Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 1:4 - ಕನ್ನಡ ಸತ್ಯವೇದವು J.V. (BSI)

4 ಆತನು ಸಮುದ್ರವನ್ನು ಗದರಿಸಿ ಒಣಗಿಸುತ್ತಾನೆ, ಸಕಲನದಿಗಳನ್ನು ಬತ್ತಿಸುತ್ತಾನೆ; ಬಾಷಾನೂ ಕರ್ಮೆಲೂ ಕಂದುತ್ತವೆ, ಲೆಬನೋನಿನ ಚಿಗುರು ಬಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆತನು ಸಮುದ್ರವನ್ನು ಗದರಿಸಿ ಒಣಗಿಸುತ್ತಾನೆ, ಸಕಲನದಿಗಳನ್ನು ಬತ್ತಿಸುತ್ತಾನೆ; ಬಾಷಾನೂ ಮತ್ತು ಕರ್ಮೆಲ್ ಹೊಲಗಳೂ ಕಂದುತ್ತವೆ. ಲೆಬನೋನಿನ ಚಿಗುರು ಬಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆತನ ಗದರಿಕೆಯೊಂದಕೆ ಬತ್ತಿಹೋಗುತ್ತದೆ ಸಮುದ್ರ; ನಂದಿಹೋಗುತ್ತವೆ ನದಿಸರೋವರ. ಕಂದುತ್ತವೆ ಕಾರ್ಮೆಲ್ ಗುಡ್ಡಗಳು ಬಾಡುತ್ತವೆ ಬಾಷಾನಿನ ಹೊಲಗಳು ಮುದುಡುತ್ತವೆ ಲೆಬನೋನಿನ ಚಿಗುರುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನು ಸಮುದ್ರಕ್ಕೆ ಗದರಿಸಿದಾಗ ಅದು ಒಣಗಿಹೋಗುವುದು. ಆತನು ಎಲ್ಲಾ ನದಿಗಳನ್ನು ಬತ್ತಿಸಿಬಿಡುವನು. ಕರ್ಮೆಲ್ ಮತ್ತು ಬಾಷಾನಿನ ಫಲವತ್ತಾದ ನೆಲಗಳು ಒಣಗಿ ಪಾಳುಬೀಳುವವು. ಲೆಬನೋನಿನ ಪುಷ್ಪವು ಬಾಡಿಹೋಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರು ಸಮುದ್ರವನ್ನು ಗದರಿಸಿ, ಅದನ್ನು ಒಣಗುವಂತೆ ಮಾಡುತ್ತಾರೆ. ಸಕಲನದಿಗಳನ್ನು ಬತ್ತಿಸುತ್ತಾರೆ. ಬಾಷಾನು, ಕರ್ಮೆಲು ಬಾಡಿ ಹೋಗುತ್ತವೆ ಮತ್ತು ಲೆಬನೋನಿನ ಹೂವು ಬಾಡಿ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 1:4
22 ತಿಳಿವುಗಳ ಹೋಲಿಕೆ  

ದೇಶವು ಪ್ರಲಾಪಿಸಿ ಕುಗ್ಗುತ್ತದೆ, ಲೆಬನೋನ್ ನಾಚಿಕೊಂಡು ಒಣಗುತ್ತದೆ. ಶಾರೋನ್ ಬೆಂಗಾಡಾಗಿದೆ, ಬಾಷಾನ್ ಮತ್ತು ಕರ್ಮೆಲ್ [ತಳಿರುಗಳನ್ನು] ಉದುರಿಸಿಬಿಟ್ಟಿವೆ.


ಆತನು ಗದರಿಸಲು ಕೆಂಪು ಸಮುದ್ರವು ಒಣಗಿ ಹೋಯಿತು; ಅಡವಿಯನ್ನೋ ಎಂಬಂತೆ ಸಾಗರವನ್ನು ದಾಟಿಸಿದನು.


ಸಮುದ್ರವನ್ನೂ ಮಹಾಸಾಗರದ ಜಲರಾಶಿಯನ್ನೂ ಬತ್ತಿಸಿ ವಿಮುಕ್ತಜನರು ಹಾದುಹೋಗುವದಕ್ಕೆ ಸಮುದ್ರದ ತಳವನ್ನು ಮಾರ್ಗವನ್ನಾಗಿ ಮಾಡಿದ ಬಾಹು ನೀನೇ ಹೌದು.


ಜಲರಾಶಿಗೆ - ಬತ್ತಿಹೋಗು, ನಿನ್ನಲ್ಲಿ ಸೇರುವ ನದಿಗಳನ್ನು ಒಣಗಿಸುವೆನು ಎಂದು ನಾನು ಅಪ್ಪಣೆಕೊಡುವವನಾಗಿದ್ದೇನೆ;


ಸಮುದ್ರವೇ, ನಿನಗೇನಾಯಿತು? ಯಾಕೆ ಓಡಿಹೋಗುತ್ತೀ? ಯೊರ್ದನೇ, ಯಾಕೆ ಹಿಂದಿರುಗುತ್ತೀ?


ಸಮುದ್ರವು ಕಂಡು ಓಡಿಹೋಯಿತು; ಯೊರ್ದನ್ ಹೊಳೆಯು ಹಿಂದಿರುಗಿತು.


ನೀನು ಗದರಿಸಲು ಅದು ಓಡಿಹೋಯಿತು; ನಿನ್ನ ಗರ್ಜನೆಗೆ ಹೆದರಿ ನೀನು ನೇವಿುಸಿದ ಸ್ಥಳಕ್ಕೆ ಹೋಗಲು


ಬುಗ್ಗೆಹಳ್ಳಗಳನ್ನು ಉಕ್ಕಿಸಿದವನು ನೀನು; ಮಹಾನದಿಗಳನ್ನು ಒಣಗಿಸಿಬಿಟ್ಟವನು ನೀನು.


ಆತನು ಅವರಿಗೆ - ಅಲ್ಪವಿಶ್ವಾಸಿಗಳೇ, ಯಾಕೆ ಧೈರ್ಯಗೆಡುತ್ತೀರಿ ಎಂದು ಹೇಳಿ, ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು; ಆಗ ಎಲ್ಲಾ ಶಾಂತವಾಯಿತು.


ಕೃತ್ತಿಕೆಯನ್ನೂ ಮೃಗಶಿರವನ್ನೂ ಸೃಷ್ಟಿಸಿ ಕಾರ್ಗತ್ತಲನ್ನು ಬೆಳಕನ್ನಾಗಿ ಮಾಡಿ ಹಗಲನ್ನು ಇರುಳಿಗೆ ಮಾರ್ಪಡಿಸಿ ಸಾಗರದ ಜಲವನ್ನು ಬರಮಾಡಿಕೊಂಡು ಭೂಮಂಡಲದ ಮೇಲೆ ಸುರಿಯುವಾತನ ಕಡೆಗೆ ತಿರುಗಿಕೊಳ್ಳಿರಿ; ಯೆಹೋವನೆಂಬದೇ ಆತನ ನಾಮಧೇಯ;


ಆಮೋಸನು ಹೀಗೆ ಪ್ರಕಟಿಸಿದನು - ಯೆಹೋವನು ಚೀಯೋನಿನಿಂದ ಗರ್ಜಿಸಿ ಯೆರೂಸಲೇವಿುನಿಂದ ದನಿಗೈಯುವನು; ಆಗ ಕುರುಬರ ಕಾವಲುಗಳು ಗೋಳಿಡುವವು, ಕರ್ಮೆಲ್ ಬೆಟ್ಟದ ತುದಿಯು ಒಣಗುವದು.


ನಾನು ನದೀಶಾಖೆಗಳನ್ನು ಬತ್ತಿಸಿ ದೇಶವನ್ನು ದುಷ್ಟರ ಕೈಗೆ ಮಾರಿಬಿಡುವೆನು; ಹೌದು, ದೇಶವನ್ನೂ ಅದರಲ್ಲಿನ ಸಮಸ್ತವನ್ನೂ ಅನ್ಯರ ಕೈಯಿಂದ ಹಾಳುಮಾಡಿಸುವೆನು; ಯೆಹೋವನಾದ ನಾನೇ ನುಡಿದಿದ್ದೇನೆ.


ಇಲ್ಲಿಯ ತನಕ ಬರಬಹುದು; ಮೀರಿ ಬರಬೇಡ, ನಿನ್ನ ತೆರೆಗಳ ಹೆಮ್ಮೆಗೆ ಇಲ್ಲೇ ತಡೆಯಾಗುವದು ಎಂದು ಅಪ್ಪಣೆಕೊಟ್ಟೆನು.


ತರುವಾಯ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಮೃಗಪಶುಗಳನ್ನೂ ನೆನಪಿಗೆ ತಂದುಕೊಂಡು ಭೂಲೋಕದ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು.


ಮೇಲಣಿಂದ ಬರುವ ನೀರು ಬಹುದೂರದಲ್ಲಿದ್ದ ಚಾರೆತಾನಿನ ಹತ್ತಿರವಿರುವ ಆದಾಮ್ ಊರಿನ ತನಕ ರಾಶಿಯಾಗಿ ನಿಂತುಕೊಂಡಿತು. ಕೆಳಗಣ ನೀರು ಅರಾಬಾ ತಗ್ಗಿನಲ್ಲಿರುವ ಲವಣ ಸಮುದ್ರಕ್ಕೆ ಹರಿದುಹೋಯಿತು. ಜನರು ಯೆರಿಕೋವಿನ ಎದುರಿನಲ್ಲಿ ಹೊಳೆದಾಟಿದರು.


ಆಗ ಯೆಹೋವನ ಗದರಿಕೆಯಿಂದಲೂ ಆತನ ಶ್ವಾಸಭರದಿಂದಲೂ ಸಮುದ್ರದ ತಳವು ಕಾಣಿಸಿತು, ಭೂಮಂಡಲದ ಅಸ್ತಿವಾರಗಳು ತೋರಬಂದವು.


ಬೆಟ್ಟಗುಡ್ಡಗಳನ್ನು ನಾಶಪಡಿಸಿ ಅಲ್ಲಿಯ ಮೇವನ್ನೆಲ್ಲಾ ತಾರಿಸಿ ನದಿಗಳನ್ನು ಒಣದಿಣ್ಣೆ ಮಾಡಿ ಕೆರೆಗಳನ್ನು ಬತ್ತಿಸುವೆನು.


ಸಮುದ್ರಮತ್ಸ್ಯಗಳು ಆಕಾಶಪಕ್ಷಿಗಳು ಭೂಜಂತುಗಳು ನೆಲದಲ್ಲಿ ಹರಿದಾಡುವ ಕ್ರಿವಿುಕೀಟಗಳು ಭೂಮಂಡಲದ ಸಕಲಮನುಷ್ಯರೂ ನನ್ನೆದುರಿಗೆ ನಡುಗುವರು; ಪರ್ವತಗಳು ಉರುಳಿಹೋಗುವವು, ಜರಿಗಳು ಕವಚಿಕೊಳ್ಳುವವು, ಎಲ್ಲಾ ಗೋಡೆಗಳು ನೆಲಸಮವಾಗುವವು.


ಆತನು ಮೇಲಣ ಲೋಕದಿಂದ ಕೈಚಾಚಿ ನನ್ನನ್ನು ಹಿಡಿದು ಮಹಾಜಲರಾಶಿಗಳೊಳಗಿಂದ ಎಳೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು