ನಹೂಮ 1:15 - ಕನ್ನಡ ಸತ್ಯವೇದವು J.V. (BSI)15 ಆಹಾ, ಶುಭಸಮಾಚಾರವನ್ನು ತಂದು ಸಮಾಧಾನವನ್ನು ಸಾರುವ ದೂತನ ಪಾದಗಳು ಪರ್ವತಗಳ ಮೇಲೆ ತ್ವರೆಪಡುತ್ತವೆ! ಯೆಹೂದವೇ, ನಿನ್ನ ಹಬ್ಬಗಳನ್ನು ಆಚರಿಸಿಕೋ, ನಿನ್ನ ಹರಕೆಗಳನ್ನು ಸಲ್ಲಿಸು; ಆ ದುಷ್ಟನು ಇನ್ನು ಮುಂದೆ ನಿನ್ನನ್ನು ಹಾದುಹೋಗನು; ತೀರಾ ನಾಶವಾಗಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನೋಡಿರಿ ಆ ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪರ್ವತಗಳ ಮೇಲೆ ಸಾರುವ ದೂತನ ಪಾದಗಳು ಮೇಲೆ ತ್ವರೆಪಡುತ್ತವೆ! ಯೆಹೂದವೇ, ನಿನ್ನ ಹಬ್ಬಗಳನ್ನು ಆಚರಿಸಿಕೋ, ನಿನ್ನ ಹರಕೆಗಳನ್ನು ಸಲ್ಲಿಸು; ಆ ದುಷ್ಟರು ಇನ್ನು ಮುಂದೆ ನಿನ್ನನ್ನು ಮುತ್ತಿಗೆ ಹಾಕಿ ಸೋಲಿಸಲು ಸಾಧ್ಯವಿಲ್ಲ, ಏಕೆಂದರೆ ಅವನು ಸಂಪೂರ್ಣ ನಾಶವಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಇಗೋ, ಶುಭಸಂದೇಶವನ್ನು ಸಾರಲು ದೂತನೊಬ್ಬನು ಪರ್ವತದಿಂದ ಇಳಿದು ಬರುತ್ತಿದ್ದಾನೆ! ಶಾಂತಿ ಸಮಾಧಾನವನ್ನು ಘೋಷಿಸಲು ತ್ವರೆಪಡುತ್ತಿದ್ದಾನೆ! ಜುದೇಯ ನಾಡೇ, ನಿನ್ನ ಹಬ್ಬಗಳನ್ನು ಆಚರಿಸು. ನಿನ್ನ ಹರಕೆಗಳನ್ನು ಸಲ್ಲಿಸು. ಆ ದುಷ್ಟ ಶತ್ರು ಇನ್ನೆಂದಿಗೂ ನಿನಗೆ ಮುತ್ತಿಗೆಹಾಕಲಾರನು. ಅವನು ಸಂಪೂರ್ಣವಾಗಿ ನಾಶವಾಗಿದ್ದಾನೆ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಯೆಹೂದವೇ, ನೋಡು! ಬೆಟ್ಟಗಳ ಮೇಲಿನಿಂದ ಬರುವವನನ್ನು ನೋಡು. ಅವನು ಶುಭಸಮಾಚಾರವನ್ನು ತರುವನು. ಸಮಾಧಾನ ಉಂಟೆಂದು ಅವನು ಸಾರುತ್ತಾನೆ. ಯೆಹೂದವೇ, ನಿನ್ನ ವಿಶೇಷ ಹಬ್ಬಗಳನ್ನು ಆಚರಿಸು. ನೀನು ವಾಗ್ದಾನ ಮಾಡಿದ್ದನ್ನು ನೆರವೇರಿಸು. ಕೆಲಸಕ್ಕೆ ಬಾರದ ಆ ಜನರು ನಿನ್ನ ಬಳಿಗೆ ಬಂದು ನಿನ್ನ ಮೇಲೆ ದಾಳಿ ಮಾಡುವದಿಲ್ಲ. ಯಾಕೆಂದರೆ ಆ ದುಷ್ಟ ಜನರೆಲ್ಲಾ ನಾಶವಾಗಿರುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಇಗೋ, ಪರ್ವತಗಳ ಮೇಲೆ ಶುಭಸಮಾಚಾರವನ್ನು ತಂದು, ಸಮಾಧಾನವನ್ನು ತಿಳಿಸುವವನ ಪಾದಗಳನ್ನು ನೋಡು. ಯೆಹೂದವೇ, ನಿನ್ನ ಪರಿಶುದ್ಧ ಹಬ್ಬಗಳನ್ನು ನಡೆಸು, ನಿನ್ನ ಹರಕೆಗಳನ್ನು ಸಲ್ಲಿಸು. ಏಕೆಂದರೆ ಇನ್ನು ಮೇಲೆ ದುಷ್ಟರು ನಿನ್ನ ಮೇಲೆ ಮುತ್ತಿಗೆ ಹಾಕರು. ಅವರು ಸಂಪೂರ್ಣವಾಗಿ ನಾಶವಾಗುವರು. ಅಧ್ಯಾಯವನ್ನು ನೋಡಿ |