ ಕುಡಿಯಲಿಲ್ಲ. ಆತನು ನಿಬಂಧನದ ವಾಕ್ಯಗಳನ್ನು ಅಂದರೆ ಹತ್ತು ಆಜ್ಞೆಗಳನ್ನು ಆ ಕಲ್ಲಿನ ಹಲಿಗೆಗಳ ಮೇಲೆ ಬರೆದನು.


ಮೋಶೆ ಆ ಮೇಘದೊಳಗೆ ಪ್ರವೇಶಿಸಿ ಬೆಟ್ಟವನ್ನೇರಿದನು. ಅವನು ಆ ಬೆಟ್ಟದಲ್ಲಿ ಹಗಲಿರುಳು ನಾಲ್ವತ್ತು ದಿವಸ ಇದ್ದನು.


ಅವನು ಎದ್ದು ತಿಂದು ಕುಡಿದು ಅದರ ಬಲದಿಂದ ನಾಲ್ವತ್ತು ದಿವಸ ಹಗಲಿರುಳು ಪ್ರಯಾಣಮಾಡಿ ದೇವಗಿರಿಯಾದ ಹೋರೇಬಿಗೆ ಮುಟ್ಟಿ


ಮೋಶೆ ಬೆಟ್ಟವನ್ನು ಹತ್ತಿದಾಗ ಮೇಘವು ಅದನ್ನು ಮುಚ್ಚಿಕೊಂಡಿತು.


ಯೆಹೋವನು ಮೋಶೆಗೆ - ನೀನು ಬೆಟ್ಟವನ್ನು ಹತ್ತಿ ಬಂದು ನನ್ನ ಹತ್ತಿರದಲ್ಲೇ ಇರು; ನೀನು ಆ ಧರ್ಮಶಾಸ್ತ್ರವನ್ನೂ ಆಜ್ಞೆಗಳನ್ನೂ ಜನರಿಗೆ ಬೋಧಿಸುವಂತೆ ನಾನು ಅವುಗಳನ್ನು ಬರೆದಿರುವ ಶಿಲಾಶಾಸನಗಳನ್ನು ನಿನಗೆ ಕೊಡುತ್ತೇನೆ ಎಂದು ಹೇಳಲಾಗಿ


ಆತನು ನಾಲ್ವತ್ತು ದಿವಸ ಹಗಲಿರುಳು ಉಪವಾಸವಿದ್ದ ತರುವಾಯ ಆತನಿಗೆ ಹಸಿವಾಯಿತು.


ನೀವು ಹೀಗೆ ಅಪರಾಧಮಾಡಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡಿಸಿ ಆತನನ್ನು ಕೋಪಗೊಳಿಸಿದ ಕಾರಣ ನಾನು ಮೊದಲಿನಂತೆ ಅನ್ನಪಾನಗಳನ್ನು ಬಿಟ್ಟು ನಾಲ್ವತ್ತು ದಿನಗಳು ಹಗಲಿರುಳು ಯೆಹೋವನ ಸನ್ನಿಧಿಯಲ್ಲೇ ಬಿದ್ದಿದ್ದೆನು.


ಈ ಸಂಗತಿಗಳು ಉಪಮಾನವಾಗಿವೆ; ಹೇಗಂದರೆ, ಆ ಇಬ್ಬರು ಸ್ತ್ರೀಯರು ಎರಡು ಒಡಂಬಡಿಕೆಗಳೇ. ಒಂದು ಒಡಂಬಡಿಕೆ ಸೀನಾಯಿ ಪರ್ವತದಿಂದ ಉತ್ಪನ್ನವಾಗಿ ದಾಸತ್ವದಲ್ಲಿರಬೇಕಾದ ಮಕ್ಕಳನ್ನು ಹೆರುವಂಥದು; ಅದೇ ಹಾಗರ್.


ಕತ್ತಿಬಿಲ್ಲುಗಳಿಂದ ಸ್ವಾಧೀನಪಡಿಸಿಕೊಂಡು ಸೆರೆಯಾಗಿ ತಂದವರನ್ನು ನೀನು ಸಂಹರಿಸುವಿಯೋ? ಇವರಿಗೆ ಅನ್ನಪಾನಗಳನ್ನು ಕೊಡು; ಉಂಡು ಕುಡಿದು ತಮ್ಮ ಯಜಮಾನನ ಬಳಿಗೆ ಹಿಂದಿರುಗಿ ಹೋಗಲಿ ಎಂದು ಉತ್ತರಕೊಟ್ಟನು.


ಆಗ ನಾನು ಆ ಎರಡು ಆಜ್ಞಾಶಾಸನಗಳನ್ನು ನನ್ನ ಎರಡು ಕೈಗಳಲ್ಲಿ ಹಿಡಿದುಕೊಂಡು ಬೆಂಕಿಯಿಂದ ಉರಿಯುವ ಆ ಬೆಟ್ಟದಿಂದ ಇಳಿದು ಬಂದು ನೋಡಲಾಗಿ


ಯೆಹೋವನು ಸೀನಾಯಿಬೆಟ್ಟದಲ್ಲಿ ಮೋಶೆಯ ಸಂಗಡ ಮಾತಾಡುವದನ್ನು ಮುಗಿಸಿದ ಮೇಲೆ ಅವನಿಗೆ ಆ ಎರಡು ಆಜ್ಞಾಶಾಸನಗಳನ್ನು ಕೊಟ್ಟನು. ಅವು ದೇವರ ಕೈಯಿಂದ ಕೆತ್ತಲ್ಪಟ್ಟ ಶಿಲಾಶಾಸನಗಳೇ.


ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದ ತಗಡನ್ನು ಮಡಾಯಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು; ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆ ಬರೆದಿದ್ದ ಕಲ್ಲಿನ ಹಲಿಗೆಗಳೂ ಇದ್ದವು;


ಮನುಷ್ಯರು ಆಹಾರಮಾತ್ರದಿಂದಲ್ಲ, ಯೆಹೋವನ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೂ ಬದುಕುತ್ತಾರೆಂಬದು ನಿಮಗೆ ತಿಳಿಯುವಂತೆ ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ಹಸಿವೆಯಿಂದ ಬಳಲಿಸಿ ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಮನ್ನವನ್ನು ಕೊಟ್ಟು ಪೋಷಿಸಿದನು.


ಆ ನಾಲ್ವತ್ತು ದಿನಗಳು ಕಳೆದ ಮೇಲೆ ಯೇಹೋವನು ತನ್ನ ನಿಬಂಧನೆಯಿರುವ ಆ ಎರಡು ಕಲ್ಲಿನ ಹಲಿಗೆಗಳನ್ನು ನನಗೆ ಕೊಟ್ಟು ನೀನು ಬೇಗ ಇಲ್ಲಿಂದ ಇಳಿದುಹೋಗು;


ಮೋಶೆ ಬೆಟ್ಟದಿಂದ ಇಳಿಯದೆ ತಡಮಾಡಿದ್ದನ್ನು ಇಸ್ರಾಯೇಲ್ಯರು ನೋಡಿ ಆರೋನನ ಬಳಿಗೆ ಕೂಡಿಬಂದು - ಏಳು; ನಮ್ಮ ಮುಂದುಗಡೆಯಲ್ಲಿ ಹೋಗುವದಕ್ಕೆ ನಮಗೆ ದೇವರುಗಳನ್ನು ಮಾಡಿಕೊಡು; ಐಗುಪ್ತದೇಶದಿಂದ ನಮ್ಮನ್ನು ಕರಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು